ಬೆಂಗಳೂರು: ಆರ್.ಆರ್ ನಗರ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಈ ವೇಳೆ ಕೆಲವರು ಕೇಸರಿ ಮಾಸ್ಕ್ ಧಾರಣೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕನ್ಯಾಕುಮಾರಿ ಶಾಲೆಯ ಮತಗಟ್ಟೆ ಬಳಿ ಪ್ಯಾರಾಮಿಲಿಟರಿ ಫೋರ್ಸ್ ಸಿಬ್ಬಂದಿ ಕೇಸರಿ ಬಣ್ಣದ ಮಾಸ್ಕ್ ಧರಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ರು. ಪಟ್ಟು ಹಿಡಿದು ಮಾಸ್ಕ್ ಬದಲಿಸುವಂತೆ ಮಾಡಿದ್ರು. ಇದರ ಬೆನ್ನಲ್ಲೇ ಮತಗಟ್ಟೆ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರು ಧರಿಸಿದ್ದ ಕೇಸರಿ ಮಾಸ್ಕ್ಗಳನ್ನ ಕೂಡ ಪೊಲೀಸರು ತೆಗೆಸಿದ್ದಾರೆ.
Read More »ಗೌರಮ್ಮ ತಮ್ಮ ಸೊಸೆ ಕುಸುಮ ಬೆಂಬಲಕ್ಕೆ ನಿಂತಿದ್ದಾರೆ
ಬೆಂಗಳೂರು: ಕೆಲವೇ ಕೆಲವು ದಿನಗಳ ಹಿಂದಕ್ಕೆ ಹೋದರೆ.. ಅಂದ್ರೆ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಘೋಷಣೆಯಾದಾಗ, ಕಾಂಗ್ರೆಸ್ ಪಕ್ಷ ಇನ್ನೂ ಕುಸುಮಗೆ ಟಿಕೆಟ್ ಕೊಟ್ಟಿರಲಿಲ್ಲ. ರಾಜಕೀಯಕ್ಕೆ ಕುಸುಮ ಇಳಿಯುತ್ತಾರೆ ಎಂಬ ಸುದ್ದಿ ತಿಳಿದ ಕೂಡಲೆ ಮಾಧ್ಯಮದ ಮುಂದೆ ಡಿ.ಕೆ.ರವಿ ತಾಯಿ ಕಿಡಿಕಾರಿದ್ದರು.ಮಗ ಸಾವನ್ನಪ್ಪಿದಾಗ ಮಣ್ಣು ಬಿಸಾಕಿ ಹೋದವಳು ಇಂದಿನವರೆಗೂ ಬಂದಿಲ್ಲ. ನನ್ನ ಮಗನ ದುಡ್ಡೆಲ್ಲ ನುಂಗಿ ನೀರು ಕುಡಿದ್ಲು. ಚುನಾವಣೆಗೆ ನಿಂತುಕೊಂಡರೂ ನನ್ನ ಮಗನ ಹೆಸರು ಫೋಟೋ ಹಾಕಬಾರದು. ಒಂದು …
Read More »ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಬಿಸುವ ಸಾಧ್ಯತೆ
ಬೆಂಗಳೂರು : ಕೋವಿಡ್ 19 ಕಾರಣದಿಂದಾಗಿ ಕಳೆದ ಏಳು -ಎಂಟು ತಿಂಗಳಿನಿಂದ ಶಾಲಾ ಕಾಲೇಜು ತೆರೆದಿಲ್ಲ. ಇದೀಗಾ ಕೊರೋನಾ ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖ ಮಾಡಿದೆ. ಆದ್ದರಿಂದ ಮತ್ತೆ ಶಾಲಾ ಕಾಲೇಜು ಓಪನ್ ಮಾಡಲು ಮಹತ್ವದ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಶಾಲಾ ಕಾಲೇಜುಗಳ ಆರಂಭದ …
Read More »ಯೋಧನ ಕೇಸರಿ ಮಾಸ್ಕ್ ಬದಲಿಸಲು ಅನುಕೂಲ : ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್
ಬೆಂಗಳೂರು : ರಾಜರಾಜೇಶ್ವರಿನಗರ ಉಪ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಇಂದು ನಡೆಯುತ್ತಿರುವಂತ ಮತದಾನದ ವೇಳೆ, ಮತಗಟ್ಟೆಯ ಕೇಂದ್ರದಲ್ಲಿ ಅರೆ ಸೇನಾಪಡೆಯ ಯೋಧರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಹೀಗೆ ನಿಯೋಜನೆಗೊಂಡಿದ್ದಂತ ಯೋಧರೊಬ್ಬರು ಕೇಸರಿ ಬಣ್ಣದ ಮಾಸ್ಕ್ ಧರಿಸಿದ್ದರು. ಇದನ್ನು ಮತ ಚಲಾವಣೆಗೆ ತೆರಳುವ ವೇಳೆ ಗಮನಿಸಿದಂತ ಯುವಕನೋರ್ವ ತರಾಟೆಗೆ ತೆಗೆದುಕೊಂಡನು. ತಾವು ಕೇಸರಿ ಮಾಸ್ಕ್ ಧರಿಸಿದ್ದೀರಿ. ದಯವಿಟ್ಟು ಕೇಸರಿ ಮಾಸ್ಕ್ ಬದಲಾಯಿಸಿ, ಬೇರೆಯ ಮಾಸ್ಕ್ ಧರಿಸುವಂತೆ ಸೂಚಿಸಿದರು. ಆದ್ರೇ ಅರೆ …
Read More »ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಧರಿಸಬೇಕಿಲ್ಲ
ಬೆಂಗಳೂರು: ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್ ಧರಿಸಬೇಕು ಎಂಬ ಆದೇಶವನ್ನು ಬಿಬಿಎಂಪಿ ವಾಪಸ್ ಪಡೆದಿದೆ. ಈ ಹಿಂದೆ ಕಿಟಿಕಿ ಮುಚ್ಚಿದ ಕಾರಿನಲ್ಲಿ ಒಬ್ಬರೆ ಪ್ರಯಾಣಿಸುತ್ತಿದ್ದಾಗ ಮಾಸ್ಕ್ ಧರಿಸಬೇಕು ಎಂದು ಬಿಬಿಎಂಪಿ ಆದೇಶ ಪ್ರಕಟಿಸಿತ್ತು. ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆದೇಶದ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಸಾರ್ವಜನಿಕರ ಆಕ್ರೋಶದ ನಂತರ ತಜ್ಞರ ಸಲಹೆ ಕೋರಿ ಆರೋಗ್ಯ ಇಲಾಖೆಗೆ ಮಂಜುನಾಥ್ ಪ್ರಸಾದ್ ಪತ್ರ ಬರೆದಿದ್ದರು. ತಜ್ಞರ ಸಲಹೆಯಂತೆ ಕಾರಿನಲ್ಲಿ ಮುಚ್ಚಲ್ಪಟ್ಟ ಕಿಟಕಿಯೊಂದಿಗೆ …
Read More »ರಾಜ್ಯದಲ್ಲಿ ಬಹುತೇಕ ಜಲಾಶಯಗಳು ಭರ್ತಿ
ಬೆಂಗಳೂರು,ನ.2- ಈ ಬಾರಿ ಮುಂಗಾರು ಬೆಳೆ ವಾಡಿಕೆಗಿಂತ ಹೆಚ್ಚಾದ ಪರಿಣಾಮ ರಾಜ್ಯದ ಬಹುತೇಕ ಜಲಾಶಯಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದಲ್ಲದೆ ನೆರೆಯ ರಾಜ್ಯಗಳಿಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ನೀರಿನ ಹರಿಸಲಾಗಿದೆ. ಕೃಷ್ಣ ಕೊಳ್ಳದ ಜಲಾಶಯಗಳು ಭರ್ತಿ ಯಾಗಿದ್ದು, ನೆರೆಯ ಆಂಧ್ರಪ್ರದೇಶಕ್ಕೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಬಿಡಲಾಗಿದೆ. ಅದೇ ರೀತಿ ಕಾವೇರಿ ಕೊಳ್ಳದಿಂದಲೂ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನೇ ಬಿಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಕಾವೇರಿ ಜಲಾನಯನ ಭಾಗದಿಂದ …
Read More »ಆರ್.ಆರ್.ನಗರ, ಶಿರಾ ಉಪ ಕದನಗಳಿಗೆ ಇವತ್ತು ಮತದಾನ, ಕೊರೊನಾ ಸೋಂಕಿತರು ಮತದಾನ ಮಾಡಬಹುದಾಗಿದೆ.
ಬೆಂಗಳೂರು: ಪ್ರತಿಷ್ಠೆಯ, ಜಿದ್ದಾಜಿದ್ದಿನ ಕ್ಷೇತ್ರ ಎನಿಸಿಕೊಂಡಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಎರಡೂ ಕ್ಷೇತ್ರಗಳಲ್ಲಿ ಮತದಾನ ಶುರು ಆಗಿದೆ. ಕೊರೊನಾ ಹೊತ್ತಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭಾ ಉಪ ಚುನಾವಣೆ ಇದಾಗಿದೆ. ಕೊರೊನಾಗೆ ಆತಂಕಗೊಳ್ಳದೇ ಮತಗಟ್ಟೆಗೆ ಬಂದು ನಿಮ್ಮ ಹಕ್ಕು ಚಲಾಯಿಸಿ ಎಂದು ಚುನಾವಣಾ ಆಯೋಗ ಮನವಿ ಮಾಡಿದೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ …
Read More »ಬೊಕ್ಕಸದ ದುಡ್ಡು ಎಲ್ಲಿ ಹೋಯ್ತು..? : ಸಿದ್ದು
ಬೆಂಗಳೂರು, ನ.2- ನೆರೆ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೂ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಬೋಕ್ಕಸ ಮಾತ್ರ ಖಾಲಿಯಾಗಿದೆ. ಹಾಗಿದ್ದರೆ ಹಣ ಎಲ್ಲಾ ಎಲ್ಲಿ ಹೋಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ ವರ್ಷದಿಂದ ನೆರೆ ಸಂತ್ರಸ್ಥರಿಗೆ ಪರಿಹಾರ ಪಾವತಿಸಿಲ್ಲ ಎಂಬ ವರದಿಯನ್ನು ಟ್ಯಾಗ್ ಮಾಡಿ ಪ್ರಶ್ನೆ ಕೇಳಿರುವ ಸಿದ್ದರಾಮಯ್ಯ, ಉತ್ತರ ಕೊಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲೂ …
Read More »ಪ್ರಶಸ್ತಿ ವಿತರಣೆ ವೇಳೆ ಯುವತಿಯ ಗೋಲ್ಡ್ ಕೋಟೆಡ್ ಬಳೆ ಗಮನಿಸಿದ ಸಿಎಂ, ಕೈ ಹಿಡಿದು ಏನಮ್ಮಾ ಈ ಬಳೆ ಚಿನ್ನದ್ದಾ ಅಂತ ಪ್ರಶ್ನಿಸಿದರು
ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸಿಎಂ ಯಡಿಯೂರಪ್ಪ ಹಾಸ್ಯ ಎಲ್ಲರ ಗಮನ ಸೆಳೆಯಿತು. ಪ್ರಶಸ್ತಿ ವಿತರಣೆ ವೇಳೆ ಯುವತಿಯ ಗೋಲ್ಡ್ ಕೋಟೆಡ್ ಬಳೆ ಗಮನಿಸಿದ ಸಿಎಂ, ಕೈ ಹಿಡಿದು ಏನಮ್ಮಾ ಈ ಬಳೆ ಚಿನ್ನದ್ದಾ ಅಂತ ಪ್ರಶ್ನಿಸಿದರು. ಯುವತಿ ಚಿನ್ನದ್ದು ಅಲ್ಲ ಅಂದಾಗ ಸಿಎಂ ನಕ್ಕು, ಗೋಲ್ಡ್ ಹಾಕಿಕೊಂಡು ಬರಬೇಕಿತ್ತಾ ಅಲ್ವಾ ಎಂದರು. ನನ್ನ ಕೈಯಲ್ಲಿ ದೊಡ್ಡ ಬಳೆ ನೋಡಿ ಚಿನ್ನದ್ದಾ ಅಂತ ಕೇಳಿದರು. ಅಲ್ಲ …
Read More »ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್
ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್ಪಿಬಿ ನಟಿಸಿದ್ದಾರೆ. 8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್ಪಿಬಿ …
Read More »