Breaking News

ಬೆಂಗಳೂರು

ರಜಾ ದಿನವೂ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲು ಡಿಕೆಶಿ ಮನವಿ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ರಜಾದಿನವಾದ ಏ.13 ಮತ್ತು 14 ರಂದು ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಾಜ್ಯ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ರಾಜ್ಯದ 8 ಜಿಲ್ಲೆಗಳ 10 ನಗರ ಸ್ಥಳೀಯ ಸಂಸ್ಥೆಗಳ 266 ವಾರ್ಡ್‌ಗಳಿಗೆ ನಿಗದಿಯಾಗಿರುವ ಚುನಾವಣೆಗೆ ಏ.15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ನಾಮಪತ್ರ ಸಲ್ಲಿಕೆಗೆ 8 ದಿನ ಕಾಲಾವಕಾಶ …

Read More »

ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳ ವ್ಯರ್ಥ- ಇಬ್ಬರು ಆರೋಗ್ಯ ಸಿಬ್ಬಂದಿ ಅಮಾನತು

ಬೆಂಗಳೂರು: ಕೋವಿಡ್ ಟೆಸ್ಟ್ ಮಾಡದೆ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆರೋಗ್ಯ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಯಲಹಂಕ ವಲಯದ ಕೊಡಿಗೇಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಟೆಸ್ಟ್ ಮಾಡದೆ ಟೆಸ್ಟಿಂಗ್ ಸಾಮಗ್ರಿಗಳನ್ನು ವ್ಯರ್ಥ ಮಾಡುತ್ತಿದ್ದರು. ಅಲ್ಲದೆ ಹೆಚ್ಚು ಟೆಸ್ಟ್ ಮಾಡಿದಂತೆ ಲೆಕ್ಕ ನೀಡುತ್ತಿದ್ದರು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ದೃಶ್ಯಾವಳಿ ಗಮನಿಸಿದ ಆಧಾರದ ಮೇಲೆ ಇಬ್ಬರು ಸ್ವಾಬ್ ಕಲೆಕ್ಟರ್ ಗಳನ್ನು …

Read More »

ಅನುಕಂಪದ ನೌಕರಿ ನಿಯಮ ತಿದ್ದುಪಡಿಗೆ ಅಧಿಸೂಚನೆ: ಏನಿದೆ ಹೊಸ ನಿಯಮದಲ್ಲಿ?

ಬೆಂಗಳೂರು: ಸರ್ಕಾರಿ ಹುದ್ದೆಯಲ್ಲಿದ್ದವರು ಮೃತಪಟ್ಟರೆ, ಅನುಕಂಪದ ಆಧಾರದಲ್ಲಿ ಅವಲಂಬಿತರಿಗೆ ಸರ್ಕಾರಿ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ತಿದ್ದುಪಡಿ ನಿಯಮದ ಪ್ರಕಾರ, ಸರ್ಕಾರಿ ನೌಕರ ಮೃತಪಟ್ಟರೆ ಆತನ ಜೊತೆ ವಾಸವಿದ್ದ ವಿಧವಾ ಪತ್ನಿ ಅನುಕಂಪದ ಆಧಾರದಲ್ಲಿ ಹುದ್ದೆ ಪಡೆಯಲು ಅರ್ಹರಾಗುತ್ತಾರೆ. ನೇಮಕಾತಿಗೆ ಆಕೆಗೆ ಅರ್ಹತೆ ಇಲ್ಲದಿದ್ದರೆ ಅಥವಾ ನೇಮಕಾತಿ ಬಯಸದೇ ಇದ್ದರೆ …

Read More »

ಏಪ್ರಿಲ್ 13ರಂದು ‘ಮದಗಜ’ ಚಿತ್ರದ “lovesome” ಟೀಸರ್ ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಬಹು ನಿರೀಕ್ಷೆಯ ‘ಮದಗಜ’ ಚಿತ್ರದ ಲವ್ ಟೀಸರ್ ವೊಂದನ್ನು ಏಪ್ರಿಲ್ 13ರಂದು ರಿಲೀಸ್ ಮಾಡುತ್ತಿದ್ದಾರೆ ಈ ಕುರಿತು ಶ್ರೀಮುರಳಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.   ಈ ಟೀಸರ್ ಅನ್ನು ಕನ್ನಡ, ತಮಿಳು, ಹಿಂದಿ ಹಾಗೂ ತೆಲುಗು ಭಾಷೆಗಳಲ್ಲಿ ರಿಲೀಸ್ ಮಾಡಲಿದ್ದಾರೆ. ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ …

Read More »

ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರು, ಏಪ್ರಿಲ್ 10: ಯಲಚೇನಹಳ್ಳಿ ನಮ್ಮ ಮೆಟ್ರೋ ನಿಲ್ದಾಣದ ಕೇಬಲ್ ನಾಳ(ಡಕ್ಟ್‌)ದಲ್ಲಿ 65 ವರ್ಷದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾರುತಿನಗರ ರಿಯಲ್ ಎಸ್ಟೇಟ್ ಬ್ರೋಕರ್ ಆಗಿರುವ ನಾಗರಾಜ್ ಅವರು ಏಪ್ರಿಲ್ 4 ರಂದು ಕೇಬಲ್ ನಾಳದೊಳಗೆ ಬಿದ್ದು ಗಾಯಗೊಂಡು ಸಾವನ್ನಪ್ಪಿದ್ದರೂ ಈ ಘಟನೆ ಏಪ್ರಿಲ್ 9 ರಂದು ಬೆಳಕಿಗೆ ಬಂದಿದೆ.   ಹೌಸ್‌ಕೀಪಿಂಗ್ ಸಿಬ್ಬಂದಿ ಶುಚಿಗೊಳಿಸುತ್ತಿರುವಾಗ ಕೆಟ್ಟ ವಾಸನೆ ಬರುವುದನ್ನು ಗಮನಿಸಿದ್ದಾರೆ ಬಳಿಕ ಬಂದು ಬಾಗಿಲು ತೆರೆದಾಗ …

Read More »

118 ಬಿಎಂಟಿಸಿ ನೌಕರರು ವಜಾ – ಸೀನಿಯರ್ ನೌಕರರಿಗೆ ನಿವೃತ್ತಿ ಎಚ್ಚರಿಕೆ: ಮುಷ್ಕರ ನಿರತರಿಗೆ ಬಿಎಂಟಿಸಿ ಬಿಗ್ ಶಾಕ್

ಬೆಂಗಳೂರು; ಸಾರಿಗೆ ನೌಕರರ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಕರ್ತವ್ಯಕ್ಕೆ ಹಾಜರಾಗದ ಸಾರಿಗೆ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಎಂಟಿಸಿ ಮುಂದಾಗಿದ್ದು, ಮುಷ್ಕರ ಹತ್ತಿಕ್ಕಲು ಸರ್ವಪ್ರಯತ್ನ ನಡೆಸಿದೆ. ಮುಷ್ಕರದಲ್ಲಿ ಭಾಗವಹಿಸಿರುವ 118 ಸಾರಿಗೆ ಸಿಬ್ಬಂದಿಗಳನ್ನು ಬಿಎಂಟಿಸಿ ವಜಾ ಮಾಡಿ ಆದೇಶ ಹೊರಡಿಸಿದೆ. ಇದೇ ವೇಳೆ ಸೀನಿಯರ್ ನೌಕರರಿಗೆ ನಿವೃತ್ತಿ ನಿಡುವ ಎಚ್ಚರಿಕೆಯನ್ನು ನೀಡಿದೆ. 55 ವರ್ಷ ಮೇಲ್ಪಟ್ಟ ಬಿಎಂಟಿಸಿ ಸಿಬ್ಬಂದಿ ವೈದ್ಯಕೀಯ ಹಾಗೂ ದೇಹದಾರ್ಡ್ಯತೆ ಪ್ರಮಾಣ ಪತ್ರವನ್ನು ಏಪ್ರಿಲ್ …

Read More »

ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಬೆಳಗಾವಿ: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮುಷ್ಕರವನ್ನು ರಾಜ್ಯಾದ್ಯಂತ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುವ ಸಲುವಾಗಿ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಆಗಮಿಸಿದ್ದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರು ಹಾಗೂ ರೈತ …

Read More »

ಬೆಳಗಾವಿ ವಿಚಾರದಲ್ಲಿನ ಶಿವಸೇನೆ ಹೇಳಿಕೆಗೆ ಕಾಂಗ್ರೆಸ್‌ ನಿಲುವೇನು?: ಬಿಜೆಪಿ

ಬೆಂಗಳೂರು: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಶಿವಸೇನೆಯ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷದ ನಿಲುವು ಏನು ಎಂದು ಬಿಜೆಪಿ ರಾಜ್ಯ ಘಟಕ ಟ್ವಿಟರ್‌ನಲ್ಲಿ ಪ್ರಶ್ನಿಸಿದೆ. ‘ಬೆಳಗಾವಿಯು ಕರ್ನಾಟಕ ಆಕ್ರಮಿತ ಮಹಾರಾಷ್ಟ್ರ’ ಎಂಬ ಅಲ್ಲಿನ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ಕುರಿತು ಶುಕ್ರವಾರ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ ರಾಜ್ಯ ಘಟಕ, ‘ಪಕ್ಕದ ರಾಜ್ಯದಲ್ಲಿ ಶಿವಸೇನೆ ಮತ್ತು ಕಾಂಗ್ರೆಸ್‌ ಮೈತ್ರಿಯಲ್ಲಿವೆ. ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿರೋಧ ಪಕ್ಷದ …

Read More »

ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ

ಬೆಂಗಳೂರು: ಶನಿವಾರದಿಂದ (ಏ. 10) ಇದೇ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ಜಾರಿಗೆ ಬರಲಿರುವ ನಗರಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಎಲ್ಲ ವಾಣಿಜ್ಯ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ- ಮಣಿಪಾಲ, ಬೀದರ್‌, ಕಲಬುರ್ಗಿ ಮತ್ತು ತುಮಕೂರು ನಗರಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬರಲಿದೆ. …

Read More »

ನಾಲ್ಕನೇ ದಿನವೂ ಮುಂದುವರಿದ ಬಸ್ ಮುಷ್ಕರ – ಇವತ್ತೂ ಸಿಗಲ್ಲ KSRTC, BMTC ಬಸ್

ಬೆಂಗಳೂರು: ಕೆಎಸ್‍ಆರ್ ಟಿಸಿ, ಬಿಎಂಟಿಸಿ ನೌಕರರು ನಡೆಸ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಇವತ್ತೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಬಸ್‍ಗಳು ಸಂಚಾರ ಮಾಡಲ್ಲ. ಇವತ್ತಿನಿಂದ ಸಾಲು ಸಾಲು ರಜೆ, ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಮುಷ್ಕರದ ಬಿಸಿ ತಟ್ಟಿದ್ದು, ಪ್ರಯಾಣಿಕರು ಪರದಾಡ್ತಿದ್ದಾರೆ. ಏಪ್ರಿಲ್ 12ರಂದು ಸಾರಿಗೆ ನೌಕರರು ತಟ್ಟೆ-ಲೋಟ ಚಳುವಳಿಗೆ ನಿರ್ಧರಿಸಿದ್ದಾರೆ. ಅಂದರೆ ಅಲ್ಲಿವರೆಗೂ ಮುಷ್ಕರ ಕೊನೆ ಆಗುವ ಲಕ್ಷಣಗಳಿಲ್ಲ. ಈ ನಡುವೆ ಮುಷ್ಕರ ನಿರತ ಬಿಎಂಟಿಸಿಯ 120 ಮಂದಿಯನ್ನು ಕೆಲಸದಿಂದ …

Read More »