ಬೆಂಗಳೂರು: ಸುಖಾ ಸುಮ್ಮನೆ ಬೈಕ್ಗಳನ್ನು ಎಳೆದೊಯ್ದು, ಯಾಕೆ ಎಂದು ಕೇಳಿದವರ ಮೇಲೆ ದರ್ಪ ತೋರುತ್ತಿದ್ದ ಟೋಯಿಂಗ್ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಚಾಟಿ ಬೀಸಿದ್ದಾರೆ. ಈ ಹಿಂದಿನ ಕಮಿಷನರ್ ಭಾಸ್ಕರ್ ರಾವ್ ಟೋಯಿಂಗ್ ಸಮಸ್ಯೆಗೆ ಮುಕ್ತಿ ನೀಡುವ ಸಲವಾಗಿ ಟೋಯಿಂಗ್ ಮಾಡುವ ಸಿಬ್ಬಂದಿ ಗಾಡಿ ಎಳೆದೊಯ್ಯುವಾಗ ಅನೌನ್ಸ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದ್ದರು. ಅದನ್ನ ಯಥಾಪ್ರಕಾರವಾಗಿ ಎರಡು ದಿನ ಫಾಲೋ ಮಾಡಿದ ಸಿಬ್ಬಂದಿ, ಮತ್ತೆ ತಮ್ಮ ಚಾಳಿ …
Read More »ಆ ಸಿಡಿಯನ್ನ ವಿಷ್ಣುಚಕ್ರ ಅಂದುಕೊಂಡು ತಿರುಗಿಸಿದ್ರಾ?;: ಎಚ್. ವಿಶ್ವನಾಥ್
ಮೈಸೂರು(ಮಾ.25): ಕೋಟ್ಯಾಂತರ ರೂಪಾಯಿ ಲೂಟ್ ಆಗಿರುವ ಇಡಿ ಬಗ್ಗೆ ಚರ್ಚೆ ಮಾಡೋಲ್ಲ ಬರಿ ಸಿಡಿ ಚರ್ಚೆ ಮಾಡುತ್ತೀರಲ್ಲಾ, ಬಜೆಟ್ ಚರ್ಚೆಗಿಂತ ಸಿಡಿಯೇ ಹೆಚ್ಚಾಯ್ತಾ ನಿಮಗೆ ಅಂತ, ಸದನದಲ್ಲಿ ಸರ್ಕಾರಕ್ಕೆ ಚಾಟಿ ಬೀಸಲಿಲ್ಲ ಎಂದು ವಿರೋಧ ಪಕ್ಷಗಳಿಗೆ ಪರಿಷತ್ ಸದಸ್ಯ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಚಾಟಿ ಬೀಸಿದ್ದಾರೆ. ನಿನ್ನೆ ಮುಗಿದ ಸದನ ಮುಗಿತು ಅಷ್ಟೆ, ಇದರಲ್ಲಿ ರಾಜ್ಯದ ಜನರಿಗೆ ಯಾವುದೇ ಪ್ರಯೋಜನ ಆಗಲಿಲ್ಲ. ಬಜೆಟ್ ಅಧಿವೇಶ ಅಂದ್ರೆ ಆದಾಯ, ತೆರಿಗೆ, ಹಣಕಾಸಿನ ಬಗ್ಗೆ …
Read More »ನನ್ನ ಜೇಬಲ್ಲಿ ಬಾಂಬ್ ಇದೆ. ತಡ್ಕೊಳಿ. ಸದ್ಯ ಗಪ್‌ಚುಪ್ ಇದ್ದೇನೆ. ಹೊರಹಾಕಿದ್ರೆ ಅಷ್ಟೇ.
ಬೆಂಗಳೂರು, ಮಾರ್ಚ್ 25; “ನನ್ನ ಜೇಬಿನಲ್ಲೊಂದು ಬಾಂಬ್ ಇದೆ. ನನ್ನ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ಯ ನಡೆದಿರುವುದು ಈಗ ಖಚಿತವಾಗಿದೆ” ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ದೂರು ಕೊಟ್ಟ ಅರ್ಧ ಗಂಟೆಯಲ್ಲಿ ವಿಡಿಯೋ ಬಿಡುಗಡೆ ಆಗುತ್ತದೆ. ಇದು ಎಷ್ಟು ದೊಡ್ಡ ಷಡ್ಯಂತ್ಯ ಎಂಬುದು ಈಗ ತಿಳಿಯುತ್ತಿದೆ” ಎಂದರು. “ಇನ್ನೂ 10 ಸಿಡಿ ಬರಲಿ ಎದುರಿಸಲು ನಾನು ಸಿದ್ಧವಾಗಿದ್ದೇನೆ. …
Read More »ಸಿಡಿ ಲೇಡಿಯ’ 2ನೇ ವೀಡಿಯೋ ಹೇಳಿಕೆ ಕುರಿತು ‘ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ’ ಹೇಳಿದ್ದೇನು ಗೊತ್ತಾ.?
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿ ಇಂದು ಎರಡನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಆ ವೀಡಿಯೋದಲ್ಲಿ ಎಸ್‌ಐಟಿ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೂಡ ಮಾಡಿದ್ದರು. ಇದರ ಬಗ್ಗೆ ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಏನ್ ಹೇಳಿದ್ರು ಅಂತ ಮುಂದೆ ಓದಿ.. ಸಿಡಿಯಲ್ಲಿನ ಸಂತ್ರಸ್ತ ಯುವತಿ ಇಂದು 2ನೇ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿ, ಆ ವೀಡಿಯೋದಲ್ಲಿ ತಾನು ಸಿಡಿಯನ್ನು ಪೊಲೀಸ್ ಕಮೀಷನರ್ ಅವರಿಗೆ …
Read More »ಸುಧಾಕರ್ ಹೇಳಿಕೆಯನ್ನು ಅಸ್ತ್ರವಾಗಿ ಬಳಸಿಕೊಂಡ ಸಿದ್ದರಾಮಯ್ಯ
ಬೆಂಗಳೂರು, ಮಾ.25- ಡಾ.ಕೆ.ಸುಧಾಕರ್ ಅವರ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಎಲ್ಲರೂ ತಮ್ಮ ವೈವಾಹಿಕ ಸಂಬಂಧವನ್ನು ಸಾರ್ವಜನಿಕವಾಗಿ ಸ್ಪಷ್ಟಪಡಿಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಅವರು, ಸಚಿವ ಸುಧಾಕರ್ ಹೇಳಿಕೆಯನ್ನು ಬಿಜೆಪಿ ಶಾಸಕರು ಒಪ್ಪಿಕೊಳ್ಳುವುದಾದರೆ ಕೂಡಲೇ ಬಿಜೆಪಿ ಸರ್ಕಾರ ಸುಧಾಕರ್ ವಿರುದ್ಧ ಐಪಿಎಸ್ ಸೆಕ್ಷನ್ 494 ಮತ್ತು 495ರ ಅನ್ವಯ …
Read More »ಅವರೇನು ಕೊಚ್ಚಿ- ಕೊಲ್ಲಿ ಎಂದಿಲ್ಲ, ಟಿಕಾಯತ್ ವಿರುದ್ಧದ ಕೇಸು ರದ್ದಾಗಬೇಕು: ಎಚ್ ಡಿಕೆ ಆಗ್ರಹ
ಬೆಂಗಳೂರು: ರೈತ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಶಿವಮೊಗ್ಗ, ಹಾವೇರಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಅವರ ಮೇಲಿದೆ. ರೈತರ ಧ್ವನಿ ಹತ್ತಿಕ್ಕುವ ಸರ್ಕಾರದ ಪ್ರಯತ್ನಗಳಿವು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ನಿಜಕ್ಕೂ ಕೇಸು ದಾಖಲಿಸುವುದೇ ಆದರೆ ಬಿಜೆಪಿಯ ಎಷ್ಟು ನಾಯಕರ ಮೇಲೆ ಎಷ್ಟೆಷ್ಟು ಪ್ರಕರಣ ದಾಖಲಾಗಬೇಕಿತ್ತು ಎಂದು ಎಚ್ ಡಿಕೆ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ. “ಹೋರಾಟ …
Read More »CD ಯುವತಿಯಿಂದ ಮತ್ತೊಂದು ವಿಡಿಯೋ.. ಸಿದ್ದರಾಮಯ್ಯ, ಡಿಕೆಶಿ ಹೆಸರು ಉಲ್ಲೇಖ
ರಮೇಶ್ ಜಾರಕಿಹೊಳಿ ವಿಡಿಯೋದಲ್ಲಿರೋ ಯುವತಿ ಇವತ್ತು ಮತ್ತೊಂದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾಳೆ. ಅದರಲ್ಲಿ ತನ್ನ ತಂದೆ, ತಾಯಿಗೆ ರಕ್ಷಣೆ ಕೊಡಿ ಅಂತ ವಿಪಕ್ಷ ನಾಯಕರ ಬಳಿ ಕೇಳಿಕೊಂಡಿದ್ದಾಳೆ. ಜೊತೆಗೆ ಎಸ್‌ಐಟಿ ತನಿಖೆ ಬಗ್ಗೆನೇ ಅನುಮಾನ ವ್ಯಕ್ತಪಡಿಸಿದ್ದಾಳೆ. ಆಕೆ ವಿಡಿಯೋದಲ್ಲಿ ಹೇಳಿರೋದೇನು ಅನ್ನೋದು ಇಲ್ಲಿದೆ ನೋಡಿ.. ನನಗೆ ನನ್ನ ತಂದೆ, ತಾಯಿಯ ಸುರಕ್ಷತೆಯೇ ಮುಖ್ಯ. ಅದರ ಬಗ್ಗೆ ಗ್ಯಾರಂಟಿ ಸಿಕ್ಕ ಬಳಿಕ ಎಸ್‌ಐಟಿ ಮುಂದೆ ವಿಚಾರಣೆಗೆ ಬರುತ್ತೇನೆ. ಏನು ಹೇಳಿಕೆ …
Read More »ಮತ್ತೊಂದು ವಿಡೀಯೋ ಮಾಡಿ ಹೊರಗೆ ಬಿಟ್ಟಿದ್ದಾಳೆ ,ಸಿಡಿ ಯುವತಿ
ಬೆಂಗಳೂರು – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿದ್ದಾಳೆ ಎನ್ನಲಾದ ಯುವತಿ ಮತ್ತೊಂದು ವಿಡೀಯೋ ಮಾಡಿ ಹೊರಗೆ ಬಿಟ್ಟಿದ್ದಾಳೆ. ಇದರಲ್ಲಿ 2-3 ಸ್ಫೋಟಕ ಅಂಶಗಳನ್ನು ಪ್ರಸ್ತಾಪಿಸಿದ್ದಾಳೆ. ನನ್ನ ಅಪ್ಪ, ಅಮ್ಮ ಸ್ವ ಇಚ್ಛೆಯಿಂದ ಪೊಲೀಸ್ ದೂರು ನೀಡಿಲ್ಲ. ನಾನು ತಪ್ಪು ಮಾಡಿಲ್ಲ ಎಂದು ಅವರಿಗೆ ಗೊತ್ತಿದೆ. ಹಾಗಾಗಿ ಅವರು ಸ್ವಇಚ್ಛೆಯಿಂದ ದೂರು ನೀಡಲು ಸಾಧ್ಯವೇ ಇಲ್ಲ ಎಂದಿದ್ದಾಳೆ. ನನಗೆ ನನ್ನ ಅಪ್ಪ, ಅಮ್ಮನ ಸೇಫ್ಟಿ ಮುಖ್ಯ. …
Read More »ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಶುಲ್ಕ ಸಂಗ್ರಹ: ಪರಿಶೀಲಿಸಿ ಮುಂದಿನ ನಿರ್ಧಾರ; ಗೋವಿಂದ್ ಕಾರಜೋಳ
ಬೆಂಗಳೂರು, ಮಾ.24: ರಾಜ್ಯ ಹೆದ್ದಾರಿಗಳಲ್ಲಿ ಅವೈಜ್ಞಾನಿಕ ಟೋಲ್ ಶುಲ್ಕ ಸಂಗ್ರಹ ಹಾಗೂ ಟೋಲ್‍ಗಳಲ್ಲಿ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ತಪ್ಪಿಸುವ ಸಂಬಂಧ ಪರಿಶೀಲಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ಬುಧವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಕವಟಗಿಮಠ ಮಹಾಂತೇಶ ಮಲ್ಲಿಕಾರ್ಜುನ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳಗಾವಿಯ ಬಾಗವಾಡಿ ಟೋಲ್‍ನಲ್ಲಿ ರೈತರಿಗೆ ಸಮಸ್ಯೆ ಆಗುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಅಲ್ಲಿ ಬೈಪಾಸ್ ರಸ್ತೆ …
Read More »(ಬಿಜೆಪಿ) ಕೈಯಲ್ಲಿ ರಾಜ್ಯ ಸುರಕ್ಷಿತವಾಗಿರುವುದಿಲ್ಲ ಮತ್ತು ಆರ್ಥಿಕವಾಗಿ ದಿವಾಳಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ
ಬೆಂಗಳೂರು: ಇವರ (ಬಿಜೆಪಿ) ಕೈಯಲ್ಲಿ ರಾಜ್ಯ ಸುರಕ್ಷಿತವಾಗಿರುವುದಿಲ್ಲ ಮತ್ತು ಆರ್ಥಿಕವಾಗಿ ದಿವಾಳಿ ಆಗುವುದನ್ನು ತಡೆಯಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಉತ್ತರಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ‘ಇವರು ತುಪ್ಪನಾದ್ರೂ ತಿನ್ನಲಿ, ಬೆಣ್ಣೆನಾದ್ರೂ ತಿನ್ನಲಿ. ಅಂಕಿ-ಅಂಶ ನೋಡಿದರೆ ಗೊತ್ತಾಗುವುದಿಲ್ಲವೆ’ ಎಂದು ಪ್ರಶ್ನಿಸಿದರು. ‘ಬಜೆಟ್ ಮೇಲಿನ ನಮ್ಮ ಪ್ರಶ್ನೆಗಳಿಗೆ ಯಡಿಯೂರಪ್ಪ ಅವರು ತರಾತುರಿಯಲ್ಲಿ 24 …
Read More »