ಬೆಂಗಳೂರು, ನ.29-ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸನ್ನು ಸದೃಢಗೊಳಿಸುವುದೂ ಸೇರಿದಂತೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ನಾಳೆ ಪಕ್ಷದ ಹಿರಿಯ ನಾಯಕರುಗಳ ಮಹತ್ವದ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎಚ್.ಕೆ.ಪಾಟೀಲ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್, ಮಾಜಿ ಸಂಸದರಾದ ಕೆ.ಎಚ್.ಮುನಿಯಪ್ಪ, ವೀರಪ್ಪಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್‍ಖಂಡ್ರೆ, ಸಲೀಂ ಅಹಮ್ಮದ್, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕ …
Read More »ಸಾರಿಗೆ ಕಚೇರಿಯಲ್ಲಿ ಹೆಚ್ಚುವರಿ ಹುದ್ದೆಗಳ ಸೃಷ್ಟಿ
ಬೆಂಗಳೂರು : ಸಾರಿಗೆ ಇಲಾಖೆಯ ಚೆಕ್‍ಫೋಸ್ಟ್ ಹಾಗೂ ಇತರ ಆಯಕಟ್ಟಿನ ಕಚೇರಿಗಳಿಗೆ ಲಿಪಿಕ ವರ್ಗದ ಸಹಾಯಕ ಕಾರ್ಯದರ್ಶಿ/ ಪ್ರಾದೇಶಿಕ ಸಾರಿಗೆ ಅಧಿಕಾರಿಯವರ ಕೇಂದ್ರ ಸ್ಥಾನೀಯ ಸಹಾಯಕರನ್ನು ಹಾಗೂ ತೆರಿಗೆ ಮತ್ತು ಖಜಾನೆ ಅಧಿಕಾರಿ ವೃಂದದವರನ್ನು ನೇಮಿಸಲು 10 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ. ಸಾರಿಗೆ ಕಚೇರಿಗಳಲ್ಲಿ ಈಗಾಗಲೇ ಮಂಜೂರಾಗಿರುವ 29 ಹುದ್ದೆಗಳ ಜೊತೆಗೆ ಹೆಚ್ಚವರಿಯಾಗಿ 10 ಹುದ್ದೆಗಳನ್ನು ಸೃಷ್ಟಿಸ ಲಾಗಿದೆ. ಅವುಗಳಲ್ಲಿ ಸಾರಿಗೆ ಆಯುಕ್ತರ ಕಚೇರಿ, ಬೆಂಗಳೂರಿನ ಕೇಂದ್ರ, ಪಶ್ಚಿಮ, ಪೂರ್ವ, …
Read More »ಕ್ರಿಮಿನಲ್‍ಗಳಿಗೆ ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್
ಬೆಂಗಳೂರು- ಇಂದಿನಿಂದ ಆರಂಭವಾಗಿರುವ ಮಾಸಿಕ ಜನಸಂಪರ್ಕ ಸಭೆಗೆ ಉತ್ತಮ ಜನ ಸ್ಪಂದನೆ ದೊರೆತಿದ್ದು, ಕ್ರಿಮಿನಲ್‍ಗಳಿಗೆ ಈ ಸಭೆಯ ಮೂಲಕ ಪೊಲೀಸರು ಸ್ಪಷ್ಟ ಎಚ್ಚರಿಕೆಯ ಸಂದೇಶ ರವಾನಿಸಲು ಸಾಧ್ಯವಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್‍ಪಂಥ್ ತಿಳಿಸಿದ್ದಾರೆ. ಪೂರ್ವ ವಿಭಾಗದ ಪುಲಿಕೇಶಿನಗರ ಪೊಲೀಸ್ ಠಾಣೆಯಲ್ಲಿ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಉತ್ತಮ ಭಾಂದವ್ಯ ಇರಬೇಕು. ಜನರಿಗೆ ತಮ್ಮ ಕೆಲಸ ಯಾವ …
Read More »ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಕಾನೂನಿನ ಸಂಕಷ್ಟಕ್ಕೆ
ಬೆಂಗಳೂರು,ನ.28- ಆತ್ಮಹತ್ಯೆಗೆ ಯತ್ನಿಸಿ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಕಾನೂನಿನ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಈಗಾಗಲೇ ಅವರ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ(ಎಫ್ ಐಆರ್) ದಾಖಲಾಗಿದೆ. ಭಾರತೀಯ ದಂಡ ಸಂಹಿತೆ 309ರ ಪ್ರಕಾರ ಆತ್ಮಹತ್ಯೆ ಯತ್ನ ಅಪರಾಧ. ಇದರ ಅಡಿಯಲ್ಲಿ ಗರಿಷ್ಠ ಒಂದು ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದಾಗಿದೆ. ಐಪಿಸಿ ಸೆಕ್ಷನ್ 309ರ ಪ್ರಕಾರ …
Read More »ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ: ಈಶ್ವರಪ್ಪ
ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ವಿಚಾರವಾಗಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಲಾಗಿದ್ದು, ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಎಂದು ಉತ್ತರಿಸಿದ್ದಾರೆ. ಇಂದು ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ರಾತ್ರಿ ಈ ಬಗ್ಗೆ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ವಾಪಸ್ ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.
Read More »ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆ ಅಸಮಾಧಾನ ಹೊರಹಾಕಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ನಿನ್ನೆ ರಾತ್ರಿ ಖಾಸಗಿ ಹೋಟೆಲ್‍ನಲ್ಲಿ ಪ್ರತ್ಯೇಕವಾಗಿ ನಡೆದ ಸಚಿವರು ಹಾಗೂ ಶಾಸಕರು ಸಭೆಗೆ ಸಂಬಂಧಿಸಿದಂತೆ ಸಚಿವ ರಮೇಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ‘ಈಗಲೂ ಕೂಡ ಅವರೆಲ್ಲರೂ ನನ್ನ ಸ್ನೇಹಿತರೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಮುಂದೆ ಈ ರೀತಿ ಸಭೆಗಳು ನಡೆಯಬಾರದು. ಪ್ರತ್ಯೇಕ ಸಭೆಗಳನ್ನು ನಡೆಸುವುದಕ್ಕೆ ಕಡಿವಾಣ ಹಾಕಬೇಕು. ಇದರಿಂದ ಕಾರ್ಯಕರ್ತರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಾನು ನಾಯಕ ಎಂದು ಎಲ್ಲಿಯೂ ಹೇಳಿಲ್ಲ. …
Read More »ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ
ಬೆಂಗಳೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಸ್ತಿ ಮಾರಾಟಕ್ಕೆ ಆಂಧ್ರ ಸರ್ಕಾರ ಮುಂದಾಗಿದ್ದು, ಇದಕ್ಕೆ ಹಿಂದೂಪರ ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಮಂತ್ರಾಲಯದ ಒಟ್ಟು 208 ಎಕರೆ ಇನಾಮು ಭೂಮಿಯನ್ನು ಮಾರಾಟ ಮಾಡಲು ಸರ್ಕಾರ ಪ್ರಕಟಣೆ ಹೊರಡಿಸಿದೆ. ಮಠಕ್ಕೆ ಸಂಬಂಧಿಸಿದ ವಡ್ಡೆಪಲ್ಲೆ, ಮಲದಕಲ್, ಧರೂರು ಮಂಡಲ ವ್ಯಾಪ್ತಿಯಲ್ಲಿ ಭೂಮಿ ಒತ್ತುವರಿಯಾಗಿದೆ ಎಂಬ ಕಾರಣಕ್ಕೆ ಮಾರಾಟ ಮಾಡಲು ಮಠವೇ ಸರ್ಕಾರಕ್ಕೆ ಪತ್ರ ಬರೆದಿತ್ತು. ಆದ ಕಾರಣ ಸರ್ಕಾರ ಪ್ರಕಟಣೆ ಹೊರಡಿಸಿದೆ. …
Read More »ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 41,322 ಮಂದಿಗೆ ಕೊರೊನಾ ಪಾಸಿಟಿವ್…!
ನವದೆಹಲಿ,ನ.28-ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿಯತ್ತ ದಾಪುಗಾಲಿಡುತ್ತಿದೆ. ಈಗಾಗಲೇ ಸೋಂಕಿತರ ಸಂಖ್ಯೆ 93.51 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರತಿ ನಿತ್ಯ 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಗಳಲ್ಲಿ 41,322 ಸೋಂಕು ಪ್ರಕರಣಗಳು ಬೆಳಕಿಗೆ ಬಂದಿದ್ದು, ಕಳೆದ ಹಲವಾರು ದಿನಗಳಿಂದ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೋಟಿ ದಾಟುವ ಸಾಧ್ಯತೆಗಳಿವೆ. ಅದಾಗ್ಯೂ ಚೇತರಿಕೆ ಪ್ರಮಾಣ ಶೇ.93.68ಕ್ಕೆ ಏರಿಕೆಯಾಗಿದೆ. ಇದುವರೆಗೂ 87,59,969 ಸೋಂಕಿತರು …
Read More »B.S.Y.ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Read More »ಖಾಸಗಿ ಶಾಲೆಗಳು ನಡೆಸುತ್ತಿರುವ ಆನ್‍ಲೈನ್ ಶಿಕ್ಷಣ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಅದು ಸ್ಥಗಿತಗೊಳ್ಳುವುದಿಲ್
ಬೆಂಗಳೂರು,ನ.27- ಖಾಸಗಿ ಶಾಲೆಗಳು ನಡೆಸುತ್ತಿರುವ ಆನ್‍ಲೈನ್ ಶಿಕ್ಷಣ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಅದು ಸ್ಥಗಿತಗೊಳ್ಳುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಭರವಸೆ ನೀಡಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಜತೆ ಇಂದು ಸಭೆ ನಡೆಸಿದ ಅವರು, ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಶಾಲೆಗಳು ಮುಚ್ಚಿದ್ದು, ಖಾಸಗಿ ಶಾಲೆಗಳು ತಮ್ಮ ವಿದ್ಯಾರ್ಥಿಗಳಿಗೆ ಆನ್‍ಲೈನ್‍ನಲ್ಲಿ ಬೋಧನೆ ಮಾಡುತ್ತಿವೆ. ಶುಲ್ಕ ಕಟ್ಟದೇ ಇರುವ ವಿದ್ಯಾರ್ಥಿಗಳಿಗೆ …
Read More »