Breaking News

ಬೆಂಗಳೂರು

ಕೊರೋನ ಸಂಕಷ್ಟ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ಎ. 18: ಒಂದೂವರೆ ವರ್ಷದಿಂದಲೂ ಎದುರಾಗಿರುವ ಕೊರೋನ ಸಂಕಷ್ಟವನ್ನು ನಿಭಾಯಿಸಲಾಗದಿದ್ದ ಮೇಲೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಆಗ್ರಹಿಸಿದ್ದಾರೆ. ರವಿವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸಂಕಷ್ಟ ಮುಗಿಯುವವರೆಗೂ ರಾಜ್ಯದ ಎಲ್ಲ ಜನರಿಗೂ ಉಚಿತ ಆರೋಗ್ಯ ಸೇವೆ ಒದಗಿಸಬೇಕು. ಕೋವಿಡ್ ಆರಂಭದಿಂದ ಈವರೆಗೂ ಪ್ರತಿಪಕ್ಷವಾಗಿ ಕಾಂಗ್ರೆಸ್ ಸರಕಾರಕ್ಕೆ ಸಂಪೂರ್ಣ ಸಹಕಾರ ನೀಡಿದೆ. ಜಾರಿಗೊಳಿಸಲಾದ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆ. ಗಂಟೆ ಹೊಡಿಯಿರಿ, …

Read More »

‘ದೇಶದಲ್ಲೇ ಅತಿಹೆಚ್ಚು ಆಸ್ಪತ್ರೆ ನಮ್ಮಲ್ಲಿವೆ, ಆದರೂ ಸರ್ಕಾರ ಕೈಚೆಲ್ಲಿ ಕೂತಿದೆ’

ಬೆಂಗಳೂರು: ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಆಸ್ಪತ್ರೆಗಳಿವೆ. ದೇಶದಲ್ಲೇ ತಜ್ಞವೈದ್ಯರು ನಮ್ಮಲ್ಲಿದ್ದಾರೆ ಹಾಗಿದ್ದರೂ ಇದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳದ ಸರ್ಕಾರ ಕೈಚೆಲ್ಲಿ ಕೂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಕಿಡಿಕಾರಿದ್ದಾರೆ. ಇಂದು ನಗರದಲ್ಲಿ ಮಾತನಾಡಿದ ಡಿಕೆಎಸ್​ ಸರ್ಕಾರಕ್ಕೆ ಯಾವುದೇ ಸರಿಯಾದ ಯೋಜನೆ ಇಲ್ಲ. ಹೋಟೆಲ್​ಗಳನ್ನ ವಶಕ್ಕೆ ಪಡೆದು 10 ಸಾವಿರ ಬೆಡ್​ಗಳನ್ನ ಮಾಡಿದ್ರು. ಆದರೂ ರಾಜ್ಯಲ್ಲಿ ಬೆಡ್​ ಇಲ್ಲ. ರೆಮ್ಡೆಸಿವಿರ್ ಇಂಜೆಕ್ಷನ್​ ಸಿಗ್ತಿಲ್ಲ. ಆಸ್ಪತ್ರೆಗಳಲ್ಲಿ‌ ಹಾಸಿಗೆಗಳು ಸಿಗ್ತಿಲ್ಲ ಅಧಿಕಾರಿಗಳು ಏನು …

Read More »

ಲಾಕ್ ಡೌನ್ ಇಲ್ಲ ಆದರೆ ಕಠಿಣ ನಿಯಮ ಜಾರಿ :ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರ ಸಭೆ ಬಳಿಕ ಅಮತನಾಡಿದ ಅವರು, ಲಾಕ್ ಡೌನ್ ಜಾರಿ ಪ್ರಶೆ ಇಲ್ಲ. ಆದರೆ ಟಫ್ ರೂಲ್ಸ್ ಜಾರಿ ಮಾಡಲಾಗುವುದು. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಮಿತಿಮೀರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕಠಿಣ ನಿಯಮ ಜಾರಿ ಅಗತ್ಯವಿದೆ. ಬಡವರಿಗೆ ತೊಂದರೆಯಾಗದಂತೆ ನಿಯಮ ಜಾರಿ …

Read More »

ಕೊರೊನಾದಿಂದ ಬಳಲುತ್ತಿರೋ ಸಿಎಂ ಆರೋಗ್ಯ ಸ್ಥಿರ

ಬೆಂಗಳೂರು: ಕೋವಿಡ್ ನಿಂದ ಮಣಿಪಾಲ್ ಆಸ್ಪತ್ರೆ ಸೇರಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಲವಲವಿಕೆಯಿಂದ ಇದ್ದಾರೆ ಅಂತ ಮಣಿಪಾಲ್ ಆಸ್ಪತ್ರೆ ಹೆಲ್ತ್ ಬುಲೆಟಿನ್ ಹೇಳಿದೆ. ತಜ್ಞ ವೈದ್ಯರ ತಂಡ ಶ್ವಾಸಕೋಶದ ಮೇಲೂ ನಿಗಾ ಇರಿಸಲಾಗಿದೆ ಅಂದಿದೆ. ಸಿಎಂ ಮೊಮ್ಮಗಳು ಸೌಂದರ್ಯ ಮತ್ತು ಅವರ ಪತಿ ಡಾ.ನಿರಂಜನ್‍ರಿಗೂ ಪಾಸಿಟಿವ್ ಆಗಿದ್ದು, ಮಣಿಪಾಲದಲ್ಲಿ ಸಿಎಂ ಪಕ್ಕದ ವಾರ್ಡ್‍ನಲ್ಲೇ ದಾಖಲಿಸಲಾಗಿದೆ. ಸಿಎಂ ಪ್ರಾಥಮಿಕ ಸಂಪರ್ಕಿತರಾಗಿರೋ ಡಿಸಿಎಂ ಲಕ್ಷ್ಮಣ ಸವದಿ ಗನ್‍ಮ್ಯಾನ್‍ಗೂ ಸೋಂಕು ದೃಢವಾಗಿದೆ. …

Read More »

ಒಂದೇ ದಿನ 2,433 ಸಾರಿಗೆ ನೌಕರರ ಅಮಾನತು : 11 ದಿನಗಳಲ್ಲಿ ಇಂಥ ಕ್ರಮ ಇದೇ ಮೊದಲು

ಬೆಂಗಳೂರು: ಮುಷ್ಕರ ನಿರತ ಬಿಎಂಟಿಸಿ ನೌಕರರಿಗೆ ಸರಕಾರ ಭಾರೀ ಪೆಟ್ಟು ನೀಡಿದ್ದು, ಶನಿವಾರ ಒಂದೇ ದಿನ 2,443 ನೌಕರರನ್ನು ಅಮಾನತು ಮಾಡಿ ಆದೇಶ ಹೊರಡಿಸಿದೆ. ಇಷ್ಟು ನೌಕರರನ್ನು ಅಮಾನತು ಮಾಡಿರುವುದು ಇದೇ ಮೊದಲು. ಮುಷ್ಕರ ನಿಷೇಧಿಸಿದ್ದರೂ ಅನಧಿಕೃತವಾಗಿ ಭಾಗವಹಿಸಿದ್ದು ಮತ್ತು ಇತರರನ್ನು ಪ್ರಚೋದಿಸಿದ ಆರೋಪದ ಹಿನ್ನೆಲೆಯಲ್ಲಿ ಈ ಎಲ್ಲ ಸಿಬಂದಿಯನ್ನು ಅಮಾನತು ಮಾಡಲಾಗಿದೆ. ಸಾವಿರ ಮೀರಿದ ಸಂಖ್ಯೆ ಇತರ ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಇದುವರೆಗೆ 1 ಸಾವಿರಕ್ಕೂ ಅಧಿಕ ನೌಕರರನ್ನು ವಜಾಗೊಳಿಸಲಾಗಿದೆ. …

Read More »

ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನಲೆ, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಕೋವಿಡ್ ಪರೀಕ್ಷೆ ವರದಿ ನೀಡುವುದರಲ್ಲಿ ವಿಳಂಬವಾಗುತ್ತಿದೆ. ಎಸ್‌ಎಂಎಸ್, ವಾಟ್ಸಾಪ್ ಮೂಲಕ ಶೀಘ್ರ ವರದಿಗೆ ಸೂಚನೆ ನೀಡಲಾಗಿದೆ. 24 ಗಂಟೆಯೊಳಗೆ ವರದಿ ನೀಡಲು ಹೈಕೋರ್ಟ್ ಸೂಚನೆ ನೀಡಿದ್ದು, ಟೆಸ್ಟ್ ಮಾಡಿಸಿದವರು ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು ಎಂದು ತಿಳಿಸಿದೆ. ಬೆಡ್ ನಿರ್ವಹಣೆಗೆ ವ್ಯವಸ್ಥೆ ಇರುವುದಾಗಿ ಸರ್ಕಾರದಿಂದ ಹೇಳಿಕೆ ನೀಡಲಾಗಿದೆ. ಬೆಡ್ ಒದಗಿಸುವುದು ಸರ್ಕಾರದ ಕರ್ತವ್ಯ. …

Read More »

ನಾಳೆ ಆರ್ ಅಶೋಕ್ ನೇತೃತ್ವದಲ್ಲಿ ಸಭೆ ಲಾಕ್ ಆಗತ್ತಾ ಬೆಂಗಳೂರು …?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್ ಕೂಡ ಸಿಗದ ದುಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.   ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರು ಮಹಾನಗರದ ಎಲ್ಲಾ ಶಾಸಕರು, ಸಂಸದರು, ರಾಜ್ಯ ಸಭಾ ಸದಸ್ಯರು ಹಾಗೂ ಸಚಿವರುಗಳ …

Read More »

ಎರಡು ಸಲ ವ್ಯಾಕ್ಸಿನ್ ಪಡೆದರೂ ಬಂತು ಕೊರೋನಾ

ಬೆಂಗಳೂರು, ಏಪ್ರಿಲ್ 17: ಕೋವಿಡ್19 ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮೊದಲ ಸಾಲಿನಲ್ಲಿ ನಿಂತು ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರು ಸಾಮಾಜಿಕ ಅಂತರ ಕಾಪಾಡುವ ಜತೆಗೆ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಕಾನೂನು ಕ್ರಮ ಜರುಗಿಸುವ ಮೂಲಕ ಕೊರೋನಾ ತಡೆಗಟ್ಟಲು ಟೊಂಕ ಕಟ್ಟಿ ನಿಂತಿದ್ದಾರೆ. ಆದರೆ, ಪೊಲೀಸರೇ ಕೊರೋನಾ ಸೋಂಕಿನಿಂದ ಬಳಲುವಂತಾಗಿದೆ. ಬೆಂಗಳೂರು ನಗರದ ಎಂಟು ಪೊಲೀಸ್ ವಲಯಗಳಲ್ಲಿ 90 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ …

Read More »

ಯಾರು ಕೊರೊನಾ ಇಲ್ಲ ಅಂತ ಬೇಜಬ್ದಾರಿತನ ತೋರಿಸುತ್ತಾರೋ ಅವರ ಕಪಾಳಕ್ಕೆ ಹೊಡೆಯಿರಿ: ಸುನೇತ್ರಾ ಪಂಡಿತ್

ಬೆಂಗಳೂರು: ಯಾರು ಕೊರೊನಾ ಇಲ್ಲ ಅಂತ ಬೇಜಬ್ದಾರಿತನ ತೋರಿಸುತ್ತಾರೋ ಅವರ ಕಪಾಳಕ್ಕೆ ಹೊಡೆಯಿರಿ ಅಂತ ನಟಿ ಸುನೇತ್ರಾ ಪಂಡಿತ್ ಹೇಳಿದ್ದಾರೆ. ಸುಮ್ಮನಳ್ಳಿ ಚಿತಾಗಾರ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಕ್ಕ ಕೋವಿಡ್ ನಿಂದ ಸತ್ತೋದ್ಳು. ಒಂದು ದಿನ ಕೇರ್‍ಲೆಸ್ ಹಾಗೂ ಮಿಸ್ ಗೈಡ್ ಆಗಿದ್ದಕ್ಕೆ ಅಂತ ಹೇಳೋಕೆ ನಾನು ಬಯಸಲ್ಲ. ಆದರೆ ಅದೂ ಒಂದು ಕಾರಣ ಎಂದು ಹೇಳಿದರು. ನಮ್ಮ ಅಕ್ಕ ಹೊರಟೋದ್ಳು. ಅವಳಿಗೆ ಮಕ್ಕಳಿದ್ದಾರೆ, ಆ ಮಕ್ಕಳು ಏನ್ …

Read More »

ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ್ ಖೂಬಾ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು: ಬಸವಕಲ್ಯಾಣ ಬಿಜೆಪಿ ಬಂಡಾಯ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಪಕ್ಷದಿಂದ ಉಚ್ಛಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಮಲ್ಲಿಕಾರ್ಜುನ್ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಬಸವಕಲ್ಯಾಣ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇಂದು ಮತದಾನ ಅರ್ಧ ಮುಗಿದ ನಂತರ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ …

Read More »