ಬೆಂಗಳೂರು; ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಋಷಿಕುಮಾರ ಸ್ವಾಮೀಜಿ ಇದೀಗ ರಕ್ಷಣೆ ನೀಡುವಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮನವಿ ಮಾಡಿರುವ ಘಟನೆ ನಡೆದಿದೆ ರಮೇಶ್ ಜಾರಕಿಹೊಳಿ ಪರ ಮಾತನಾಡಿದ್ದಕ್ಕೆ ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇವೆ ಎಂದು ಅಪರಿಚಿತ ವ್ಯಕ್ತಿಗಳು ತನಗೆ ಬೆದರಿಕೆಯೊಡ್ಡುತ್ತಿದ್ದು, ಸೂಕ್ತ ಭದ್ರತೆ ನೀಡುವಂತೆ ಋಷಿಕುಮಾರ ಸ್ವಾಮೀಜಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಸಿಡಿ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ …
Read More »ಊಹಾಪೋಹ ಕ್ಕೆ ವಿಡಿಯೋ ಕಾಲ ಮೂಲಕ ಸ್ಪಷ್ಟನೆ ಕೊಟ್ಟ ಗೋಕಾಕ ವೈದ್ಯಾಧಿಕಾರಿ
ಬೆಂಗಳೂರು: ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇಂದು ಕೊರೊನಾ ಸೋಂಕಿನವರೆಗೂ ಬಂದು ನಿಂತಿದೆ. ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ ಇಂದು ಬೆಳಗ್ಗೆ ಮಾಹಿತಿ ನೀಡಿದ್ದರು. ಏಪ್ರಿಲ್ 1ರಂದು ಗೋಕಾಕ ಆಸ್ಪತ್ರೆಗೆ ಬಂದು ಕೊವಿಡ್ ಟೆಸ್ಟ್ ಮಾಡಿಸಿದ್ದ ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ ಎಂದು ಆರೋಗ್ಯಾಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದರು. ಇದೀಗ …
Read More »ಒಂದರಿಂದ 9ನೇ ತರಗತಿವರೆಗಿನ ಪರೀಕ್ಷೆ ನಡೆಸಲು ಶಿಕ್ಷಣ ಸಂಸ್ಥೆಗಳ ಒತ್ತಾಯ
ಬೆಂಗಳೂರು, ಏ.5- ಒಂದರಿಂದ 9ನೇ ತರಗತಿವರೆಗೆ ಪರೀಕ್ಷೆ ನಡೆಸಬೇಕೆಂಬ ಅಭಿಪ್ರಾಯವನ್ನು ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘಟನೆಗಳ ಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಲಾಗಿದೆ. ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಒಂದರಿಂದ 5ನೇ ತರಗತಿವರೆಗೆ ಆನ್‍ಲೈನ್ ಪರೀಕ್ಷೆ, 6ರಿಂದ 9ನೇ ತರಗತಿವರೆಗೆ ಈಗಾಗಲೇ ಅರ್ಧಂಬರ್ಧ ಪರೀಕ್ಷೆಗಳು ನಡೆದಿದ್ದು, ಎರಡೂ ಪಾಳಿಯಲ್ಲಾದರೂ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಮನವಿ …
Read More »ಮಾಜಿ ಪ್ರಧಾನಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು : ಜ್ವರದಿಂದ ಗುಣಮುಖರಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಣಿಪಾಲ್ ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾದರು. ವೈದ್ಯರಾದ ಡಾ.ಸುದರ್ಶನ್ ಬಲ್ಲಾಳ್, ಸತ್ಯನಾರಾಯಣ ಮೈಸೂರು ಮಾಜಿ ಪ್ರಧಾನಿ ದೇವೇಗೌಡರಿಗೆ ಶುಭಕೋರಿದರು. ದೇವೇಗೌಡರು ಮಾ.31 ರಂದು ಆಸ್ಪತ್ರೆ ದಾಖಲಾಗಿದ್ದರು. ಕೊರೊನಾ ಸೋಂಕು ದೃಢಪಟ್ಟಿರುವ ಅವರ ಪತ್ನಿ ಚೆನ್ನಮ್ಮ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೊನ್ನೆ ಮಾರ್ಚ್ 31ರಂದು ಹೆಚ್ ಡಿ ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮರಿಗೆ …
Read More »ಶಾಸಕ ಜಮೀರ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ
ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಸಭೆಯಲ್ಲಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಕುರಿತು ಜನಾಂಗೀಯ ನಿಂದನೆಯ ಮಾಡಿರುವ ಆರೋಪದ ಮೇಲೆ ಜೆಡಿಎಸ್ ಯುವ ಘಟಕದ ಕಾರ್ಯಕರ್ತರು ಭಾನುವಾರ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಜೆಡಿಎಸ್ ಬೆಂಗಳೂರು ಮಹಾನಗರ ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಶಿವಾಜಿನಗರ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅಹಮ್ಮದ್ ಮನೆಯ ಪ್ರವೇಶ ದ್ವಾರದ …
Read More »ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಬಹುದು ಎಂದ ರಮೇಶ್ ಕುಮಾರ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬಹುದು ಎಂದು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎನ್ನಬೇಡಿ. ಅವರು ಮಂತ್ರಿಯಾಗಿದ್ದಾಗ ಮಾಡಬೇಕಾದ ಸಾಧನೆ ಮಾಡಿದ್ದಾರೆ. ಜನರಿಗೆ ಇಷ್ಟವಿದ್ದರೆ ಮತ್ತೊಮ್ಮೆ ಮುಖ್ಯಮಂತ್ರಿಯಾಗುತ್ತಾರೆ. ಮಾಜಿ ಮುಖ್ಯಮಂತ್ರಿ ಎಂದರೆ ಅದನ್ನು ಉಪ್ಪಿನಕಾಯಿ ಹಾಕಬೇಕೆ? ಎಂದಿದ್ದಾರೆ. ಡಾ.ರಾಮನೋಹರ ಲೋಹಿಯಾ ಸಮತಾ ವಿದ್ಯಾಲಯ ಹಾಗೂ ಕನಾಟಕ ಗಾಂಧಿ ಸ್ಮಾರಕ ನಿಧಿ ಆಯೋಜಿಸಿದ್ದ ಪುಸ್ತಕವೊಂದರ ಲೋಕಾರ್ಪಣೆ ಕಾಯಕ್ರಮದಲ್ಲಿ ಆಯೋಜಕರು ಸಿದ್ದರಾಮಯ್ಯ …
Read More »ರಾಜ್ಯದಲ್ಲಿ 4,553 ಹೊಸ ಸೋಂಕು ಪ್ರಕರಣ ದಾಖಲು
ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ಸತತ ಐದನೇ ದಿನ ಕೂಡ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 4,553 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 39,092ಕ್ಕೆ ತಲುಪಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿದ್ದು, 7 ಜಿಲ್ಲೆಗಳಲ್ಲಿ ಮೂರಂಕಿ ತಲುಪಿದೆ. ಬೆಂಗಳೂರಿನಲ್ಲಿ ಮತ್ತೆ 2,787 ಮಂದಿ ಸೋಂಕಿತರಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.47 ಲಕ್ಷ ದಾಟಿದೆ. ಮೈಸೂರು (260), ಕಲಬುರ್ಗಿ …
Read More »ಸಿಡಿ ಪ್ರಕರಣ : ಕಾಂಗ್ರೆಸ್‍ನ ಮಾಜಿ ಶಾಸಕರಿಬ್ಬರಿಗೆ ಎಸ್‍ಐಟಿ ನೋಟೀಸ್..!
ಬೆಂಗಳೂರು,ಏ.4-ದಿನಕ್ಕೊಂದು ವಿಚಿತ್ರ ತಿರುವು ಪಡೆಯುತ್ತಿರುವ ಸಿ.ಡಿ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಎಸ್‍ಐಟಿ ನಿರ್ಧರಿಸಿದೆ. ಸಿ.ಡಿ ಬಹಿರಂಗವಾದ ಬಳಿಕ ಚಿತ್ರ,ವಿಚಿತ್ರ ತಿರುವುಗಳು ಪಡೆಯುತ್ತಿದ್ದು, ಒಂದಷ್ಟು ದಿನ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಸುತ್ತಲೇ ಆರೋಪ-ಪ್ರತ್ಯಾರೋಪಗಳು ಕೇಳಿ ಬಂದಿದ್ದವು. ಈ ಹೊಸದಾಗಿ ಕಾಂಗ್ರೆಸ್‍ನ ಇಬ್ಬರು ಮಾಜಿ ಶಾಸಕರ ಹೆಸರುಗಳು ತಳುಕು ಹಾಕಿಕೊಂಡಿವೆ. ಹೀಗಾಗಿ ಸಿ.ಡಿ ಪ್ರಕರಣ ಮತ್ತೊಂದು ರೀತಿಯ ತಿರುವು ಪಡೆಯುತ್ತಿದೆ. …
Read More »ಸಪ್ಲಾಯರ್ ಕೆಲಸ ಮಾಡಿಲ್ಲ. ಹೀಗಾಗಿ ಸಪ್ಲೈಯರ್ ಗಳಿಂದ ನಾನು ಏನನ್ನೂ ಕಲಿಯಬೇಕಿಲ್ಲ ಎಂದು ಕಿಡಿ ಕಾರಿದ ಯತ್ನಾಳ
ವಿಜಯಪುರ: ಮಂತ್ರಿಯಾಗಲು, ಎಂಎಲ್ ಸಿ ಆಗಲು ಅಶ್ಲೀಲ ಸಿಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುವವರಿಂದ ನಾನು ಕಲಿಯಬೇಕಾದುದು ಏನೂ ಇಲ್ಲ ಎಂದು ಬಸನಗೌಡ ಪಾಟೀಲ ಯತ್ನಾಳ ಮತ್ತೆ ಹರಿ ಹಾಯ್ದಿದ್ದಾರೆ. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜಕೀಯ ಸ್ವಾರ್ಥಕ್ಕಾಗಿ ಬಾಗಲಕೋಟೆ ಜಿಲ್ಲೆಯ ಮಾಜಿ ಶಾಸಕ, ಸಚಿವರ ಅಶ್ಲೀಲ ಸಿಡಿ ಮಾಡಿದವರು ನಾಲಾಯಕರು ಎಂದು ಪರೋಕ್ಷವಾಗಿ ಸಚಿವ ಮುರುಗೇಶ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿ ಆಗಲು ನಾನು ಯಾರಿಗೂ …
Read More »ಖಾತೆ ಬದಲಾಯಿಸಿ ಎಂದು ಹೇಳಿದ ನಿರ್ಮಾಪಕ ಕೆ. ಮಂಜುಗೆ ಸಚಿವ ಸುಧಾಕರ್ ತಿರುಗೇಟು
ಆರೋಗ್ಯ ಖಾತೆಯಿಂದ ಸಚಿವ ಸುಧಾಕರ್ ಅವರನ್ನು ಬದಲಾಯಿಸಿ ಎಂದು ನಿರ್ಮಾಪಕ ಕೆ. ಮಂಜು ನೀಡಿದ ಹೇಳಿಕೆಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ. ಕೆ. ಮಂಜು ಅಂದ್ರೆ ಯಾರು ಎಂಬುದೇ ನನಗೆ ಗೊತ್ತಿಲ್ಲ. ನಾನು ಯಾರ ಟೀಕೆಗಳಿಗೂ ತಲೆಕೆಡಿಸಿಕೊಳ್ಳುವುದಿಲ್ಲ. ಆರೋಗ್ಯ ಸಚಿವನಾಗಿ ಕೊರೋನಾ ನಿಯಂತ್ರಣಕ್ಕೆ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಮಗೆ ಜನರ ಆರೋಗ್ಯ ರಕ್ಷಣೆ ಮುಖ್ಯವಾಗಿದ್ದು ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಕೆಲಸ ಮಾಡುತ್ತೇನೆ. ಮುಖ್ಯಮಂತ್ರಿಗಳು ಚಿತ್ರರಂಗದ ಮನವಿಗೆ ಸ್ಪಂದಿಸಿದ್ದು …
Read More »