Breaking News

ಬೆಂಗಳೂರು

ಈ ಬಾರಿಯ ಬಜೆಟ್ ನಿಂದ ಆರೋಗ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ : ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಫೆಬ್ರವರಿ 16 : ವೈದ್ಯರು ಪ್ರತಿ ರೋಗಿಯನ್ನು ತಮ್ಮ ಕುಟುಂಬ ಸದಸ್ಯರಂತೆ ಕಂಡು ಸೇವೆ ನೀಡಿದರೆ ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ ನಿರೀಕ್ಷಿತ ಸೇವೆ ನೀಡಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರಿ ಆರೋಗ್ಯ ಕ್ಷೇತ್ರದಲ್ಲಿ 3 ಲಕ್ಷ ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸರ್ಕಾರಿ ಆರೋಗ್ಯ ಕೇಂದ್ರಗಳು ನಿರೀಕ್ಷೆಗೆ ತಕ್ಕಂತೆ …

Read More »

ನಟ ರಾಘವೇಂದ್ರ ರಾಜ್ ಕುಮಾರ್ ಗೆ ಹೃದಯ ಶಸ್ತ್ರಚಿಕಿತ್ಸೆಗೆ ಸಿದ್ಧತೆ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಮೂಲಗಳ ಪ್ರಕಾರ ರಾಘವೇಂದ್ರ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅಭಿಮಾನಿಗಳು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಭದ್ರತೆಗಾಗಿ ಆಸ್ಪತ್ರೆ ಸುತ್ತ ಕೆ.ಎಸ್.ಆರ್.ಪಿ. ತುಕಡಿ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು …

Read More »

ಐವರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು : ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳಿಗೂ ವರ್ಗಾವಣೆಯ ಬಿಸಿ ಮುಟ್ಟಿಸಿದೆ. ಇಂದು ಸಂಜೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ‌‌. ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು …

Read More »

ಬಾಲಿವುಡ್​ಗೆ ರವಿ ಬಸ್ರೂರು

ಬೆಂಗಳೂರು: ರವಿ ಬಸ್ರೂರು ಈಗಾಗಲೇ ‘ಕೆಜಿಎಫ್’ ಚಿತ್ರಗಳ ಮೂಲಕ ಬೇರೆ ಭಾಷೆಯ ಚಿತ್ರರಂಗಗಳಿಗೂ ಪರಿಚಿತರಾಗಿದ್ದಾರೆ. ಇನ್ನು, ಈಗಾಗಲೇ ತೆಲುಗು, ಮಲಯಾಳಂ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್​ಗೂ ಕಾಲಿಟ್ಟಿದ್ದಾರೆ. ಬಾಲಿವುಡ್​ನ ಜನಪ್ರಿಯ ನಟ-ನಿರ್ದೇಶಕ ಫರ್ಹಾನ್ ಅಖ್ತರ್, ‘ಯುದ್ರ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು, ಮತ್ತೊಬ್ಬ ಕನ್ನಡಿಗ ರವಿ ಉದ್ಯಾವರ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೋಮವಾರ ಸೋಷಿಯಲ್ ಮೀಡಿಯಾ …

Read More »

ಕೋವಿಡ್‌ ವಾರಿಯರ್ಸ್ ಗೆ ಸಿಗದ ವಿಮೆ ಪರಿಹಾರ: ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು; ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಗೆ ಸರ್ಕಾರ ಘೋಷಣೆ ಮಾಡಿದ್ದ ವಿಮೆ ಪರಿಹಾರ ಪಾವತಿಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕೋವಿಡ್‌ ಕರ್ತವ್ಯದಲ್ಲಿ ಭಾಗಿಯಾಗಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಕುಟುಂಬಗಳಿಗೆ ವಿಮಾ ಪರಿಹಾರ ಪಾವತಿಯಾಗದ ವಿಷಯವನ್ನು ಕರ್ನಾಟಕ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿ …

Read More »

ಇಟ್ಟುಕೊಂಡವಳು ಇರೋ ತನಕ ಕಟ್ಟಿಕೊಂಡವಳು ಕೊನೇ ತನಕ

ಬೆಂಗಳೂರು, ಫೆಬ್ರವರಿ 15: ಚಿನ್ನಾ, ನೀನು ದುಡ್ಡು ಸಂಪಾದನೆ ಮಾಡಿಕೊಂಡು ಬಾ. ನಾವಿಬ್ಬರೂ ಎಲ್ಲಾದರೂ ಹೋಗಿ ರಾಯಲ್ ಲೈಫ್ ಲೀಡ್ ಮಾಡೋಣ ! ಎಟಿಎಂ ಗೆ ತುಂಬ ಬೇಕಿದ್ದ 64 ಲಕ್ಷ ರೂ. ಹಣ ಸಮೇತ ಎಸ್ಕೆಪ್ ಆಗಿ ಸಿಕ್ಕಿಬಿದ್ದ ಚಾಲಕ ಯೋಗೀಶ್ ಈ ಕೃತ್ಯ ಎಸಗಲು ಪ್ರೇರಣೆ ನೀಡಿದ್ದು ಅತ್ತೆಯ ಮಗಳು. ಮತ್ತು ಆಕೆಯ ಪ್ರೀತಿ ! ಅಪರಾಧ ಎಸಗಿ ಜೈಲು ಸೇರಿರುವ ಯೋಗೀಶ್ ಇದೀಗ ಹೆಂಡತಿ ಮಕ್ಕಳಿಗೆ …

Read More »

ಜೈಲಿನಿಂದ ಬಿಡುಗಡೆಯಾದ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ?

ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ನಟಿ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ? ಹೀಗೊಂದು ಸುದ್ದಿ ಹಬ್ಬಿದೆ. ರಾಗಿಣಿ ದ್ವಿವೇದಿ ಬಿಗ್ ಬಾಸ್ ಸೀಸನ್ 8 ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಡಿದೆ. ಈಗಾಗಲೇ ವಾಹಿನಿ ಆಕೆಯನ್ನು ಸಂಪರ್ಕಿಸಿದೆ ಎನ್ನಲಾಗಿದೆ. ಜೈಲಿಗೆ ಹೋಗಿ ಇಮೇಜ್ ಕಳೆದುಕೊಂಡಿರುವ ರಾಗಿಣಿಗೆ ಈಗ ಮತ್ತೆ ತನ್ನನ್ನು ಸಾಬೀತುಪಡಿಸಲು ಬಿಗ್ ಬಾಸ್ ವೇದಿಕೆಯಾಗಬಹುದು. ಹೀಗಾಗಿ ಆಕೆ ತೆರಳಿದರೂ ಅಚ್ಚರಿಯಿಲ್ಲ.

Read More »

SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷ ಶುಲ್ಕ ಕಟ್ಟುವ ದಿನಾಂಕ ವಿಸ್ತರಣೆ, ಇಲ್ಲಿದೆ ನೂತನ ದಿನಾಂಕ

ಬೆಂಗಳೂರು: 2021ನೇ ಜೂನ್‌ ಮಾಹೆಯಲ್ಲಿ ನಡೆಯುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ,ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್‌ಲೈನ್‌ ಮುಖಾಂತರ ನೋಂದಾಯಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಣೆ ಮಾಡಲು ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ.

Read More »

ಕೇಂದ್ರ ಆರೋಗ್ಯ ಇಲಾಖೆʼಯಿಂದ ʼಕಚೇರಿʼಗಳಿಗೆ ಹೊಸ ʼಗೈಡ್‌ ಲೈನ್ಸ್‌ʼ ಜಾರಿ: ಉದ್ಯೋಗಿಗಳೇ ನೀವು ಇವುಗಳನ್ನ ಪಾಲಿಸ್ಲೇಬೇಕು

ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆ ಕಚೇರಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ್ದು, ಉದ್ಯೋಗಿಗಳು ಕಡ್ಡಾಯವಾಗಿ ಇವುಗಳನ್ನ ಪಾಲಿಸಿಲೇ ಬೇಕು ಎಂದು ತಾಕೀತು ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ನೀಡಿದ ಸಾಮಾನ್ಯ ಹಾಗೂ ನಿರ್ಧಿಷ್ಟ ಮಾರ್ಗಸೂಚಿಗಳು ಈ ಕೆಳಗಿನಂತಿವೆ. ಸಾಮಾನ್ಯ ‌ಮಾರ್ಗಸೂಚಿಗಳು ಇಂತಿವೆ..! * ವ್ಯಕ್ತಿಯಿಂದ ವ್ಯಕ್ತಿಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು. * ಕಚೇರಿಯಲ್ಲಿ ಇರುವಷ್ಟು ಸಮಯ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. * ಸ್ಯಾನಿಟೈಸರ್ ಬಳಸಬೇಕು ಅಥವಾ ಸೋಪ್ ಬಳಸಿ …

Read More »

ಇವರಿಗೆ ಕಾಮನ್ ಸೆನ್ಸ್ ಇದೆಯಾ? 10 ರೂ. ಪಾವತಿಸಿ ಅಂತ ತಿಳಿಸಲು ಈ ವಿ.ವಿ. ಖರ್ಚು ಮಾಡಿದ್ದು 22 ರೂ.!

ಧಾರವಾಡ: ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ದೇಶದ ಯಾವುದೇ ಪ್ರಜೆ ಯಾವುದೇ ರೀತಿಯ ಮಾಹಿತಿಯನ್ನು ಪಡೆಯಬಹುದು. ಅದೇ ರೀತಿಯ ಮಾಹಿತಿಯನ್ನು ಕೇಳಿ ಒಬ್ಬರು ಸಲ್ಲಿಸಿದ್ದ ಅರ್ಜಿಗೆ ಕರ್ನಾಟಕ ವಿಶ್ವವಿದ್ಯಾಲಯದ ಆರ್​ಟಿಐ ಉತ್ತರಿಸಿದ ಅಧಿಕಾರಿಗಳು ಉತ್ತರಿಸಿದ ರೀತಿಯೇ ನಗು ತರಿಸುವಂತಿದೆ. ಧಾರವಾಡದ ಕೆ.ಎಸ್. ಜಯಂತ್​ ಕೆಲವು ಮಾಹಿತಿ ಕೋರಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ 2021ರ ಜನವರಿ 1ರಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಫೆಬ್ರವರಿ 10ರಂದು ಉತ್ತರ ಬಂದಿದೆ. ‘ನೀವು ಕೇಳಿರುವ …

Read More »