Breaking News

ಬೆಂಗಳೂರು

ಬಿಜೆಪಿ ದರಿದ್ರ ಸರ್ಕಾರ:ಸಿದ್ದರಾಮಯ್ಯ ಲೇವಡಿ

ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ …

Read More »

‘ಆನ್‌ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್‌ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದಹೈಕೋರ್ಟ್

ಬೆಂಗಳೂರು: ‘ಆನ್‌ಲೈನ್ ಮಾರುಕಟ್ಟೆ ಬಳಸಿಕೊಂಡು ಮಾರಾಟಗಾರರು ಗ್ರಾಹಕರಿಗೆ ಮಾಡುವ ಮೋಸಕ್ಕೆ ಇ- ಕಾಮರ್ಸ್‌ ಸಂಸ್ಥೆಗಳು ಜವಾಬ್ದಾರಿ ಆಗುವುದಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸ್ನ್ಯಾಪ್‌ಡೀಲ್ ಸಂಸ್ಥೆ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮೊಕದ್ದಮೆ ರದ್ದು ಪಡಿಸಿದ ನ್ಯಾಯಾಲಯ, ಈ ಅಭಿಪ್ರಾಯಪಟ್ಟಿದೆ. ವೆಬ್‌ಸೈಟ್‌ನಲ್ಲಿ ಜಾಹೀರಾತು ಪ್ರದರ್ಶಿಸಿರುವ ಉತ್ಪನ್ನವೊಂದು ಔಷಧ ಮತ್ತು ಸೌಂದರ್ಯವರ್ಧಕ ಕಾಯ್ದೆಗೆ ವಿರುದ್ಧವಾಗಿದೆ ಸ್ನ್ಯಾಪ್‌ಡೀಲ್ ವಿರುದ್ಧ ಮೈಸೂರಿನ ಉಪ ಔಷಧ ನಿಯಂತ್ರಕರು ‌ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಸ್ನ್ಯಾಪ್‌ಡೀಲ್ ಪರವಾಗಿ ಹಾಜರಾದ ಹಿರಿಯ ವಕೀಲ …

Read More »

ಯಶ್‍ ಅಭಿಮಾನಿಗಳ ಪ್ರೀತಿ ಮತ್ತು ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

ಬೆಂಗಳೂರು: ಕೆಜಿಎಫ್-2 ಚಿತ್ರದ ಟೀಸರ್ ನೋಡಿ ಯಶ್‍ಗೆ ಅಭಿಮಾನಿಗಳೂ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ಟೀಸರ್ ನಿಂದಲೇ ದಾಖಲೆ ನಿರ್ಮಿಸಲು ಹೊರಡುತ್ತಿದ್ದಂತೆ ಯಶ್ ಅಭಿಮಾನಿಗಳ ಪ್ರೀತಿ ಮತ್ತು ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಕೆಜಿಎಫ್-2 ಚಿತ್ರದ ಟೀಸರ್ ಗುರುವಾರ ರಾತ್ರಿ ಬಿಡುಗಡೆ ಗೊಳಿಸಿದ್ದರು. ಈಗಾಗಲೇ ಸುಮಾರು 10 ಕೋಟಿಗೂ ಅಧಿಕ ವ್ಯೂವ್, ಲೈಕ್ ಮತ್ತು ಕಮೆಂಟ್‍ಗಳನ್ನು ಹಾಕುವ ಮೂಲಕ ಕನ್ನಡ ಚಿತ್ರವೊಂದು ಎಲ್ಲಾ ಯೂಟ್ಯೂಬ್ ದಾಖಲೆಗಳನ್ನು ಪುಡಿಗಟ್ಟಿದೆ. ಈ ಸಂಭ್ರಮವನ್ನು ಇದೀಗ್ ಯಶ್ …

Read More »

ಸಿಎಂಗೆ ಮತ್ತೆ ಕೊರೊನಾ ಆತಂಕ:

ಬೆಂಗಳೂರು,ಜ.9- ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ಅವರು ಕೊರೊನಾ ತಪಾಸಣೆಗಾಗಿ ಗಂಟಲು ದ್ರವವನ್ನು ರಾಯಚೂರಿನಲ್ಲಿ ಪರೀಕ್ಷೆ ಮಾಡಿಸಿದ್ದರು. ಕೊರೊನಾ ದೃಢಪಟ್ಟಿರುವುದರಿಂದ ನಗರದ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್-19 ಐಸೋಲೋಷನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕೋವಿಡ್ ದೃಢಪಟ್ಟಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಶಾಸಕರು, ಚುನಾಯಿತ …

Read More »

ಸಿಲಿಕಾನ್ ಸಿಟಿ’ ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ : ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಇಡೀ ಗೋಡನ್ ಗೆ ಬೆಂಕಿ ತಗುಲಿದ್ದು, ಈಗಾಗಲೇ ಐದಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ನಡೆದ ಅಗ್ನಿ ಅವಘಡ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.

Read More »

ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ.  ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿ ಮತ್ತು ಪ್ರಕರಣ ನಂಬರ್ 1 ಆರೋಪಿ ಶಿವಪ್ರಕಾಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಒಗ್ಗೂಡಿಸಿ ನ್ಯಾ.ನಾಗೇಶ್ವರಾವ್ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆಗೂ ಮುನ್ನ ಅನಾರೋಗ್ಯ ಹಿನ್ನಲೆ …

Read More »

ಪ್ರಧಾನಿ ಮೋದಿ ಘೋಷಿಸಿದ 20 ಲಕ್ಷ ಕೋಟಿ ಎಲ್ಲಿ ಹೋಯಿತು, ಒಬ್ಬರಿಗೂ ನಯಾಪೈಸೆ ಸಿಕ್ಕಿಲ್ಲ; ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು; ಕಾಂಗ್ರೆಸ್ ಸಂಸ್ಥಾಪನ ದಿನ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದವು. ಸಂಕಲ್ಪ ಸಮಾವೇಶದ ಉದ್ದೇಶ ಕೂಡ ಅದೇ. ಹೋರಾಟ ರೂಪಿಸಲು ಸಮಾವೇಶ ಮಾಡುತ್ತಿದ್ದೇವೆ.  ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ಕರೆದಿದ್ದೇವೆ. ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತೇವೆ. ನಾವೆಲ್ಲ ಕಾರ್ಯಕರ್ತರು. ಇಲ್ಲಿ ಯಾರು ನಾಯಕರಲ್ಲ. ಮೊನ್ನೆ ಮೈಸೂರು ವಿಭಾಗದ ಸಮಾವೇಶ ಮಾಡಿದ್ದೇವೆ. ಇವತ್ತು ಬೆಂಗಳೂರು ವಿಭಾಗದ ಸಭೆ ಮಾಡುತ್ತಿದ್ದೇವೆ. ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಗಮನ ಹರಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಕೊರೋನ ಕಾಲದಲ್ಲಿ …

Read More »

ಹಕ್ಕಿ ಜ್ವರ: ಕರ್ನಾಟಕದಲ್ಲಿ ಹೈ ಅಲರ್ಟ್​ ಘೋಷಣೆ

ಬೆಂಗಳೂರು: ಕರೊನಾ ಸೋಂಕಿನ ಭೀತಿಯಿಂದ ಹೊರಬರಲು ಇನ್ನೂ ಆಗಿಲ್ಲ. ಅದರ ಬೆನ್ನಲ್ಲೇ ಕರೊನಾ ರೂಪಾಂತರಿ ಆವರಿಸಿಕೊಂಡಿದೆ. ಈಗ ಹಕ್ಕಿ ಜ್ವರ! ನೆರೆಯ ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ಹಕ್ಕಿಜ್ವರ (H5N8) ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲೂ ಈ ರೋಗ ಕಾಣಿಸಿಕೊಳ್ಳುವ ಸಾಧ್ಯತೆ. ಹಾಗಾಗಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸಚಿವ ಪ್ರಭು ಚವ್ಹಾಣ್ ಹೈ ಅಲರ್ಟ್​ ಘೋಷಿಸಿದ್ದಾರೆ. ಹಕ್ಕಿ ಜ್ವರದ ಸರ್ವೇಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡಲು ಸಿದ್ಧತೆ ಮಾಡಿಕೊಳ್ಳುವಂತೆ …

Read More »

ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು. ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ …

Read More »

ಶಾಸಕರ ಮನವೊಲಿಸುವ ಕಸರತ್ತನ್ನು ಮುಂದುವರೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ,

ಬೆಂಗಳೂರು,-ಶಾಸಕರ ಮನವೊಲಿಸುವ ಕಸರತ್ತನ್ನು ಮುಂದುವರೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, 2ನೇ ದಿನವಾದ ಇಂದು ಶಾಸಕರ ಕುಂದುಕೊರತೆಗಳನ್ನು ಆಲಿಸುವ ಮೂಲಕ ಸಮಾಲೋಚನಾ ಸಭೆ ನಡೆಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ಇಂದು ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಹಾಸನ, ಮೈಸೂರು , ಚಾಮರಾಜನಗರ ಜಿಲ್ಲೆಗಳು ಸೇರಿದಂತೆ 20ಕ್ಕೂ ಹೆಚ್ಚು ಶಾಸಕರ ಜೊತೆ ಸಿಎಂ ಸಭೆ ನಡೆಸಿದರು. ಈ ವೇಳೆ ಕೆಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿನ ಅನುದಾನದ ಕೊರತೆ, ಅಭಿವೃದ್ದಿ ಹಿನ್ನಡೆ, ಕುಡಿಯುವ ನೀರು, …

Read More »