ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ರೈತರು ಮಣ್ಣಿನ ಮಗ ಅಂತಾರೆ. ಆದ್ರೇ ರೈತರ ಬಾಯಿಗೆ ಕುಮಾರಸ್ವಾಮಿ ಮಣ್ಣು ಹಾಕೋ ಕೆಲಸ ಮಾಡಿದ್ರು. ಅವರಿಗೆ ರೈತರ ಪರ ಕಾಳಜಿಯೇ ಇಲ್ಲ. ಕುಮಾರಸ್ವಾಮಿ ಮಣ್ಣಿನ ಮಕ್ಕಳ ದ್ರೋಹಿ ಹಾಗೂ ಅವರು ಒಬ್ಬ ಡೀಲಿಂಗ್ ಮಾಸ್ಟರ್ ಎಂಬುದಾಗಿ ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ. ನಗರದಲ್ಲಿ ವಿಧಾನಸೌಧ ಮುತ್ತಿಗೆ ಪ್ರತಿಭಟನೆ ಚಳುವಳಿ ನಡೆಸುತ್ತಾ ಮಾಜಿ ಸಿಎಂ ಭೂ ಸುಧಾರಣಾ ತಿದ್ದುಪಡಿ …
Read More »ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು
ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
Read More »ವಿಧಾನಪರಿಷತ್ ನಲ್ಲಿ ಭೂ ಸುಧಾರಣಾ ಕಾಯ್ದೆ ಅಂಗೀಕಾರ
ಬೆಂಗಳೂರು: ಕೂತುಹಲಕಾರಿ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಭೂ ಸುಧಾರಣಾ ಕಾಯ್ದೆ ವಿಧಾನಪರಿಷತ್ ನಲ್ಲೂ ಅಂಗೀಕಾರಗೊಂಡಿದೆ. ಕಳೆದ ಎರಡು ದಿನಗಳಿಂದ ಸುಧೀರ್ಘ ಚರ್ಚೆ ನಡೆದು ಇಂದು ಸಂಜೆ ವಿಧೇಯಕವನ್ನು ಮತಕ್ಕೆ ಹಾಕಿದಾಗ ಬಿಜೆಪಿ ಹಾಗೂ ಜೆಡಿಎಸ್ ನ 37 ಮಂದಿ ಪರವಾಗಿ ಮತ ಚಲಾಯಿಸಿದರು. ಕಾಂಗ್ರೆಸ್ ನ ಸದಸ್ಯರು, ಜೆಡಿಎಸ್ ನ ಮರಿತಿಬ್ಬೇಗೌಡ ಸೇರಿದಂತೆ ಒಟ್ಟು 21 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಕೊನೆಗೆ ವಿಧೇಯಕ ಅಂಗೀಕಾರಗೊಂಡಿದೆ ಎಂದು ಸಭಾಪತಿ …
Read More »ಬೆಂಗಳೂರಲ್ಲಿ ಭಾರತ್ ಬಂದ್ ಹೇಗಿತ್ತು..? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
ಬೆಂಗಳೂರು, ಡಿ.8- ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಬಿಸಿ ಏರಿತ್ತು. ಮೈಸೂರು ಬ್ಯಾಂಕ್ ವೃತ್ತ, ಟೌನ್‍ಹಾಲ್, ಮೌರ್ಯ ವೃತ್ತದಲ್ಲಿ ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರಾಜಕೀಯ ಪಕ್ಷಗಳು, ಕನ್ನಡ ಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳವರು ಪ್ರತಿಭಟನೆ ನಡೆಸಿ ಕೇಂದ್ರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದವು. ರಾಜ್ಯ ರೈತ ಸಂಘ, ಹಸಿರು ಸೇನೆ, ಸಿಪಿಎಂ, ಎಎಪಿ, ಕಾಂಗ್ರೆಸ್ , ಜೆಡಿಎಸ್ ಪಕ್ಷಗಳು, ಕನ್ನಡ ಒಕ್ಕೂಟ, ಕರ್ನಾಟಕ ರಕ್ಷಣಾ ವೇದಿಕೆ, …
Read More »ಸಿಎಂ ಕಾರ್ಯವೈಖರಿ ವಿರುದ್ಧ ಶಾಸಕರ ಅಸಮಾಧಾನ, ವರದಿ ಕೇಳಿದ ಹೈಕಮಾಂಡ್..!
ಬೆಂಗಳೂರು,ಡಿ.8- ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯವೈಖರಿ ವಿರುದ್ಧ ಶಾಸಕರು ಅಸಮಾಧಾನ ವ್ಯಕ್ಯಪಡಿಸಿರುವ ಹಿನ್ನೆಲೆಯಲ್ಲಿ ಈ ಕುರಿತು ವರದಿ ನೀಡುವಂತೆ ಬಿಜೆಪಿ ಹೈಕಮಾಂಡ್ ಪಕ್ಷದ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವಂತೆ ಪಕ್ಷದ ಕೆಲ ನಾಯಕರು ಹೈಕಮಾಂಡ್‍ಗೆ ಒತ್ತಡ ಹಾಕುತ್ತಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಈ ಬೆಳವಣಿಗೆಗಳ ನಡುವೆಯೇ ಯಡಿಯೂರಪ್ಪ ವಿರುದ್ದ ಸಿಡಿದೆದ್ದಿರುವ ಅತೃಪ್ತ ಬಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ …
Read More »ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅವರ ಮಾತನ್ನು ಯಾರು ಕೇಳ್ತಾರೆ..? : ಸಿಎಂ ವ್ಯಂಗ್ಯ
ಬೆಂಗಳೂರು, ಡಿ.8- ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ಕಪ್ಪು ಪಟ್ಟಿಯನ್ನಾದರೂ ಧರಿಸಲಿ, ಬಿಳಿ ಪಟ್ಟಿಯನ್ನಾದರೂ ಧರಿಸಲಿ. ಅದನ್ನು ಯಾರು ಕೇಳುತ್ತಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಸಂಬಂಧ ವಿಧಾನಸೌಧದ ಬಳಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರ ಪ್ರತಿಭಟನೆಯನ್ನು ಯಾರು ಕೇಳುತ್ತಾರೆ ಎಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರ ರೈತರ ಪರವಾಗಿರುವ ಸರ್ಕಾರ. ರೈತರಿಗೆ …
Read More »ರೈತ ಇದ್ರೆನೇ ದೇಶ- ಪ್ರತಿಭಟನೆಗೆ ಹ್ಯಾಟ್ರಿಕ್ ಹೀರೋ ಬೆಂಬಲ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ ಬಂದ್‍ಗೆ ರಾಜ್ಯಾದ ಹಲವೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಸ್ಯಾಂಡಲ್‍ವುಡ್ ಹ್ಯಾಟಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಬೆಂಬಲ ಸೂಚಿಸಿದ್ದಾರೆ. ಸಂಬಂಧ ಟ್ವೀಟ್ ಮಾಡಿರುವ ಶಿವಣ್ಣ, ರೈತ ದೇಶದ ಬೆನ್ನೆಲುಬು, ರೈತ ಇದ್ರೆನೇ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಬರೆದುಕೊಂಡಿದ್ದಾರೆ. …
Read More »ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ ಕುಮಾರ್
ಕೋಲಾರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಸಕ್ರಿಯ ರಾಜಕಾರಣದಿಂದ ಹೊರ ಬರುತ್ತೇನೆ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಸೇರಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಅಧಿಕಾರದ ದುರಾಸೆಯಾಗಿ ಅನೈತಿಕ ರಾಜಕೀಯ ಮಾಡುತ್ತಿದ್ದಾರೆ. …
Read More »ಭಾರತ್ ಬಂದ್ ಕರೆಗೆ ಬೆಂಬಲ: ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಭಾರತ್ ಬಂದ್ ಕರೆಗೆ ಬೆಂಬಲ ಕೋರಿ ನಗರದ ಹಲವೆಡೆ ಕಾಂಗ್ರೆಸ್ ಮತ್ತು ರೈತ ಸಂಘಟನೆಗಳ ಮುಖಂಡರು ಬೈಕ್ ರ್‍ಯಾಲಿ ನಡೆಸುತ್ತಿದ್ದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದೆ. ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ಜಮೀರ್ ಅಹಮದ್, ಶಾಸಕ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ ಹಾಗೂ ಇತರ ಶಾಸಕರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಆರಂಭಿಸಿದ್ದಾರೆ. ಶಿವಾಜಿನಗರ, ಬ್ರಿಗೇಡ್ ರಸ್ತೆ, ಸಂಪಿಗೆ ರಸ್ತೆ ಮತ್ತು …
Read More »ಮಗು ಸೇರಿ ಮೇಘನಾ ರಾಜ್‍ಗೆ ಕೊರೋನ ಪಾಸಿಟಿವ್!
ಬೆಂಗಳೂರು : ಹಿರಿಯ ನಟಿ ಪ್ರಮೀಳಾ ಜೋಷಾಯ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬೆನ್ನಲ್ಲೇ ಮೇಘನಾ ರಾಜ್ ಮತ್ತು ಅವರ ಪುತ್ರನಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಸುಂದರ್ ರಾಜ್, ನಮ್ಮ ಕುಟುಂಬದ ಎಲ್ಲರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಮೇಘನಾ ಮತ್ತು ಮಗುವಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ತಿಳಿಸಿದ್ದಾರೆ. ಮೇಘನಾ ಮತ್ತು ಮಗುವಿಗೆ ಮನೆಯಲ್ಲೇ ಐಸೊಲೇಟ್ ಆಗಿ ಚಿಕಿತ್ಸೆ ನೀಡಲಾಗುತ್ತಿದೆ. …
Read More »