ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಸಮಾಜ ಪರಿವರ್ತನಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಈ ನಿರ್ದೇಶನ ನೀಡಿದೆ. ರಾಜ್ಯದಲ್ಲಿರುವ ಕ್ವಾರಿಗಳ ಸರ್ವೇ ನಡೆಸಿ ಸುರಕ್ಷತಾ ನಿಯಮಾವಳಿ ಪಾಲಿಸ ಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸ ಬೇಕು. ಒಂದೊಮ್ಮೆ …
Read More »ದಲಿತ ಮಕ್ಕಳಿಗೆ ನಾಲ್ಕು ಸೈನಿಕ ಶಾಲೆ: ಗೋವಿಂದ ಕಾರಜೋಳ
ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದಲ್ಲಿ ನಾಲ್ಕು ಸೈನಿಕ ವಸತಿ ಶಾಲೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಅನುದಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯ ಅರವಿಂದ ಕುಮಾರ್ ಅರಳಿ ಪ್ರಶ್ನೆಗೆ ಉತ್ತರಿಸಿ, ವಿಜಯಪುರ ಹಾಗೂ ಮಡಿಕೇರಿಯಲ್ಲಿರುವ ಸೈನಿಕ ಶಾಲೆಗಳ ಮಾದರಿಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ ಮಕ್ಕಳಿಗೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದೊಂದು ಸೈನಿಕ ವಸತಿ ಶಾಲೆ …
Read More »ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಕಣ್ಮರೆಯಾಗಿದೆ ಕನ್ನಡ : H.D.K.
ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ …
Read More »ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯ : ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾದ ರೈತರ ನಿಯೋಗ
ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆಯ ಅನುಷ್ಠಾನ ನಮ್ಮ ಸರ್ಕಾರದ ಆದ್ಯತೆಯ ಯೋಜನೆಯಾಗಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಹೇಳಿದರು. ಮಹದಾಯಿ ಹೋರಾಟಗಾರರು ಮತ್ತು ನವಲಗುಂದದ ರೈತ ಮುಖಂಡರ ನಿಯೋಗದೊಂದಿಗೆ ಮಾತನಾಡಿದ ಸಚಿವ *ರಮೇಶ್ ಜಾರಕಿಹೊಳಿ*, ನಮ್ಮ ಪಾಲಿನ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ನಮ್ಮ ಹಕ್ಕು ಎಂದು ಹೇಳಿದರು. ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಕೂಡಲೇ …
Read More »ಏರೋ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ
ಬೆಂಗಳೂರು ಐತಿಹಾಸಿಕ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಏರೋ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್ ಬಳಿಯಿಂದಲೇ ಟ್ರಾಫಿಕ್ ಜಾಮ್ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …
Read More »ಶೂಟಿಂಗ್ ಶುರುವಾದ ಮೊದಲ ದಿನವೇ ಆದಿಪುರುಷ್ ಸೆಟ್‌ನಲ್ಲಿ ಬೆಂಕಿ ಅವಘಡ
ಪ್ರಭಾಸ್ ನಟನೆಯ ಪೌರಾಣಿಕ ಚಿತ್ರ ಆದಿಪುರುಷ್ ಅಧಿಕೃತವಾಗಿ ಸೆಟ್ಟೇರಿದೆ. ಸಿನಿಮಾ ಆರಂಭವಾದ ಮೊದಲ ದಿನವೇ ಚಿತ್ರಕ್ಕೆ ವಿಘ್ನ ಎದುರಾಗಿದೆ. ಚಿತ್ರದ ಸೆಟ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮುಂಬೈನ ಗೋರೆಗಾಂವ್ ಪ್ರದೇಶದ ಇನೋರ್ಬಿಟ್ ಮಾಲ್‌ನ ಹಿಂಭಾಗದಲ್ಲಿರುವ ರೆಟ್ರೊ ಮೈದಾನದಲ್ಲಿ ಆದಿಪುರುಷ್ ಸಿನಿಮಾದ ಚಿತ್ರೀಕರಣ ನಡೆಸಲು ಸಿದ್ಧತೆ ನಡೆದಿತ್ತು. ಸೆಟ್‌ನಲ್ಲಿ ಸುಮಾರು ಐವತ್ತರಿಂದ ಅರವತ್ತು ಜನರು ಹಾಜರಿದ್ದರು. ಸಂಜೆ 4: 13ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಬಾಲಿವುಡ್ …
Read More »ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು
ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್, ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್ ರೆಡ್ಡಿ …
Read More »ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಅವಿಶ್ವಾಸ ನಿರ್ಣಯ ಮಂಡಿಸಿದ ಬಿಜೆಪಿ ಸದಸ್ಯ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಪದಚ್ಯುತಿ ಸಂಬಂಧ ಮಂಗಳವಾರ ಮಧ್ಯಾಹ್ನ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಅವಿಶ್ವಾಸ ನಿರ್ಣಯ ಮಂಡಿಸಿದರು. ಭೋಜನ ವಿರಾಮದ ನಂತರ ಕಲಾಪ ಸೇರುತ್ತಿದ್ದಂತೆ ಪದಚ್ಯುತಿ ವಿಚಾರವನ್ನು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರು ಪ್ರಸ್ತಾಪಿಸಿದರು. ಸದಸ್ಯ ಆಯನೂರು ಮಂಜುನಾಥ್ ಅವರಿಗೆ ನಿರ್ಣಯ ಮಂಡಿಸುವಂತೆ ಆಹ್ವಾನಿಸಿದರು. ಬಿಜೆಪಿಯ ಸದಸ್ಯ ಆಯನೂರು ಮಂಜುನಾಥ್ ನಿರ್ಣಯ ಮಂಡಿಸುತ್ತಿದ್ದಂತೆಯೇ, ಇದರ ಪರವಾಗಿ …
Read More »ಶಾಸಕರ ಅಸಮಾಧಾನ ಶಮನಕ್ಕೆ ಇಂದು ಮುಖ್ಯಮಂತ್ರಿಗಳಿಂದ “ಭೋಜನ’ ಕೂಟ
ಬೆಂಗಳೂರು: ಪಕ್ಷ ಹಾಗೂ ಸರ್ಕಾರದಲ್ಲಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಬಿಜೆಪಿಯ ಪಕ್ಷ ನಿಷ್ಠ ಶಾಸಕರು ಖಾಸಗಿ ಹೋಟೆಲ್ ಸಭೆ ನಡೆಸುವ ಬದಲು ಮಧ್ಯಾಹ್ನ ವಿಧಾನಸೌಧದಲ್ಲಿಯೇ ಭೋಜನದ ನೆಪದಲ್ಲಿ ಸಭೆ ನಡೆಸಿದ್ದಾರೆ. ಅಸಮಾಧಾನಿತರ ವಿಶ್ವಾಸಗಳಿಸಲು ಸಿಎಂ ಯಡಿಯೂರಪ್ಪ ಇಂದು ಭೋಜನ ಕೂಟ ಏರ್ಪಡಿಸಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸುನಿಲ್ ಕುಮಾರ್ ಅವರ ಕಚೇರಿಯಲ್ಲಿ ಭೋಜನದ ಜೊತೆ ಅನೌಪಚಾರಿಕ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಜಿ.ಎಚ್.ತಿಪ್ಪಾರೆಡ್ಡಿ, ಸಿದ್ದು ಸವದಿ, ಅಪ್ಪಚ್ಚು ರಂಜನ್ …
Read More »ಪೊಲೀಸ್ ಪೇದೆ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿದ್ದ ಆರೋಪಿ ಅಂದರ್
ಬೆಂಗಳೂರು: ಪೊಲೀಸ್ ಪೇದೆ ಎಂದು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದ ಆರೋಪಿಯನ್ನು ಬಗಲುಗುಂಟೆ ಪೊಲೀಸರು ಬಂಧಿಸಿದ್ದಾರೆ. ಫಕೀರಪ್ಪ ಬಂಧಿತ ಆರೋಪಿ. ಮೂಲತಃ ಕೊಪ್ಪಳ ಮೂಲದ ಆರೋಪಿ ಬಗಲುಗುಂಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಪೊಲೀಸ್ ಆಗುವ ಕನಸು ಕಂಡಿದ್ದ ಆತ ಎರಡು ಬಾರಿ ಪರೀಕ್ಷೆ ಬರೆದು ಅದರಲ್ಲಿ ಫೇಲಾಗಿದ್ದ ಎನ್ನಲಾಗಿದೆ. ಆದರೆ ತಾನು ವಾಸಿಸುತ್ತಿದ್ದ ಬಾಡಿಗೆ ಮನೆಯ ಮಾಲೀಕರಿಗೂ ಸೇರಿದಂತೆ ಎಲ್ಲರಿಗೂ ತಾನು ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆ ಎಂದು ಸುಳ್ಳು …
Read More »