ಬೆಂಗಳೂರು, – ಎಂಜಿ ರಸ್ತೆ ಹಾಗೂ ಸುತ್ತಮುತ್ತಲ ಪ್ರಮುಖ ರಸ್ತೆಗಳಲ್ಲಿ ಹೊಸ ವರ್ಷಾಚರಣೆ ನಡೆಯುವ ಸಾಧ್ಯತೆ ಇರುವುದರಿಂದ ಅದನ್ನು ತಡೆಯಲು ಸಂಚಾರ ನಿಷೇಧ ಮಾಡಲಾಗಿದ್ದು, ಜತೆಗೆ ನಗರದಾದ್ಯಂತ ಇರುವ ಎಲ್ಲ ಮೇಲ್ಸೇತುವೆಗಳ ಮೇಲೂ ಸಂಚಾರವನ್ನು ನಿರ್ಬಂಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾಕ್ರ್ಸ್ ರಸ್ತೆ, ಚರ್ಚ್‍ಸ್ಟ್ರೀಟ್‍ಗಳಲ್ಲಿ ಜನರು ಗುಂಪು ಸೇರುವ ಸಾಧ್ಯತೆಗಳಿವೆ. ಹಾಗಾಗಿ ಅನಿಲ್‍ಕುಂಬ್ಳೆ ವೃತ್ತದಿಂದ …
Read More »ಬ್ರಿಟನ್ ದೇಶದಿಂದ ಭಾರತಕ್ಕೆ ಮರಳಿರುವ ಜನರ ಪೈಕಿ ಆರು ಮಂದಿಯಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್
ಬೆಂಗಳೂರು(ಡಿ. 29): ಬ್ರಿಟನ್ ದೇಶದಿಂದ ಭಾರತಕ್ಕೆ ಮರಳಿರುವ ಜನರ ಪೈಕಿ ಆರು ಮಂದಿಯಲ್ಲಿ ಹೊಸ ಸ್ವರೂಪದ ಕೊರೋನಾ ವೈರಸ್ ಪತ್ತೆಯಾಗಿದೆ. ಈ ಪೈಕಿ ಬೆಂಗಳೂರಿನ ಮೂವರು ಮಂದಿ ಇದ್ದಾರೆ. ಹೈದರಾಬಾದ್ನ ಇಬ್ಬರು ಹಾಗೂ ಪುಣೆಯ ಒಬ್ಬರೂ ಇದರಲ್ಲಿ ಸೇರಿದ್ದಾರೆ. ಬೆಂಗಳೂರಿನ ಮೂವರಲ್ಲಿ ನೂತನ ವೈರಸ್ ಮ್ಯೂಟೆಂಟ್ ಪತ್ತೆಯಾಗಿರುವುದು ಹೊಸ ಆತಂಕಕ್ಕೆ ಕಾರಣವಾಗಿದೆ. ಅಧಿಕೃತ ಮಾಹಿತಿ ಪ್ರಕಾರ ಬ್ರಿಟನ್ ದೇಶದಿಂದ ಡಿಸೆಂಬರ್ 1ರಿಂದ 21ರವರೆಗೆ ಬೆಂಗಳೂರಿಗೆ ಬಂದವರ ಸಂಖ್ಯೆ 1,594 ಇದೆ. …
Read More »ನಮ್ಮಂಥ ರಾಜಕಾರಣಿಗಳ ತೆವಲುಗಳಿಗೆ ಧರ್ಮೇಗೌಡರು ಬಲಿ: ಕುಮಾರಸ್ವಾಮಿ ವಿಷಾದ
ಬೆಂಗಳೂರು(ಡಿ. 29): ನಿನ್ನೆ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ಉಪಸಭಾಪತಿ ಎಸ್ ಎಲ್ ಧರ್ಮೇಗೌಡರ ನಿಧನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರ ನೋವು ವ್ಯಕ್ತಪಡಿಸಿದರು. ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಧರ್ಮೇಗೌಡರ ಸಾವು ಬರೀ ಸಾವಲ್ಲ, ಇವತ್ತಿನ ರಾಜಕಾರಣದ ಕೊಲೆ ಎಂದು ವಿಷಾದಿಸಿದರು. ನಮ್ಮಂಥ ರಾಜಕಾರಣಿಗಳ ತೆವಲುಗಳಿಗೆ ಸಜ್ಜನ ವ್ಯಕ್ತಿತ್ವದ ಧರ್ಮೇಗೌಡರು ಬಲಿಯಾಗಿದ್ಧಾರೆ ಎಂದೂ ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಂಡಿದ್ದು, ಇವತ್ತಿನ ಎಲ್ಲಾ ರಾಜಕಾರಣಿಗಳೂ ಈ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಕರೆ …
Read More »ಧರ್ಮೇಗೌಡರ ಹಠಾತ್ ನಿಧನ ; ಸಂತಾಪ ಸೂಚಿಸಿದ ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು : ವಿಧಾನಪರಿಷತ್ತಿನ ಉಪ ಸಭಾಪತಿಯಾಗಿದ್ದ ಎಸ್. ಎಲ್ ಧರ್ಮೇಗೌಡ ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ವ್ಯಕ್ತಿಯಾಗಿದ್ದ ಧರ್ಮೇಗೌಡರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಂತಾಪ …
Read More »ಬೆಂಗಳೂರಿನ ಮೂವರಿಗೆ ರೂಪಾಂತರ ಸೋಂಕು ದೃಢ: ಸಚಿವ ಡಾ.ಸುಧಾಕರ್ ಜ. 1 ರಿಂದ ಶಾಲಾ ಆರಂಭಕ್ಕೆ ತೊಂದರೆ ಇಲ್ಲ!!
ಬೆಂಗಳೂರು: ಇಂಗ್ಲೆಂಡ್ನಲ್ಲಿ ಪತ್ತೆಯಾದ ಮ್ಯೂಟಂಟ್ ಕೊರೊನಾ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, 6 ಮಂದಿಯಲ್ಲಿ ರೂಪಾಂತರ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಬೆಂಗಳೂರಿನಲ್ಲಿ ಮೂವರಿಗೆ ವೈರಸ್ ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಈ ಸಂಬಂಧ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 10 ಲ್ಯಾಬ್ ಇದೆ. ಇಂಗ್ಲೆಂಡ್ನಿಂದ ಬಂದ 1614 ಜನರ ಪೈಕಿ 26 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೆನೆಟಿಕ್ ಸೀಕ್ವೆನ್ಸಿಂಗ್ ಆದ …
Read More »ನಾನು ದನದ ಮಾಂಸ ತಿನ್ನುತ್ತೇನೆ. ಬೇಡ ಎನ್ನಲು ನೀನು ಯಾವನು: ಸಿದ್ದರಾಮಯ್ಯ
ಬೆಂಗಳೂರು, ಡಿ.28- ನಾನು ದನದ ಮಾಂಸ ತಿನ್ನುತ್ತೇನೆ. ಅದನ್ನು ಬೇಡ ಎನ್ನಲು ನೀನು ಯಾವನು ಎಂದು ಪ್ರಶ್ನಿಸುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾನೂನನ್ನು ಬಲವಾಗಿ ವಿರೋಧಿಸಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್‍ನ 136ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಹೊಸದಲ್ಲ. 1964ರಲ್ಲೆ ಕಾಂಗ್ರೆಸ್ ಜಾರಿಗೆ ತಂದಿತ್ತು. ಈಗ ಅದನ್ನು ಪರಿಷ್ಕರಣೆ ಮಾಡಿ …
Read More »ರೂಪಾಂತರ ವೈರಸ್ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲೇ ಬಂದಿರಬಹುದು. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
,ಡಿ.28- ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಮ್ಮ ದೇಶಕ್ಕೆ ಕಾಲಿಟ್ಟು 10 ತಿಂಗಳು ಮುಗಿದಿದೆ. ಒಂದು ವೈರಸ್ ರೂಪಾಂತರಗೊಳ್ಳುವುದು ಅದರ ಸಾಮಾನ್ಯ ನಡವಳಿಕೆ. ಇದರ ಬಗ್ಗೆ ಆತಂಕಪಡಬೇಕಾಗಿಲ್ಲ. ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕೊರೊನಾ ವೈರಸ್ ಬಂದಾಗ ನಮ್ಮ ದೇಶ ಸಮರ್ಥವಾಗಿ ನಿಭಾಯಿಸಿದೆ ಎಂದರು. ಫೆಬ್ರವರಿ, ಮಾರ್ಚ್‍ನಲ್ಲಿ 2ನೇ ಅಲೆ …
Read More »ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣ
ಬೆಂಗಳೂರು: ನಿರ್ಭಯಾ ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕರಣ ಗೃಹ ಕಾರ್ಯದರ್ಶಿ ಡಿ.ರೂಪಾ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ನಡುವಿನ ಸಮರಕ್ಕೆ ಕಾರಣವಾಗಿದೆ. ಸೇಫ್ ಸಿಟಿ ಟೆಂಡರ್ ಕುರಿತಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಡಿ.ರೂಪಾ, ಹೇಮಂತ್ ನಿಂಬಾಳ್ಕರ್, 1067 ಕೋಟಿ ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ. ಈ ಟೆಂಡರ್ ನಲ್ಲಿ ಅನೇಕ ಅಕ್ರಮಗಳು ನಡೆದಿವೆ.ಸರ್ಕಾರಕ್ಕೆ ತಪ್ಪು ಮಾಹಿತಿ ಸಲ್ಲಿಸಲಾಗುತ್ತಿದೆ. ನಿಂಬಾಳ್ಕರ್ ಸರ್ಕಾರದ ದಾರಿ ತಪ್ಪಿಸುವ ಕೆಲಸ …
Read More »ಹಂಪಿ ವಿವಿ ಉಳಿಸಲು ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ
ಬೆಂಗಳೂರು,ಡಿ.27- ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಉಳಿಸಿ ಹೋರಾಟ ಉಗ್ರರೂಪ ತಾಳುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಅನುದಾನ ಬಿಡುಗಡೆ ಮಾಡುವಂತೆ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕೊಟ್ಟಿಗೆ ಪಾಳ್ಯದಲ್ಲಿ ನಡೆದ ಕರವೇ ಸಭೆಯಲ್ಲಿ ಮಾತನಾಡಿದ ಅವರು, ಹಂಪಿ ಕನ್ನಡ ವಿವಿಗೆ ಅನುದಾನ ನೀಡುವುದು ಸೇರಿದಂತೆ ವಿಶ್ವವಿದ್ಯಾಲಯ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹಿಸಿದರು. ಟ್ವಿಟರ್‍ನಲ್ಲಿ ಹಂಪಿ ಕನ್ನಡ ವಿವಿ ಉಳಿಸಿ ಎಂಬ ಅಭಿಯಾನಕ್ಕೆ ಈಗಾಗಲೇ 4,500 ಲಕ್ಷ …
Read More »ಈ ಬಾರಿ ಹೊಸ ವರ್ಷಾಚರಣೆಗೆ ಸಂಪೂರ್ಣ ನಿರ್ಬಂಧ: ಬಸವರಾಜ್ ಬೊಮ್ಮಾಯಿ
ಬೆಂಗಳೂರು,ಡಿ.27- ರಾಜ್ಯದಲ್ಲಿ ಬ್ರಿಟನ್ ಮಾದರಿಯ ರೂಪಾಂತರಗೊಂಡ ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಈ ಬಾರಿ ಹೊಸ ವರ್ಷಾಚರಣೆಗೆ ಸಂಪೂರ್ಣ ನಿರ್ಬಂಧ ಹಾಕಿದೆ. ಕೋವಿಡ್ ರೂಪಾಂತರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ವರ್ಷಾಚರಣೆ ಸಂಬಂಧ ಸರ್ಕಾರದ ವತಿಯಿಂದ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದ್ದೇವೆ. ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಕ್ಕೆ ಸಹಕಾರ ನೀಡಬೇಕೆಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದರು. ವಿಧಾನಸೌಧದ ಪೂರ್ವ ದ್ವಾರದ …
Read More »