ಬೆಂಗಳೂರು, ಮಾ.4-ಪೆಟ್ರೋಲ್, ಡೀಸೆಲ್ ಮೇಲೆ ವಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ಗಳ ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್‍ಕೆ.ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ ಅವರು, ದಕ್ಷಿಣ ಭಾರತ ರಾಜ್ಯಗಳ ಪೈಕಿ ಕೇರಳ ಹೊರತು ಪಡಿಸಿ ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ …
Read More »ರಾಜಕಾರಣಿಗಳ ಚಾರಿತ್ರ್ಯ ಹರಣ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಶಾಸಕ ರಾಜುಗೌಡ!
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಿಂದಿರುವ ವ್ಯಕ್ತಿಯ ಬಗ್ಗೆ ಸತ್ಯಾಂಶ ಹೊರ ಬರಲು ಸಿಬಿಐ ತನಿಖೆಯಾಗಬೇಕು. ಈ ಸಿಡಿ ಬಿಡುಗಡೆ ಮಾಡಲು ಯಾರು ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿದ್ದಾರೆ ಎನ್ನುವ ವಿಚಾರದ ಬಗ್ಗೆಯೂ ತನಿಖೆಯಾಗಲಿ ಎಂದು ಬಿಜೆಪಿ ಶಾಸಕ ರಾಜುಗೌಡ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ, ಸದ್ಯ ಬಿಡುಗಡೆಯಾಗಿರುವ ವಿಡಿಯೋ ರಷ್ಯಾದಿಂದ ಅಪ್ ಲೋಡ್ ಆಗಿದೆ. ಅಲ್ಲಿಂದ ವಿಡಿಯೋವನ್ನು ಅಪ್ ಲೋಡ್ ಮಾಡಲು ಯಾರೋ ದೊಡ್ಡವರೇ …
Read More »ಅಧಿವೇಶನದಲ್ಲಿ ಒನ್ ನೇಷನ್ ಒನ್ ಎಲೆಕ್ಷನ್ ಚರ್ಚೆ ಪ್ರಸ್ತಾಪ: ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು(ಮಾ. 04): ಈಗ ಒನ್ ನೇಷನ್ ಒನ್ ಎಲೆಕ್ಷನ್ ಅಂತಿದ್ದಾರೆ. ಇದನ್ನ ಯಾರ ಒತ್ತಡದ ಮೇಲೆ ತಂದಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯ ನಂತರ ಮಾತನಾಡಿ, ಒನ್ ನೇಷನ್ ಒನ್ ಎಲೆಕ್ಷನ್ ಬಗ್ಗೆ ಚರ್ಚೆಯಿದೆ. ಇದನ್ನ ಚರ್ಚೆಗೆ ಯಾರು ಅವಕಾಶ ಕೊಟ್ಟಿದ್ದು? ಕೇಂದ್ರ ಸರ್ಕಾರವೇನಾದ್ರೂ ಇದನ್ನ ಮಾಡಿ ಎಂದಿದ್ಯಾ? ಇವತ್ತು ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ. ಇವುಗಳ …
Read More »ಕೋವಿಡ್ ಲಸಿಕೆ ಪಡೆಯಲು ಸಕಾರಾತ್ಮಕ ಸ್ಪಂದನೆ; ಮಾರ್ಚ್ ಅಂತ್ಯದವರೆಗೂ ಸ್ಲಾಟ್ ಗಳು ಫಿಕ್ಸ್!
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 60 ವರ್ಷ ಮೇಲಿನವರು, ಬೇರೆ ಕಾಯಿಲೆ ಹೊಂದಿರುವ 45ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಮುಂದುವರೆದಿದೆ. ಕೋವಿಡ್ ಲಸಿಕೆ ಪಡೆಯಲು ಜನರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ. ಹೌದು.. ಕೋವಿನ್ ಪೋರ್ಟಲ್‌ನಲ್ಲಿ ಲಕ್ಷಾಂತರ ಮಂದಿ ಕೋವಿಡ್ ಲಸಿಕೆಗಾಗಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದು, ಪರಿಣಾಮ ಮಾರ್ಚ್ ಅಂತ್ಯದ ವರೆಗೂ ಸ್ಲಾಟ್ ಗಳು ಬುಕ್ ಆಗಿವೆ. ಏಪ್ರಿಲ್ ನಲ್ಲಷ್ಟೇ ಸ್ಲಾಟ್ ಗಳು ಖಾಲಿ ಇವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. …
Read More »ವಿಧಾನಸೌಧಕ್ಕೆ CITU ಮುತ್ತಿಗೆ,…!
ಬೆಂಗಳೂರು: ಸಿಐಟಿಯು ನೇತೃತ್ವದಲ್ಲಿ ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸುಮಾರು 25,000 ನೌಕರರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು, ಸಾರಿಗೆ ನೌಕರರಿಂದ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಕೆಎಸ್ಸಾರ್ ರೈಲ್ವೇ ನಿಲ್ದಾಣದಿಂದ ವಿಧಾನಸೌಧದವರೆಗೆ ಮೆರವಣಿಗೆ ನಡೆಯಲಿದೆ. ರ್ಯಾಲಿಯ ಮೂಲಕ ಬಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ …
Read More »ಕಂತೆ ಕಂತೆ ನೋಟು ಪತ್ತೆ! ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ
ವಿಶಾಖಪಟ್ಟಣಂ: ಸುಮಾರು 7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಇಬ್ಬರು ಆರೋಪಿಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್ಪೋಸ್ಟ್ನಲ್ಲಿ ಪೊಲೀಸರು ಬಂಧಿಸಿ, ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಆರೋಪಿಗಳು ಅಂತಾರಾಜ್ಯ ದಂಧೆಕೋರರು ಎಂಬುದಾಗಿ ತಿಳಿದುಬಂದಿದೆ. ಅವರಿಬ್ಬರು ಛತ್ತೀಸ್ಗಢದ ರಾಯ್ಪುರದಿಂದ ಆಂಧ್ರದ ವಿಶಾಖಪಟ್ಟಣಂ ಬರುವಾಗ ಮಾರ್ಗ ಮಧ್ಯೆಯೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುಂಕಿ ಔಟ್ಪೋಸ್ಟ್ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 500 ರೂ. …
Read More »ಕಾಂಗ್ರೆಸ್‌ನಲ್ಲಿ ತಳಮಳ : ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಪ್ರಯತ್ನ
ಬೆಂಗಳೂರು: ಮೈಸೂರು ಪಾಲಿಕೆ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆ ಗಿನ ಮೈತ್ರಿ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಪ್ರಕರಣವನ್ನು ಕೆಪಿಸಿಸಿ ಶಿಸ್ತು ಸಮಿತಿಗೆ ವಹಿಸುವುದರೊಂದಿಗೆ ಸಿದ್ದರಾಮಯ್ಯ ಕೋಪ ತಣಿಸಲು ಹೈಕಮಾಂಡ್ ಮುಂದಾಗಿದೆ. ಶಿಸ್ತು ಸಮಿತಿ ಅಧ್ಯಕ್ಷ, ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಅವರು ಮಾಜಿ ಸಚಿವ ತನ್ವೀರ್ ಸೇಠ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ಮೈಸೂರು ಪ್ರಕರಣದ …
Read More »ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಮಾ. 4ರಿಂದ ಆರಂಭ: ಕಲಾಪಕ್ಕೆ ಸಜ್ಜಾಗುತ್ತಿವೆ ವಿಪಕ್ಷಗಳು..!
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ಮೀಸಲಾತಿ ಹೋರಾಟ ಮತ್ತಿತರ ವಿಚಾರ ಸದ್ದು ಮಾಡುವ ನಿರೀಕ್ಷೆಯಿದೆ. ಅಧಿವೇಶನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗುರುವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಿ ಸರಕಾರದ ವಿರುದ್ಧ ಮುಗಿಬೀಳುವ ವಿಚಾರದಲ್ಲಿ ಕಾರ್ಯತಂತ್ರ ರೂಪಿಸಲಿದೆ. ಜೆಡಿಎಸ್ ಕೂಡ ಗುರುವಾರ ಅಥವಾ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸುವ ಸಾಧ್ಯತೆಯಿದೆ. ವಿಪಕ್ಷಗಳಿಗೆ ತಿರುಗೇಟು ನೀಡುವ ಸಂಬಂಧ ಬಿಜೆಪಿಯೂ ಸಜ್ಜಾಗುತ್ತಿದೆ. ಅಧಿವೇಶನ ಕುರಿತು ಮಂಗಳವಾರ ಮಾಹಿತಿ ನೀಡಿದ ಸ್ಪೀಕರ್ ವಿಶ್ವೇಶ್ವರ …
Read More »ಮಾ.4 ರಿಂದ ವಿಧಾನ ಪರಿಷತ್ ಅಧಿವೇಶನ: ಬಸವರಾಜ ಹೊರಟ್ಟಿ
ಬೆಂಗಳೂರು, : ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನವು ಮಾ.4 ರಿಂದ 31ರವರೆಗೆ ನಡೆಯಲಿದ್ದು, ಮಾ.8ರಂದು ಮುಖ್ಯಮಂತ್ರಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ಮಂಗಳವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಜಾ ದಿನಗಳನ್ನು ಹೊರತುಪಡಿಸಿ ಒಟ್ಟಾರೆ 19 ದಿನಗಳು ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಮಂಡಿಸುವ ಸಲುವಾಗಿ ಒಟ್ಟು 496 ಪ್ರಶ್ನೆಗಳು ಬಂದಿವೆ. 45 ಚುಕ್ಕೆ ಗುರುತಿನ ಪ್ರಶ್ನೆಗಳು, 265 …
Read More »ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ!
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಿಎಂ ಇಬ್ರಾಹಿಂ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ದಿಢೀರ್ ಆಗಿ ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಇಬ್ರಾಹಿಂ ಮಾತುಕತೆ ನಡೆಸಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದ ಸಿಎಂ ಇಬ್ರಾಹಿಂ ಮೈತ್ರಿ ಸರ್ಕಾರದ …
Read More »