ಬೆಂಗಳೂರು, ನ.20-ವಾಣಿ ವಿಲಾಸ ಆಸ್ಪತ್ರೆಯಿಂದ ಎರಡು ದಿನದ ನವಜಾತ ಶಿಶು ಅಪಹರಿಸಿದ್ದ ಮಹಿಳೆ ಸೇರಿದಂತೆ ನಾಲ್ವರನ್ನು ವಿವಿ ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಗು ಅಪಹರಿಸಿದ್ದ ಮಹಿಳೆ, ಇದಕ್ಕೆ ಸಹಕರಿಸಿದ ವ್ಯಕ್ತಿ ಮತ್ತು ಮಗುವನ್ನು ಪಡೆದಿದ್ದ ದಂಪತಿಯನ್ನು ಬಂಧಿಸಲಾಗಿದೆ. ಅಬ್ದುಲ್ ರಶೀದ್ ಮತ್ತು ಆರ್ಷಿಯಾ ದಂಪತಿ ಮಗುವಿಗೆ ಅನಾರೋಗ್ಯವಾದ್ದರಿಂದ ನ.9ರಂದು ವಾಣಿ ವಿಲಾಸ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ನ.11ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಮಗುವನ್ನು ಕರೆದೊಯ್ಯುವಂತೆ ಅನೌನ್ಸ್ ಮಾಡಿದ್ದಾರೆ. …
Read More »ರಾಜ್ಯದಲ್ಲಿ 1,781 ಮಂದಿಗೆ ಸೋಂಕು 17 ಮಂದಿ ಮೃತ
ಬೆಂಗಳೂರು: ರಾಜ್ಯದಲ್ಲಿ 1,781 ಮಂದಿಗೆ ಸೋಂಕು ತಗುಲಿದ್ದು, 2,181 ಜನ ಆಸ್ಪ್ರತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 17 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಈ ಪೈಕಿ 8,33,169 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಪ್ರಸ್ತುತ 24,752 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ ಒಟ್ಟು 11,621 ಮಂದಿ ಸೋಂಕಿಗೆ ಮೃತಪಟ್ಟಿದ್ದು, 539 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Read More »ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ.
ಬೆಂಗಳೂರು – ರಾಜ್ಯದಲ್ಲಿ ಫ್ಲ್ಯಾಟ್ ಕೊಳ್ಳುವವರಿಗೆ ರಾಜ್ಯ ಸರಕಾರ ಶುಭ ಸುದ್ದಿ ನೀಡಿದೆ. ಕರ್ನಾಟಕ ಸ್ಟ್ಯಾಂಪ್ ಆ್ಯಕ್ಟ್ ಗೆ ತಿದ್ದುಪಡಿ ತರುವ ಮೂಲಕ ಸಣ್ಣ ಮತ್ತು ಮಧ್ಯಮ ವರ್ಗದವರಿಗೆ ಫ್ಲ್ಯಾಟ್ ಕೊಳ್ಳುವುದಕ್ಕೆ ಇರುವ ಸ್ಟ್ಯಾಂಪ್ ಡ್ಯೂಟಿಯನ್ನು ಗಣನೀಯವಾಗಿ ಇಳಿಸಿದೆ. ಈ ಕುರಿತು ಗುರುವಾರ ರಾಜ್ಯಪತ್ರ ಪ್ರಕಟವಾಗಿದೆ. 5 ಲಕ್ಷ ರೂ.ವರೆಗಿನ ಫ್ಲ್ಯಾಟ್ ಖರೀದಿಸುವವರಿಗೆ ಈವರೆಗೆ ಇದ್ದ ಶೇ.6ರ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.2ಕ್ಕೆ ಇಳಿಸಲಾಗಿದೆ. 25 ಲಕ್ಷ ರೂ.ಗಳಿಂದ 35 ಲಕ್ಷ ರೂ.ಗಳವರೆಗಿನ …
Read More »ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡುವ ವಿಚಾರವಾಗಿ ಸಭೆ
ಬೆಂಗಳೂರು: ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಮಾಡುವ ವಿಚಾರವಾಗಿ ಸಭೆ ನಡೆಸಿದ್ದು, ಈ ಸಭೆಯಲ್ಲಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ತಿಳಿಸಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆಯೇ ಇದರ ವಿರುದ್ಧ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಪರ ಸಂಘಟನೆಗಳು ಹೇಳಿಕೊಂಡಿದ್ದವು. ಈ ವಿಚಾರವಾಗಿ ಇಂದು ಸಭೆ ನಡೆಸಿದ್ದು, ಈ ಸಭೆಯಲ್ಲಿ …
Read More »ಸರಕಾರದ ನಿರ್ಧಾರ ಖಂಡಿಸಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‍ಗೆ ಕರೆ
ಬೆಂಗಳೂರು : ಮರಾಠ ಅಭಿವೃಧಿ ಪ್ರಾಧಿಕಾರ ರಚನೆ ಖಂಡಿಸಿ ಇಂದು ವಾಟಲ್ ನಾಗರಾಜ್ ಹಾಗೂ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರಕಾರದ ನಿರ್ಧಾರವನ್ನು ಖಂಡಿಸಿ ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿ ಬೆಂಬಲ ಸೂಚಿಸಲಾಯಿತು. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವಿರೋಧ ವ್ಯಕ್ತವಾಗುತ್ತಿದ್ದು, ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಈ ಹಿಂದೆ …
Read More »ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸುತ್ತಿದ್ದ ಆರು ಮಂದಿಯನ್ನು ಭಾರತೀನಗರ ಪೊಲೀಸರು ಬಂಧಿಸಿ 5.83 ಲಕ್ಷ ಹಣವನ್ನು ವಶ
ಬೆಂಗಳೂರು,:- ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸುತ್ತಿದ್ದ ಆರು ಮಂದಿಯನ್ನು ಭಾರತೀನಗರ ಪೊಲೀಸರು ಬಂಧಿಸಿ 5.83 ಲಕ್ಷ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸಾಹೀಲ್ ಅಹಮ್ಮದ್(25), ಸಯ್ಯದ್ ಸುಹೇಲ್(25), ಸಯ್ಯದ್ ಜವಾದ್(20), ಮಹಮದ್ ಸಾಲ್ಹೆ ಅಲಿ ಅಪೀಸ್(20), ಮಹಮದ್ ಶಾಬಾಜ್(24) ಮತ್ತು ಸಯ್ಯದ್ ರವೂಪ್(19) ಬಂಧಿತರು. ಆರೋಪಿಗಳು ಎಕೆಝೆಡ್ ಸೀಫುಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ರಾತ್ರಿ ವೇಳೆ ಸಂಚು ರೂಪಿಸಿ ದರೋಡೆ ನಡೆಸಿ, ನಂತರ ಅವರೇ ಠಾಣೆಗೆ ಬಂದು ದೂರು ನೀಡುತ್ತಿದ್ದರು ನವೆಂಬರ್ 9 …
Read More »ಡಿಸೆಂಬರ್ 10ರ ವರೆಗೆ ಬಸ್‍ಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಬಹುದಾಗಿದೆ.
ಬೆಂಗಳೂರು: ವಿದ್ಯಾರ್ಥಿಗಳು ಕಾಲೇಜಿಗೆ ಸಂಚರಿಸಲು ಅನುಕೂಲವಾಗುವಂತೆ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದ್ದು, 2019-20ನೇ ಸಾಲಿನಲ್ಲಿ ವಿತರಿಸಲಾಗಿರುವ ಬಸ್ ಪಾಸ್ ಬಳಸಿ ಡಿಸೆಂಬರ್ 10ರ ವರೆಗೆ ಸಂಚರಿಸಲು ಅವಕಾಶ ನೀಡಿದೆ. ಈ ಕುರಿತು ಸಾರಿಗೆ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನವೆಂಬರ್ 17ರಿಂದ ರಾಜ್ಯದ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು, ಪದವಿ, ವೂದ್ಯಕೀಯ, ತಾಂತ್ರಿಕ, ಡಿಪ್ಲೋಮಾ, ಅನುದಾನಿತ, ಅನುದಾನ ರಹಿತ ಕಾಲೇಜುಗಳಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಸರ್ಕಾರ ಆದೇಶ ಹೊರಡಿಸಿದೆ. …
Read More »B.S.Y.ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿದ್ದ ಮಹಾದೇವ ಪ್ರಕಾಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಮಹದೇವ ಪ್ರಕಾಶ್ ಅವರು ಮಾಧ್ಯಮ ಸಲಹೆಗಾರರಾಗಿ ಕಳೆದ ಒಂದು ವರ್ಷದಿಂದ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ನನ್ನ ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.ಮೂಲಗಳ ಪ್ರಕಾರ ಇತ್ತೀಚಿಗೆ ಮಹಾದೇವ ಪ್ರಕಾಶ್ ಕಾರ್ಯವೈಖರಿಗೆ, ಯಡಿಯೂರಪ್ಪ ಅವರು …
Read More »ಕನ್ನಡಿಗರನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ.:ವಾಟಾಳ್ ನಾಗರಾಜ್ , ಸಾ.ರಾ.ಗೋವಿಂದು
ಬೆಂಗಳೂರು, ನ.19- ಕನ್ನಡಿಗರನ್ನು ಕಡೆಗಣಿಸುತ್ತಿರುವ ಸರ್ಕಾರದ ಧೋರಣೆ ಖಂಡನೀಯ. ಯಾವುದೇ ಧಮ್ಕಿಗೂ ಹೆದರುವುದಿಲ್ಲ, ಜಗ್ಗುವುದಿಲ್ಲ. ಉಸಿರು ಇರುವವರೆಗೂ ಹೋರಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಇಂದು ವಿಧಾನಸೌಧದ ದೇವರಾಜ ಅರಸು ಪ್ರತಿಮೆ ಮುಂಭಾಗ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ವಾಟಾಳ್ ನಾಗರಾಜ್ , ಸಾ.ರಾ.ಗೋವಿಂದು ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದಕ್ಕೂ ಮುನ್ನ ಮಾತನಾಡಿದ ವಾಟಾಳ್, ಸರ್ಕಾರ ತನ್ನ ಧೋರಣೆಯನ್ನು ಬದಲಿಸದಿದ್ದರೆ ಡಿ.5ರಂದು ಅಖಂಡ ಕರ್ನಾಟಕ ಬಂದ್ …
Read More »ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು.
ಬೆಂಗಳೂರು: ಕನ್ನಡಿಗರ ಸ್ಟಾರ್ಟಪ್ ಆ್ಯಪ್ ಆಧಾರಿತ ಹೊಯ್ಸಳ ಕ್ಯಾಬ್ ಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ಹೊಯ್ಸಳ ಕ್ಯಾಬ್ ಕನ್ನಡಿಗರ ಸ್ಟಾರ್ಟಪ್ ಆಗಿದ್ದು, ಕನ್ನಡತಿ ಸುಧಾ ಉಮಾಶಂಕರ್ ಅವರು ಈ ಕ್ಯಾಬ್ ಸೇವೆ ಅರ್ಪಿಸಿದ್ದಾರೆ. ನಗರಗಳಲ್ಲಿದ್ದ ಕ್ಯಾಬ್ ಸೇವೆ ಇನ್ನು ರಾಜ್ಯದ ಎಲ್ಲೆಡೆ ಸೇವೆಗೆ ಆರಂಭಿಸಲಿದೆ. ಈ ಕ್ಯಾಬ್‍ಗಳು ಕಡಿಮೆ ದರದಲ್ಲಿ ಸುಭದ್ರ ಸೇವೆ ನೀಡಲಿವೆ. ಹೊಯ್ಸಳ …
Read More »