Breaking News

ಬೆಂಗಳೂರು

ಬೆಟ್ಟದ ಮೇಲೆ ಯುವಕರ ತಂಡವೊಂದು 65 ಅಡಿ ಉದ್ದದ ಬೃಹತ್ ಬಾವುಟ ಹಾರಿಸಿ, ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ.

ಬೆಂಗಳೂರು:  ರಾಜ್ಯದಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ, ಆದರೆ ನಾಡ  ಯುವಕರ ತಂಡವೊಂದು ಇತಿಹಾಸ ಪ್ರಸಿದ್ಧ ಬೆಟ್ಟದ ತುತ್ತತುದಿಯಲ್ಲಿ ರಾಜ್ಯೋತ್ಸವವನ್ನು ಸ್ಮರಣೀಯವಾಗಿ ಆಚರಿಸಿದ್ದಾರೆ. ಇತಿಹಾಸ ಪ್ರಸಿದ್ಧ ಮಾಗಡಿ ಕೆಂಪೇಗೌಡರು ಆಳಿದ ಭೈರವದುರ್ಗ ಬೆಟ್ಟದ ಮೇಲೆ ಯುವಕರ ತಂಡವೊಂದು 65 ಅಡಿ ಉದ್ದದ ಬೃಹತ್ ಬಾವುಟ ಹಾರಿಸಿ, ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಕುದೂರು ಹೋಬಳಿಯ ಭೈರವೇಶ್ವರ ನಗರದ ಯುವಕರು, ಪ್ರತಿವರ್ಷವು ಬೃಹತ್ ಆದ ಬಾವುಟವನ್ನು …

Read More »

ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ.

      ಬೆಂಗಳೂರು: ಮದ್ಯ ಸೇವಿಸುವವರಿಗೆ ‘ಕೊರೊನಾ’ದಿಂದ ಗಂಭೀರ ಸಮಸ್ಯೆ ಎದುರಾಗಲಿದೆ. ಮದ್ಯಪ್ರಿಯರ ಲಿವರ್ ಮೇಲೆ ‘ಕೊರೊನಾ’ ಪ್ರಭಾವ ಅಪಾರವಾಗಿರುತ್ತೆ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಸೋಂಕಿನಿಂದ ಮೃತಪಟ್ಟ ಕೆಲವರಲ್ಲಿ ಲಿವರ್ ಸಮಸ್ಯೆ ಕಂಡು ಬಂದಿದೆ. ಹೀಗಾಗಿ ಮದ್ಯಪಾನ ಮಾಡುವವರಿಗೆ ವೈದ್ಯರು ವಾರ್ನಿಂಗ್ ಕೊಟ್ಟಿದ್ದಾರೆ. ಸೋಂಕಿತರು ಲಿವರ್ ಮೇಲಾಗುವ ಪರಿಣಾಮದ ಬಗ್ಗೆ ಎಚ್ಚರಿಕೆ ವಹಿಸಬೇಕು. ಶ್ವಾಸಕೋಶದೊಂದಿಗೆ ವಿವಿಧ ಅಂಗಗಳ ಮೇಲೂ ಪರಿಣಾಮ ಬೀರುತ್ತೆ. ಮದ್ಯಪಾನ ಮಾಡುವವರ ಲಿವರ್ ದುರ್ಬಲವಾಗುವ …

Read More »

ಶಾಲೆಗಳಿಗೆ ನೀಡಿದ್ದ ಮಧ್ಯಾಂತರ ರಜೆ ಮುಗಿದಿದೆ ಶಿಕ್ಷಕರು ಶಾಲೆಗೆ ಬರಬೇಕು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಾಲೆಗಳಿಗೆ ನೀಡಿದ್ದ ಮಧ್ಯಾಂತರ ರಜೆ ಮುಗಿದಿದ್ದು, ಕನ್ನಡ ರಾಜ್ಯೋತ್ಸವ ಆಚರಣೆಗೆ ನ.1ರಂದು ಎಲ್ಲ ಶಿಕ್ಷಕರು ಹಾಜರಾಗಬೇಕು, 2ರಿಂದ ಶಿಕ್ಷಕರು ಶಾಲೆಗೆ ಬರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಶಾಲಾರಂಭಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆ ಅಥವಾ ಸರಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ವಿದ್ಯಾಗಮವೂ ತಾತ್ಕಾಲಿಕವಾಗಿ ರದ್ದಾಗಿದೆ. ಹೀಗಾಗಿ ಶಿಕ್ಷಕರು ಶಾಲೆಗೆ ಬಂದು ಯಾವ ಕಾರ್ಯ ಮಾಡಬೇಕು ಎಂಬುದನ್ನು ಇಲಾಖೆ ಸ್ಪಷ್ಟಪಡಿಸಬೇಕು ಎಂದು ಶಿಕ್ಷಕರು ಆಗ್ರಹಿಸಿದ್ದಾರೆ. ವಿದ್ಯಾಗಮ ಚಟುವಟಿಕೆಯಲ್ಲಿ ಈವರೆಗೆ …

Read More »

ರಾಜ್ಯೋತ್ಸವ: ಕನ್ನಡಿಗರು ಮತ್ತು ತಾಯಿ ಭುವನೇ ಶ್ವರಿ ನಡುವಿನ ಈ ನಂಟು 1956ರಲ್ಲಿ ಆರಂಭವಾದದ್ದಲ್ಲ.

ಬೆಂಗಳೂರು: ಕರ್ನಾಟಕ ಏಕೀಕರಣದ ಕನಸು 1956ರ ನವೆಂಬರ್‌ 1ರಂದು ನನಸಾದಾಗ, ‘ಕನ್ನಡದ ಕುಲಪು ರೋಹಿತ’ ಆಲೂರು ವೆಂಕಟರಾಯರು ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವ ಆಚರಿ ಸಿದ್ದರು. ಆ ನಂತರ ಪ್ರತಿವರ್ಷವೂ ರಾಜ್ಯೋತ್ಸವದ ದಿನದಂದು ನಾಡಿನಾ ದ್ಯಂತ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆ, ವಿಶೇಷ ಪೂಜೆ- ಪುನಸ್ಕಾರಗಳು ನಡೆಯುತ್ತಲೇ ಇವೆ. ಕನ್ನಡಿಗರು ಮತ್ತು ತಾಯಿ ಭುವನೇ ಶ್ವರಿ ನಡುವಿನ ಈ ನಂಟು 1956ರಲ್ಲಿ ಆರಂಭವಾದದ್ದಲ್ಲ. ಭುವನೇಶ್ವರಿಯು ಕನ್ನಡದ …

Read More »

ಕುಸುಮ ನಾನೂ ಕೂಡ ದರ್ಶನ್​ರ ದೊಡ್ಡ​ ಅಭಿಮಾನಿ

ಬೆಂಗಳೂರು: ಆರ್​.ಆರ್​ ನಗರ ಉಪಚುನಾವಣೆ ಕಣ ರಂಗೇರುತ್ತಿದ್ದು, ಮೂರು ಪಕ್ಷಗಳು ಜಿದ್ದಾಜಿದ್ದಿ ಪ್ರಚಾರ ನಡೆಸುತ್ತಿದ್ದಾರೆ. ನಿನ್ನೆ ಬಿಜೆಪಿ ಪರ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಪ್ರಚಾರ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್​ ಅಭ್ಯರ್ಥಿ ಕುಸುಮ ಪ್ರತಿಕ್ರಿಯಿಸಿದ್ದು, ನಾನೂ ಕೂಡ ದರ್ಶನ್​ರ ದೊಡ್ಡ​ ಅಭಿಮಾನಿ ಎಂದಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದೇ ರೀತಿ ದರ್ಶನ್ ಅವರೂ ಪ್ರಚಾರ ಮಾಡಿದ್ದಾರೆ. ಈ ಹಿಂದೆ …

Read More »

ಮುನಿರತ್ನ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ ದರ್ಶನ್ ಓರ್ವ ಸಿನಿಮಾ ನಟ ಯಾರು ಕರೆದರು ಬಂದು ಪ್ರಚಾರ ಮಾಡತಾರೆ

ಬೆಂಗಳೂರು: ಆರ್.ಆರ್.ನಗರ ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ನಾಯಕರ ಮಾತಿನ ಸಮರಕ್ಕೆ ಕಾರಣವಾಗಿದೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಯಾವತ್ತಿದ್ದರೂ ಬಿಜೆಪಿಗೆ ಮುಳ್ಳು. ಮುಂದಿನ ದಿನಗಳಲ್ಲಿ ಬಿಜೆಪಿಗೆ ಅನುಭವಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ನಾವು ಯಾವುದೇ ಆಮಿಷಗಳನ್ನು ಒಡ್ಡಿ ಮತ ಕೇಳುತ್ತಿಲ್ಲ. ವಿಶ್ವಾಸದಿಂದ ಕೇಳುತ್ತಿದ್ದೇವೆ. ಆದರೆ ಬಿಜೆಪಿಯವರು ಆರ್.ಆರ್. ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಕಂತೆ …

Read More »

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಗೆ ಸಿನಿಮಾ ಮಾಡೋಣ ಎಂಬುದಾಗಿ ನಂಬಿಸಿ 1.6 ಕೋಟಿಗೆ ಟೋಫಿ ಹಾಕಿ ಪರಾರಿ

ಬೆಂಗಳೂರು : ತಾವು ಸಿನಿಮಾವೊಂದನ್ನು ಮಾಡುತ್ತಿದ್ದೇವೆ. ನೀವೇ ನಿರ್ದೇಶನ ಮಾಡಿ ಎಂಬುದಾಗಿ ಖ್ಯಾತ ನಿರ್ದೇಶಕ ಎಸ್ ನಾರಾಯಣ್ ಅವರನ್ನು ಐವರು ನಂಬಿಸಿದ್ದಾರೆ. ಅದರಂತೆಯೇ ಶೂಟಿಂಗ್ ಕೂಡ ಐದು ದಿನ ನಡೆಸಿದ್ದಾರೆ. ಕೊನೆಗೆ ಇದ್ದಕ್ಕಿದ್ದಂತೆ ಹಣದ ಅಡಚಣೆಯ ನೆಪವೊಡ್ಡಿ ಸಿನಿಮಾ ಶೂಟಿಂಗ್ ನಿಲ್ಲಿಸಿದ್ದಾರೆ. ಸಿನಿಮಾ ಶೂಟಿಂಗ್ ನಿಂತರ ನಂತ್ರ, ಹೊಸ ಆಟ ಶುರುಮಾಡಿದಂತ ಐವರು ಖದೀಮರು, ತಮ್ಮ ಸೈಟ್ ಮಾರಾಟ ಮಾಡಿಯಾದರೂ ಬೇಗ ಶೂಟಿಂಗ್ ಶುರು ಮಾಡೋಣ ಅಂತ ನಾರಾಯಣ್ ನಂಬಿಸಿದ್ದಾರೆ. …

Read More »

ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಎದುರೇ ವಾಲ್ಮೀಕಿ ಸಮುದಾಯ ಮೀಸಲಾತಿಗಾಗಿ ಮತ್ತೊಮ್ಮೆ ಸರ್ಕಾರದ ಗಮನ ಸೆಳೆದಿದೆ. ಬೆಂಗಳೂರಿನ ಶಾಸಕರ ಭವನದ ವಾಲ್ಮೀಕಿ ತಪೋವನದಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಸಚಿವ ಶ್ರೀರಾಮುಲು ಹಾಗೂ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ಪುಷ್ಪಾರ್ಚನೆ ಮೂಲಕ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ವಾಲ್ಮೀಕಿ‌ ಪ್ರತಿಮೆಯ ಎದುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ವಾಲ್ಮೀಕಿ ಜ್ಯೋತಿಯನ್ನು ಸಚಿವ ಶ್ರೀರಾಮುಲು ಅವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶ್ರೀರಾಮುಲು ಸಮ್ಮುಖದಲ್ಲೇ …

Read More »

ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಸೂಚನೆ

ಬೆಂಗಳೂರು- ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು ರಾಜ್ಯೋತ್ಸವ ಕಾರ್ಯಕ್ರಮವನ್ನು …

Read More »

ಯುವಕನ ಬರ್ಬರ ಕೊಲೆ

ಬೆಂಗಳೂರು: ಜಿಲ್ಲೆಯ ಆನೇಕಲ್ ತಾಲೂಕಿನ ಶೆಟ್ಟಿಹಳ್ಳಿಯ ವೇರ್‌ಹೌಸ್ ಬಳಿ ಯುವಕನ ಬರ್ಬರ ಕೊಲೆಯಾಗಿರುವ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 25 ವರ್ಷದ V.Y. ವಿನುತ್ ಎಂಬಾತನನ್ನು ಹತ್ಯೆ ಮಾಡಲಾಗಿದೆ. ಕೆಲಸಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ ಎಸಗಲಾಗಿದ್ದು ಹಳೇ ದ್ವೇಷದ ಹಿನ್ನೆಲೆಯಲ್ಲಿ ವಿನುತ್ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅತ್ತಿಬೆಲೆ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ವಿನುತ್ ಬೆಸ್ತಮಾನಹಳ್ಳಿ ನಿವಾಸಿ ಎಂದು ಹೇಳಲಾಗಿದೆ. ಜಾಕಿ ಕಂಪನಿಯಲ್ಲಿ ಕೆಲಸ …

Read More »