ಬೆಂಗಳೂರು,ನ.4- ರಾಜ್ಯದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊಸ ಕಾನೂನನ್ನು ಜಾರಿಗೆ ತರಲು ತೀರ್ಮಾನಿಸಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಹೆಸರಿನಲ್ಲಿ ಮತಾಂತರ ಮಾಡಲು ಕೆಲವು ಶಕ್ತಿಗಳು ಸಂಘಟಿತವಾಗಿ ಯುವಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ಜಾರಿ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು. ಲವ್ ಜಿಹಾದ್ …
Read More »ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು, ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ?: ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು, ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವಿಟರ್ ನಲ್ಲಿ ಟೀಕಿಸಿದ್ದಾರೆ. ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಇದಕ್ಕೆ ದಿನೇಶ್ ಗುಂಡೂರಾವ್ ಟ್ವಿಟ್ ಮೂಲಕ ತಿರುಗೇಟು ನೀಡಿದ್ದಾರೆ. ಅರ್ನಬ್ ಗೋಸ್ವಾಮಿ …
Read More »ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನಖಂಡನೀಯ.:ರಮೇಶ ಜಾರಕಿಹೊಳಿ
ಬೆಂಗಳೂರು – ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಬಂಧನ ಖಂಡನೀಯ. ಇದು ಮಾಧ್ಯಮದ ಮುಕ್ತ ನಿರ್ವಹಣೆಗೆ ಬಿದ್ದ ಪೆಟ್ಟು ಎಂದು ಕರ್ನಾಟಕ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಹಾರಾಷ್ಟ್ರ ಸರ್ಕಾರದ ಈ ನಡೆ ಅಧಿಕಾರದ ದುರುಪಯೋಗವಾಗಿದ್ದು ಮುಕ್ತ ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ದಾಳಿಯಾಗಿದೆ ಎಂದಿದ್ದಾರೆ. ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಮಹಾರಾಷ್ಟ್ರ ಸರ್ಕಾರ ಮತ್ತೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. …
Read More »ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಸೇನಾ ಅಧಿಕಾರಿಗಳ ಹೆಸರಿನಲ್ಲಿ ವಂಚಿಸ್ತಿದ್ದ ಆರೋಪಿಗಳನ್ನ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ಉಮರ್ ಖಾನ್, ಸೈದ್, ವಜೀಬ್, ಸಹಿಲ್ ಬಂಧಿಸಿತ ಆರೋಪಿಗಳು. ಬಂಧಿತ ಖದೀಮರು OLXನಲ್ಲಿ ಕಡಿಮೆ ಬೆಲೆಗೆ ವಾಹನಗಳ ಫೋಟೋ ಹಾಕುತ್ತಿದ್ದರು. ಅದನ್ನು ನೋಡಿ ವಾಹನ ಖರೀದಿಗೆ ಕರೆ ಮಾಡುತ್ತಿದ್ದ ಜನರಿಗೆ ತಾವು ಸೇನೆಯಲ್ಲಿದ್ದೇವೆ ಎಂದು ಸುಳ್ಳು ಹೇಳಿ ನಂಬಿಸಿ ಮೋಸ ಮಾಡುತ್ತಿದ್ದರು. ಗೂಗಲ್ ಪೇ, ಫೋನ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. …
Read More »ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ.
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿ ಕೇಸ್ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್ಗಳನ್ನು ಹಿಂಪಡೆದಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧಿಸಿದ ಮೂರು ಕೇಸ್ಗಳನ್ನು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗದ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂವರು ಕೇಸ್ಗಳು ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ವಿಚಾರಣೆ ನಡೆಯಬೇಕಿತ್ತು. ಆದರೆ, ವಕೀಲ ಬಿ.ವಿನೋದ್ …
Read More »ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ.
ಬೆಂಗಳೂರು: ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಸಂಪತ್ ರಾಜ್ ಎಸ್ಕೇಪ್ ಪ್ರಕರಣಕ್ಕೆ ಸಂಬಂಧಿಸಿ ಸಂಪತ್ ರಾಜ್ ರಕ್ಷಣೆ ಮಾಡಲು ಹೋಗಿ ಆಸ್ಪತ್ರೆ ತಗಲಾಕಿಕೊಂಡಿದೆ. ಏಕೆಂದರೆ ನಿನ್ನೆ ಸಂಪತ್ ನೋಡಲು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಸಿಸಿಬಿಗೆ ಶಾಕ್ ಎದುರಾಗಿತ್ತು. ಸಂಪರ್ ರಕ್ಷಣೆ ಮಾಡಲು ಬ್ಯಾಪ್ಟಿಸ್ಟ್ ಆಸ್ಪತ್ರೆ ಮಹಾ ನಾಟಕವನ್ನೇ ಆಡಿದೆ. ಸಂಪತ್ ರಾಜ್ ಆಸ್ಪತ್ರೆಯಲ್ಲಿ ಎರಡು ತಿಂಗಳು ಠಿಕಾಣಿ ಹಾಕಿದ್ದರು. ಎರಡು ತಿಂಗಳಲ್ಲಿ 4 ಬಾರಿ ಆಡ್ಮಿಟ್, 4 ಬಾರಿ ಡಿಸ್ಚಾರ್ಜ್ …
Read More »ರಾಜರಾಜೇಶ್ವರಿ ಕ್ಷೇತ್ರದಲ್ಲಿ ಈ ಬಾರಿ 45.25% ಮತದಾನ, ಶಿರಾದಲ್ಲಿ ಈ ಬಾರಿ 82.31% ರಷ್ಟು ಮತದಾನ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರತಿಷ್ಠೆಯ ಕಣಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಬೈಎಲೆಕ್ಷನ್ ಅತ್ಯಂತ ಶಾಂತಿಯುತವಾಗಿ ನಡೆದಿದೆ. ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್‍ನ ಕುಸುಮಾ, ಜೆಡಿಎಸ್‍ನ ಕೃಷ್ಣಮೂರ್ತಿ ಸೇರಿ 16 ಹುರಿಯಾಳುಗಳ ಭವಿಷ್ಯ ಮತಯಂತ್ರ ಸೇರಿದೆ. ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಕಾಂಗ್ರೆಸ್‍ನ ಜಯಚಂದ್ರ, ಜೆಡಿಎಸ್‍ನ ಅಮ್ಮಾಜಮ್ಮ ಸೇರಿ 15 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ. ಏಳು ದಿನಗಳ ಬಳಿಕ …
Read More »ಕರ್ನಾಟಕ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ
ಬೆಂಗಳೂರು,ನ.3- ಉತ್ತರ ಪ್ರದೇಶ, ಹರಿಯಾಣ, ಮಧ್ಯಪ್ರದೇಶ ನಂತರ ಇದೀಗ ಕರ್ನಾಟಕ ಸರ್ಕಾರ ಕೂಡ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಚಿಂತನೆ ನಡೆಸಿದೆ. ರಾಜ್ಯದಲ್ಲಿ ಮುಸ್ಲಿಂ ಪುರುಷರು ಹಿಂದೂ ಹುಡುಗಿಯರಿಗೆ ಆಮಿಷವೊಡ್ಡಿ ತಮ್ಮ ಜಾತಿಯ ವಿಚಾರವನ್ನು ರಹಸ್ಯವಾಗಿಟ್ಟು ಲವ್ ಜಿಹಾದ್ ಮಾಡಿಕೊಂಡಿರುವ ಘಟನೆಗಳು ಹೆಚ್ಚಾಗಿರುವ ಹಿನ್ನೆಲೆ ಕಠಿಣ ಕಾನೂನು ರಚಿಸುವುದಕ್ಕೆ ಸರ್ಕಾರ ತೀರ್ಮಾನಿಸಿದೆ. ಇದರಿಂದ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲು ಮುಂದಾಗಿರುವ ಬಿಜೆಪಿ ಆಡಳಿತದ ನಾಲ್ಕನೇ …
Read More »ಆರ್.ಆರ್.ನಗರದಲ್ಲಿ ಮತದಾನ ಮಾಡಿದ ತಾರೆಯರು
ಬೆಂಗಳೂರು,ನ.3- ಆರ್‍ಆರ್‍ನಗರ ಉಪಚುನಾವಣೆಯ ಮತದಾನದಲ್ಲಿ ನಟ ದರ್ಶನ ಸೇರಿದಂತೆ ಹಲವಾರು ನಟನಟಿಯರು ತಮ್ಮ ಹಕ್ಕು ಚಲಾಯಿಸಿದರು. ನೆನಪಿರಲಿ ಪ್ರೇಮ್ ಅವರು ಪತ್ನಿ ಸಮೇತ ಕ್ಲಾರೆಟ್ ಸ್ಕೂಲ್ ಮತಗಟ್ಟೆಯಲ್ಲಿ ವೋಟ್ ಮಾಡಿದರು. ತಮ್ಮ ಹಕ್ಕು ಚಲಾಯಿಸಿದ ನಂತರ ಸರ್ಕಾರ ಮತದಾನಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಿದೆ. ಯಾರೂ ಆತಂಕ ಪಡುವುದು ಬೇಡ. ಎಲ್ಲರೂ ಮತದಾನ ಮಾಡಿ ಎಂದು ಮನವಿ ಮಾಡಿದರು. ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು. ನಾವು ಮತದಾನ ಮಾಡಿಲ್ಲವೆಂದರೆ ನಮ್ಮ …
Read More »ತಾಯಿ ಮೂಕಾಂಬಿಕೆ ಕೊಟ್ಟ ಉಡುಗೊರೆ ನೀನು – ಮಗನ ಹುಟ್ಟುಹಬ್ಬಕ್ಕೆ ರಕ್ಷಿತಾ ವಿಶ್
ಬೆಂಗಳೂರು: ಸ್ಯಾಂಡಲ್‍ವುಡ್ ಸ್ಟಾರ್ ಗಳು ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುವುದು ಕಾಮನ್. ಅದೇ ರೀತಿಯಾಗಿ ಸ್ಟಾರ್ ಮಕ್ಕಳು ಕೂಡ ಬರ್ತ್ ಡೇಯನ್ನು ಅಷ್ಟೇ ಸ್ಪೇಷಲ್ ಆಗಿ ಸೆಲೆಬ್ರೇಟ್ ಮಾಡೋದು ಟ್ರೇಂಡ್ ಆಗಿದೆ. ಕ್ರೇಜಿ ಕ್ವೀನ್ ರಕ್ಷಿತಾ ಮತ್ತು ಜೋಗಿ ಪ್ರೇಮ್ ದಂಪತಿಯ ಮುದ್ದಾದ ಮಗ ಸೂರ್ಯ 12ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಮಗನ ಹುಟ್ಟುಹಬ್ಬಕ್ಕೆ ತಾಯಿ ರಕ್ಷಿತಾ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯ ಮೂಲಕವಾಗಿ ವಿಶ್ ಮಾಡಿದ್ದಾರೆ. ಇನ್‍ಸ್ಟಾದಲ್ಲಿ ರಕ್ಷಿತಾ ಬರೆದುಕೊಂಡಿದ್ದೇನು?: ನೀನು …
Read More »