ಬೆಂಗಳೂರು : ರಾಜ್ಯದ ಡಿಪ್ಲೊಮಾ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಗೆ ಏಪ್ರಿಲ್ 3 ರವರೆಗೂ ಅವಕಾಶ ನೀಡಲಾಗಿದೆ. ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆಗೆ ಶುಲ್ಕ ಪಾವತಿಸದ ವಿದ್ಯಾರ್ಥಿಗಳಿಗೆ ದಂಡಶುಲ್ಕದೊಂದಿಗೆ ಪಾವತಿಸಲು ಏಪ್ರಿಲ್ 3 ರವರೆಗೆ ಅವಕಾಶ ನೀಡಲಾಗಿದೆ. ಈ ಸೆಮಿಸ್ಟರ್ ಪರೀಕ್ಷೆಗೆ ಅನ್ವಯವಾಗುವಂತೆ 2 ಸಾವಿರ ರೂ ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕವನ್ನು ಏಪ್ರಿಲ್ 3 ರೊಳಗೆ ಪಾವತಿಸುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಡಿಪ್ಲೊಮಾ …
Read More »‘ಪರೀಕ್ಷಾ ಪ್ರಶ್ನೆಪತ್ರಿಕೆ’ : `SSLC’ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ಬೆಂಗಳೂರು : 2020-21ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಶ್ನೆಪತ್ರಿಕೆಯ ಸ್ವರೂಪದ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು. ಇಂತಹ ಗೊಂದಲಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಪ್ರಶ್ನೆಪತ್ರಿಕೆ ಸ್ವರೂಪದ ಗೊಂದಲಕ್ಕೆ ತೆರೆ ಎಳೆದಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರು ಮಾಹಿತಿ …
Read More »ಆರ್. ಅಶೋಕ ಭಾಮೈದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನ್ನ ಕುಟುಂಬಕ್ಕೆ ಕೈಹಾಕಿದರು.: ಜಗದೀಶ್ ಕುಮಾರ್
ಬೆಂಗಳೂರು: ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಪರ ವಾದಿಸುತ್ತಿರುವ ವಕೀಲ ಕೆ.ಎನ್.ಜಗದೀಶ್ ಕುಮಾರ್ ಅವರು ‘ತಮಗೆ ಬಿಜೆಪಿ ಮುಖಂಡ ಮತ್ತು ಪೊಲೀಸರು ಕೊಟ್ಟ ಕಾಟದಿಂದ ಕುಟುಂಬದಿಂದ ದೂರಾದೆ’ ಎಂದು ಆರೋಪಿಸಿದ್ದಾರೆ. ‘ಕೊಡಿಗೇಹಳ್ಳಿ ಲೋಕ ಕಲ್ಯಾಣ ಟ್ರಸ್ಟ್ ಜಮೀನು ಪರಭಾರೆ ಮಾಡಿದ್ದ ಆರ್. ಅಶೋಕ ಭಾಮೈದರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ನನ್ನ ಕುಟುಂಬಕ್ಕೆ ಕೈಹಾಕಿದರು. 13 ಕೇಸ್ ಹಾಕಿದರು. ಅವರು ಕೊಟ್ಟ ಹಿಂಸೆಯಿಂದ ನನ್ನ ಹೆಂಡತಿ ದೂರಾದಳು. ನನ್ನ ಬೆಳೆದ ಮಗ, …
Read More »HDK ವಿರುದ್ಧ ಹೊಸ ಬಾಂಬ್ ಸಿಡಿಸಿದ ಜಮೀರ್ ಅಹ್ಮದ್
ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತರೂಢ ಬಿಜೆಪಿ ಗೆಲುವಿಗಾಗಿ ನಾನಾ ತಂತ್ರ ಹೆಣೆಯುತ್ತಿದೆ. ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ಕಾಂಗ್ರೆಸ್ ಗೆಲುವಿಗೆ ತೀವ್ರ ಪ್ರಯತ್ನ ನಡೆಸಿದ್ದು, ಇವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ. ಇದರ ಮಧ್ಯೆ ಉಪ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಹೇಳಿದ್ದ ಜಾತ್ಯತೀತ ಜನತಾದಳ ಬಸವಕಲ್ಯಾಣದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಿದೆ. ಇದೀಗ …
Read More »ಸತೀಶ ಜಾರಕಿಹೊಳಿ ಆಸ್ತಿ ಮಂಗಲಾ ಅಂಗಡಿ ಆಸ್ತಿ ಎಷ್ಟು?
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಶಾಸಕ ಸತೀಶ ಜಾರಕಿಹೊಳಿ ಅವರ ಆಸ್ತಿಯು ಕಳೆದ 3 ವರ್ಷಗಳಲ್ಲಿ ಶೇ. 250ರಷ್ಟು ಹೆಚ್ಚಳವಾಗಿದೆ ಎಂದು ಚುನಾವಣಾ ಆಯೋಗಕ್ಕೆ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿದು ಬಂದಿದೆ. ಅಫಿಡವಿಟ್ ಪ್ರಕಾರ, ಸತೀಶ ಜಾರಕಿಹೊಳಿ ಮತ್ತು ಅವರ ಕುಟುಂಬದವರು ₹ 148 ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ. 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅವರೇ ಘೋಷಿಸಿದಂತೆ ಅವರ ಆಸ್ತಿ …
Read More »ಫೇವರೇಟ್ ಫುಡ್ ಬ್ಲಾಗರ್ ಜೊತೆ ಅಪ್ಪು!
ಬೆಂಗಳೂರು: ಬೆಂಗಳೂರು ಮೂಲದ ಖ್ಯಾತ ಫುಡ್ ಬ್ಲಾಗರ್ ಕೃಪಾಲ್ ಅಮನ್ನ ಅವರ ಜೊತೆ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಊಟ ಸವಿದಿದ್ದಾರೆ. ಅಂದ ಹಾಗೆ, ಲಾಕ್‌ಡೌನ್ ಸಂದರ್ಭದಲ್ಲಿ ಪುನೀತ್ ಅವರು ಕೃಪಾಲ್ ಅಮನ್ನ ಅವರ ಯೂಟ್ಯೂಬ್ ವಿಡಿಯೊಗಳನ್ನು ಹೆಚ್ಚು ನೋಡುತ್ತಿದ್ದರು. ಈ ಕುರಿತು ಇತ್ತೀಚೆಗಷ್ಟೇ ನಡೆದ ಯುವರತ್ನ ಸಿನಿಮಾ ಸುದ್ದಿಗೋಷ್ಠಿ ಸಂದರ್ಭದಲ್ಲಿ ಪುನೀತ್ ಹೇಳಿಕೊಂಡಿದ್ದರು. ‘ಲಾಕ್‌ಡೌನ್‌ನಲ್ಲಿ ಟಿವಿ, ಇಂಟರ್‌ನೆಟ್‌ನಲ್ಲೇ ಅರ್ಧ ಸಮಯ ಹೋಯಿತು. ಜೊತೆಗೆ ಹೊಸ ಅಡುಗೆಯ ಪ್ರಯೋಗ. ಪಕ್ಕಾ …
Read More »ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಬೆಂಗಳೂರು: ದಿನಪೂರ್ತಿ ದುಡಿದರೂ ಹಸಿವು ನೀಗುವಷ್ಟು ಸಂಪಾದಿಸಲಾಗದಿರುವ ಸಂಕಷ್ಟದಿಂದ ನೊಂದು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್ಪೋರ್ಟ್ನಲ್ಲಿ ಪೆಟ್ರೋಲ್ ಸುರಿದು ಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಶೇ.70 ಸುಟ್ಟ ಗಾಯಗಳಿಂದ ಪ್ರತಾಪ್ ಅವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಪ್ರತಾಪ್ ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದ ಏರ್ಪೋರ್ಟ್ನ ಟ್ಯಾಕ್ಸಿ …
Read More »ಏ. 7ರಿಂದ ಸರ್ಕಾರಿ ಬಸ್ ಸಂಚಾರವಿಲ್ಲ; ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು, ಮಾರ್ಚ್ 30; “ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ” ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, “ಏಪ್ರಿಲ್ 1 ರಿಂದ 6ರ ತನಕ ಸಾರಿಗೆ ಸಂಸ್ಥೆಗಳ ನೌಕರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ” ಎಂದರು. “ಏಪ್ರಿಲ್ 2ರಂದು …
Read More »‘ಸಿಡಿ ಯುವತಿ’ ‘ಎಸ್‌ಐಟಿ’ ವಶಕ್ಕೆ.?
ಬೆಂಗಳೂರು : 28 ದಿನಗಳ ಬಳಿಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದಂತ ರಾಸಲೀಲೆ ವೀಡಿಯೋದಲ್ಲಿನ ಲೇಡಿ, ಇಂದು ನ್ಯಾಯಾಧೀಶರ ಮುಂದೆ ತನ್ನ ಹೇಳಿಕೆ ದಾಖಲಿಸಲು ಗೌಪ್ಯ ಸ್ಥಳದಲ್ಲಿ ಹಾಜರ್ ಆಗಿದ್ದಾರೆ. ಇಂತಹ ಸಿಡಿ ಯುವತಿಯ ಹೇಳಿಕೆ ಪಡೆದ ನಂತ್ರ, ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾರೆ. ನ್ಯಾಯಾಧೀಶರ ಮುಂದೆ ಹಾಜರಾಗಿ, ಸಿಡಿ ಸಂತ್ರಸ್ತ ಯುವತಿ ಗೌಪ್ಯ ಸ್ಥಳದಲ್ಲಿ ತನ್ನ ಹೇಳಿಕೆಯನ್ನು ದಾಖಲಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಈಗಾಗಲೇ …
Read More »ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ ಎಂದ ಸಿದ್ದರಾಮಯ್ಯ
ಬೆಂಗಳೂರು : ಸಿಡಿ ಕೇಸ್ ಬಗ್ಗೆ ಸಿಜೆ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಎಸ್ ಐಟಿ ಯಿಂದ ಸತ್ಯ ಹೊರ ಬರಲು ಸಾಧ್ಯವಿಲ್ಲ. ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ಆಗಲಿ. ಯುವತಿಯೇ ಸಿಜೆಗೆ ಪತ್ರ ಬರೆದಿದ್ದಾಳೆ. ಸಿಜೆ ಏನು ಮಾಡ್ತಾರೋ ನೋಡೋಣ. ಈ ಬಗ್ಗೆ ಕಾನೂನು ಹೋರಾಟಗಳು ನಡೆಯಲಿ. ಆದ್ರೆ ಕಲ್ಲು ಹೊಡೆಯೋದನ್ನು ಗೂಂಡಾಗಿರಿ ಅಂತಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. …
Read More »