Breaking News

ಬೆಂಗಳೂರು

ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ!?’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಷ್ಟೊಂದು ಧನ ಸಂಪಾದಿಸಿದ್ದು ಹೇಗೆ? ಕನಕಪುರದಲ್ಲಿ ಕಳ್ಳ ಮಾಲು ಮಾರುತ್ತಿದ್ದ ಮಹಾನಾಯಕನ ಸಂಪತ್ತಿನ ಮೂಲ ಹುಡುಕುವಿರಾ ಎಂದು ಬಿಜೆಪಿ ಪ್ರಶ್ನಿಸಿದೆ. ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೋಟ್ಯಂತರ ಬೆಲೆಯ ಆಸ್ತಿ ಸಂಗ್ರಹಿಸಿದ್ದು ಹೇಗೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಶ್ನಿಸಿದ ಬೆನ್ನಲ್ಲೇ ಬಿಜೆಪಿ ಸರಣಿ ಟ್ವಿಟ್ ಮೂಲಕ ತಿರುಗೇಟು ನೀಡಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾಮಾಲೆ ರೋಗ ಬಾಧಿಸುತ್ತಿದೆ. ರಾಬರ್ಟ್ ವಾದ್ರಾ, …

Read More »

ನಮ್ಮಪ್ಪ ಗಡಿಬಿಡಿಯಲ್ಲಿ ತಿಂಡಿ ತಿನ್ನದೆ ಕೆಲ್ಸಕ್ಕೆ ಹೋಗ್ತಿದ್ರು: ಸಾರಿಗೆ ನೌಕರರಿಗೆ ಧೈರ್ಯ ತುಂಬಿದ ಯಶ್‌

ಬೆಂಗಳೂರು: ಸಾರಿಗೆ ನೌಕರರು ತಮಗೆ ಬರೆದಿದ್ದ ಪತ್ರಕ್ಕೆ ನಟ ಯಶ್‌ ಪತ್ರದ ಮೂಲಕವೇ ಪ್ರತಿಕ್ರಿಯಿಸಿ ತಾವು ಸಾರಿಗೆ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ನೌಕರರ ಸಮಸ್ಯೆಗಳ ಬಗ್ಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ನೌಕರನ ಮಗ. ನಮ್ಮಪ್ಪ ಎಷ್ಟೋ ದಿನ ತಿಂಡಿ ತಿನ್ನದೆ ಗಡಿಬಿಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ದಿನಗಳು ಈಗಲೂ ನೆನಪಿವೆ. ನಿಮ್ಮ ಹೋರಾಟ, ಅಳಲು ನನ್ನನ್ನು ಬಹುವಾಗಿ ಕಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ …

Read More »

ಸಿದ್ದರಾಮಯ್ಯ ಮತ್ತು ಯತ್ನಾಳ್ ಇಬ್ಬರೂ ವಿಜಯೇಂದ್ರ ವಿರುದ್ದ ಒಂದೇ ರೀತಿಯ ಆರೋಪ ಗೋಣಿ ಚೀಲದಲ್ಲಿ ಹಣ ತುಂಬಿಕೊಂಡು ಮಸ್ಕಿಗೆ ಬಂದಿದ್ದಾರೆ

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಬಿಜೆಪಿಯ ಒಂದು ವರ್ಗದಲ್ಲೇ ಅಸಮಾಧಾನ ಇರಬೇಕಾದರೆ ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಇರದೇ ಇರಲು ಸಾಧ್ಯವೇ? ಆದರೆ, ಯಾವುದೇ ಆರೋಪ ಅಥವಾ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳದ ವಿಜಯೇಂದ್ರ ಅವರು ಪಕ್ಷ ತಮಗೆ ವಹಿಸಿದ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಕಳೆದ ಶಿರಾ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಿದ ನಂತರ ಇವರನ್ನು ಬೈಎಲೆಕ್ಷನ್ ಸ್ಪೆಷ್ಟಲಿಸ್ಟ್ ಎಂದೇ ಪಕ್ಷದಲ್ಲಿ ಕರೆಯಲಾಗುತ್ತಿದೆ.   ಮಸ್ಕಿ …

Read More »

ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ವಿಚಾರದಲ್ಲಿ ನಮ್ಮ ಸರ್ಕಾರ ಎಷ್ಟೇ ಸಮಾಧಾನ, ಸೌಹಾರ್ದದ ಕ್ರಮ ಅನುಸರಿಸುತ್ತಿದ್ದರೂ ಸಹ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಕುರಿತು ಇಂದು ತಮ್ಮ ಅಧಿಕೃತ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ಕೆ.ಎಸ್.ಆರ್.ಟಿ.ಸಿ.ಯ 34, ಬಿ.ಎಂ.ಟಿ.ಸಿ.ಯ 3, ಈಶಾನ್ಯ ಸಾರಿಗೆಯ …

Read More »

ಮುಷ್ಕರನಿರತ ಸಾರಿಗೆ ನೌಕರರಿಗೆ ಸರ್ಕಾರದಿಂದ ಶಾಕ್: 271 ಚಾಲಕರು, ನಿರ್ವಾಹಕರು ಸಸ್ಪೆಂಡ್

ಬೆಂಗಳೂರು: ಮುಷ್ಕರನಿರತ ನೌಕರರ ಮೇಲೆ ಬಿಎಂಟಿಸಿ ಶಿಸ್ತು ಕ್ರಮ ಕೈಗೊಂಡಿದೆ. 271 ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ 8 ದಿನದಲ್ಲಿ 495 ನೌಕರರ ಮೇಲೆ ಶಿಸ್ತಿನ ಅಸ್ತ್ರ ಪ್ರಯೋಗಿಸಲಾಗಿದೆ. ಸಾರಿಗೆ ನೌಕರರ ಮುಷ್ಕರ 9 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು. ಸಾರಿಗೆ ನೌಕರರ ಮುಷ್ಕರವನ್ನು …

Read More »

ಮಯನ್ಮಾರ್​​ನಿಂದ​ ಬೆಂಗಳೂರಿನವರೆಗೆ ಮಿಕ್ಸರ್​, ಗ್ರೈಂಡರ್​​ ಬಾಕ್ಸ್‌ ನಲ್ಲಿ ಡ್ರಗ್ಸ್​ ಸಾಗಾಟ ಜಾಲ ; ಪೋಲೀಸ್‌ ಬಲೆಗೆ

ಬೆಂಗಳೂರು : ಬೌನ್ಸ್ ಕಂಪನಿಯ ಬೈಕ್​ಗಳ ಮುಖಾಂತರ ಗ್ರಾಹಕರಿಗೆ ಡ್ರಗ್ಸ್​​​ ಮಾರಾಟ ಮಾಡುತ್ತಿದ್ದ ಮೂವರು ಅಂತಾರಾಜ್ಯ ದಂಧೆಕೋರರನ್ನು ಕಾಡುಗೊಂಡನಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಮಣಿಪುರ ಮೂಲದ ಮೊಹಮ್ಮದ್ ಸಜೀದ್ ಖಾನ್, ಮೊಹಮ್ಮದ್ ಅಜಾದ್ ಹಾಗೂ ಸಪಮ್ ಸೀತಲ್ ಕುಮಾರ್ ಸಿಂಗ್ ಬಂಧಿತ ಆರೋಪಿಗಳು. ಬಂಧಿತರಿಂದ 60 ಲಕ್ಷ ರೂ. ಮೌಲ್ಯದ 130 ಗ್ರಾಂ ಹೆರಾಯಿನ್, 2480 ಎಕ್ಸೆಟೆನ್ಸಿ ಮಾತ್ರೆಗಳನ್ನ ವಶಪಡಿಸಿಕೊಳ್ಳಲಾಗಿದೆ. .ಆರೋಪಿಗಳು ಕೆಲಸ ಅರಸಿ‌ ಮೂರು ವರ್ಷಗಳ ಹಿಂದೆ ರಾಜಧಾ‌ನಿಗೆ ಬಂದಿದ್ದರು. …

Read More »

ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್

ಬೆಂಗಳೂರು: ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಮಂಜುನಾಥ ಅಲಿಯಾಸ್ ಅಂಬಾರಿ ಮೇಲೆ ಫೈರಿಂಗ್ ಮಾಡಲಾಗಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ಸ್ ಪೆಕ್ಟರ್ ಕಿಶೋರ್ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿ ಮಂಜುನಾಥ್ ನನ್ನು ಬಂಧಿಸಲಾಗಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಬಲ್ ಮರ್ಡರ್ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದು, ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. …

Read More »

ಮೊಬೈಲ್‍ನಲ್ಲಿ ಮಾತಾಡಿ ಜೇಬಲ್ಲಿ ಇಟ್ಟುಕೊಳ್ಳುವಾಗ ಬಡೀತು ಸಿಡಿಲು- ವ್ಯಕ್ತಿ ಸಾವು

ಬೆಂಗಳೂರು: ಅಕಾಲಿಕ ಮಳೆಯಿಂದ ಜನ ಕಂಗಾಲಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರದಿಂದ ಹಲವು ಅನಾಹುತಗಳು ಸಂಭವಿಸುತ್ತಿವೆ. ಸಿಡಿಲು ಬಡಿದು ಟಿಎಪಿಸಿಎಂಎಸ್ ಅಧ್ಯಕ್ಷ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಬಳಿ ನಡೆದಿದೆ. ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿದು ಸಾವಿಗೀಡಾದ ದುರ್ದೈವಿ. 100 ಕುರಿ ಸಾಕಿದ್ದ ಸೋಮಣ್ಣ ಬೀರಪ್ಪ ತೇರದಾಳ, ಮಧ್ಯಾಹ್ನ ಕುರಿ ಕಾಯುವ ಆಳಿನ ಜೊತೆ ನೋಡಲು ಹೋಗಿದ್ದ. ಈ ವೇಳೆ ಮೊಬೈಲ್‍ನಲ್ಲಿ …

Read More »

10 ನಗರಗಳಲ್ಲಿ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಿ; ಅಧಿಕಾರಿಗಳಿಗೆ ಸಿಎಂ ಬಿಎಸ್​ವೈ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಪ್ರಾಯೋಗಿಕವಾಗಿ ಹತ್ತು ನಗರಗಳಲ್ಲಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಬೇಕೆಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಯುಗಾದಿ ದಿನವೂ ಹಿರಿಯ ಅಧಿಕಾರಿಗಳ ಜೊತೆ ತಮ್ಮ‌ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,  ಪೊಲೀಸ್ ಕಮಿಷನರ್ ಕಮಲ್ ಪಂಥ್, ಸಾರಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.  ಮೊದಲು ಸಾರಿಗೆ ನೌಕರರ ಮುಷ್ಕರದ ಬಗ್ಗೆ …

Read More »

ಹಬ್ಬದ ಶಾಪಿಂಗ್‌ನಲ್ಲಿ ದಂಪತಿ ಬಿಜಿ: ಕಾರಿನಲ್ಲಿ ಸಾವು-ಬದುಕಿನ ಮಧ್ಯೆ ಮಗುವಿನ ಹೋರಾಟ

ಬೆಂಗಳೂರು: ಕಾರಿನಲ್ಲಿ ಮಗುವನ್ನು ಬಿಟ್ಟು ಯುಗಾದಿ ಹಬ್ಬದ ಶಾಪಿಂಗ್‌ಗೆ ತೆರಳಿದ ಪರಿಣಾಮ ಮಗು ಉಸಿರುಗಟ್ಟಿ ನರಳಾಡಿದ ಘಟನೆ ನಗರದ ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ನಡೆದಿದೆ. ದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದ ಮಗುವಿನ ಪ್ರಾಣ ಉಳಿದೆ. ಜಾಲಹಳ್ಳಿಯ ನ್ಯೂ ಬಿಇಎಲ್​ನಲ್ಲಿ ಸೋಮವಾರ ರಾತ್ರಿ ನಾಲ್ಕು ವರ್ಷದ ಮಗುವನ್ನು ಕಾರಿನಲ್ಲೇ ಬಿಟ್ಟು ದಂಪತಿ ಶಾಪಿಂಗ್​ಗೆ ತೆರಳಿದ್ದರು. ಕೀ ಕಾರಿನಲ್ಲೇ ಇದ್ದಿದ್ರಿಂದ ಆಟೋಮೆಟಿಕ್ ಲಾಕ್ ಆಗಿತ್ತು. ಇದಾದ ಕೆಲವೊತ್ತಿನಲ್ಲೇ ಉಸಿರುಗಟ್ಟಲು ಆರಂಭಿಸಿ ಮಗು ಚೀರಾಡಲು ಶುರು …

Read More »