Breaking News

ಬೆಂಗಳೂರು

ಮಾರ್ಚ್ ನಂತರ ಹಳೆಯ 100ರೂಪಾಯಿ ನೋಟು ಗಳು ಚಲಾವಣೆ ಯಲ್ಲಿರುವುದಿಲ್ಲ ನಿಮ್ಮ ಹತ್ತಿರ ಇದ್ರೆ ಮಾರ್ಚ್ ಒಳಗಡೆ ಬದಲಾಯಿಸಿ ಕೊಳ್ಳಿ: R.B.I

ಬೆಂಗಳೂರು : ಪ್ರಸ್ತುತ ಚಲಾವಣೆಯಲ್ಲಿರುವ ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಕಳೆದ 6 ವರ್ಷಗಳಿಂದ ಮುದ್ರಣವಾಗದ, ಆದರೆ ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ. ಮಾರ್ಚ್ ಅಂತ್ಯಕ್ಕೆ ಇದು ಪೂರ್ಣವಾಗಲಿದೆ. ಇನ್ಮುಂದೆ 100 ರೂ. ಮುಖಬೆಲೆಯ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. 00 ರೂ. ನಹಳೆಯ ನೋಟುಗಳನ್ನು ಗ್ರಾಹಕರು …

Read More »

ಹುಣಸೋಡು ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ

  ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ 5 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ಈಗಾಗಲೇ ಸಂಸದ ರಾಘವೇಂದ್ರ ಅವರು ಬೀಡು ಬಿಟ್ಟಿದ್ದಾರೆ. ಅಲ್ಲದೆ ನಮ್ಮ ಇಲಾಖೆಯ ಮುರುಗೇಶ್ ನಿರಾಣಿ ಕೂಡ ಸ್ಥಳದಲ್ಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ …

Read More »

ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?

ಲೈವ್ ಪಿಕ್ಸ್ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ. ಶಾಸಕರಾದ‌ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ. ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.

Read More »

ಆನ್‌ಲೈನ್ ಮೂಲಕ ವಿದ್ಯಾರ್ಥಿ ಬಸ್‌ಪಾಸ್

ಬೆಂಗಳೂರು,ಜನವರಿ 22: ಆನ್‌ಲೈನ್ ಮೂಲಕ ವಿದ್ಯಾರ್ಥಿ ಬಸ್‌ಪಾಸ್ ಪಡೆಯಿರಿ ಎಂದು ಬಿಎಂಟಿಸಿ ಹೇಳಿದೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ಬಸ್‌ಪಾಸ್‌ಗೆ ಅರ್ಜಿ ಸಲ್ಲಿಸಲು ಜನವರಿ 31 ಅಂತಿಮ ದಿನಾಂಕವಾಗಿದೆ. ಕೊರೊನಾ ಲಾಕ್‌ಡೌನ್ ಮುಗಿದು ಶಾಲೆ, ಕಾಲೇಜುಗಳ ಆರಂಭವಾದ ಕೆಲವು ದಿನಗಳು ಕಳೆದ ವರ್ಷದ ಬಿಎಂಟಿಸಿ ಬಸ್‌ ಪಾಸ್ ಅಥವಾ ಕಾಲೇಜಿನ ಶುಲ್ಕ ರಶೀದಿ ಅಥವಾ ಕಾಲೇಜು ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು ಎಂದು ಹೇಳಿತ್ತು. ಇದೀಗ ಆನ್‌ಲೈನ್ ಮೂಲಕ ಬಸ್ ಪಾಸ್ …

Read More »

ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್‍ಡಿಕೆ ಗರಂ..!

ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …

Read More »

ಖಾತೆ ಅದಲು ಬದಲು, ಯಾರಿಗೆ ಯಾವ ಖಾತೆ..? ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಬೆಂಗಳೂರು, ಜ.21- ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ನೂತನ ಸಚಿವರಿಗೆ ನೀಡಿರುವ ಖಾತೆಗಳಲ್ಲಿ ಕೆಲವರಿಗೆ ಬಂಪರ್ ಹೊಡೆದಿದ್ದರೆ, ಇನ್ನು ಕೆಲವರಿಗೆ ನಿರೀಕ್ಷೆಗೂ ಊಹೆ ಮಾಡದ ರೀತಿಯಲ್ಲಿ ಹಿನ್ನಡೆಯಾಗಿದೆ. ಕಳೆದವಾರ ಪ್ರಮಾಣವಚನ ಸ್ವೀಕರಿಸಿದ 7 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಹಾಲಿ 10 ಸಚಿವರ ಖಾತೆಗಳೂ ಕೂಡ ಅದಲು-ಬದಲಾಗಿವೆ. ತೀವ್ರ ಪೈಪೋಟಿ ಕಂಡು …

Read More »

ಸಿಎಂ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೋರಿಕೆಗಷ್ಟೇ ಹಸಿರು ಶಾಲು ಹಾಕ್ತಾರೆ. ಆದ್ರೆ ಯಾವುದೇ ರೀತಿ ರೈತರ ಬಗ್ಗೆ ಕಾಳಜಿ ಅವರಿಗಿಲ್ಲ. ಬಿಜೆಪಿ ಕಾರ್ಪೊರೇಟರ್ ಪರ ಇರುವುದರಿಂದ ಕಾಯ್ದೆ ಹಿಂಪಡೆಯಲು ಹಿಂದೆಟು ಹಾಕುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಂದು ನಡೆದ ರಾಜಭವನ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ಕಾರ್ಪೊರೇಟರ್ ಪರ ಇವೆ. ಆದ ಕಾರಣ ಸರ್ಕಾರ …

Read More »

ಕಾಂಗ್ರೆಸ್ ನ ಮತ್ತಿಬ್ಬರು ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಪಟ್ಟ !

ಬೆಂಗಳೂರು : ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ ಮಾಜಿ ಸಚಿವ, ಶಾಸಕ ರಾಮಲಿಂಗಾ ರೆಡ್ಡಿ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಗೆ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಆದೇಶ ನೀಡಿದ್ದಾರೆ. ಮೂವರು ನಾಯಕರಾದ ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಸಲೀಂ ಅಹಮ್ಮದ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಗಾಗಲೇ ನೇಮಕ ಮಾಡಲಾಗಿದೆ. ನಾಯಕರು ಸಹ ರಾಜ್ಯಾದ್ಯಂತ …

Read More »

ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.

ಬೆಂಗಳೂರು: ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ರೈತ ಕಾಯ್ದೆ ರದ್ಧತಿ ಆಗ್ರಹಿಸಿ ಇಂದು ಕಾಂಗ್ರೆಸ್‌ ರಾಜಭವನ ಚಲೋವನ್ನು ಆಯೋಜಿಸಿತ್ತು. ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶದ ಬಳಿಕ ರಾಜಭನವನಕ್ಕೆ ತೆರಳಲು ಹೋಗುತ್ತಿದ್ದಾಗ ಪೊಲೀಸರು ಕಾಂಗ್ರೆಸ್‌ ನಾಯಕರನ್ನು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಪೊಲೀಸರು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ “ಹೂ ದಿ ಹೆಲ್‌” ಎಂದು ಹೇಳಿ ಮಹಿಳಾ ಸಿಬ್ಬಂದಿಯ ಮೇಲೆ …

Read More »

ಅಂಜಲಿ ನಿಂಬಾಳ್ಕರ್ ಪ್ರತಿಭಟನೆ ವೇಳೆ ಅಸ್ವಸ್ಥ

; ಬೆಂಗಳೂರು; ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ನಡೆಯುತ್ತಿದ್ದ ರಾಜಭವನ ಚಲೋ ರೈತರ ಪ್ರತಿಭಟನೆ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ. ರಾಜಭವನದತ್ತ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆಯೇ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ. ನಂತರ ಅಲ್ಲೇ ಕುಳಿತು ವಿಶ್ರಾಂತಿ ಪಡೆದುಕೊಂಡರು. ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ತಡೆದು ನಾಯಕರನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಪ್ರತಿಭಟನೆಗಳು ಭುಗಿಲೆದ್ದಿವೆ.

Read More »