Breaking News

ಬೆಂಗಳೂರು

ಚೀನಾದಲ್ಲಿ ನೀವು ಆಡಿದ್ದ ಮಾತುಗಳು ಭಾರತಕ್ಕೆ ಮಾಡಿದ ಅಪಮಾನವಲ್ಲವೇ? ಮೋದಿಗೆ ಖರ್ಗೆ

ಬೆಂಗಳೂರು: ಲಂಡನ್‌ ಭಾಷಣದ ವೇಳೆ ರಾಹುಲ್‌ ಗಾಂಧಿ ಅವರು ಭಾರತ ಮತ್ತು ಪ್ರಜಾಪ್ರಭುತ್ವದ ಅಪಮಾನ ಮಾಡಿದ್ದಾರೆ ಎಂದು ಆರೋಪಿಸುತ್ತಿರುವ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಪಾಠ ಮಾಡುವ ಮೊದಲು ಮೊದಲು ‘ಸತ್ಯದ ಕನ್ನಡಿ’ ನೋಡಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.   ಚೀನಾ ಮತ್ತು ದಕ್ಷಿಣ ಕೊರಿಯಾಗಳಲ್ಲಿ ಮೋದಿ ಅವರು ಆಡಿದ್ದ ಮಾತುಗಳನ್ನು ಮುನ್ನೆಲೆಗೆ ತಂದಿರುವ ಖರ್ಗೆ, ನೀವು ಮಾಡಿದ್ದು ಅಪಮಾನ ಅಲ್ಲವೇ ಎಂದು ಪ್ರಶ್ನೆ …

Read More »

ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ.     ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ …

Read More »

ಹಾಲಿನ ಕೊರತೆ: ಹೋಟೆಲ್‌ಗ‌ಳಿಗೆ ತೊಂದರೆ. ರಾಜ್ಯಗಳಿಗೆ ಹಾಲು ಸರಬರಾಜು ಸ್ಥಗಿತಕ್ಕೆ ಆಗ್ರಹ

ಬೆಂಗಳೂರು: ಹಾಲಿನ ಬೇಡಿಕೆ ಹೆಚ್ಚಾಗಿರುವುದರಿಂದ ಹೊರರಾಜ್ಯಗಳಿಗೆ ಸರಬರಾಜು ಮಾಡುವುದನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಬೃಹತ್‌ ಬೆಂಗಳೂರು ಹೋಟೆಲುಗಳ ಸಂಘ ಇದೀಗ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್)ಕ್ಕೆ ಮನವಿ ಮಾಡಿದೆ.   ಈ ಬಗ್ಗೆ ಕೆಎಂಎಫ್ನ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಬೃಹತ್‌ ಬೆಂಗಳೂರು ಹೋಟೆಲ್‌ಗ‌ಳ ಸಂಘದ ಅಧ್ಯಕ್ಷ ಪಿ.ಸಿ.ರಾವ್‌, ಇತ್ತೀಚೆಗೆ ನಂದಿನಿ ಹಾಲು ಮತ್ತು ನಂದಿನಿ ಹಾಲಿನ ಉತ್ಪನ್ನಗಳ ಕೊರತೆ ಬಹಳಷ್ಟು ಉಂಟಾಗಿದೆ. ಬೆಂಗಳೂರಿನ ಹೋಟೆಲ್‌ಗ‌ಳಲ್ಲಿ ಹೆಚ್ಚಾಗಿ ನಂದಿನಿ ಹಾಲು …

Read More »

ಮೋದಿಯೇ ದಶಪಥ ಹೆದ್ದಾರಿಯ ರೂವಾರಿ: ಬೊಮ್ಮಾಯಿ

ಬೆಂಗಳೂರು: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಯೋಜನೆಯ ಸಂಪೂರ್ಣ ರೂವಾರಿ ಪ್ರಧಾನಿ ನರೇಂದ್ರ ಮೋದಿ. ಆದರೆ, ವಿರೋಧ ಪಕ್ಷಗಳು ಅನಗತ್ಯವಾಗಿ ಯೋಜನೆಯ ಹೆಸರಿನಲ್ಲಿ ಪ್ರಚಾರ ಪಡೆಯಲು ಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.   ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘2008ರಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಮೂಲಕ ಈ ಮಾರ್ಗದಲ್ಲಿ ಹೆದ್ದಾರಿ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ಯಾವ ಪ್ರಗತಿಯೂ ಆಗಿರಲಿಲ್ಲ. 2014ರಲ್ಲಿ ಕೇಂದ್ರ ಸರ್ಕಾರವು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.‌ ಧ್ರುವ ನಾರಾಯಣ (60) ಹೃದಯಾಘಾತದಿಂದನಿಧನ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.‌ ಧ್ರುವ ನಾರಾಯಣ (60) ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ನಗದಲ್ಲಿನ ಅವರ ಮನೆಯಲ್ಲಿ ಶುಕ್ರವಾರ ತಡರಾತ್ರಿಯಲ್ಲಿ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ಮೂಲಗಳು ತಿಳಿಸಿವೆ.   1983 ರಲ್ಲಿ ಕಾಂಗ್ರೆಸ್‌ ಸೇರುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದ ಅವರು, ಸಂತೇಮರಹಳ್ಳಿ ಕ್ಷೇತ್ರದಿಂದ ಒಂದು ಶಾಸಕರಾಗಿ ಆಯ್ಕೆಯಾಗಿದ್ದರು. 2004 ರಲ್ಲಿ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು 1 ಮತದ ಅಂತರದಿಂದ ಗೆದ್ದಿದ್ದರು. 2008 ರಲ್ಲಿ ಎರಡನೇ ಬಾರಿ ಕೊಳ್ಳೇಗಾಲ …

Read More »

3 ಪಟ್ಟು ಅಧಿಕ ದರಕ್ಕೆ ಕಸ ಗುಡಿಸುವ ಯಂತ್ರ ಖರೀದಿ!

ಬೆಂಗಳೂರು: ಶುಭ್ರ ಬೆಂಗಳೂರು ಯೋಜನೆ ಅಡಿಯಲ್ಲಿ ಬಿಬಿಎಂಪಿ ತಲಾ 2 ಕೋಟಿ ರೂ. ಮೊತ್ತದ 30 ಮೆಕ್ಯಾನಿಕಲ್‌ ಸ್ವೀಪಿಂಗ್‌ ವಾಹನ ಖರೀದಿಗೆ ಮುಂದಾಗಿದೆ. ಆದರೆ, ಯಂತ್ರಗಳಿಗೆ ನಿಗದಿ ಮಾಡಿರುವ ಮೊತ್ತದ ಬಗ್ಗೆ ಇದೀಗ ಅಪಸ್ವರ ಎದ್ದಿದೆ. ನಗರದಲ್ಲಿ 587.58 ಕಿ.ಮೀ. ಉದ್ದದ 156 ಮುಖ್ಯ ರಸ್ತೆಗಳು ಹಾಗೂ 735.50 ಕಿ.ಮೀ. ಉದ್ದದ 316 ಉಪಮುಖ್ಯ ರಸ್ತೆಗಳಿವೆ. ಅವುಗಳಲ್ಲಿ ಶೇಖರಣೆಯಾಗುವ ದೂಳನ್ನು ಗುಡಿಸಿ ಸ್ವತ್ಛಗೊಳಿಸುವ ಸಲುವಾಗಿ ಮೆಕ್ಯಾನಿಕಲ್‌ ಸ್ವೀಪಿಂಗ್‌ ಯಂತ್ರಗಳನ್ನು ಖರೀದಿಸಲಾಗುತ್ತಿದೆ. ಕಳೆದ …

Read More »

5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ

ಬೆಂಗಳೂರು: 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮಾರ್ಚ್ 13ರಿಂದ 5 ಹಾಗೂ 8ನೇ ತರಗತಿಗಳಿಗೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ. 5 ಹಾಗೂ 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ ಪರೀಕ್ಷೆಗೆ ತಡೆ ನೀಡಿದೆ. ನಿಯಮಗಳಿಗೆ ಅನುಸಾರವಾಗಿ …

Read More »

ಸಂಸದೆ ಸುಮಲತಾ ಇಂದು ಬಿಜೆಪಿಗೆ, ಬಿಜೆಪಿ ತೊರೆದ ಪುಟ್ಟಣ್ಣ ಕಾಂಗ್ರೆಸ್‌ಗೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿ ಸದ್ದು ಮಾಡುತ್ತಿದೆ. ಆಡಳಿತಾರೂಢ ಬಿಜೆಪಿಗೆ ಈ ವಿಚಾರ ಈಗ ತೀವ್ರ ಪ್ರಮಾಣದಲ್ಲಿ ಒಳ ಏಟು ನೀಡಲಾರಂಭಿಸಿದ್ದು, ಪ್ರಬಲ “ವಿಕೆಟ್‌’ಗಳು ಉರುಳದಂತೆ ನೋಡಿಕೊಳ್ಳುವುದು ಕೇಸರಿ ಪಡೆಗೆ ಸವಾಲಾಗಿದೆ.   ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸ್ಕ್ರೀನಿಂಗ್‌ ಕಮಿಟಿ ಸಭೆ ನಡೆಯುತ್ತಿರುವಾಗಲೇ ಬಿಜೆಪಿಯಿಂದ ವಲಸೆ ವಿಚಾರ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಸಚಿವ ನಾರಾಯಣ ಗೌಡ ಜತೆಗೆ ಇನ್ನೂ ಮೂವರು …

Read More »

ಹಾಜರಾತಿ ಕೊರತೆ : 4,492 ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ!

ಬೆಂಗಳೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಾಜರಾತಿ ಕೊರತೆಯಿಂದಾಗಿ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳಿಂದ 4,492 ವಿದ್ಯಾರ್ಥಿಗಳು ಹೊರಗುಳಿಯಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ವರ್ಷದಿಂದ ಶೇಕಡಾ 75 ರಷ್ಟು ಕಡ್ಡಾಯ ಹಾಜರಾತಿ ನಿಯಮವನ್ನು ಮರಳಿ ತಂದಿದೆ. ಶೇ.75ರಷ್ಟು ಹಾಜರಾತಿ ಕಾಯ್ದುಕೊಳ್ಳದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವುದಿಲ್ಲ. ಪಿಯು ಶಿಕ್ಷಣ ಇಲಾಖೆಯು ಈ ಬಗ್ಗೆ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಿತ್ತು ಮತ್ತು ಹಾಜರಾತಿ ಕೊರತೆಯ …

Read More »

ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ

ಬೆಂಗಳೂರು: ವೇತನ ಭತ್ಯೆ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರದ ವೇಳೆ ಉಪವಾಸ, ಧರಣಿ ಸತ್ಯಾಗ್ರಹ ಹಾಗೂ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ.   ಮುಷ್ಕರ ಯಶಸ್ವಿಗೊಳಿಸುವ ಸಂಬಂಧ ಸಂಘ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಂತಿಯುತ ಹೋರಾಟಕ್ಕೆ ಸೂಚನೆ ನೀಡಲಾಗಿದೆ. ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಯಾವುದೇ ಜನಪ್ರತಿನಿಧಿಗಳನ್ನು ಟೀಕಿಸದಂತೆ ತಾಕೀತು ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತುರ್ತು …

Read More »