ಬೆಂಗಳೂರು: ಸಿಲಿಕಾನ್ ಸಿಟಿಯ ಸಂಚಾರ ನಾಡಿ ನಮ್ಮ ಮೆಟ್ರೋ ಪ್ರಯಾಣ ಮತ್ತಷ್ಟು ದುಬಾರಿಯಾಗಿದೆ. ಪ್ರತಿವರ್ಷ ಫೆಬ್ರುವರಿ ತಿಂಗಳಲ್ಲಿ ಮೆಟ್ರೋ ದರ ಏರಿಕೆ ಮಾಡುವುದು ನಿಯಮವಿದೆ ಎಂಬ ನೆಪ ಹೇಳಿ ಬಿಎಂಆರ್‌ಸಿಎಲ್ ದರ ಪರಿಷ್ಕರಣೆ ಮಾಡಿ, ಪ್ರಯಾಣ ದರ ಏರಿಕೆ ಮಾಡುವುದಾಗಿ ತಿಳಿಸಿದೆ. ಈಗಾಗಲೇ 72% 72 ದರ ಏರಿಕೆ ಮಾಡಿರುವ ಬಿಎಂಆರ್‌ಸಿಎಲ್ ಮತ್ತೆ 5% ದರ ಏರಿಕೆ ಮಾಡಿದ್ದು, ಫೆಬ್ರುವರಿ 9ರಿಂದ ನೂತನ ದರ ಜಾರಿಯಾಗಲಿದೆ ಎಂದು ತಿಳಿಸಿದೆ. ಇದು …
Read More »ಅಗಲಿದ ಪತ್ರಕರ್ತರುಗಳಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ ಸುದ್ದಿಮನೆಯ ಒತ್ತಡದಿಂದ ಕುಗ್ಗುತ್ತಿರುವಪತ್ರಕರ್ತರ ಆಯಸ್ಸು
ಬೆಂಗಳೂರು: ಸುದ್ದಿಮನೆಯ ಒತ್ತಡಗಳಿಗೆ ಪತ್ರಕರ್ತರ ಆಯಸ್ಸು ಕುಗ್ಗುತ್ತಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು(ಕೆಯುಡಬ್ಲೂಜೆ) ಅಗಲಿದ ಪತ್ರಕರ್ತರಿಗೆ ಏರ್ಪಡಿಸಿದ್ದ ಸಂತಾಪ ಸೂಚಕ ಸಭೆಯಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಸಭೆಯಲ್ಲಿ ಮಾತನಾಡಿದ ಹಲವರು, ಪತ್ರಕರ್ತರ ಬದುಕು ಒತ್ತಡದ ಬದುಕು ಆಗಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಸರಿಯಾದ ಆಹಾರ ಪದ್ದತಿ ಪರಿಪಾಲನೆ ಮಾಡದ ಕಾರಣಕ್ಕಾಗಿ ಆರೋಗ್ಯದ ಮೇಲೂ ಅಡ್ಡ ಪರಿಣಾಮಗಳಾಗುತ್ತಿವೆ. ಧೀರ್ಘ ಕಾಲ ಬಾಳಬೇಕಾಗಿರುವ ಪತ್ರಕರ್ತರ ಆಯಸ್ಸು ಅಲ್ಪಯುಷ್ಯಕ್ಕೆ ಇಳಿಯುತ್ತಿರುವುದು ನೋವಿನ ಸಂಗತಿ ಎಂದು …
Read More »ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್ ಲ್ಯಾಂಡ್, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವವು ಅಂತ್ಯಗೊಂಡಿದ್ದು, ಜಪಾನ್ ದೇಶದದ ʻಲಾಸ್ಟ್ ಲ್ಯಾಂಡ್ʼ , ಮರಾಠಿಯ ʻಸಬರ್ ಬೊಂದಾʼ ಮತ್ತು ʻವನ್ಯಾʼ ಚಿತ್ರಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿವೆ. ಅತ್ಯುತ್ತಮ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿಗಳನ್ನು ಗೆದ್ದವರಿಗೆ ತಲಾ ಐದು ಲಕ್ಷ ರೂ. ಮತ್ತು ಎರಡು …
Read More »5 ವರ್ಷ ಸಿದ್ದರಾಮಯ್ಯ ಯಾಕೆ ಸಿಎಂ ಆಗಿರಬಾರದು: ಪರಮೇಶ್ವರ್
ಚಿಕ್ಕಮಗಳೂರು: ಐದು ವರ್ಷ ಸಿದ್ದರಾಮಯ್ಯ ಅವರು ಯಾಕೆ ಸಿಎಂ ಆಗಿರಬಾರದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಎಂಬ ಯತೀಂದ್ರ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದರೆ ಅದು ಸಂತೋಷ. ರಾಜ್ಯಕ್ಕೆ ಸದ್ಯ ಒಂದು ಸ್ಥಿರವಾದ ಆಡಳಿತ ನೀಡುತ್ತಿರುವ ಸರ್ಕಾರದ ಅವಶ್ಯಕತೆಯಿದ್ದು, ಸಿದ್ದರಾಮಯ್ಯನವರು ಅಂತಹ ಆಡಳಿತವನ್ನು ಯಶಸ್ವಿಯಾಗಿ ನಡೆಸುತ್ತಿದ್ದಾರೆ. …
Read More »5 ವರ್ಷವೂ ನಮ್ಮ ತಂದೆಯವರೇ ಸಿಎಂ: ಯತೀಂದ್ರ ಸಿದ್ದರಾಮಯ್ಯ ಪುನರುಚ್ಚಾರ
ಮೈಸೂರು: ಐದು ವರ್ಷವೂ ನಮ್ಮ ತಂದೆಯವರೇ ಸಿಎಂ. ಇದು ಈಗ ಸೆಟ್ಲಡ್ ವಿಚಾರ ಎಂದು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಮೈಸೂರಿನಲ್ಲಿ ಸ್ಫೋಟಕ ವಿಚಾರ ಬಹಿರಂಗಪಡಿಸಿದ ಸಿಎಂ ಪುತ್ರ ಯತೀಂದ್ರ, ಹೈಕಮಾಂಡ್ ಈ ಬಗ್ಗೆ ನಮ್ಮ ತಂದೆಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಯಾರೋ ಕೆಲವರು ನಾಯಕತ್ವ ಬದಲಾವಣೆ ಬಗ್ಗೆ ಪ್ರಯತ್ನ ಮಾಡಿದ್ದರು. ಆ ಪ್ರಯತ್ನಕ್ಕೆ ಹೈಕಮಾಂಡ್ ಸೊಪ್ಪು ಹಾಕಿಲ್ಲ. ಅಲ್ಲಿಗೆ ಸಿದ್ದರಾಮಯ್ಯನವರು 5 ವರ್ಷ ಸಿಎಂ ಆಗಿ ಅಧಿಕಾರ …
Read More »ಬ್ಯಾಲೆಟ್ ಪೇಪರ್ನಲ್ಲೇ ಗ್ರಾಮ ಪಂಚಾಯ್ತಿ ಎಲೆಕ್ಷನ್: ಸಚಿವ ಸಂಪುಟ ಮಹತ್ವದ ನಿರ್ಧಾರ
ಬೆಂಗಳೂರು:ಕರ್ನಾಟಕದ ಬಹುತೇಕ ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್‌ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ. ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ. ಈ ಎಲ್ಲಾ ಬೆಳವಣಿಗಗಳ ನಡುವೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು (ಫೆಬ್ರವರಿ 05) ಸಿದ್ದರಾಮಯ್ಯ …
Read More »ಅಕ್ರಮ ಹಣ ವರ್ಗಾವಣೆ ಕೇಸ್; ಶಾಸಕ ಸತೀಶ್ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್ ತಿಳಿಸಿದೆ. ಲಿವರ್ ಕಸಿ ಕುರಿತು 2 ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಕೋರ್ಟ್ ನಿರ್ದೇಶನ ನೀಡಿದೆ. ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ …
Read More »ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ
ಬೆಂಗಳೂರು: ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ ಮಂಡಿಸಿದ ನಿರ್ಣಯ ಪರ ವಿಧಾನ ಸಭೆಯಲ್ಲಿ ಮಾತನಾಡಲು ಮುಂದಾದಾಗ ಬಿಜೆಪಿ ಸದಸ್ಯರು ಅಡ್ಡಿಪಡಿಸಿದ್ದಕ್ಕೆ ರೊಚ್ಚಿಗೆದ್ದ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಹಿಗ್ಗಾಮುಗ್ಗಾ ಬೈದಿದ್ದರು. ಈ ವಿಚಾರವಾಗಿ ಆಕ್ರೋಶ ಕೇಳಿಬಂದ ಹಿನ್ನೆಲೆ ಸ್ವತಃ ಶಾಸಕರೇ ಸ್ಪಷ್ಟನೆ ನೀಡಿದ್ದಾರೆ. ನಾನು ಸಲಗರ, ವೇದವ್ಯಾಸ ಕಾಮತ್ ಬಗ್ಗೆ ಮಾತ್ರ ಮಾತಾಡಿದ್ದು. ತಹಶೀಲ್ದಾರ್ ಆಗಿರುವ ಪತ್ನಿಯಿಂದಲೇ ಶಾಸಕ ಶರಣು ಸಲಗರ ಎಂಎಲ್ಎ ಆಗಿದ್ದಾರೆಂದು ನಮ್ಮ ಕಡೆಯವ್ರು ಹೇಳಿದ್ರು. ಹೆಣ್ಮಗು …
Read More »ಕೇಂದ್ರ ಸಚಿವ ಭೂಪೇಂದ್ರ ಯಾದವ್ – ಹೆಚ್‌ಡಿಕೆ ಮಹತ್ವದ ಚರ್ಚೆ
ನವದೆಹಲಿ:ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೀವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕುಮಾರಸ್ವಾಮಿ ಅವರು ಮಾತನಾಡಿ, …
Read More »ತುರ್ತು ಪ್ರತಿಕ್ರಿಯೆ ಸಹಾಯಕ್ಕೆ 112 ಜೊತೆ 14416 ಸಂಯೋಜನೆ
ಬೆಂಗಳೂರು: ಮಾನಸಿಕ ಆರೋಗ್ಯ ಸಂಕಷ್ಟ ಅನುಭವಿಸುತ್ತಿರುವ ವ್ಯಕ್ತಿಗಳಿಗೆ ಸಮಯೋಚಿತ ಸಹಾಯ ಒದಗಿಸಲು ಹಾಗೂ ಆತಹತ್ಯೆ ಅಪಾಯ ಸೇರಿದಂತ ಮಾನಸಿಕ ಚಿಕಿತ್ಸೆಗೆ ಸಂಬಂಧಿಸಿದ ತುರ್ತು ಸಮಯದಲ್ಲಿ ನಮ್ಮ 112 ಸಹಯೋಗದೊಂದಿಗೆ ಟೆಲಿ ಮನಸ್ (14416) ಸಂಯೋಜನೆಗೊಂಡಿದೆ. ನಗರದಲ್ಲಿ ಸಂಕಷ್ಟದ ಸಂದರ್ಭಗಳಲ್ಲಿ ಮಾನಸಿಕ ಆರೋಗ್ಯ ಸೇವೆಗಳನ್ನು ಬಲಪಡಿ ಸುವ ದಿಕ್ಕಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ.ನಗರದಲ್ಲಿ ತುರ್ತು ಮಾನಸಿಕ ಆರೋಗ್ಯ ಪ್ರತಿಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಇಂದು ಹಮಿಕೊಂಡಿದ್ದ ತುರ್ತು ಸ್ಪಂದನ ಸಹಾಯ ವ್ಯವಸ್ಥೆ …
Read More »
Laxmi News 24×7