Breaking News

ಬೆಂಗಳೂರು

ವಿಧಾನಪರಿಷತ್ ಉಪಸಭಾಪತಿ ಸ್ಥಾನಕ್ಕೆ ಪ್ರಾಣೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು : ವಿಧಾನಪರಿಷತ್ ನ ಉಪಸಭಾಪತಿ ಸ್ಥಾನಕ್ಕೆ ಬಿಜೆಪಿಯ ಎಂ.ಕೆ.ಪ್ರಾಣೇಶ್ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ, ಇಂದು ಬೆಳಗ್ಗೆ ವಿಧಾನಸಭೆಯ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಒಂದು ವೇಳೆ ಉಪಸಭಾಪತಿ ಸ್ಥಾನಕ್ಕೆ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರೆ ಪ್ರಾಣೇಶ್ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಹಾಗೊಂದು ವೇಳೆ ಕಾಂಗ್ರೆಸ್‍ನಿಂದ ನಾಮಪತ್ರ ಸಲ್ಲಿಕೆಯಾದರೂ ಚುನಾವಣೆಯಲ್ಲಿ ಪ್ರಾಣೇಶ್ ಅವರೇ ವಿಜೇತರಾಗುವುದು ಖಚಿತ. ಈಗಾಗಲೇ ಪರಿಷತ್‍ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಪ್ರಾಣೇಶ್ ಅವರ ಆಯ್ಕೆಗೆ …

Read More »

ವಿಧಾನಮಂಡಲ ಅಧಿವೇಶನ ಆರಂಭ : ಭಿತ್ತಿಪತ್ರ ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ವಿಧಾನ ಮಂಡಲ ಅಧಿವೇಶನ ಆರಂಭಗೊಂಡಿದ್ದು, ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ವಿಧಾನಸಭೆಯಲ್ಲಿ ಭಿತ್ರಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆಯೂ ಸಹ ರಾಜ್ಯಪಾಲರು ಭಾಷಣ ಆರಂಭಿಸಿದರು. ಕೊರೊನಾ ವಿರುದ್ಧ ಹೋರಾಟದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ. ಸರ್ಕಾರದ ನಿಯಮವನ್ನು ಜನರು ಅಚ್ಚುಕಟ್ಟಾಗಿ ಪಾಲಿಸಿದ್ದು, ಕೊರೊನಾ ವಾರಿಯರ್ಸ್ ಗೆ ಧನ್ಯವಾದಗಳು ಎಂದರು. ಕೊರೊನಾಗೆ ಬಲಿಯಾದ …

Read More »

ಆಟೋ ಚಾಲಕನ ಎಡವಟ್ಟಿನಿಂದ ನಡೀತು ಭೀಕರ ಸರಣಿ ಅಪಘಾತ

ಬೆಂಗಳೂರು: ಬೆಂಗಳೂರು: ಆಟೋ ಚಾಲಕ ಮಾಡಿದ ಎಡವಟ್ಟಿನಿಂದಾಗಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, , ಆಟೋ, ಫ್ಯಾಸಿನೋ ಮತ್ತು ಬೈಕ್​ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾಗಿ ಗಾಯವಾಗಿದ್ದು, ಮೂರು ವಾಹನ ನುಜ್ಜುಗುಜ್ಜಾಗಿವೆ. ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಅಂತ ತಿಳಿದು ಬಂದಿದೆ. https://www.facebook.com/105350550949710/posts/255497042601726/

Read More »

ನಾಳೆಯಿಂದ ವಿಧಾನಮಂಡಲ ಅಧಿವೇಶನ; ಈ ಬಾರಿ 11 ವಿಧೇಯಕ ಮಂಡನೆ; ಸ್ಪೀಕರ್​ ಕಾಗೇರಿ

ಬೆಂಗಳೂರು (ಜ. 27): ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ನಾಳೆಯಿಂದ ಅಂದರೆ ಜ. 28ರಿಂದ ಪ್ರಾರಂಭವಾಗಲಿದೆ. ಫೆ. 5ರವರೆಗೆ ಏಳು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಈ ಬಾರಿ 11 ವಿಧೇಯಕಗಳು ಮಂಡನೆಯಾಗಲಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಅಧಿವೇಶನ ಹಿನ್ನಲೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಧಿವೇಶನಕ್ಕೆ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವಂತೆ ರಾಜ್ಯಪಾಲರರಾದ ವಾಜೂಭಾಯಿ ಅವರನ್ನು …

Read More »

FLASH: ಜೈಲಿನಿಂದ ಇಂದು ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ‘ರಿಲೀಸ್’‌, ಆದ್ರೆ ಮೂರು ದಿನ ಹೊರಗೆ ಬರೋದು ಅನುಮಾನ

ಬೆಂಗಳೂರು: ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಕೇಂದ್ರ ಜೈಲಿನ ಪರಪ್ಪನ ಅಗ್ರಹಾರದಿಂದ ಬುಧವಾರ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಆದಾಗ್ಯೂ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ -19 ಗಾಗಿ 66 ವರ್ಷದ ವಿ.ಕೆ.ಶಶಿಕಲಾ ಅವರಿಗೆ ಚಿಕಿತ್ಸೆ ನೀಡುವ ವೈದ್ಯರು ಮುಂದಿನ ಎರಡು-ಮೂರು ದಿನಗಳವರೆಗೆ ಅವಳನ್ನು ಡಿಸ್ಚಾರ್ಜ್ ಮಾಡದಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಆಕೆಯ ಬಿಡುಗಡೆ ಸಂಬಂಧಿತ ಔಪಚಾರಿಕತೆಗಳು ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಪೂರ್ಣಗೊಳ್ಳಲಿವೆ ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿದೆ. …

Read More »

ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ:ಕೋಡಿಹಳ್ಳಿ ಚಂದ್ರಶೇಖರ್‌

ಬೆಂಗಳೂರು: ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು ಹೇಳಿದ್ದಾರೆ. ಫ್ರೀಡಂ ಪಾರ್ಕ್‌ʼನಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು, ‘ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ.ಅನ್ನದಾತದ ವಿರೋಧಿ ಕಾಯ್ದೆಗಳನ್ನ ತಕ್ಷಣ ವಾಪಸ್‌ ಪಡೆಯಿರಿ. ಇನ್ನು ಗೋಹತ್ಯೆ ನಿಷೇಧ ಕಾಯ್ದೆಯನ್ನ ತರಬೇಕೋ ಬೇಡ್ವಾ ಅಂತಾ ನಾವು ನಿರ್ಧರಿಸ್ಬೇಕು. ಹಸು ಸಾಕುವ ಕುರಿತು ನಿಮ್ಮಿಂದ ಕಲಿಯಬೇಕಿಲ್ಲ’ …

Read More »

ಮೂವರು ಸಚಿವರ ಖಾತೆಗಳಲ್ಲಿ ಮತ್ತೆ ಬದಲಾವಣೆ : ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ

ಬೆಂಗಳೂರು: ಬಿಎಸ್ ವೈ ಸಂಪುಟದ ಸಚಿವರುಗಳ ಖಾತೆಯಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಡಾ.ಕೆ ಸುಧಾಕರ್, ಮಾಧುಸ್ವಾಮಿ ಮತ್ತು ಆನಂದ್ ಸಿಂಗ್ ಅವರುಗಳ ಖಾತೆಯನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ರಾಜ್ಯಪಾಲರ ಅಂಕಿತವೂ ದೊರೆತಿದೆ. ಆರೋಗ್ಯ ಸಚಿವ ಕೆ ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿದೆ. ಮೊನ್ನೆ ಖಾತೆ ಬದಲಾವಣೆ ಸಂದರ್ಭದಲ್ಲಿ ಈ ಖಾತೆಯನ್ನು ಮಾಧುಸ್ವಾಮಿಯವರಿಗೆ ನೀಡಲಾಗಿತ್ತು. ಇದಕ್ಕೆ ಸುಧಾಕರ್ ಆಕ್ಷೇಪ ವ್ಯಕ್ತಪಡಿಸಿದ್ದರು. ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಜೆ ಸಿ …

Read More »

ಬೆಳಗಾವಿ ಸೇರಿ ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿ ಪ್ರಶಂಸನೀಯ ಸೇವಾ ಪದಕಕ್ಕೆ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಜನರಾಗಿದ್ದಾರೆ. ರಾಜ್ಯ ಗುಪ್ತದಳ ಐಜಿಪಿ ಡಾ.ಸುಬ್ರಹ್ಮಣ್ಯೇಶ್ವರ ರಾವ್ ಅಯ್ಯಂಕಿ, ಬೆಳಗಾವಿ ಉತ್ತರ ವಲಯದ ಎಸಿಬಿಯ ಎಸ್ಪಿ ಬಿ.ಎಸ್‍. ನೇಮೆಗೌಡ, ಬೆಂಗಳೂರಿನ ಸಿಐಡಿಯ ಆರ್ಥಿಕ ಅಪರಾಧಗಳ ಘಟಕದ ಡಿವೈಎಸ್ಪಿ ಬಸವಣ್ಣಪ್ಪ ರಾಮಚಂದ್ರ, ಬೆಂಗಳೂರು ರೈಲ್ವೆ ವಿಭಾಗದ ಡಿವೈಎಸ್‍ಪಿ ಡಿ.ಅಶೋಕ್, ಬಿಡಿಎ ವಿಶೇಷ ಕಾರ್ಯಪಡೆಯ ಡಿವೈಎಸ್‍ಪಿ ಸಿ.ಬಾಲಕೃಷ್ಣ, ಪೊಲೀಸ್ ಕೇಂದ್ರ ಕಚೇರಿಯ ಅಪರಾಧ …

Read More »

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನೇಣಿಗೆ ಶರಣು !

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಈ ಹಿಂದೆ ಫೇಸ್​ಬುಕ್​ ಪೋಸ್ಟ್​ ನಲ್ಲಿಯೂ ನಟಿ ಜಯಶ್ರೀ ರಾಮಯ್ಯ ತಮಗೆ ದಯಾಮರಣ ಕೊಡಿ ಅಂತಾ ಹಾಕಿಕೊಂಡಿದ್ದರು. ಆ ವೇಳೆಯೇ ಜಯಶ್ರೀ ರಾಮಯ್ಯ ಎಷ್ಟರ ಮಟ್ಟಿಗೆ ಅವರು ಖಿನ್ನತೆಗೆ ಒಳಗಾಗಿದ್ದಾರೆ ಅನ್ನೋದು ಭಾರೀ ಚರ್ಚೆಗೆ ಕಾರಣವಾಗಿತ್ತು.   ತಮ್ಮ ಫೇಸ್​​ಬುಕ್​​ನಲ್ಲಿ …

Read More »

ಬಸ್ ಪಾಸ್ ಇದ್ರು ನಡೆದುಕೊಂಡು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು..!

ಗದಗ (ಜ. 24): ಕೊರೋನಾ ಹಾವಳಿಯಿಂದ ಆನ್ ಲೈನ್ ಶಿಕ್ಷಣವನ್ನು ಮನೆಯಲ್ಲಿಯೇ ಪಡೆದು, ಈಗ ತಾನೇ ಕಾಲೇಜು ಕಡೇ ವಿದ್ಯಾರ್ಥಿಗಳು ಮುಖ ಮಾಡಿದ್ದಾರೆ. ಒಂದು ಕಡೇ ಕೊರೊನಾ ಆತಂಕ ಇನ್ನೊಂದೆಡೆ ಸಮರ್ಪಕ  ಸಾರಿಗೆ ಸಂಸ್ಥೆಯ ಬಸ್ ವ್ಯವಸ್ಥೆ ಇರದಿದಕ್ಕೆ ವಿದ್ಯಾರ್ಥಿಗಳು ಪಡಬಾರದ ಕಷ್ಟವನ್ನು ಅನುಭವಿಸುತ್ತಿದ್ದಾರೆ. ತಾಲೂಕಿನ ಹಾತಲಗೇರಿ ಗ್ರಾಮದ ವಿದ್ಯಾರ್ಥಿಗಳು ನಿತ್ಯ ಗದಗ ನಗರಕ್ಕೆ ನಡೆದುಕೊಂಡು ಬರುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾತಲಗೇರಿ ಗ್ರಾಮದಲ್ಲಿ ಸುಮಾರು  40 ರಿಂದ‌ 50 ವಿದ್ಯಾರ್ಥಿಗಳು, …

Read More »