ಬೆಂಗಳೂರು: ಜಿ.ಪಂ., ತಾ.ಪಂ. ಕ್ಷೇತ್ರ ಪುನರ್‌ವಿಂಗಡಣೆ ಮಾರ್ಗಸೂಚಿಗಳ ಬಗ್ಗೆ ವಿಧಾನಸಭೆಯಲ್ಲಿ ಪಕ್ಷಾತೀತವಾಗಿ ಸದಸ್ಯರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಗುರುವಾರ ಸಭೆ ನಡೆಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ರಾಜ್ಯ ಚುನಾವಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ಸರಕಾರ ಪ್ರಕಟಿಸಿದೆ. ಈ ನಡುವೆ, ಯಾವುದೇ ಕಾರಣಕ್ಕೂ ಜಿ.ಪಂ., ತಾ.ಪಂ. ಚುನಾವಣೆ ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಸೋಮವಾರ ಶೂನ್ಯವೇಳೆಯಲ್ಲಿ ಬಿಜೆಪಿಯ ವಿ. ಸುನಿಲ್ ಕುಮಾರ್ ಪ್ರಸ್ತಾವಿಸಿದ ವಿಷಯದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಜಿ.ಪಂ., ತಾ.ಪಂ. ಕ್ಷೇತ್ರಗಳ …
Read More »ಸಿ.ಡಿ. ಪ್ರಕರಣ: ನ್ಯಾಯಾಂಗ ತನಿಖೆಗೆ ಪಟ್ಟು, 6 ಸಚಿವರ ರಾಜೀನಾಮೆಗೂ ಕೈ ಆಗ್ರಹ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇದ್ದಾರೆ ಎನ್ನಲಾದ ಅಶ್ಲೀಲ ಸಿ.ಡಿ. ಪ್ರಕರಣ ವಿಧಾನಸಭೆಯಲ್ಲಿ ಸೋಮವಾರ ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಭಾರೀ ವಾಗ್ವಾದಕ್ಕೆ ಕಾರಣವಾಯಿತು. ಸುಮಾರು 4 ತಾಸುಗಳ ಕಾಲ ಚರ್ಚೆ ನಡೆದು, ಸರಕಾರದ ಉತ್ತರದಿಂದ ತೃಪ್ತರಾಗದ ಕಾಂಗ್ರೆಸ್ ಸದಸ್ಯರು ಆರು ಮಂದಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಸಿ.ಡಿ. ಪ್ರಕರಣದ ಕುರಿತು ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ಮೇಲ್ವಿಚಾರಣೆಯಲ್ಲಿ ನ್ಯಾಯಾಂಗ …
Read More »ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು: ರಮೇಶ್ ಕುಮಾರ್
ಬೆಂಗಳೂರು: ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಸಚಿವರು ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು ಎಂದು ರಮೇಶ್ ಕುಮಾರ್ ಪರೋಕ್ಷವಾಗಿ ಸಚಿವ ಸುಧಾಕರ್ ಗೆ ಟಾಂಗ್ ನೀಡಿದರು. ಸಿಡಿ ಚರ್ಚೆ ವೇಳೆ ಮಾತನಾಡಿದ ಅವರು, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹೋಗಲು ಸಲಹೆ ಕೊಟ್ಟವರು ಅವಿವೇಕಿಗಳು ಅಥವಾ ಹಿತೈಷಿಗಳು ಎಂದು ನಟಿಸಿ ನಿಮ್ಮನ್ನು ಮುಗಿಸಲು ಮಾಡಿದ ಸಂಚು ಎಂದು ಆರೋಪಿಸಿದರು. ಕೋರ್ಟ್ ಗೆ ಹೋಗಿದ್ದನ್ನು ಸಮಾಜ ಏನು ತಿಳಿದುಕೊಳ್ಳುತ್ತದೆ, …
Read More »ಪಕ್ಷಕ್ಕೆ ಮುಜುಗರ; ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೈಕಮಾಂಡ್ಗೆ ಲಿಖಿತ ದೂರು ನೀಡಲು ಬಿಜೆಪಿ ಶಾಸಕರ ನಿರ್ಧಾರ
ಬೆಂಗಳೂರು: ಮುಖ್ಯಮಂತ್ರಿ ಅಧಿಕೃತ ನಿವಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಜೊತೆ 40 ಶಾಸಕರು ಇಂದು (ಮಾರ್ಚ್ 22) ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ 6-7 ಸಚಿವರ ಕಾರ್ಯವೈಖರಿ ಬಗ್ಗೆ ದೂರು ನೀಡಿದ್ದಾರೆ. ಸಚಿವರು, ಅಧಿಕಾರಿಗಳನ್ನೊಳಗೊಂಡಂತೆ ಶಾಸಕರ ಜತೆ ಮಾತುಕತೆಯಲ್ಲಿ ಮಾರ್ಚ್ 25ರಂದು ಮತ್ತೊಮ್ಮೆ ಸಭೆ ನಡೆಸುವುದಾಗಿ ಭರವಸೆ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಜೊತೆ ನಡೆದ ಸಭೆಯಲ್ಲಿ ಮುಖ್ಯವಾಗಿ, ಪಕ್ಷಕ್ಕೆ ಮುಜುಗರ ತರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ …
Read More »ರಾಜ್ಯದ ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ : ಶೀಘ್ರದಲ್ಲೇ ಪಿಂಚಣಿ ಸೌಲಭ್ಯ
ಬೆಂಗಳೂರು : ರಾಜ್ಯ ಸರ್ಕಾರವು ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿರುವ ವಿಶೇಷ ಮಕ್ಕಳ ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ …
Read More »ಸಿಇಟಿ, ನೀಟ್ ಜತೆಗೆ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್ ಕೋಚಿಂಗ್ : ʼಗೆಟ್-ಸೆಟ್ ಗೋʼ ವ್ಯವಸ್ಥೆಗೆ CM ಯಡಿಯೂರಪ್ಪ ಚಾಲನೆ
ಬೆಂಗಳೂರು : ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ, ನೀಟ್ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್ ನೀಡಲಾಗುವ ʼಗೆಟ್-ಸೆಟ್ ಗೋʼ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ʼಗೆಟ್-ಸೆಟ್ ಗೋʼ (GetCETgo) ವ್ಯವಸ್ಥೆಗೆ ಚಾಲನೆ ಕೊಟ್ಟರಲ್ಲದೆ; ‘ಈವರೆಗೆ ಸಿಇಟಿ ಮತ್ತು ನೀಟ್‌ಗೆ ಮಾತ್ರ ತರಬೇತಿ ನೀಡಲಾಗುತ್ತಿತ್ತು. ಈ ವರ್ಷದಿಂದ ಹೆಚ್ಚುವರಿಯಾಗಿ ಜೆಇಇ ವಿದ್ಯಾರ್ಥಿಗಳಿಗೂ ಆನ್‌ಲೈನ್ …
Read More »ಭ್ರಷ್ಟ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವ ಬಿಜೆಪಿ ನಾಯಕರಿಗೆ ನೈತಿಕತೆ ಇದೆಯೇ?: ಕಾಂಗ್ರೆಸ್
ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ವ್ಯಕ್ತಿಯನ್ನು ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಿರುವ ಬಿಜೆಪಿ ನಾಯಕರಿಗೆ ಭ್ರಷ್ಟಾಚಾರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ವಿ.ಎಸ್. ಉಗ್ರಪ್ಪ ಕಿಡಿಕಾರಿದ್ದಾರೆ. ಮಾಜಿ ಸಚಿವ ಕೃಷ್ಣ ಭೈರೇಗೌಡ , ಮಾಜಿ ಸಂಸದ ಉಗ್ರಪ್ಪ ಮತ್ತು ಬ್ರಿಜೇಶ್ ಕಾಳಪ್ಪ ಅವರಿಂದ ಇಂದು ಜಂಟಿ ಸುದ್ದಿಗೋಷ್ಠಿ ನಡೆಸಲಾಯಿತು. ಈ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿರುವ ವಿ.ಎಸ್. ಉಗ್ರಪ್ಪ, “ಲೋಕಪಾಲ ಕಾಯ್ದೆ ಜಾರಿಗೆ ಬರಬೇಕು …
Read More »ಸಂಸತ್ ಚುನಾವಣೆವರೆಗೂ ಹೋರಾಟ ಎಂದ ರೈತ ನಾಯಕ
ಇಂದು ನಡೆಯುತ್ತಿರುವ ರೈತರ ಹೋರಾಟ ಕೇವಲ ಕೇಂದ್ರ ಸರ್ಕಾರದ ವಿರುದ್ಧವಲ್ಲ, ಸರ್ಕಾರವನ್ನು ಪರೋಕ್ಷವಾಗಿ ನಡೆಸುತ್ತಿರುವ ಅದಾನಿ, ಅಂಬಾನಿಯಂತಹ ವ್ಯಕ್ತಿಗಳ ವಿರುದ್ಧವೂ ಆಗಿದೆ. ಹೌದು. ಬೇಡಿಕೆ ಈಡೇರದಿದ್ದರೆ ಮುಂದಿನ ಲೋಕಸಭಾ ಚುನಾವಣೆಯವರೆಗೂ ಸಾಗಲು ಸಿದ್ಧರಿದ್ದೇವೆ. ಈಗಷ್ಟೆ ಹೋರಾಟದ ಬೀಜ ಬಿತ್ತಿದ್ದೇವೆ. 10 ವರ್ಷವಾದರೂ ಗೊಬ್ಬರ ಹಾಕುತ್ತಲೇ ಇರುತ್ತೇವೆ’-ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಹೋರಾಟದ ನಾಯಕತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ನಾಯಕರಲ್ಲಿ ಪ್ರಮುಖರಾದ ರಾಕೇಶ್ ಟಿಕಾಯತ್ …
Read More »ಮಠ, ಮಂದಿರಗಳಿಗೆ ₹ 80 ಕೋಟಿ: ಪ್ರಭಾವಿ ಮಠಗಳು, ಸಮುದಾಯಗಳಿಗೆ ಮಣೆ
ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿದ್ದ ಅನುದಾನದ ಮೊತ್ತವನ್ನು ಕೋವಿಡ್ ಕಾರಣದಿಂದ ಕಡಿತಗೊಳಿಸಿದ್ದ ರಾಜ್ಯ ಸರ್ಕಾರ, ಅಭಿವೃದ್ಧಿ ಕಾಮಗಾರಿಗಳಿಗೂ ತಡೆ ವಿಧಿಸಿತ್ತು. ಆದರೆ, ಆರ್ಥಿಕ ವರ್ಷದ ಕೊನೆಯಲ್ಲಿ ವಿವಿಧ ಮಠ, ಮಂದಿರಗಳು ಮತ್ತು ಜಾತಿವಾರು ಸಂಘ ಸಂಸ್ಥೆಗಳಿಗೆ ಒಂದೇ ಕಂತಿನಲ್ಲಿ ₹ 80.25 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಮಾರ್ಚ್ 19ರಂದು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಾದ್ಯಂತ …
Read More »ಹೊಟ್ಟೆಯ ಕೊಬ್ಬನ್ನು ಕರಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್, ‘ಡೊಂಟ್ ಮಿಸ್’
ಹೊಟ್ಟೆಯ ಕೊಬ್ಬು ಹಠಮಾರಿ. ಉತ್ತಮ ಪ್ರಯತ್ನಗಳ ಹೊರತಾಗಿಯೂ ಅದು ಕಡಿಮೆಯಾಗಲು ನಿರಾಕರಿಸುತ್ತದೆ. ಯಾವುದೇ ಪ್ರಮಾಣದ ಆಹಾರ ಪದ್ಧತಿ ಸಹಾಯ ಮಾಡುವುದಿಲ್ಲ ಮತ್ತು ವ್ಯಾಯಾಮ ಕೂಡ ಹೊಟ್ಟೆ ಕರಗಿಸಲು ನೆರವಾಗುವುದಿಲ್ಲ. ಹೊಟ್ಟೆಯ ಕೊಬ್ಬನ್ನು ತೊಡೆದುಹಾಕಲು ಅಸಾಧ್ಯವಾದ ಕೆಲಸವೆಂದು ತೋರುತ್ತದೆ ಇದಕ್ಕೆ ಕಾರಣ ತಪ್ಪು ಜೀವನಕ್ರಮ. ಹೊಟ್ಟೆಕೊಬ್ಬು ವೇಗವಾಗಿ ಕರಗಲು ಬಯಸಿದ್ದರೆ ಅದಕ್ಕಾಗಿ ನಿಖರವಾಗಿ ಏನು ಮಾಡಬೇಕೆಂದು ತಿಳಿದುಕೊಳ್ಳಬೇಕು. ಹೊಟ್ಟೆಯ ಕೊಬ್ಬನ್ನು ವೇಗವಾಗಿ ಕಳೆದುಕೊಳ್ಳಲು ಸಹಾಯ ಮಾಡುವ ಕೆಲವು ಅತ್ಯುತ್ತಮ ವರ್ಕ್ ಔಟ್ …
Read More »