ಬೆಂಗಳೂರು,ಮಾ.16- ಆಡಳಿತ ಪಕ್ಷದ ಶಾಸಕರಾಗಿ ಹಾದಿಬೀದಿಯಲ್ಲಿ ಮಾತನಾಡುವ ಬದಲು ತಾಕತ್ತಿದ್ದರೆ ನನ್ನ ಮತ ಕ್ಷೇತ್ರ ಹೊನ್ನಾಳಿಗೆ ಬಂದು ಮಾತನಾಡಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸವಾಲು ಹಾಕಿದ್ದಾರೆ. ವಿಧಾನಸೌಧ ಮೊಗಸಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಚೌಕಟ್ಟು ಅಥವಾ ಶಾಸಕಾಂಗ ಸಭೆಯಲ್ಲಿ ಮಾತನಾಡುವ ಬದಲು ಯತ್ನಾಳ್ ಹಾದಿಬೀದಿಯಲ್ಲಿ ಮಾತನಾಡುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಯತ್ನಾಳ್ ನಮ್ಮ …
Read More »ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆ ದಾಖಲಿಸಿಕೊಂಡ SIT
ಬೆಂಗಳೂರು: CD ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಯನ್ನ ಪಡೆದುಕೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಐಒ ಎಸಿಪಿ ಧರ್ಮೇಂದ್ರ ಅವರು ರಮೇಶ್ ಜಾರಕಿಹೊಳಿಯಿಂದ 4 ಪುಟಗಳ ಹೇಳಿಕೆಯನ್ನ ದಾಖಲಿಸಿಕೊಂಡಿದ್ದಾರೆ. ನನಗೆ ನಾಲ್ಕು ತಿಂಗಳಿಂದ ಬ್ಲಾಕ್ ಮೇಲ್ ಮಾಡಲಾಗ್ತಿತ್ತು. ಹಣ ನೀಡಿ.. ಇಲ್ಲದಿದ್ರೆ ನಿನ್ನನ್ನ ರಾಜಕೀಯವಾಗಿ ಮುಗಿಸ್ತೀವಿ ಅಂತಾ ಆಪ್ತ ನಾಗರಾಜ್ ಮೂಲಕ ಬ್ಲ್ಯಾಕ್ ಮೇಲ್ ಮಾಡಿದ್ದರು. ಆದರೆ ನಾನು ಅವರ ಒತ್ತಾಯಕ್ಕೆ ಮಣಿದಿಲ್ಲ ಅಂತಾ …
Read More »ಇನ್‌ಸ್ಪೆಕ್ಟರ್ ವಿಕ್ಟರ್‌ಗೆ ನ್ಯಾಯಾಂಗ ಬಂಧನ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿರುವ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಇನ್‌ಸ್ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾರ್ಚ್ 9ರಂದು ವಿಕ್ಟರ್ ಅವರ ಮನೆ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಅವರನ್ನು ಬಂಧಿಸಲಾಗಿತ್ತು. ಸೋಮವಾರವರೆಗೂ ವಿಚಾರಣೆಗಾಗಿ ಆರೋಪಿ ಅಧಿಕಾರಿಯನ್ನು ಎಸಿಬಿ ತನಿಖಾ ತಂಡದ ವಶಕ್ಕೆ ನೀಡಿ …
Read More »ಕೋವಿಡ್ 2ನೇ ಅಲೆ ಮುನ್ಸೂಚನೆ: ರಾತ್ರಿ ಕರ್ಫ್ಯೂ ಬಗ್ಗೆ ಮಾ.17ರ ಬಳಿಕ ತೀರ್ಮಾನ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ಎರಡನೇ ಅಲೆಯ ಮುನ್ಸೂಚನೆ ಖಚಿತವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಾರ್ವಜನಿಕರು ಸಹಕರಿಸದಿದ್ದರೆ, ದಂಡ ವಿಧಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ತಜ್ಞರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. ಕೋವಿಡ್ ಮತ್ತೆ ಹೆಚ್ಚುತ್ತಿರುವುದರಿಂದ ಇದೇ 17 ರಂದು ಪ್ರಧಾನಿ ನರೇಂದ್ರಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ …
Read More »ಫುಡ್ ಡೆಲಿವರಿ ಗಲಾಟೆ : ಹಿತೇಶಾ ವಿರುದ್ಧ ಎಫ್‍ಐಆರ್ ದಾಖಲು
ಬೆಂಗಳೂರು : ಯುವತಿ ಮೇಲೆ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದಾನೆ ಎನ್ನುವ ಆರೋಪದ ಪ್ರಕರಣದಲ್ಲಿ ಮತ್ತೊಂದು ಹೊಸ ಬೆಳವಣೆಗೆ ನಡೆದಿದೆ. ಇಂದು ( ಮಾರ್ಚ್ 15) ಹಲ್ಲೆಗೊಳಗಾಗಿದ್ದೇನೆ ಎಂದು ಆರೋಪಿಸಿದ ಯುವತಿ ಹಿತೇಶಾ ಚಂದ್ರಾಣಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಡೆಲಿವರಿ ಬಾಯ್ ಕಾಮರಾಜ್ ದೂರಿನ ಮೇರೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ 355 (ಹಲ್ಲೆ),504 ( ಅಪಮಾನ) ಮತ್ತು 506 ( ಕ್ರಿಮಿನಲ್ ಬೆದರಿಕೆ) …
Read More »ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ಕಟ್ಟಲು ಯಾವ ಧರ್ಮ ಹೇಳುತ್ತದೆ? : ಹೈಕೋರ್ಟ್
ಬೆಂಗಳೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ನಿರ್ಮಿಸಿ ಎಂದು ಯಾವ ಧರ್ಮ ಹೇಳುತ್ತದೆ ಎಂದು ಪ್ರಶ್ನಿಸಿರುವ ಹೈಕೋರ್ಟ್, ದೇವರು-ಧರ್ಮದ ಹೆಸರಲ್ಲಿ ಸಾರ್ವಜನಿಕ ಆಸ್ತಿ ದುರ್ಬಳಕೆ ಮಾಡಿಕೊಳ್ಳುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಕೋಲಾರದ ಚನ್ನಸಂದ್ರ ಹಾಗೂ ಮಂಗಸಂದ್ರ ಗ್ರಾಮಗಳಲ್ಲಿನ ಸರ್ಕಾರಿ ಗೋಮಾಳಗಳ ಜಮೀನಿನಲ್ಲಿ ಅನಧಿಕೃತವಾಗಿ ದೇವಸ್ಥಾನ, ಚರ್ಚ್ ಹಾಗೂ ಮಿನಾರ್ ನಿರ್ಮಾಣ ಮಾಡಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಸಿದ್ದನಹಳ್ಳಿಯ ಕಿಶೋರ್ ರಾಮಮೂರ್ತಿ ಸಲ್ಲಿಸಿರುವ …
Read More »ಈ ಸಾಲಿನ ಬಜೆಟ್ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಲಿದೆ: ಸಿದ್ದರಾಮಯ್ಯ
ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ರಾಜ್ಯದ ಅಭಿವೃದ್ಧಿಗೆ ಸಂಪೂರ್ಣ ಮಾರಕವಾಗಿದೆ. ಕಾರಣ ಈ ಸಾಲಿನಲ್ಲಿ ರಾಜಸ್ವ ಆದಾಯಕ್ಕಿಂತ ರಾಜಸ್ವ ಖರ್ಚು ಹೆಚ್ಚಾಗುವ ಮೂಲಕ ಮೊದಲನೇ ಬಾರಿಗೆ ರಾಜಸ್ವ ಖೋತಾ ಅಥವಾ ರಾಜಸ್ವ ಕೊರತೆ ಉಂಟಾಗಿದೆ. 2004 ರ ನಂತರ ವಿತ್ತೀಯ ಹೊಣೆಗಾರಿಕೆ ನೀತಿಯನ್ನು ಕರ್ನಾಟಕ ಅಳವಡಿಸಿಕೊಂಡ ನಂತರದಲ್ಲಿ ಇಂಥದ್ದೊಂದು ರಾಜಸ್ವ ಕೊರತೆಯ ಬಜೆಟ್ ಈ ವರೆಗೆ ಮಂಡನೆಯಾಗಿರಲಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ …
Read More »ಯುವತಿಯ ಪ್ರಿಯತಮ ಎಸ್‌ಐಟಿ ಮುಂದೆ ಹಾಜರಾಗಿ ಸತ್ಯ ಬಾಯಿ ಬಿಟ್ಟಿದ್ದಾನೆ…
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆಯ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯ ಪ್ರಿಯತಮನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ತನಿಖೆ ವೇಳೆ ಯುವತಿಯ ಪ್ರಿಯತಮ ಎಸ್‌ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾನೆ. ಯುವತಿ ತನ್ನ ಪ್ರಿಯಕರನಿಗೆ ಸಿಡಿಯ ಕಥೆ ಹೇಳದೆಯೇ ಮಾಹಾಮೊಸ ಮಾಡಿದ್ದಾಳೆ ಎಂದು ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಯುವತಿ ಪ್ರಿಯತಮ ಸತ್ಯ ಬಾಯಿ ಬಿಟ್ಟಿದ್ದಾನೆ. ಸಚಿವರೊಬ್ಬರಿಗೆ ವಂಚನೆ ಮಾಡುತ್ತಿರೋ ವಿಚಾರ ಪ್ರಿಯತಮನಿಗೆ ಗೊತ್ತಿತ್ತಂತೆ. ಆದರೆ ರಾಸಲೀಲೆ ಸಿಡಿ …
Read More »CD ಪ್ರಕರಣ; ನೆರೆಯ 3 ರಾಜ್ಯಗಳಲ್ಲಿ ಆರೋಪಿಗಳ ಓಡಾಟ ಪತ್ತೆ ಹಚ್ಚಿದ SIT
ಬೆಂಗಳೂರು: ಮಾಜಿ ಸಚಿವರ CD ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ಪಿನ್ಗಳಿಗಾಗಿ ಎಸ್‌ಐಟಿ ಅಧಿಕಾರಿಗಳು ಶೋಧಕಾರ್ಯ ಆರಂಭಿಸಿದ್ದಾರೆ. ಸದ್ಯ ಆರೋಪಿಗಳು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಇಬ್ಬರು ಕಿಂಗ್ಪಿನ್ಗಳು ಒಟ್ಟಿಗೆ ಇರುವ ಬಗ್ಗೆ ಅಧಿಕಾರಿಗಳ ತನಿಖೆ ವೇಳೆ ಗೊತ್ತಾಗಿದೆ. ಸಿಡಿ ಲೀಕ್ ಮಾಡಿದ ಪ್ರಮುಖ ಕಿಂಗ್ಪಿನ್ ಹಾಗೂ ರಷ್ಯಾ ವೆಬ್ ಸೈಟ್ ಮೂಲಕ ವಿಡಿಯೋ ಅಪ್ಲೋಡ್ ಮಾಡಿದ್ದ ಹ್ಯಾಕರ್ ಇಬ್ಬರು, ಸಿಡಿ ರಿಲೀಸ್ ಆದ ಬೆನ್ನಲ್ಲೇ ಮೊಬೈಲ್ ಸ್ವಿಚ್ಆಫ್ …
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಶಿವರಾಜ್ ಕುಮಾರ್
ಬೆಂಗಳೂರು: ಸ್ಯಾಂಡಲ್ ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಡಿ ಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಇಂದು ಬೆಳಗ್ಗೆ ಶಿವರಾಜ್ ಕುಮಾರ್ ಭೇಟಿಯಾದರು. ಜೆಡಿಎಸ್ ನಲ್ಲಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅವರ ಸಹೋದರಿ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿಗಳ ನಡುವೆ …
Read More »