ಬೆಂಗಳೂರು: ಸದನದಲ್ಲಿ ನಡೆದ ಘಟನೆ ಸರಿಯಲ್ಲ. ಈ ರೀತಿಯಾಗಿ ನಡೆಯಬಾರದಿತ್ತು ಅಂತಾ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್ ನ ಕಲಾಪದಲ್ಲಿ ನಡೆದ ಗಲಾಟೆ, ನೂಕಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭಾಪತಿಗಳು ಸದನಕ್ಕೆ ಬರುವ ಮೊದಲೇ ಬಾಗಿಲು ಹಾಕಿದ್ದು, ಕಾನೂನು ಬಾಹಿರ. ಸಭಾಪತಿಗಳಿಗೆ ಅಪಮಾನ ಇತಿಹಾಸದಲ್ಲಿಯೇ ಇಲ್ಲ. ಎಂದರು. ಸಭಾಪತಿ ಇರುವಾಗಲೇ ಉಪ ಸಭಾಪತಿ ಪೀಠ ಅಲಂಕರಿಸಿರುವುದು ತಪ್ಪು. ರಾಜಭವನದ ಗೌರವ ಹಾಳು ಮಾಡಿದ್ದಾರೆ. ರಾಜ್ಯಪಾಲರು ನಿರ್ದೇಶನ …
Read More »ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಗೂಂಡಾಗಿರಿ ಪ್ರದರ್ಶಿಸಿದ್ದಾರೆ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಕಾಂಗ್ರೆಸ್ ಗುಂಡಾವರ್ತನೆ ತೋರಿಲ್ಲ. ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿ ಗೂಂಡಾಗಿರಿಯನ್ನು ಸದನದಲ್ಲಿ ಪ್ರದರ್ಶಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ವಿಧಾನಪರಿಷತ್ ನಲ್ಲಿನ ಗಲಾಟೆಯ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಇಂದಿನ ವಿಧಾನ ಪರಿಷತ್ ನಲ್ಲಿನ ಗಲಾಟೆಯ ಬಗ್ಗೆ ವಿಷಾದಿಸುತ್ತೇನೆ. ಆದ್ರೆ ಸಭಾಪತಿ ಇದ್ದಾಗ ಉಪಸಭಾಪತಿ ಹೇಗೆ ಬಂದ್ರು.? ಸಭಾಪತಿ ಬರುವ ಮೊದಲೇ ಉಪಸಭಾಪತಿ ಪೀಠ ಅಲಂಕಿರಿಸಿದ್ದೇಕೆ …
Read More »ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿರುವ ಘಟನೆ ನಡೆದಿದೆ.
ಬೆಂಗಳೂರು: ಇಂದು ಕರೆಯಲಾಗಿದ್ದ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿರುವ ಘಟನೆ ನಡೆದಿದೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಪತಿ ಕುರ್ಚಿಯಲ್ಲಿ ಉಪಸಭಾಪತಿ ಧರ್ಮೇಗೌಡ ಕುಳಿತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದಾರೆ. ಪರಿಷತ್ ಉಪಸಭಾಪತಿಯನ್ನು ಕುರ್ಚಿಯಿಂದ ಕೆಳಗೆಳೆದು ತಂದಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರು ಮಧ್ಯಪ್ರವೇಶಿಸಿದ್ದಾರೆ. ಒಂದು ಹಂತದಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಸದಸ್ಯರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಕೊರಳಪಟ್ಟಿ ಹಿಡಿದು ಎಳೆದಾಡಿಕೊಂಡಿದ್ದಾರೆ. ತಳ್ಳಾಟದ ವೇಳೆ …
Read More »ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಹೆಚ್.ಡಿ.ದೇವೇಗೌಡ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ …
Read More »ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ; ಸಚಿವ ಸುರೇಶ್ ಕುಮಾರ್
ಬೆಂಗಳೂರು: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಶಾಲಾ ಮಂಡಳಿಗಳು, ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಉಪಕ್ರಮಗಳ ಕುರಿತು …
Read More »ಸೋಲುಂಡ ನಂತರ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭ
ಬೆಂಗಳೂರು: ಉಪಚುನಾವಣೆಯಲ್ಲಿ ಸೋಲುಂಡ ನಂತರ ತಟಸ್ಥವಾಗಿದ್ದ ಜೆಡಿಎಸ್ ಇದೀಗ ತನ್ನ ಕಾರ್ಯಚಟುವಟಿಕೆ ಆರಂಭಿಸಿದೆ. ಪ್ರಾದೇಶಿಕ ಪಕ್ಷವಾಗಿರುವ ಜೆಡಿಸ್ ಅನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕೆಂದು ಪಣತೊಟ್ಟಿರುವ ನಾಯಕರು ರಾಜಕೀಯ ಕಸರತ್ತಿಗೆ ಮುಂದಾಗಿದ್ದಾರೆ. ಜೆಡಿಎಸ್ನಲ್ಲೂ ಬದಲಾವಣೆ ಗಾಳಿ ಬೀಸುತ್ತಿದ್ದು, ಆಹ್ವಾನದ ಮೇರೆಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಇಂದು ಮಾಜಿ ಕೇಂದ್ರ ಸಚಿವ ಮತ್ತು ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಸಿ.ಎಂ.ಇಬ್ರಾಹಿಂ ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ …
Read More »ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು: ವಾಟಾಳ್ ನಾಗರಾಜ್
ಚಾಮರಾಜನಗರ: ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ರಾಜ್ಯಾದ್ಯಂತ ಜನವರಿ 9 ರಂದು ರೈಲು ಬಂದ್ ಚಳವಳಿ ನಡೆಸಲಾಗುವುದು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ ಅವರು ಜಿಲ್ಲಾಡಳಿತ ಭವನದ ಮುಂದೆ ತಮ್ಮ ಬೆಂಬಲಿಗರೊಂದಿಗೆ ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮರಾಠ ಅಭಿವೃದ್ಧಿ ನಿಗಮ …
Read More »ಮೇಲ್ಮನೆ ಕಲಾಪದತ್ತ ಎಲ್ಲರ ಚಿತ್ತ, ಕೋಲಾಹಲ ನಿಶ್ಚಿತ
ಬೆಂಗಳೂರು, ಡಿ.15- ಗೋ ಹತ್ಯೆ ನಿಷೇಧ ವಿಧೇಯಕ, ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಚರ್ಚೆಯ ಉದ್ದೇಶದಿಂದ ನಾಳೆ ಕರೆಯಲಾಗಿರುವ ಒಂದು ದಿನದ ವಿಧಾನಪರಿಷತ್‍ನ ಅಧಿವೇಶನ ರಣಾಂಗಣವಾಗುವ ಪರಿಸ್ಥಿತಿ ಎದುರಾಗಿದೆ. ಸಭಾಪತಿ ಚುನಾವಣೆ ವಿಷಯದಲ್ಲಿ ಬಿಜೆಪಿ, ಜೆಡಿಎಸ್‍ನದು ಒಂದು ನಿಲುವಾದರೆ, ಕಾಂಗ್ರೆಸ್ ಪಕ್ಷದ್ದು ಪ್ರತ್ಯೇಕ ನಿಲುವಾಗಿದೆ. ಬಿಜೆಪಿ ರಾಜ್ಯಪಾಲರ ಮೊರೆ ಹೋಗಿ ಅಧಿವೇಶನಕ್ಕೆ ಸಮಯ ನಿಗದಿ ಮಾಡಿರುವುದು ಪ್ರಮುಖವಾಗಿ ಸಭಾಪತಿ ವಿರುದ್ಧದ ಅವಿಶ್ವಾಸ ಗೊತ್ತುವಳಿಯನ್ನು ಅಂಗೀಕಾರ ಮಾಡಲಿಕ್ಕಾಗಿ. ಆದರೆ, ಬಿಜೆಪಿಯ …
Read More »ರಾಜ್ಯಾದ್ಯಂತ ಬಸ್ ಸಂಚಾರ ಆರಂಭ
ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯಗೊಳಿಸಿದ್ದು, ಸಂಜೆ ಗಂಟೆ ನಂತರ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿವೆ. ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿ ಜತೆಗಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರ 9 ಪ್ರಮುಖ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಸಾರಿಗೆ ಸಿಬ್ಬಂದಿ 10 ಪ್ರಮುಖ ಬೇಡಿಕೆಗಳಿದ್ದು, ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಗೆ ಹೊರತು ಪಡಿಸಿ 9 ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದ್ದು, …
Read More »ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಅವರನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿಯಾದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
ಬೆಂಗಳೂರು, ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಿ.ಎಂ ಇಬ್ರಾಹಿಂ ಅವರನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿಯಾದ ಬೆನ್ನಲ್ಲೇ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಹೌದು… ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಜೆಡಿಎಸ್‌ಗೆ ಆಹ್ವಾನ ಕೊಟ್ಟುಬಂದಿದ್ದಾರೆ. ಇದರ ಎಚ್ಚೆತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ …
Read More »