ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಶತಕ ದಾಟಿದ್ದು, ರಾಜ್ಯದ ಇತರೆ ಜಿಲ್ಲೆಗಳಲ್ಲೂ ದಿನೇದಿನೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 4266 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಎಂದಿನಂತೆ ಅಪಾಯದ ಕರೆಗಂಟೆ ಬಾರಿಸುತ್ತಿದೆ. ಕಲಬುರಗಿಯಲ್ಲಿ 261, ಮೈಸೂರಿನಲ್ಲಿ 237, ತುಮಕೂರು 157, ಮಂಡ್ಯ 102, ಹಾಸನ 110 ಮತ್ತು ಬೀದರ್ ನಲ್ಲಿ 167 ಪ್ರಕರಣಗಳು …
Read More »ಜನತೆಗೆ ತಟ್ಟಿದ ಸಾರಿಗೆ ಮುಷ್ಕರ ಬಿಸಿ, ಖಾಸಗಿ ವಾಹನಗಳಿಂದ ಸುಲಿಗೆ -ಪ್ರಯಾಣಿಕರ ಪರದಾಟ
ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದು, ರಾಜ್ಯದ ಜನತೆಗೆ ಮುಷ್ಕರದ ಬಿಸಿ ತಟ್ಟಿದ್ದು ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಈ ನಡುವೆ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ದೂರುಗಳು ಕೇಳಿಬಂದಿವೆ. ಮುಷ್ಕರ ಆರಂಭವಾಗುತ್ತಿದ್ದಂತೆ ಡೀಸೆಲ್ ದರ 80 ರ ರೂಪಾಯಿ ಇದೆ ಎಂದು ಹೇಳುತ್ತಿರುವ ಖಾಸಗಿ ಬಸ್ ಗಳಲ್ಲಿ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆ ಬದಲಿ …
Read More »ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ, ಬೆಳಿಗ್ಗೆ 7 ರಿಂದ ರಾತ್ರಿ 9ರವರೆಗೆ ಓಡಾಟ
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಾಳೆ ಮುಷ್ಕರವನ್ನ ಮಾಡ್ತಿದ್ದು, ಪ್ರಯಾಣಿಕರಿಗೆ ಅನುಕಾಲಕ್ಕಾಗಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬಸ್ ಇಲ್ಲದೇ ಪ್ರಯಾಣಿಕರು ಪರದಾಡಬಾರದು ಅನ್ನೋ ದೃಷ್ಠಿಯಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟವಿರಲಿದೆ.
Read More »ಬೆಳಗಾವಿ ಉಪಚುನಾವಣೆ ಅಖಾಡಕ್ಕೆ ಸಿಎಂ ಯಡಿಯೂರಪ್ಪ: ಮಂಗಲಾ ಅಂಗಡಿ ಪರ ಮತಯಾಚನೆ
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಪ್ರಮುಖ ಪಕ್ಷಗಳ ನಾಯಕರು ಕ್ಷೇತ್ರಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಪರ ಮುಖ್ಯಮಂತ್ರು ಬಿ.ಎಸ್.ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ ಇಂದು ಕೆಂಪೇಗೌಡ ಏರ್ ಪೋರ್ಟ್ ಮೂಲಕ ಹುಬ್ಬಳಿಗೆ ಪ್ರಯಾಣ ಬೆಳೆಸಿದರು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗದ ಮೂಲಕ ಬೆಳಗಾವಿಗೆ ಪ್ರಯಾಣ ಮಾಡಲಿದ್ದು, ಇಂದು …
Read More »ಖಾಸಗಿ ವಾಹನಗಳು ವಸೂಲಿಗಿಳಿದರೆ ಕಾನೂನು ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ
ಬೆಂಗಳೂರು,ಏ.6-ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳು ಎಲ್ಲಾ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಿದ್ದೇವೆ. ಒಂದು ವೇಳೆ ಯಾರಾದರೂ ಪರಿಸ್ಥಿತಿಯ ಲಾಭ ಪಡೆದು ಹೆಚ್ಚಿನ ದರ ವಸೂಲಿ ಮಾಡಲು ಮುಂದಾದರೆ ಅಂಥವರ ಮೇಲೂ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸಾರಿಗೆ ಆಯುಕ್ತ ಶಿವಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಿ ಬಸ್‍ಗಳು ಕಾರ್ಯಾರಂಭ ಮಾಡದಿದ್ದರೆ, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಪರ್ಯಾಯ ಕ್ರಮ ಕೈಗೊಂಡಿದ್ದೇವೆ ಎಂದರು. …
Read More »ನಾಳೆ ಮುಷ್ಕರ ನಡೆಸುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ; ಪರ್ಯಾಯ ವ್ಯವಸ್ಥೆಗೂ ಸಿದ್ಧತೆ: ಎಚ್ಚರಿಕೆ ನೀಡಿದ ಸರ್ಕಾರ
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ಎಚ್ಚರಿಕೆ ನೀಡಿದೆ. ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆಯ ಪ್ರಶ್ನೆಯೂ ಇಲ್ಲ, ಮುಷ್ಕರಕ್ಕೆ ಮುಂದಾದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ,ಎಸ್ಮಾ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಷ್ಕರಕ್ಕೆ ಕರೆ …
Read More »402 PSI ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ 08/ನೇಮಕಾತಿ-2/2021-22, ದಿನಾಂಕ :03-03-2021 ನ್ನು ಮುಂದುವರೆಸುತ್ತಾ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಆಹ್ವಾನ ಮಾಡಲಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ 01/04/2021 ಆನ್‌ಲೈನ್ ಅರ್ಜಿ ಸೃಜಿಸಲು ಕೊನೆಯ ದಿನಾಂಕ 03/05/2021 ಆನ್‌ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ …
Read More »ಮನೆಗೇ ಬರಲಿದ್ದಾರೆ ಶಿಕ್ಷಕರು : ಹೊಸ ಮಾದರಿಯಲ್ಲಿ ವಿದ್ಯಾಗಮ ಜಾರಿ
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿದ್ಯಾಗಮ ಮತ್ತು ನೇರ ತರಗತಿಯನ್ನು ಸರಕಾರ ಸ್ಥಗಿತಗೊಳಿಸಿದ್ದರೂ ಮನೆ ಮನೆಗೆ ಭೇಟಿ ನೀಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಮೂಲಕ ವಿದ್ಯಾಗಮವನ್ನು ಹೊಸ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ, ಕ್ಲಸ್ಟರ್‌ಗಳ ಸಿಆರ್‌ಪಿಗಳಿಗೆ ಈ ಬಗ್ಗೆ ಜ್ಞಾಪನ ಪತ್ರ ಕಳುಹಿಸಿದ್ದಾರೆ. 1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮದಂತೆ ಮನೆ ಮನೆಗೆ …
Read More »ಸಿಡಿ ಕೇಸ್ – ಸರ್ಕಾರ, ಎಸ್‍ಐಟಿಗೆ ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ(ಎಸ್‍ಐಟಿ) ಮತ್ತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಕೋರಿ ವಕೀಲ ಉಮೇಶ್ ಅವರು ಸಲ್ಲಿಸಿದ್ದ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯ ವಿಚಾರಣೆ ಇಂದು ವಿಭಾಗೀಯ ಪೀಠದಲ್ಲಿ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್, ಮುಚ್ಚಿದ ಲಕೋಟೆಯಲ್ಲಿ ತನಿಖಾ ಪ್ರಗತಿ ವರದಿ ಸಲ್ಲಿಸುವಂತೆ ಎಸ್‍ಐಟಿಗೆ ಸೂಚನೆ ನೀಡಿದೆ. ಈ ಅರ್ಜಿಯ ವಿಚಾರಣೆಯನ್ನು ಏ.17ಕ್ಕೆ ಹೈಕೋರ್ಟ್ …
Read More »ಡಿನೋಟಿಫಿಕೇಷನ್ ಪ್ರಕರಣ: ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್
ಬೆಂಗಳೂರು: ಕೆಐಎಡಿಬಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕೆಐಎಡಿಬಿ 20 ಎಕರೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಎಂಬುವವರು ಸಿಎಂ ಯಡಿಯೂರಪ್ಪ ಹಾಗೂ ಸಚಿವ ನಿರಾಣಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ದೂರು …
Read More »