Breaking News

ಬೆಂಗಳೂರು

ಸಿದ್ದರಾಮಯ್ಯನವರ ಚೇಲಾ ಎಂದ ಶ್ರೀನಿವಾಸ್ ಪ್ರಸಾದ್ ಸ್ನೇಹದ ಮಹತ್ವದ ವ್ಯತ್ಯಾಸ ಗೊತ್ತಿಲ್ಲ”

ಮಾನ್ಯ ಸಂಸದರಾದ ಶ್ರೀನಿವಾಸ್ ಪ್ರಸಾದ್ ಅವರಿಗೆ ಅತ್ಯಂತ ಗೌರವಪೂರ್ವಕವಾಗಿ ನೀಡಿದ ಪ್ರತಿಕ್ರಿಯೆಗೆ ಎದುರಾಗಿ ಶ್ರೀನಿವಾಸ್ ಪ್ರಸಾದ್ ಅವರು ಅತ್ಯಂತ ಕೀಳು ಮಟ್ಟದಲ್ಲಿ ಪ್ರತಿಕ್ರಿಯಿಸಿದ್ದು ನನ್ನನ್ನು ಸಿದ್ದರಾಮಯ್ಯನವರ ಚೇಲಾ ಎಂದು ಕರೆದಿದ್ದು ಒಂದು ಜಿಲ್ಲಾ ಪಂಚಾಯತ್ ಸ್ಥಾನವನ್ನೂ ಸಹ ಗೆಲ್ಲಲಾಗದವ ಎಂಬ ಮಾತನ್ನು ಆಡಿರುತ್ತಾರೆ. ಸ್ನೇಹದ ಮಹತ್ವದ ವ್ಯತ್ಯಾಸ ಗೊತ್ತಿಲ್ಲದೇ ಚೇಲಾ ಎಂಬ ಪದವನ್ನು :ಬಳಸಿರುವ ಸಂಸದರು ತಮ್ಮ ಸ್ಥಾನದ ಘನತೆಯನ್ನು ಅರಿತು ಮಾತನಾಡಬೇಕು. ಇಲ್ಲವಾದರೆ ಮುತ್ಸದ್ಧಿತನಕ್ಕೂ ಅವಿವೇಕತನಕ್ಕೂ ಅಂತಹ ವ್ಯತ್ಯಾಸ …

Read More »

ಕ್ಯಾನ್ಸರ್ ಪೀಡಿತ ಮಕ್ಕಳ ಸೇವೆಯಲ್ಲಿ ಲಯನ್ಸ್ ಕ್ಲಬ್.

ಅಂತರರಾಷ್ಟ್ರೀಯ ಮಟ್ಟದ ಸೇವಾ ಸಂಸ್ಥೆಯಾದ ಲಯನ್ಸ್ ಕ್ಲಬ್ ಸದಾ ಸಮಾಜದ ಪಿಡುಗುಗಳ ವಿರುದ್ಧ ಹೋರಾಡುತ್ತಾ ಸ್ವಸ್ಥ ಸಮಾಜಕ್ಕಾಗಿ ಪರಿಶ್ರಮಿಸುತ್ತಿರುವ ಸಂಸ್ಥೆ. ಲಯನ್ಸ್ ಸಂಸ್ಥೆ ಜಿಲ್ಲೆ 317F ವತಿಯಿಂದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ, ಕ್ಯಾನ್ಸರ್ ಪೀಡಿತರಾಗಿ ತಮ್ಮ ಜೀವನದ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವಂತಹ ಮಕ್ಕಳ ಮನೋರಂಜನೆಗಾಗಿ ಪ್ರತಿವರ್ಷದಂತೆ ಈ ವರ್ಷವೂ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಶ್ರೀಮತಿ ಶೋಭಾ ಶ್ರೀನಿವಾಸ್ ರವರು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಲಯನ್ಸ್ ಕ್ಲಬ್ ನ ಗೌರ್ನರ್ ದೀಪಕ್ ಸುಮನ್ …

Read More »

ನಾನು ಫೋಟೋಶೂಟ್ ಮಾಡಿಸಿದ್ದೆ ಅಷ್ಟೆ. ಆ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತೇನೆ. ಸದ್ಯ ನಾನು ಬೆಂಗಳೂರಿನಲ್ಲಿಯೇ ಇದ್ದೇನೆ.

ಬೆಂಗಳೂರು: ನಾನು ಬೆಂಗಳೂರಲ್ಲಿಯೇ ಇದ್ದೀನಿ. ಆರಾಮಾಗಿದ್ದೀನಿ ಎಂದು ನಟಿ ಹರ್ಷಿಕಾ ಪೂಣಚ್ಚ ಸ್ಪಷ್ಟಪಡಿಸಿದ್ದಾರೆ. ವಿಡಿಯೋ ಮೂಲಕ ಲಂಡನ್ ಪ್ರವಾಸದ ಬಗ್ಗೆ ಮಾಹಿತಿ ನೀಡಿರುವ ನಟಿ, ಹೌದು ನಾನು ಲಂಡನ್ ಗೆ ಹೋಗಿದ್ದೆ. ಆದರೆ ಎರಡು ವಾರಗಳ ಹಿಂದೆನೆ ನಾನು ಅಲ್ಲಿಂದ ವಾಪಸ್ ಬಂದಿದ್ದೇನೆ. ಮತ್ತೆ ಅಲ್ಲಿಗೆ ಹೋಗಲಿಲ್ಲ. ಲಂಡನ್ ನನಗೆ ತುಂಬಾ ಇಷ್ಟವಾದ ಜಾಗವಾಗಿರುವುದರಿಂದ ಆಗಾಗ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುತ್ತೇನೆ. ಎಂದರು. ವಾರದ ಹಿಂದೆ ಅಲ್ಲಿ ನಾನು ಫೋಟೋಶೂಟ್ …

Read More »

ಶಾಲೆಗಳು ಓಪನ್ ಆಗೋದು ಡೌಟ್..!ಡಾ.ಸುಧಾಕರ್

ಬೆಂಗಳೂರು, ಡಿ.22- ರಾಜ್ಯದಲ್ಲಿ ಜನವರಿ ಒಂದರಿಂದ ಶಾಲೆ ಪ್ರಾರಂಭಿಸಬೇಕೆ, ಬೇಡವೆ ಎಂಬ ವಿಚಾರ ಕುರಿತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಕೇಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಾಣು ಹೊಸ ರೂಪಾಂತರ ಪಡೆದಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಕೇಳಿದ್ದು, ವರದಿ ಬಂದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. …

Read More »

ಭಾಗ್ಯ ಲಕ್ಷ್ಮಿ ಯೋಜನೆ ಕುರಿತು ಚರ್ಚಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗ್ಯ ಲಕ್ಷ್ಮಿ ಯೋಜನೆಯಡಿ ಎಲ್ ಐ ಸಿ ಯವರು ನೀಡಬಹುದಾದ ಅತ್ಯುತ್ತಮ ಕೊಡುಗೆಯ ಕುರಿತು ಪರಿಶೀಲಿಸಿ, ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ತಮ್ಮನ್ನು ಭೇಟಿಯಾದ ಆರ್ಥಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಎಲ್ ಐ ಸಿ ವಲಯ ವ್ಯವಸ್ಥಾಪಕಿ ಮಿನಿ ಇಪೆ ಅವರ ನೇತೃತ್ವದ ಎಲ್ ಐಸಿ ಅಧಿಕಾರಿಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಭಾಗ್ಯ ಲಕ್ಷ್ಮಿ ಯೋಜನೆಯನ್ನು ಎಲ್ ಐ ಸಿ ಮೂಲಕವೇ …

Read More »

ಗ್ರಾಮ ಪಂಚಾಯಿತಿ ಚುನಾವಣೆ ಊರಿನತ್ತ ಹೊರಟ ಮತದಾರರು

ಬೆಂಗಳೂರು (ಡಿ. 22): ಕರ್ನಾಟಕದಲ್ಲಿ ಇಂದಿನಿಂದ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ರಾಜ್ಯದ 30 ಜಿಲ್ಲೆಗಳಲ್ಲಿಯೂ ಆಯ್ದ ತಾಲೂಕುಗಳಲ್ಲಿ ಇಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ಮಾಡಲು ಬೆಂಗಳೂರಿನಲ್ಲಿ ನೆಲೆಸಿರುವ ಬಹುತೇಕ ಜನರು ತಮ್ಮ ಊರುಗಳತ್ತ ಹೊರಟಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಮೆಜೆಸ್ಟಿಕ್ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನೆರೆದ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ಹೊರಡಲು ಬಸ್​ಗಳಿಗೆ ಕಾಯುತ್ತಿದ್ದ ದೃಶ್ಯ ಕಂಡುಬಂದಿತು. ಮಧ್ಯಾಹ್ನದ ವೇಳೆಗೆ ಊರುಗಳಿಗೆ ತೆರಳಿ …

Read More »

ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ರಾಜ್ಯದ ಜನತೆ ಕಡ್ಡಾಯವಾಗಿ ಮಾಸ್ಕ್ ಧರಿಸಿ,

ಬೆಂಗಳೂರು: ರಾಜ್ಯದಲ್ಲೂ ಕೊರೊನಾ ಹೊಸ ಪ್ರಭೇದ ಬಗ್ಗೆ ಆತಂಕ ಮೂಡುತ್ತಿದ್ದು, ಈಗಾಗಲೇ ಇಂಗ್ಲೆಂಡ್ ನಲ್ಲಿ ಕೊರೊನಾ ಹೊಸ ರೂಪಾಂತರ ವೈರಸ್ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಲುವ ಅಗತ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ದಾ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಹೊಸ ರೂಪಾಂತರ ವೈರಸ್ ಕೊರೊನಾ ವೈರಸ್ ಗಿಂತಲೂ ಹೆಚ್ಚು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಇರ್ಲಕ್ಷ್ಯ ಬೆಡ. ರಾಜ್ಯದ ಜನತೆ ಕಡ್ಡಾಯವಾಗಿ …

Read More »

ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು: ಹೈಕೋರ್ಟ್ ಅಭಿಪ್ರಾಯ

ಬೆಂಗಳೂರು: ಶಾಲೆ ಸ್ಥಗಿತಕ್ಕಿಂತ ಪರಿಸ್ಥಿತಿ ಆಧರಿಸಿ ಕೊರೊನಾ ಇಲ್ಲದ ತಾಲೂಕುಗಳಲ್ಲಿ ಶಾಲೆ ಆರಂಭಿಸಬಹುದು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ ವಿದ್ಯಾಗಮ ಮರು ಆರಂಭವಾಗಲಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲೂ 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಜಾರಿ ಮಾಡಲಾಗುತ್ತೆ ಎಂದು ಸರ್ಕಾರ ಪರ ವಕೀಲರು ಹೈಕೋರ್ಟ್​ಗೆ ತಿಳಿಸಿದ್ದಾರೆ. ಇಂದು ನಡೆದ ವಿಚಾರಣೆಯಲ್ಲಿ  ರಾಜ್ಯದ ಎಲ್ಲಾ ಶಾಲೆಗಳಲ್ಲೂ ಜನವರಿ 1ರಿಂದ …

Read More »

ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಹೈಕೋರ್ಟ್ ಶಾಕ್

ಬೆಂಗಳೂರು: ತಮ್ಮ ವಿರುದ್ಧದ ಪ್ರಕರಣ ಕೈ ಬಿಟ್ಟ ಖುಷಿಯಲ್ಲಿದ್ದ ರಾಜಕಾರಣಿಗಳಿಗೆ ಶಾಕ್ ಹೈಕೋರ್ಟ್​​ ಶಾಕ್ ನೀಡಿದ್ದು, ಸರ್ಕಾರದ ಆದೇಶ ಅನುಷ್ಟಾನಗೊಳಿಸದಂತೆ ಹೈಕೋರ್ಟ್ ನಿರ್ಬಂಧ ಹೇರಿದೆ. ಆಗಸ್ಟ್ 31 ರಂದು ಶಾಸಕರು, ಸಂಸದರ ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧದ 62 ಪ್ರಕರಣಗಳನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಸಂಸ್ಥೆಯೂ ಹೈಕೋರ್ಟ್​ನಲ್ಲಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆ ಮಾಡಿತ್ತು. ಅರ್ಜಿಯಲ್ಲಿ ಸರ್ಕಾರ ನಿಯಮಬಾಹಿರವಾಗಿ, ಅಭಿಯೋಜಕರ ಅಭಿಪ್ರಾಯವಿಲ್ಲದೇ ನಿರ್ಧಾರ ಕೈಗೊಂಡಿದೆ …

Read More »

ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್‌ಆರ್‌ಟಿಸಿಗೆ 1853 ಬಸ್‍ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ

ಬೆಂಗಳೂರು,ಡಿ.21- ಗ್ರಾಮ ಪಂಚಾಯ್ತಿ ಚುನಾವಣೆಗೆ ಕೆಎಸ್‌ಆರ್‌ಟಿಸಿಗೆ 1853 ಬಸ್‍ಗಳನ್ನು ಒಪ್ಪಂದದ ಮೇಲೆ ನೀಡಲಾಗಿದೆ.  ಮೊದಲ ಹಂತದ ಗ್ರಾಮಪಂಚಾಯ್ತಿ ಚುನಾವಣೆಗೆ ನಾಳೆ ಮತದಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‍ಗಳನ್ನು ಬಳಸಿಕೊಳ್ಳಲಾಗಿದೆ.  ಮತಗಟ್ಟೆಗಳಿಗೆ ಸಿಬ್ಬಂದಿ, ಮತಪೆಟ್ಟಿಗೆ ಮತ್ತಿತರ ಸಾಮಾಗ್ರಿಗಳನ್ನು ಕೊಂಡೊಯ್ಯಲು ಮತ್ತು ಮರಳಿ ಕರೆತರಲು ಬಸ್‍ಗಳನ್ನು ಬಳಸಿಕೊಳ್ಳಲಾಗುತ್ತಿದೆ. ದೈನಂದಿನ ಮಾರ್ಗಗಳಲ್ಲಿ ಸಂಚರಿಸುವ ಬಸ್‍ಗಳನ್ನು ಹೊರತುಪಡಿಸಿ ಹೆಚ್ಚುವರಿ ಬಸ್‍ಗಳನ್ನು ಒಪ್ಪಂದದ ಮೇರೆಗೆ ಗ್ರಾಪಂ ಚುನಾವಣಾ ಕಾರ್ಯಕ್ಕೆ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ  ಮೂಲಗಳು ತಿಳಿಸಿವೆ.  ನಿತ್ಯ …

Read More »