ಬೆಂಗಳೂರು: ರಾಜ್ಯದಲ್ಲಿ ಸ್ಕೂಲ್ ಆರಂಭದ ಬಗ್ಗೆ ಇನ್ನೂ ಗೊಂದಲ ಬಗೆಹರಿದಿಲ್ಲ. ಮತ್ತೊಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದೆ. ಇದರ ನಡುವೆ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಕಾಲೇಜು ಶಿಕ್ಷಣ ಇಲಾಖೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಕಠಿಣ ಮಾರ್ಗಸೂಚಿಗಳನ್ನೇ ಪ್ರಕಟಿಸಿದೆ. ಮಾರ್ಗಸೂಚಿಗಳು: ಕಾಲೇಜ್ ಆರಂಭಕ್ಕೆ 3 ದಿನ ಮೊದಲು ಬೋಧಕರು, ವಿದ್ಯಾರ್ಥಿಗಳು, ಸಿಬ್ಬಂದಿ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಬೇಕು. ಬೋಧಕರು ಫೇಸ್ ಮಾಸ್ಕ್, ಫೇಸ್ …
Read More »ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..
ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..
Read More »ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದರೆ. ಇತ್ತ ಕುಸುಮಾರಿಂದ ಟೆಂಪಲ್ ರನ್
ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್ ಆರ್ ನಗರ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಢವಢವ ಆರಂಭವಾಗಿದೆ. ಆರ್‍ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಗೆಲುವಿನ ವಿಶ್ವಾಸದಲ್ಲಿದ್ದಾರೆ. ಕೌಂಟಿಂಗ್ ಆರಂಭದ ಬಳಿಕ ಮತ ಎಣಿಕಾ ಕೇಂದ್ರದ ಕಡೆ ಹೋಗಲು ನಿರ್ಧಾರ ಮಾಡಿದ್ದಾರೆ. ಸದ್ಯ ಟಿವಿಯಲ್ಲಿಯೇ ಬೆಳವಣಿಗೆಗಳನ್ನು ವೀಕ್ಷಿಸ್ತಿರೊ ಮುನಿರತ್ನ ಅವರು, ಚುನಾವಣಾ ಫಲಿತಾಂಶಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನಿನ್ನೆ ಆಗಮಿಸಿದ್ದಾರೆ.ಇತ್ತ ಕಾಂಗ್ರೆಸ್ …
Read More »ಬಡವರನ್ನು ಹಸಿವಿನಲ್ಲೆ ಮಲಗಿಸಿದ್ದೇ ಬಿಜೆಪಿ ಸರ್ಕಾರ:ಆಮ್ ಆದ್ಮಿ ಪಕ್ಷ
ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದು ಬಡವರ ಪಾಲಿನ ಅನ್ನ ಕಸಿಯುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ …
Read More »ಶಬರಿಮಲೆಗೆ ಹೋಗುವ ಭಕ್ತರಿಗೆ ಮಾರ್ಗಸೂಚಿ
ಬೆಂಗಳೂರು/ತಿರುವನಂತಪುರಂ: ಶಬರಿ ಮಲೆ ದೇವಸ್ಥಾನಕ್ಕೆ ಹೋಗುವ ಭಕ್ತರಿಗಾಗಿ ಕೇರಳ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಏಳು ಮಾರ್ಗ ಸೂಚಿಗಳನ್ನು ಒಳಗೊಂಡ ಪ್ರಕಟಣೆಯನ್ನು ಧಾರ್ಮಿಕ ದತ್ತಿ ಇಲಾಖೆ ಕನ್ನಡದಲ್ಲೇ ಬಿಡುಗಡೆ ಮಾಡಿದೆ. ಶಬರಿಮಲೆ ವೆಬ್ ಸೈಟ್ ನಲ್ಲಿ ನೊಂದಾಯಿಸಿಕೊಂಡು ಅನುಮತಿ ಪಡೆದ ಭಕ್ತರಿಗಷ್ಟೆ ಅವಕಾಶ ನೀಡಲಾಗುತ್ತದೆ. ಪ್ರತಿದಿನ 1 ಸಾವಿರ ಭಕ್ತರಿಗೆ ವಾರಾಂತ್ಯದಲ್ಲಿ 2 ಸಾವಿರ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ದೇವಸ್ಥಾನ ಭೇಟಿಯ 48 ಗಂಟೆ ಅವಧಿಗೆ ಮೊದಲು …
Read More »ಅನುಪ್ರಭಾಕರ್ ಮುಖರ್ಜಿ ಅವರದ್ದು ಇಂದು 40ನೇ ವರ್ಷದ ಹುಟ್ಟುಹಬ್ಬ
ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ನಟಿಯರಲ್ಲಿ ಒಬ್ಬರಾದ ಅನುಪ್ರಭಾಕರ್ ಮುಖರ್ಜಿ ಅವರದ್ದು ಇಂದು 40ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ನಟಿಗೆ ಅಭಿಮಾನಿಗಳು, ಸಂಬಂಧಿಕರು ಹಾಗೂ ನಟ-ನಟಿಯರಿಂದ ಶುಭಾಶಯಗಳ ಸುರಿಮಳೆಗಳೇ ಬರುತ್ತಿವೆ. ಈ ಮಧ್ಯೆ ಅನು ಅವರು ವಿಶೇಷವಾಗಿ ತಮಗೆ ತಾವೇ ವಿಶ್ ಕೂಡ ಮಾಡಿಕೊಂಡಿದ್ದಾರೆ. ಇವತ್ತು ನಾನು 40ನೇ ವರ್ಷಕ್ಕೆ ಕಾಲಿಡುತ್ತಿದ್ದೇನೆ ಎಂಬ ತಲೆಬರಹದೊಂದಿಗೆ ಪತ್ರದ ಮೂಲಕ ಶುಭಾಶಯ ಕೋರಿಕೊಂಡ ಅನು, ಕೃತಜ್ಞತೆ! ಎಂಬ ಒಂದು ಪದವು ಇಂದು ನನ್ನ …
Read More »ಮಹಾ ರಾಜಕೀಯ ರಮೇಶ್ ಜಾರಕಿಹೊಳಿ!
ಬೆಂಗಳೂರು: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರಕಾರದಲ್ಲಿ “ಕರ್ನಾಟಕ ಮಾದರಿ ಭೂಕಂಪ’ ಸಂಭವಿಸುವ ದಿನಗಳು ಸಮೀಪಿಸುತ್ತಿವೆಯೇ? ಆಪರೇಷನ್ ಕಮಲದ ಬಿರುಗಾಳಿಗೆ ಸಿಲುಕಿ ಉದ್ಧವ್ ಸರಕಾರವೂ ಪತನಗೊಳ್ಳಲಿದೆಯೇ? ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ, ಇಂಥ ಬೆಳವಣಿಗೆ ಹೆಚ್ಚು ದೂರವಿಲ್ಲ ಎಂಬ ಸುಳಿವು ಸಿಗುತ್ತಿದೆ. ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಕಾರ್ಯತಂತ್ರದ ಹಿಂದಿರುವುದು ಬೇರ್ಯಾರೂ ಅಲ್ಲ, ರಮೇಶ್ ಜಾರಕಿಹೊಳಿ! ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಬಂಡೆದ್ದು,ರಾಜೀನಾಮೆ ನೀಡಿ, …
Read More »ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ.
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಡ್ರಗ್ಸ್ ಸಿಗದೇ ನಟಿಯರನ್ನು ಅರೆಸ್ಟ್ ಮಾಡಿದ್ದಾರೆ ಎಂದವರಿಗೆ ಅರಗಿಸಿಕೊಳ್ಳಲಾಗದ ಸತ್ಯ ಬಯಲಾಗಿದೆ. ಅರೋಪಿಗಳು ಒಳಸಂಚು ರೂಪಿಸಿ ದಂಧೆ ನಡೆಸುತ್ತಿದ್ದರು ಜೊತೆಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದರು ಎಂಬುವುದನ್ನು ಸಿಸಿಬಿ ಬಯಲಿಗೆಳೆದಿದೆ. ಹೀಗಾಗಿ ಸಂಜನಾ, ರಾಗಿಣಿ ಮನೆಯಲ್ಲಿ ಅಥವಾ ಅವರ ಬಳಿ ಡ್ರಗ್ಸ್ ಸಿಕ್ಕಿಲ್ಲ. ಆದರೆ ಈ ಇಬ್ಬರು ನಟಿಮಣಿಯರು ಈ ದಂಧೆಯಲ್ಲಿ ಹಣ ಮಾಡಿರುವುದು ಸಾಭೀತಾಗಿದೆ. ಈವರೆಗಿನ ತನಿಖೆಯಲ್ಲಿ ವೀರೇನ್ ಖನ್ನನೇ ಕಿಂಗ್ ಪಿನ್ …
Read More »ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ …
Read More »ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ.
ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ. ಸರ್ಕಾರದಿಂದ ಹಣ ಕಳುಹಿಸಿದರೂ ಖಾಸಗಿ ಆಸ್ಪತ್ರೆಗಳು ಇನ್ನೂ ಹಣ ವಸೂಲಿ ಮಾಡುವುದರಲ್ಲಿಯೇ ನಿರತವಾಗಿವೆ. ಕೊರೊನಾ ಬಂದವರ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ನೀಡುತ್ತಿದೆ. ಸರ್ಕಾರದಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ವ್ಯಕ್ತಿಗಳ ಬಿಲ್ ಅನ್ನ ಸರ್ಕಾರದ ವತಿಯಿಂದ ನೀಡಲಾಗುತ್ತೆ. ಖಾಸಗಿಯಾಗಿ ಚಿಕಿತ್ಸೆ ಪಡೆಯುವವರನ್ನ ಹೊರತು ಪಡಿಸಿ ಉಳಿದವರ ವೆಚ್ಚವನ್ನ ಸರ್ಕಾರವೇ ಭರಿಸುತ್ತದೆ. ಈಗ ಇದನ್ನೇ ಬಂಡವಾಳ ಮಾಡಿಕೊಂಡಿರೋ ಬೆಂಗಳೂರಿನ …
Read More »