ಬೆಂಗಳೂರು : ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಶುಭಾಶಯಗಳನ್ನು ಕೋರಿದ್ದಾರೆ. ಪ್ರತಿಯೊಬ್ಬ ಭಾರತೀಯನ ಹಕ್ಕು, ಘನತೆಯನ್ನು ನಮ್ಮ ಸಂವಿಧಾನ ರಕ್ಷಿಸುತ್ತಿದೆ. ನಮ್ಮ ಶ್ರೇಷ್ಠ ಸಂವಿಧಾನದ ಸದಾಶಯಗಳನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಸಂವಿಧಾನ ಕರಡು ಸಮಿತಿ ಅಧ್ಯಕ್ಷ ಡಾ ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನೆಗೆ ಕೊಡುಗೆ ನೀಡಿದ ಎಲ್ಲ ಮಹನೀಯರಿಗೆ ವಂದಿಸುತ್ತಾ, ಎಲ್ಲರಿಗೂ ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು ಎಂದು …
Read More »ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧ
ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ 62 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನವೆಂಬರ್ 24ರಂದು ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ ನಡೆದಿದೆ. ವ್ಯಕ್ತಿ ತನ್ನ ಮಗಳ ಮನೆಯಲ್ಲಿ ಬಾಲಕಿಯ ಮೇಲೆ ಈ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ. ದೇವಾಲಯವೊಂದರ ಅರ್ಚಕನಾಗಿರುವ ಈತ ದೇವನಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಪಕ್ಕ ಗಂಡನ ಜೊತೆ ವಾಸವಾಗಿರುವ ತನ್ನ ಮಗಳ ಮನೆಗೆ ತೆರಳಿದ್ದನು. ಮಗಳ ಪತಿಯೂ ಚೌಡೇಶ್ವರಿ ದೇಗುಲದ ಅರ್ಚಕನಾಗಿದ್ದಾನೆ. ಹೀಗಾಗಿ …
Read More »ಜಾರಕಿಹೊಳಿ ಪ್ಲಾನ್ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್……?
ಬೆಂಗಳೂರು: ಜಿಲ್ಲಾ ಪ್ರವಾಸದಿಂದ ಹಿಂದಿರುಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ಸರ್ಜರಿ ಕುರಿತಾಗಿ ಸಾಲು ಸಾಲು ಸಭೆ ನಡೆಸಲಿದ್ದಾರೆ. ಇಂದು ಸಂಜೆ ಆಪ್ತ ಸಚಿವರಿಗೆ ಕಾವೇರಿ ನಿವಾಸಕ್ಕೆ ಆಗಮಿಸುವಂತೆ ಸಿಎಂ ಬುಲಾವ್ ನೀಡಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿಯೇ ನೂತನ ಸಚಿವ ಪ್ರಮಾಣ ವಚನಕ್ಕೆ ಮುಹೂರ್ತ ನಿಗದಿಯಾಗಲಿದೆ ಎನ್ನಲಾಗಿದೆ. ಇಂದು ಸಂಜೆ ಸಭೆಯಲ್ಲಿ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್ ಮಾಡಿ, ಪದಗ್ರಹಣದ ದಿನಾಂಕವನ್ನು ಪಕ್ಷದ …
Read More »ನಾಳೆ ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿ ಸಿಗಲ್ಲ.
ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುವ ಎನ್ನ ಎಚ್ಚರವಾಗಿರಿ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ ಆಟೋ- ಟ್ಯಾಕ್ಸಿ ಚಾಲಕರು ಮುಷ್ಕರ ಕರೆ ನೀಡಿದ್ದಾರೆ. ವಾಹನಗಳ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತಾಗಿ 20 ಒಕ್ಕೂಟಗಳು ಸೇರಿ ನಾಳೆ ಮುಷ್ಕರಕ್ಕೆ ಕರೆ ನೀಡಿವೆ. ಬೇಡಿಕೆ ಏನು? – ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆ ಅಡಿಯಲ್ಲಿ ಆಟೋ ಚಾಲಕರಿಗೆ 1,00 ಲಕ್ಷ ರೂ ಮತ್ತು …
Read More »ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ?: ಡಿ.ಕೆ ಶಿ
ಬೆಂಗಳೂರು: ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ …
Read More »ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಡಿ.1ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ
ಬೆಂಗಳೂರು, ನ.25- ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರ ಸವಾಲು ಸ್ವೀಕರಿಸಿರುವ ಕನ್ನಡಪರ ಸಂಘಟನೆಗಳು ಡಿ.1ರಂದು ವಿಜಯಪುರದ ಜಿಲ್ಲಾಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿವೆ. ಮರಾಠ ಸಮುದಾಯ ಅಭಿವೃದ್ಧಿ ನಿಗಮ ರಚನೆಯನ್ನು ವಿರೋಧಿಸಿ ಹೋರಾಟಕ್ಕಿಳಿದಿರುವ ಕನ್ನಡಪರ ಸಂಘಟನೆಗಳನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರೋಲ್‍ಕಾಲ್ ಮತ್ತು ನಕಲಿ ಹೋರಾಟಗಾರರು ಎಂದು ಟೀಕಿಸುವ ಜತೆಗೆ ವಿಜಯಪುರದಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಸವಾಲು ಹಾಕಿದ್ದರು. ಇದಕ್ಕೆ …
Read More »ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಮಂಡನೆ: ಸಚಿವ ಪ್ರಭು ಚೌಹಾಣ್
ಬೆಂಗಳೂರು, – ಪಶು ಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ ಸಚಿವ ಪ್ರಭು ಚೌಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು , ಡಿ.7ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು, ಅದಕ್ಕೆ ಬೇಕಾದ ಪೂರ್ವ ತಯಾರಿ …
Read More »ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ
ಬೆಂಗಳೂರು, ನ.24- ರಾಜ್ಯದ ಜನಸಂಖ್ಯೆಯಲ್ಲಿ ಎರಡನೆ ಸ್ಥಾನದಲ್ಲಿರುವ ಒಕ್ಕಲಿಗ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿದ್ದು, ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಹಲವಾರು ಮುಖಂಡರು ಮನವಿ ಮಾಡಿದ್ದಾರೆ. ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂಬ ಒತ್ತಾಯದ ಸಮಿತಿಯ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿತು. ನಿಯೋಗದಲ್ಲಿ ತಲಕಾಡು ಚಿಕ್ಕರಂಗೇ ಗೌಡ, ರಾಜ್ಯ ಬಿಜೆಪಿ ವಕ್ತಾರ ಎ.ಎಚ್.ಆನಂದ್, …
Read More »ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ.
ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರು ಸ್ಪರ್ಧಿಸುವಂತಿಲ್ಲ. ಈ ಕುರಿತು ಚುನಾವಣೆ ಆಯೋಗ ಸ್ಪಷ್ಟನೆ ನೀಡಿದೆ. ಆ ಪಂಚಾಯಿತಿ ವ್ಯಾಪ್ತಿಯಲ್ಲಿ ಗುತ್ತಿಗೆ ಕಾಮಗಾರಿ ನಿರ್ವಹಿಸುವವರ ಸ್ಪರ್ಧೆ ಮಾಡುವಂತಿಲ್ಲ ಎಂದು ತಿಳಿಸಿದೆ. ಸರ್ಕಾರಿ ನೌಕರಿಯಲ್ಲಿರುವವರ ಪತಿ ಅಥವಾ ಪತ್ನಿ ಚುನಾವಣೆಗೆ ಸ್ಪರ್ಧಿಸಬಹುದು ಎಂದೂ ತಿಳಿಸಿದೆ. ಅಭ್ಯರ್ಥಿ ಅದೇ ಪಂಚಾಯಿತಿಗೆ ಸೇರಿದವನಾಗಿರಬೇಕು. ಮೀಸಲು ಸ್ಥಾನಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು. ಸಾಮಾನ್ಯ ವರ್ಗಕ್ಕೆ 200ರೂ. …
Read More »ವರ ನಟ ಡಾ.ರಾಜ್‍ಕುಮಾರ್ ಕುರಿತ 209 ಪಂಚಪದಿ ಕೃತಿ ಲೋಕಾರ್ಪಣೆ
ಬೆಂಗಳೂರು, ನ.22- ವರನಟ ಡಾ.ರಾಜ್‍ಕುಮಾರ್‍ರವರ ಚಿತ್ರ ಜೀವನಕ್ಕೆ ಸಂಬಂಸಿದಂತೆ, ಅವರು ನಟಿಸಿರುವ ಮೊದಲನೇ ಚಿತ್ರ ಬೇಡರ ಕಣ್ಣಪ್ಪದಿಂದ ಹಿಡಿದು ಕೊನೆಯ ಚಿತ್ರ ಶಬ್ದವೇದಿವರೆಗಿನ 209 ಚಲನಚಿತ್ರಗಳಿಗೆ ಸಂಬಂಸಿದ 209 ಪಂಚಪದಿ ಕೃತಿ ಲೋಕಾರ್ಪಣೆಗೊಂಡಿದೆ. ಹಾಲುವಾಗಿಲು ಮಂಜುನಾಥ್ ವಿರಚಿತ ರಾಜ್ ಕುರಿತ 209 ಪಂಚಪದಿ ಕೃತಿಯನ್ನು ರಾಜ್ ಕುಟುಂಬ ವರ್ಗದವರು ಸೇರಿದಂತೆ ನೂರು ಮಹನೀಯರು, 100 ಸ್ಥಳಗಳಲ್ಲಿ ಏಕ ಕಾಲಕ್ಕೆ ಲೋಕಾರ್ಪಣೆ ಮಾಡಿದರು. ವಿಶ್ವದ ಯಾವುದೇ ಕಲಾವಿದನ ಬಗ್ಗೆ ಇದುವರೆಗೂ ಬರೆಯಲಾಗದಂತಹ …
Read More »