Breaking News

ಬೆಂಗಳೂರು

ಮುರುಘಾ ಶರಣರ ಅಧಿಕಾರ ನಿರ್ಬಂಧಿಸಿದ ಅರ್ಜಿ ವಿಚಾರಣೆ 13ಕ್ಕೆ

ಬೆಂಗಳೂರು:’ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ), ಅತ್ಯಾಚಾರ, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಮುರುಘಾ ಶರಣರ ಅಧಿಕಾರ ಚಲಾವಣೆಗೆ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿದ ಅರ್ಜಿಯನ್ನು ಹೈಕೋರ್ಟ್‌ ಇದೇ 13ರಂದು ವಿಚಾರಣೆ ನಡೆಸಲಿದೆ.   ಶರಣರ ಅಧಿಕಾರ ಚಲಾವಣೆಗೆ ನಿರ್ಬಂಧ ವಿಧಿಸಿ ಚಿತ್ರದುರ್ಗ ಜಿಲ್ಲಾ ಮತ್ತು ಸೆಷನ್ಸ್‌ನ ಎರಡನೇ ಹೆಚ್ಚುವರಿ ನ್ಯಾಯಾಲಯ 2022ರ ಡಿಸೆಂಬರ್‌ 15ರಂದು …

Read More »

ನೋಂದಣಿ: ನಕಲಿ ತಡೆಗೆ ತಮಿಳುನಾಡು ಮಾದರಿ- ಮುದ್ರಾಂಕ ?

ಬೆಂಗಳೂರು: ನಕಲಿ ದಾಖಲೆಗಳನ್ನು ಬಳಸಿಕೊಂಡು ಸ್ಥಿರಾಸ್ತಿಗಳ ನೋಂದಣಿ ಮಾಡಿಸಿ ಪರರ ಆಸ್ತಿಗಳನ್ನು ಕಬಳಿಸುವವರನ್ನು ನಿಯಂತ್ರಿಸುವುದಕ್ಕಾಗಿ ತಮಿಳುನಾಡು ಮಾದರಿಯಲ್ಲಿ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವಂತೆ ನೋಂದಣಿ ಮತ್ತು ಮುದ್ರಾಂಕ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದಾರೆ.   ಒಬ್ಬರ ಆಸ್ತಿಯನ್ನು ಬೇರೊಬ್ಬರು ನಕಲಿ ದಾಖಲೆಗಳನ್ನು ಬಳಸಿಕೊಂಡು ನೋಂದಣಿ ಮಾಡಿಸಿಕೊಂಡರೆ ಅಥವಾ ಸರ್ಕಾರಿ ಆಸ್ತಿಗಳನ್ನು ಪರಭಾರೆ ಮಾಡಿದರೆ ನೋಂದಣಿ ರದ್ದುಪಡಿಸಲು ನ್ಯಾಯಾಲಯದ ಮೊರೆಹೋಗಬೇಕಿದೆ. ತಮಿಳುನಾಡು ಸರ್ಕಾರವು ನೋಂದಣಿ ಕಾಯ್ದೆಗೆ ತಿದ್ದುಪಡಿ ತಂದು, ಅಂತಹ ನೋಂದಣಿಗಳನ್ನು …

Read More »

ಪುನೀತ್‌ ಸಮಾಧಿ ಸ್ಥಳದಲ್ಲಿ ಶೀಘ್ರ ಸ್ಮಾರಕ: ಸಿಎಂ ಬೊಮ್ಮಾಯಿ

ಬೆಂಗಳೂರು: ಪುನೀತ್‌ ಹೆಸರನ್ನು ಮತ್ತಷ್ಟು ಚಿರಸ್ಥಾಯಿಯಾಗಿ ಮಾಡಲು ಅಪ್ಪು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಿಂಗ್‌ ರೋಡ್‌ ರಸ್ತೆಗೆ ಡಾ.ಪುನೀತ್‌ ಹೆಸರು ನಾಮಕರಣ ಮಾಡಿ ಮಾತನಾಡಿದ ಅವರು, ಸ್ಮಾರಕದಲ್ಲಿ ಡಾ|ರಾಜ್‌, ಪುನೀತ್‌ ಜೀವನ ಸಾಧನೆ ಜನರಿಗೆ ತಿಳಿಹೇಳುವ ಕೆಲಸ ಮಾಡಲಾಗುವುದು ಎಂದರು.   ಹಾಗೆಯೇ ಅಂಬರೀಶ್‌ ಕೂಡ ಕನ್ನಡ ಚಿತ್ರರಂಗದಲ್ಲಿ ಕೊಡಗೈ ದಾನಿ ಎನಿಸಿ¨ªಾರೆ. …

Read More »

ಬೆಳಗಾವಿಯಲ್ಲಿ ಕಾಂಗ್ರೆಸ್ 12 ಸೀಟು ಗೆಲ್ಲುವುದು ಖಚಿತ ಎಂದ ಎಂ.ಬಿ.ಪಾಟೀಲ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಗಳ ಬಗ್ಗೆ, ಅವರ ಮಾತಿನ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ಅದಕ್ಕೆ ಉತ್ತರ ಕೊಡಬೇಕಾದದ್ದು ಅಧ್ಯಕ್ಷರು. ಅವರೇ ಉತ್ತರ ಕೊಡುತ್ತಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಯಾರನ್ನೂ ಯಾರೂ ಮುಗಿಸಲು ಆಗಲ್ಲ. ಎಲ್ಲವನ್ನೂ ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದೇ ವೇಳೆ ಬೆಳಗಾವಿಯಲ್ಲಿ ನಾವು 12 ಸ್ಥಾನ ಗೆಲ್ಲುವುದು ಖಚಿತ. ಮುಂಬೈ ಕರ್ನಾಟಕದಲ್ಲಿ ಹೆಚ್ಚಿನ ಸೀಟು …

Read More »

ಪಂಚಮಸಾಲಿ ಮೀಸಲಾತಿ: ಆಯೋಗದ ವರದಿ ಸಲ್ಲಿಸಲು ಸಮಯ ಕೇಳಿದ ಸರ್ಕಾರ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರ್ಪಡೆ ಮಾಡುವ ಕುರಿತ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಫೆ.3ರಂದು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.   ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ …

Read More »

ಜಾರಕಿಹೊಳಿ ‘ಸಿಡಿ’ ಪ್ರಕರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನ ಕೈವಾಡ : ಮಾಜಿ ಶಾಸಕ ನಾಗರಾಜ್ ಹೊಸ ಬಾಂಬ್

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಕೈವಾಡವಿದೆ ಎಂದು ಮಾಜಿ ಶಾಸಕ ಹಾಗೂ ರಮೇಶ್ ಜಾರಕಿಹೊಳಿ ಆಪ್ತ ನಾಗರಾಜ್ ಹೊಸ ಬಾಂಬ್ ಸಿಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಸಿಡಿ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುವ ವಿಚಾರ ಗೊತ್ತಾಯ್ತು, ಈ ವಿಚಾರವನ್ನು ನಾನು 2 ಬಾರಿ ರಮೇಶ್ ಗೆ ಹೇಳಿದ್ದೆ, ಅವರು ಇಂತಹ ನೂರು ಸಿಡಿ ಬಂದರೂ ನಾನು ತಲೆಕೆಡಿಸಿಕೊಳ್ಳಲ್ಲ ಎಂದಿದ್ದರು. ಸಿಡಿ …

Read More »

ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಪತ್ನಿಗೆ ಚಾಕು ಇರಿದ ಪತಿರಾಯ

ಬೆಂಗಳೂರು: ಕುಡಿಯುವುದಕ್ಕೆ ಹಣ ಕೊಟ್ಟಿಲ್ಲವೆಂದು ಗಂಡನನ್ನೇ ಪತ್ನಿಗೆ ಚಾಕು ಇರಿದ ಘಟನೆ ನಡೆದಿದೆ.ನಗರದ ಜಕ್ಕೂರು ಬಳಿಯ ಮುನೇಶ್ವರ ಬೀದಿಯಲ್ಲಿ ನಡೆದಿದೆ. 33 ವರ್ಷದ ಜಯಶ್ರೀ ಮೃತ ದುರ್ದೈವಿ. ಇವರಿಬ್ಬರು 15 ವರ್ಷದ ಹಿಂದೆ ವಿವಾಹವಾಗಿದ್ದರು. ಇಬ್ಬರು ಮಕ್ಕಳ ಜೊತೆ ಮುನೇಶ್ವರ ಬೀದಿಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ನಾಗರಾಜ್‌ ಹಣ ನೀಡುವಂತೆ ಪದೇ ಪದೇ ಪತ್ನಿಗೆ ಪೀಡಿಸುತ್ತಿದ್ದ. ಇದರಿಂದ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಚುಚ್ಚಿದ್ದಾನೆ. ಇನ್ನು ನಾಗರಾಜ್​ ಕೂಲಿ ಕೆಲಸ …

Read More »

ಫೆಬ್ರವರಿ 6ರಂದು ಪ್ರಧಾನಿ ಮೋದಿ ತುಮಕೂರಿಗೆ

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲೇ ಪ್ರಧಾನಿನರೇಂದ್ರ ಮೋದಿ ಅವರು ಕರ್ನಾಟಕಕ್ಕೆಆಗಮಿಸುತ್ತಲೇ (PM Narendra Modi Karnataka Visit) ಇದ್ದು, ಇದೀಗ ಫೆ.6ರಂದು ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಅಂದು ಬೆಳಗ್ಗೆ 10.55ಕ್ಕೆ ಬೆಂಗಳೂರಿಗೆ ಆಗಮಿಸುವ ಮೋದಿ, 11.30ಕ್ಕೆ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (BIEC) ಇಂಡಿಯಾ ಎನರ್ಜಿ ಸಪ್ತಾಹವನ್ನು (India Energy Week) ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 2.45ಕ್ಕೆ ಬಿಐಇಸಿಯಿಂದ ತುಮಕೂರಿನ ಗುಬ್ಬಿಗೆ (PM Narendra Modi Tumakuru Visit) ಹೆಲಿಕಾಫ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ. ಗುಬ್ಬಿ ತಾಲೂಕಿನಲ್ಲಿ ಮಧ್ಯಾಹ್ನ …

Read More »

ಸ್ಯಾಂಡಲ್ ವುಡ್ ಹಿರಿಯ ನಟ ಮಂದೀಪ್ ರಾಯ್ ಇನ್ನಿಲ್ಲ

ಬೆಂಗಳೂರು: ಕನ್ನಡದ ಹಿರಿಯ ನಟ ಮಂದೀಪ್ ರಾಯ್ ಅವರು ಕೊನೆಯುಸಿರೆಳೆದಿದ್ದಾರೆ. 73 ವರ್ಷದ ಮಂದೀಪ್ ರಾಯ್ ಅವರಿಗೆ ಮಧ್ಯರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಮಂದೀಪ್ ರಾಯ್ ಅವರು ಮೂಲತಃ ಮುಂಬೈನವರು. ಬಾಲ್ಯದಲ್ಲಿ ಕರಾಟೆ, ಕುಂಗ್ ಫು ಅಭ್ಯಾಸ ಮಾಡಿದ್ದ ಮಂದೀಪ್ ಅವರು ಒಂಬತ್ತನೇ ವಯಸ್ಸಿನಲ್ಲಿ ರಂಗಭೂಮಿ ಒಲವು ಮೂಡಿಸಿಕೊಂಡರು. ರಂಗಭೂಮಿಯಲ್ಲಿ ಪರಿಚಯವಾದ ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಕಾರಣದಿಂದ …

Read More »

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’

ಬೆಂಗಳೂರು: ‘ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ದೊರಕುವ ತನಕ ಹೋರಾಟ ಕೈಬಿಡುವುದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಇದರ ಮಧ್ಯಸ್ಥಿಕೆ ವಹಿಸಬೇಕು’ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮನವಿ ಮಾಡಿದರು.   ಸ್ವಾತಂತ್ರ್ಯ ಉದ್ಯಾನದಲ್ಲಿ 15 ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ತಾಯಿ ಮೇಲೆ ಆಣೆ ಮಾಡಿ ಈಗ ಮರೆತಿದ್ದಾರೆ. ಆದ್ದರಿಂದ …

Read More »