ಬೆಂಗಳೂರು,ಡಿ.10- ರಾಜ್ಯದ ಜನರೇ ಕಾಂಗ್ರೆಸ್‍ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ನಡೆಸಿದರು. ಕಲಾಪ ಬಹಿಷ್ಕಾರ ಮಾಡಿದರೆ ಇವರೇ ಇವರ ಮುಖದ ಮೇಲೆ ಉಗುಳಿಕೊಂಡಂತೆ ಎಂದು ಟೀಕೆ ಮಾಡಿರುವ ಅವರು, ಕಾಂಗ್ರೆಸ್ ನವರು ಬೆದರಿಕೆ ಹಾಕ್ತಾರೇನು? ಒಂದು ಸಲ ಪಶ್ಚಾತ್ತಾಪದ ಧ್ವನಿಯಲ್ಲಿ ಮಾತಾನಾಡುತ್ತಾರೆ. ಮತ್ತೊಂದು ಸಲ ಗೋ ಹತ್ಯೆ ನಿಷೇಧ ಕಾಯ್ದೆ ವಿರೋಧಿಸುತ್ತಾರೆ. ಕಾಂಗ್ರೆಸ್‍ನವರಿಗೆ ಒಂದು ನಿರ್ದಿಷ್ಟ …
Read More »ಪ್ರತಿಪಕ್ಷಗಳ ವಿರೋಧದ ನಡುವೆ ಜಾರಿಗೆ ತಂದ ಕಾಯ್ದೆ, ಇಂತಹ ಸರಕಾರ ಈವರೆಗೂ ಕಂಡಿಲ್ಲ
ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶದಾಂತ್ಯ ರೈತರು ನಡೆಸುತ್ತಿರುವ ಬೃಹತ್ ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನಾವು ರೈತರ ಪರವಾಗಿದ್ದು, ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಕೇಂದ್ರ ಸರಕಾರವು ರದ್ದು ಮಾಡಬೇಕು. ಕಾಯ್ದೆಗಳಲ್ಲಿ ತಿದ್ದುಪಡಿ ತಂದರೆ ಯಾವ ಪ್ರಯೋಜನವು ಇಲ್ಲ, ಕಾಯ್ದೆಗಳನ್ನೇ ರದ್ದು ಮಾಡಬೇಕು ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರವು ವಿರೋಧ ಪಕ್ಷಗಳನ್ನು ಗಣನೆಗೆ …
Read More »ಕಲ್ಯಾಣ ಕರ್ನಾಟಕದ ಜನರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಘೋಷಣೆಯಾಗಿರುವ 1,100 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲು ಯೋಜನಾ ಇಲಾಖೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ. ಕಲ್ಯಾಣ ಕರ್ನಾಟಕದ ಜನರಿಗೆ ಇದು ಭರ್ಜರಿ ಸಿಹಿಸುದ್ದಿಯಾಗಿದೆ. ಸದನದಲ್ಲಿ ಪೂರಕ ಅಂದಾಜು ವಿಷಯದ ಮೇಲೆ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಅನುದಾನದ ಬಗ್ಗೆ ಪ್ರಸ್ತಾಪಿಸಿದರು. ಅನುದಾನ ಘೋಷಣೆಯಾದರೂ ಬಿಡುಗಡೆಯಾಗದಿರುವುದರಿಂದ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಿಲ್ಲ. ತಕ್ಷಣ ಅನುದಾನ ಬಿಡುಗಡೆಗೆ ಕ್ರಮ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಬೆಂಗಳೂರು : ಕುತೂಹಲ ಮೂಡಿಸಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗಿದೆ. ಬೆಳಗಾವಿ ಭಾಗದಲ್ಲಿ ಸತೀಶ್ ಜಾರಕಿಹೊಳಿ ಅವರು ಸಾಕಷ್ಟು ಪ್ರಭಾವ ಹೊಂದಿದ್ದು, ಹೀಗಾಗಿ ಸತೀಶ್ ಜಾರಿಕಿಹೊಳಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸೋಮವಾರ ವಿಧಾನಸೌಧದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ವಿವಿಧ ಕಾಂಗ್ರೆಸ್ …
Read More »ಜನ್ಮ ದಿನದಂದೇ ಗಂಡು ಮಗುವಿನ ತಂದೆಯಾದ ಪವನ್ ಒಡೆಯರ್
ಬೆಂಗಳೂರು: ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ನಿರ್ದೇಶಕ ಪವನ್ ಒಡೆಯರ್ ಹಾಗೂ ನಟಿ ಅಪೇಕ್ಷಾ ಪುರೋಹಿತ್ ದಂಪತಿಗೆ ಗಂಡು ಮಗುವಿನ ಜನನವಾಗಿದೆ ವಿಶೇಷ ಅಂದ್ರೆ ಇಂದು ಪವನ್ ಒಡೆಯರ್ ಅವರ ಹುಟ್ಟುಹಬ್ಬವಾಗಿದೆ. ಹೀಗಾಗಿ ಇಂದೇ ಮಗನ ಜನನ ಕೂಡ ಆಗಿರುವುದು ಕುಟುಂಬದ ಸಂತಸ ಮತ್ತಷ್ಟು ಹೆಚ್ಚಿಸಿದೆ. ಈ ಖುಷಿಯ ವಿಚಾರವನ್ನು ಪವನ್ ಒಡೆಯರ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ. ಪತ್ನಿ ಹಾಗೂ ಮಗು ಆಸ್ಪತ್ರೆಯಲ್ಲಿರುವ ಫೋಟೋವನ್ನು ಪವನ್ …
Read More »ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ
ಬೆಂಗಳೂರು: ರೈತ ವಿರೋಧಿ ಕಾನೂನು ಖಂಡಿಸಿ ಬೆಂಗಳೂರಲ್ಲಿ ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ತಡೆದಿದ್ದರು. ಮೆಜೆಸ್ಟಿಕ್‍ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ರೈತರು ಇವತ್ತೂ ಬೃಹತ್ ಮೆರವಣಿಗೆ ಕೈಗೊಳ್ಳಲಿದ್ದಾರೆ. ಆನಂದ್‍ರಾವ್ ಸರ್ಕಲ್, ಫ್ರೀಡಂ ಪಾರ್ಕ್,ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರನ್ನು ಪೊಲೀಸರು ಫ್ರೀಡಂ ಪಾರ್ಕ್ …
Read More »ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ
ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು. ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ …
Read More »ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿಸಭೆ
ಬೆಂಗಳೂರು,ಡಿ.9- ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ತೀರ್ಮಾನಿಸಿರುವ ಕನ್ನಡಪರ ಸಂಘಟನೆಗಳು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಿದವು. ಮರಾಠ ಅಭಿವೃದ್ಧಿ ನಿಗಮ ವಿರೋಸಿ ಡಿ.5ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ವಿಫಲಗೊಳಿಸುವ ಯತ್ನ ಮಾಡುವ ಮೂಲಕ ಸರ್ಕಾರ ಕನ್ನಡ ದ್ರೋಹ ಮಾಡಿದೆ. ಹೀಗಾಗಿ ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಿದೆ ಎಂಬ ಹಿನ್ನೆಲೆಯಲ್ಲಿ ಸಭೆ ಸೇರಿದ ಕನ್ನಡ ಒಕ್ಕೂಟದ ಮುಖಂಡರಾದ ವಾಟಾಳ್ …
Read More »“ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ” : ನಾರಾಯಣಗೌಡ
ಬೆಂಗಳೂರು,ಡಿ.9- ನೂತನ ಕೃಷಿ ಕಾಯ್ದೆಗಳು ರೈತರಿಗೆ ಮರಣಶಾಸನವಾಗಿದೆ. ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದರೆ ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ರಾಜ್ಯ ರೈತ ಸಂಘ, ಹಸಿರುಸೇನೆ ಇಂದು ಹಮ್ಮಿಕೊಂಡಿದ್ದ ವಿಧಾನಸೌಧ ಮುತ್ತಿಗೆ, ಬಾರುಕೋಲು ಚಳುವಳಿಗೆ ಬೆಂಬಲ ನೀಡಿದ ಕರವೇ, ಬಿಬಿಎಂಪಿಯಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿ ರೈತ ವಿರೋ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ. ಈ …
Read More »ಸಾರಿಗೆ ನೌಕರರಿಗೆ ಸಂಪೂರ್ಣ ವೇತನ ನೀಡಿದ್ದೇವೆ : ಲಕ್ಷ್ಮಣ್ ಸವದಿ
ಬೆಂಗಳೂರು,ಡಿ.9- ಸಾರಿಗೆ ನೌಕರರಿಗೆ ಒಂದೇ ಒಂದು ತಿಂಗಳ ವೇತನವನ್ನು ತಡೆ ಹಿಡಿಯದೇ ಸಂಪೂರ್ಣವಾಗಿ ವೇತನ ನೀಡಿದ್ದೇವೆ. ಈ ತಿಂಗಳ ವೇತನವೂ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಶಾಸಕ ಹರ್ಷವರ್ಧನ್ ಡಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ 19 ಸಂದರ್ಭದಲ್ಲಿ ಸಾರಿಗೆ ಸಂಸ್ಥೆ ದೊಡ್ಡ ಮಟ್ಟದ ನಷ್ಟಕ್ಕೆ ಸಿಲುಕಿತು. ಆದರೂ ನೌಕರರಿಗೆ ತೊಂದರೆಯಾಗದಂತೆ ಸಂಪೂರ್ಣ ವೇತನ ಬಿಡುಗಡೆ ಮಾಡಿದ್ದೇವೆ. ಈ ತಿಂಗಳ ವೇತನ ಮಾತ್ರ …
Read More »