Breaking News

ಬೆಂಗಳೂರು

ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಚಿಕಿತ್ಸೆ ಪಡೆದು ರೆಸ್ಟ್ ಮಾಡುತ್ತಿದ್ದಾರೆ. ಹೀಗಂತ ಸುದ್ದಿಯೊಂದು ನಿನ್ನೆ ಮಧ್ಯಾಹ್ನದಿಂದ ಹರಿದಾಡುತ್ತಲೇ ಇತ್ತು. ಇದೀಗ ಇದೇ ವಿಚಾರವಾಗಿ ಸ್ವತಃ ಕಿಚ್ಚ ಸುದೀಪ್ ಟ್ವೀಟ್ ಮಾಡಿ ಸ್ಪಷ್ಟನೆ ಕೊಟ್ಟಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ನನಗೆ ಆರೋಗ್ಯ ಸರಿಯಿಲ್ಲ. ಸದ್ಯದಲ್ಲೇ ಗುಣಮುಖನಾಗುತ್ತೇನೆ ಎಂಬ ಭರವಸೆಯಿದೆ. ಆದರೆ ವೈದ್ಯರು ಇನ್ನೂ ಕೆಲವು ದಿನಗಳ ಕಾಲ ಸಂಪೂರ್ಣ ರೆಸ್ಟ್ ಮಾಡಬೇಕೆಂದು ಹೇಳಿದ್ದಾರೆ. ಹೀಗಾಗಿ …

Read More »

ಮದುವೆ ಸಮಾರಂಭಗಳಲ್ಲಿ ನೂರು ಜನ ಮೀರಬಾರದು: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಅತಿ ಹೆಚ್ಚು ಜನ ಒಂದೆಡೆ ಸೇರುವಂತಿಲ್ಲ. ಒಳಾಂಗಣ ಮದುವೆ ಸಮಾರಂಭಕ್ಕೆ ನೂರು ಜನ ಮತ್ತು ಹೊರಾಂಗಣ ಮದುವೆ ಸಮಾರಂಭಕ್ಕೆ ಇನ್ನೂರು ಜನರಿಗಿಂತ ಹೆಚ್ಚು ಮಂದಿ ಸೇರಬಾರದು ಎಂದು ಸಚಿವ ಕೆ.ಸುಧಾಕರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮೈಕ್ರೋ ಕಂಟೋನ್ಮೆಂಟ್ ಹೆಚ್ಚಳ ಮಾಡುತ್ತೇವೆ ಎಂದರು.   ಎರಡನೇ ಅಲೆಯಲ್ಲಿ ಶೇ.95 ರಷ್ಟು ಜನರಿಗೆ ಆಸ್ಪತ್ರೆ ಚಿಕಿತ್ಸೆ ಬೇಕಿಲ್ಲ. ಕೇವಲ ಶೇ.5ರಷ್ಟು ಜನರಿಗೆ ಮಾತ್ರ …

Read More »

ಪೊಲೀಸರೇ ಈ ರೀತಿ ಮಾಡಿದರೆ ಕನ್ನಡ ಪರ ಸಂಘಟನೆಗಳು ಕನ್ನಡ ಉಳಿಸೋದು ಹೇಗೆ?’ ಕಪಾಳಮೋಕ್ಷ ಮಾಡಿದ ಪೊಲೀಸ್​ಗೆ ಕರವೇ ಪ್ರಶ್ನೆ

ಬೆಂಗಳೂರು: ಚೀಟಿಂಗ್‌ ಪ್ರಕರಣವೊಂದರ ಆರೋಪಿಗಳಾಗಿದ್ದ ರಂಗಸ್ವಾಮಿ ಹಾಗೂ ಲೋಕೇಶ್ ಎಂಬ ಪೊಲೀಸರ ವಶದಲ್ಲಿದ್ದ ವ್ಯಕ್ತಿಗಳನ್ನು ಮಾತನಾಡಿಸಿದ ಆರೋಪದಡಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಉಪಾಧ್ಯಕ್ಷ ಉಮೇಶ್​ಗೌಡಗೆ ನೆಲಮಂಗಲ ಟೌನ್ ಠಾಣೆಯ ಎಸ್​ಐ ಸುರೇಶ್‌ ಕಪಾಳಮೋಕ್ಷ ಮಾಡಿದ್ದಾರೆ. ಕಪಾಳಮೋಕ್ಷಮಾಡಿರುವುದನ್ನು ಖಂಡಿಸಿ ನೆಲಮಂಗಲ ಟೌನ್ ಪೊಲೀಸ್ ಠಾಣೆ ಎದುರು ಕರವೇ ಕಾರ್ಯಕರ್ತರು ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಪಿಎಸ್​ಐ ಸುರೇಶ್​ರನ್ನು ಅಮಾನತು​ ಮಾಡುವಂತೆ …

Read More »

ಉಪ ಚುನಾವಣೆ ಮತದಾನಕ್ಕೆ ನೌಕರರಿಗೆ ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಏಪ್ರಿಲ್ 17 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಸರ್ಕಾರಿ, ಖಾಸಗಿ ಅನುದಾನಿತ ಶಾಲಾ ಕಾಲೇಜು, ಅನುದಾನ ರಹಿತ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು, ಸಹಕಾರ ಸಂಘ ಸಂಸ್ಥೆಗಳು ಖಾಸಗಿ ಸಂಘ ಸಂಸ್ಥೆಗಳು, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾಯಂ ಹಾಗೂ ದಿನಗೂಲಿ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ತುರ್ತು ಸೇವೆಯಲ್ಲಿರುವ …

Read More »

ಎ. 17ರಂದು ಉಪ ಸಮರ : ಶುಭಾಶುಭ ಭವಿಷ್ಯ ಏನು?

ಬೆಂಗಳೂರು : ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಎ. 17ರಂದು ಮತದಾನ ನಡೆಯಲಿದೆ. ಇವುಗಳ ಫ‌ಲಿತಾಂಶ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆ ತರಲಾರದು. ಆದರೆ ಕೆಲವು ನಾಯಕರ ಶಕ್ತಿ, ಸಂಘಟನ ಕೌಶಲ, ದೌರ್ಬಲ್ಯಗಳನ್ನು ಒರೆಗೆ ಹಚ್ಚುವುದು ಖಚಿತ. ಬಿಜೆಪಿ ಗೆದ್ದರೆ : – ಉತ್ತರ ಕರ್ನಾಟಕದಲ್ಲಿ ಸಿಎಂ ಬಿಎಸ್‌ವೈ ಶಕ್ತಿ ವೃದ್ಧಿ. – ನಾಯಕತ್ವ …

Read More »

ಕೊರೊನಾ ಅಟ್ಟಹಾಸ; ರಾಜ್ಯದ ಪ್ರಸಿದ್ಧ ದೇವಾಲಯಗಳು, ಐತಿಹಾಸಿಕ ತಾಣಗಳು ಬಂದ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಪ್ರವಾಸಿ ತಾಣಗಳು, ಐತಿಹಾಸಿಕ ದೇವಾಲಗಳನ್ನು ಬಂದ್ ಮಾಡಲಾಗುತ್ತಿದೆ. ಹಾಸನ ಜಿಲ್ಲೆಯ ಬೇಲೂರು-ಹಳೆಬೀಡು, ಶ್ರವಣಬೆಳಗೊಳಕ್ಕೆ ಒಂದು ತಿಂಗಳು ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮೇ 15ರವರೆಗೆ ಐತಿಹಾಸಿಕ ದೇವಾಲಯಗಳನ್ನು ಬಂದ್ ಮಾಡಿ ಭಾರತೀಯ ಪುರಾತತ್ವ ಇಲಾಖೆ ನಿರ್ದೇಶಕ ಎನ್.ಕೆ.ಪಾಟಕ್ ಆದೇಶ ಹೊರಡಿಸಿದ್ದಾರೆ.   ಇದೇ ವೇಳೆ ವಿಜಯಪುರ ಜಿಲ್ಲೆಯ ಐತಿಹಾಸಿಕ ಗೋಲಗುಮ್ಮಟಕ್ಕೂ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ …

Read More »

ಉಪ ಚುನಾವಣೆಗೆ ನಾಳೆಯೇ ಮತದಾನ: ಮನವೊಲಿಕೆಗೆ ಕೊನೆ ಕ್ಷಣದ ಕಸರತ್ತು

ಬೆಂಗಳೂರು: ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ ತೆರೆಬಿದ್ದಿದೆ. ಇಂದು ಮನೆಮನೆ ಪ್ರಚಾರ ನಡೆಯಲಿದ್ದು, ಪ್ರಚಾರಕ್ಕೆ ಆಗಮಿಸಿದ್ದ ನಾಯಕರೆಲ್ಲ ಕ್ಷೇತ್ರದಿಂದ ಹೊರಗೆ ತೆರಳಿದ್ದಾರೆ. ಸ್ಥಳೀಯ ಕಾರ್ಯಕರ್ತರು ಮತದಾರರ ಮನವೊಲಿಕೆಗೆ ಅಂತಿಮಹಂತದ ಕಸರತ್ತು ನಡೆಸಿದ್ದಾರೆ. ಏಪ್ರಿಲ್ 17 ರಂದು ಉಪಚುನಾವಣೆಗೆ ಮತದಾನ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಬಿಜೆಪಿ …

Read More »

‘ಅನ್ನಭಾಗ್ಯ’ ಯೋಜನೆ BPL ಕಾರ್ಡ್ ದಾರರ ಅಕ್ಕಿ ಕಡಿತ, ಪಡಿತರಕ್ಕೆ ಹೊಸ ವ್ಯವಸ್ಥೆ -ರಾಗಿ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಪ್ರತಿ ಸದಸ್ಯರಿಗೆ 2 ಕೆಜಿ ಅಕ್ಕಿ 3 ಕೆಜಿ ರಾಗಿ ಹಾಗೂ ಪ್ರತಿ ಕಾರ್ಡ್ ಗೆ 2 ಕೆಜಿ ಗೋಧಿ ವಿತರಿಸಲಾಗುತ್ತದೆ. ಹಿಂದೆ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು ಕೆಲವು ಪಡಿತರ ಚೀಟಿದಾರರು ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿತ್ತು. ಹೀಗೆ ಶೇಕಡ 15 ರಷ್ಟು ಅನ್ನಭಾಗ್ಯ ಅಕ್ಕಿ ದುರ್ಬಳಕೆಯಾಗುತ್ತಿದೆ ಎನ್ನಲಾಗಿದ್ದು ಹೀಗಾಗಿ ಹೊಸ …

Read More »

ಕೊರೊನಾ ವೈರಸ್ ಹೆಚ್ಚಳ : ಕರ್ನಾಟಕದಲ್ಲೂ `ವೀಕೆಂಡ್ ಲಾಕ್ ಡೌನ್’, ರಾತ್ರಿ ಕರ್ಪ್ಯೂ ಇಡೀ ರಾಜ್ಯಕ್ಕೆ ವಿಸ್ತರಣೆ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ವಾರಾಂತ್ಯ ಲಾಕ್ ಡೌನ್, ರಾತ್ರಿ ಕರ್ಪ್ಯೂ ವಿಸ್ತರಣೆಯಂಥ ಕ್ರಮಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಏಪ್ರಿಲ್ 18 ರ ಭಾನುವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಸರ್ವಪಕ್ಷಗಳ ನಾಯಕರ ಸಭೆಯಲ್ಲಿ ಚರ್ಚಿಸಿದ ಬಳಿಕ ರಾಜ್ಯದಲ್ಲೂ ವಾರಂತ್ಯದ ಲಾಕ್ ಡೌನ್, ರಾಜ್ಯಾದ್ಯಂತ ರಾತ್ರಿ ಕರ್ಪ್ಯೂ ವಿಸ್ತರಣೆಯಂಥ ಕ್ರಮಗಳನ್ನು ಘೋಷಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವ …

Read More »

1 ರಿಂದ 9 ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಪರೀಕ್ಷೆ ಇಲ್ಲದೇ ಎಲ್ಲರೂ ಪಾಸ್ ಮಾಡಲು ಚಿಂತನೆ.?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಏರುತ್ತಿರುವ ಹಿನ್ನೆಲೆಯಲ್ಲಿ ಒಂದರಿಂದ 9 ನೇ ತರಗತಿಯ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲು ಚಿಂತನೆ ನಡೆದಿದೆ. ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದ್ದು, ಕೆಲವು ರಾಜ್ಯಗಳಲ್ಲಿ ಕೂಡ ಬೋರ್ಡ್ ಪರೀಕ್ಷೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಮೌಲ್ಯಾಂಕನ ಮೂಲಕ ಒಂದರಿಂದ 9ನೇ ತರಗತಿ ಮಕ್ಕಳನ್ನು ಪಾಸ್ ಮಾಡಲು ಚರ್ಚೆ ನಡೆದಿದ್ದು, ಮೌಲ್ಯಾಂಕನ ಪರೀಕ್ಷೆ ಕೂಡ ಇಲ್ಲದೆ ಎಲ್ಲರನ್ನು ಪಾಸ್ ಮಾಡಲು ತೀರ್ಮಾನಿಸಲಾಗಿದೆ ಎಂದು …

Read More »