Breaking News

ಬೆಂಗಳೂರು

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ನನ್ನ ಅಧ್ಯಕ್ಷತೆಯಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹಾಗೂ ಬೃಹತ್ ಸೇತುವೆ ನಿರ್ಮಾಣ ಕಾಮಗಾರಿಗಳ ಪರಿಷ್ಕೃತ ಅಂದಾಜು ಪ್ರಸ್ತಾವನೆ ಕುರಿತು ಸಭೆಯನ್ನು ನಡೆಸಿದೆ. ಈ ವೇಳೆ ನಿಗಮದ ಅಧ್ಯಕ್ಷ ಶ್ರೀ ಎಚ್.ಸಿ.‌ಬಾಲಕೃಷ್ಣ, ಲೋಕೋಪಯೋಗಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. #satishjarkiholi #bengaluru

Read More »

ಬೆಂಗಳೂರಲ್ಲಿ ಆಟೋ ಪ್ರಯಾಣ ದರ ಏರಿಕೆ

ಬೆಂಗಳೂರು: ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಆಟೋರಿಕ್ಷಾಗಳ ಪ್ರಯಾಣ ದರ ಏರಿಕೆಗೆ ಕೊನೆಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಸಿರು ನಿಶಾನೆ ತೋರಿಸಿದ್ದಾರೆ. ಕನಿಷ್ಠ ದರವನ್ನು 30 ರೂಪಾಯಿಗಳಿಂದ 36 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ. ಪರಿಷ್ಕ್ರತ ದರದಂತೆ ಮೊದಲ ಎರಡು ಕಿಲೋಮೀಟರ್ ಪ್ರಯಾಣಕ್ಕೆ ಕನಿಷ್ಠ ದರ 36 ರೂಪಾಯಿಗಳಿರಲಿದೆ. ಎರಡು ಕಿಲೋಮೀಟರ್ ನಂತರದ ಪ್ರಯಾಣಕ್ಕೆ ಪ್ರತಿ ಕಿಲೋಮೀಟರ್​​ಗೆ ಈ ಮೊದಲು ಇದ್ದ ದರವನ್ನು 15 ರೂ.ನಿಂದ 18 ರೂ.ಗೆ ಹೆಚ್ಚಳ ಮಾಡಲಾಗಿದೆ. ಅಂದರೆ ಎರಡು …

Read More »

ಸಿಂಗದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮ ಶಿಷ್ಟಾಚಾರ ಉಲ್ಲಂಘಿಸಿ ಆಯೋಜಿಸಲಾಗಿದೆ’: ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಹಾಗೂ ವಿವಿಧ ಯೋಜನೆಗಳಿಗೆ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಶಿವಮೊಗ್ಗದ ಈ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಬೇರೆ ಮೂಲದಿಂದ ತಿಳಿದುಕೊಂಡಿದ್ದೇನೆ. ಬಳಿಕ ನಾನು ವೈಯಕ್ತಿಕವಾಗಿ ಮಾತನಾಡುವುದರ ಜೊತೆಗೆ ಜು.11ರಂದು ಕೇಂದ್ರ ರಸ್ತೆ ಸಾರಿಗೆ ಸಚಿವರಿಗೆ ಪತ್ರ ಬರೆದು ವಿಜಯಪುರದಲ್ಲಿ ಪೂರ್ವ ನಿಯೋಜಿತ ಕಾರ್ಯಕ್ರಮ ಇರುವುದರಿಂದ ಶಿವಮೊಗ್ಗದ ಕಾರ್ಯಕ್ರಮವನ್ನು ಮುಂದೂಡುವಂತೆ ಮನವಿ ಮಾಡಿದ್ದೆನು. …

Read More »

ಪಾರ್ಟಿಯ ವೇಳೆ ಸ್ನೇಹಿತರು ಯುವಕನೊಬ್ಬನ ಮೇಲೆ ಹಲ್ಲೆ

ಬೆಂಗಳೂರು : ಎಣ್ಣೆ ಪಾರ್ಟಿಯಲ್ಲಿ ಜೊತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಜುಲೈ 11ರಂದು ರಾತ್ರಿ ಚಾಮರಾಜಪೇಟೆ ಠಾಣೆ ವ್ಯಾಪ್ತಿಯ ರುದ್ರಪ್ಪ ಗಾರ್ಡನ್‌ನಲ್ಲಿ ಘಟನೆ ನಡೆದಿದ್ದು, ದುಷ್ಕರ್ಮಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ತೇಜಸ್ (24) ಎಂಬಾತನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತನ ಸ್ನೇಹಿತರಿಂದ ಹಲ್ಲೆ : ಆಟೋ ಚಾಲಕನಾಗಿದ್ದ ತೇಜಸ್, ಶುಕ್ರವಾರ ರಾತ್ರಿ ಕೆಲಸ ಮುಗಿದ ಬಳಿಕ ಸ್ನೇಹಿತ ಸಂತೋಷ್ ಜೊತೆ ರುದ್ರಪ್ಪ …

Read More »

ಸಿಗ್ನಲ್‌ನಲ್ಲಿ ದಾರಿ ಬಿಡದಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಮೂವರಿಂದ ಹಲ್ಲೆ

ಬೆಂಗಳೂರು: ರಸ್ತೆ ಸಿಗ್ನಲ್‌ನಲ್ಲಿ ದಾರಿ ಬಿಡಲಿಲ್ಲ ಎಂದು ಫುಡ್​​ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಹಲ್ಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೋದಿ ಆಸ್ಪತ್ರೆ ಸಿಗ್ನಲ್ ಬಳಿ ನಡೆದಿದ್ದು, ಪೀಮ್‌ರಾಮ್ ಎಂಬಾತನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ರಾಜಸ್ಥಾನ ಮೂಲದ ಪೀಮ್‌ರಾಮ್ ನಗರದಲ್ಲಿ ಫುಡ್​​ ಡೆಲಿವರಿ ಎಕ್ಸಿಕ್ಯೂಟಿವ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಭಾನುವಾರ ರಾತ್ರಿ ಮೋದಿ ಆಸ್ಪತ್ರೆ ಬಳಿ ರೆಡ್ ಸಿಗ್ನಲ್ ಇದ್ದಾಗ ಬೈಕ್ ನಿಲ್ಲಿಸಿದ್ದ. …

Read More »

ಶಾಸಕರ ಜೊತೆಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಸುರ್ಜೇವಾಲರಿಂದ ಮಿನಿಸ್ಟರ್​​​ ಜೊತೆ One to One ಸಭೆ

ಬೆಂಗಳೂರು: ಶಾಸಕರೊಟ್ಟಿಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸಚಿವರ ಜೊತೆ ಒನ್ ಒನ್ ಸಭೆ ಆರಂಭಿಸಿದ್ದಾರೆ.‌ ಸಚಿವರುಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಅನ್ನೋ ಶಾಸಕರ ಆರೋಪದ ಬೆನ್ನಲ್ಲೇ ಸಚಿವರ ಜೊತೆ ಸಭೆಗೆ ನಡೆಸುತ್ತಿರೋ ಸುರ್ಜೇವಾಲ ಸೋಮವಾರ ನಾಲ್ವರು ಸಚಿವರ ಜೊತೆ ಮಾತುಕತೆ ನಡೆಸಿದರು. ಶಾಸಕರ ಜೊತೆಗಿನ ಸಭೆಯಲ್ಲಿ ಸಚಿವರು ಸರಿಯಾಗಿ ಸ್ಪರ್ಧಿಸುತ್ತಿಲ್ಲ, ಉಸ್ತುವಾರಿ ಸಚಿವರುಗಳು ನಮ್ಮನ್ನು ಸರಿಯಾಗಿ ನಡೆಸಿಕೊಳ್ತಿಲ್ಲ, ನಮ್ಮ ಲೆಟರ್ ಗಳಿಗೆ ಬೆಲೆ …

Read More »

ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಡೆಸುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಬೇಡಿಕೆಗಳ ಕುರಿತು ಜುಲೈ 12ರಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸೋಮವಾರ ಹಾಗೂ ಮಂಗಳವಾರ ಎಂದಿನಂತೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಎ.ಅಮೃತರಾಜ್ …

Read More »

ಆಹಾರ ಇಲಾಖೆಯಿಂದ ರಾಜ್ಯದ ಹಲವು ಮಳಿಗೆಗಳು, ಹೋಟೆಲ್​​ಗಳಿಗೆ ನೋಟಿಸ್​, ಭಾರಿ ದಂಡ

ಬೆಂಗಳೂರು, ಜುಲೈ 11: ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆಹಾರ ಇಲಾಖೆ (Food Department) ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಹೊಟೇಲ್ (Hotel)​, ರೆಸ್ಟೋರೆಂಟ್​, ಬೀದಿ ಬದಿ ವ್ಯಾಪಾರ ಘಟಕಗಳಲ್ಲಿ ಪರಿಶೀಲನೆ ನಡೆಸಿದೆ. ಆಹಾರ ಇಲಾಖೆ ಅಧಿಕಾರಿಗಳ ಪರಿಶೀಲನೆ ವೇಳೆ ಕಳಪೆ ಗುಣಮಟ್ಟದ ಆಹಾರ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆಯು ಹೊಟೇಲ್​, ರೆಸ್ಟೋರೆಂಟ್​ ಮತ್ತು ಬೀದಿ ಬದಿ ವ್ಯಾಪಾರ ಘಟಕಗಳಿಗೆ ನೋಟಿಸ್​ ನೀಡಿ, ದಂಡ ವಿಧಿಸಿದೆ. ಆಹಾರ ಇಲಾಖೆಯು ರಾಜ್ಯಾದ್ಯಂತ 720 ಹೋಟೆಲ್ …

Read More »

ಸಿಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್​​ಸಿ ರವಿಕುಮಾರ್​​​ಗೆ ಜಾಮೀನು

ಬೆಂಗಳೂರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್​​ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್​​ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ (BJP MLC N Ravikumar) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. …

Read More »

ಶಾಪಿಂಗ್​ಗೆ ಹೋಗಿ ಬಂದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಪತ್ನಿ ಶಾಪಿಂಗ್​ಗೆ ಹೋಗಿ‌ ಬಂದಿದ್ದಕ್ಕೆ ತಗಾದೆ ತೆಗೆದು ಕತ್ತು ಹಿಸುಕಿ ಹತ್ಯೆಗೈದಿದ್ದ ಪತಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರೀಶ್​ ಬಂಧಿತ ಆರೋಪಿ. ಪದ್ಮಜಾ (29) ಕೊಲೆಯಾದವರು. ಜುಲೈ 6ರಂದು ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮರುದಿನ ಆಸ್ಪತ್ರೆಯಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದರು. ಕೋಲಾರದ ಶ್ರೀನಿವಾಸಪುರ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದರು‌. ಪದ್ಮಜಾ ಅವರು ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ಸ್ ವಿಭಾಗದಲ್ಲಿ ಬಿಇ …

Read More »