ಬೆಂಗಳೂರು: 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಹೈಕೋರ್ಟ್ ಏಕಸದಸ್ಯಪೀಠ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮಾರ್ಚ್ 13ರಿಂದ 5 ಹಾಗೂ 8ನೇ ತರಗತಿಗಳಿಗೆ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ. 5 ಹಾಗೂ 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ ಪರೀಕ್ಷೆಗೆ ತಡೆ ನೀಡಿದೆ. ನಿಯಮಗಳಿಗೆ ಅನುಸಾರವಾಗಿ …
Read More »ಸಂಸದೆ ಸುಮಲತಾ ಇಂದು ಬಿಜೆಪಿಗೆ, ಬಿಜೆಪಿ ತೊರೆದ ಪುಟ್ಟಣ್ಣ ಕಾಂಗ್ರೆಸ್‌ಗೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ಪಕ್ಷಾಂತರ ಪರ್ವ ಜೋರಾಗಿ ಸದ್ದು ಮಾಡುತ್ತಿದೆ. ಆಡಳಿತಾರೂಢ ಬಿಜೆಪಿಗೆ ಈ ವಿಚಾರ ಈಗ ತೀವ್ರ ಪ್ರಮಾಣದಲ್ಲಿ ಒಳ ಏಟು ನೀಡಲಾರಂಭಿಸಿದ್ದು, ಪ್ರಬಲ “ವಿಕೆಟ್’ಗಳು ಉರುಳದಂತೆ ನೋಡಿಕೊಳ್ಳುವುದು ಕೇಸರಿ ಪಡೆಗೆ ಸವಾಲಾಗಿದೆ. ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯುತ್ತಿರುವಾಗಲೇ ಬಿಜೆಪಿಯಿಂದ ವಲಸೆ ವಿಚಾರ ಸುದ್ದಿಯಾಗುತ್ತಿದೆ. ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿರುವ ಸಚಿವ ನಾರಾಯಣ ಗೌಡ ಜತೆಗೆ ಇನ್ನೂ ಮೂವರು …
Read More »ಹಾಜರಾತಿ ಕೊರತೆ : 4,492 ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ!
ಬೆಂಗಳೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಾಜರಾತಿ ಕೊರತೆಯಿಂದಾಗಿ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳಿಂದ 4,492 ವಿದ್ಯಾರ್ಥಿಗಳು ಹೊರಗುಳಿಯಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ವರ್ಷದಿಂದ ಶೇಕಡಾ 75 ರಷ್ಟು ಕಡ್ಡಾಯ ಹಾಜರಾತಿ ನಿಯಮವನ್ನು ಮರಳಿ ತಂದಿದೆ. ಶೇ.75ರಷ್ಟು ಹಾಜರಾತಿ ಕಾಯ್ದುಕೊಳ್ಳದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವುದಿಲ್ಲ. ಪಿಯು ಶಿಕ್ಷಣ ಇಲಾಖೆಯು ಈ ಬಗ್ಗೆ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಿತ್ತು ಮತ್ತು ಹಾಜರಾತಿ ಕೊರತೆಯ …
Read More »ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ
ಬೆಂಗಳೂರು: ವೇತನ ಭತ್ಯೆ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘ ಮಾ.1ರಿಂದ ಅನಿರ್ಧಿಷ್ಟಾವಧಿಯ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರದ ವೇಳೆ ಉಪವಾಸ, ಧರಣಿ ಸತ್ಯಾಗ್ರಹ ಹಾಗೂ ಘೋಷಣೆ ಕೂಗುವುದನ್ನು ನಿರ್ಬಂಧಿಸಲಾಗಿದೆ. ಮುಷ್ಕರ ಯಶಸ್ವಿಗೊಳಿಸುವ ಸಂಬಂಧ ಸಂಘ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ. ಶಾಂತಿಯುತ ಹೋರಾಟಕ್ಕೆ ಸೂಚನೆ ನೀಡಲಾಗಿದೆ. ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಯಾವುದೇ ಜನಪ್ರತಿನಿಧಿಗಳನ್ನು ಟೀಕಿಸದಂತೆ ತಾಕೀತು ಮಾಡಿದೆ. ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತುರ್ತು …
Read More »ರಾಜಕೀಯ ರಿ ಎಂಟ್ರಿ’ ಮುಂದೂಡಿದ ನಟ ಅನಂತ್ ನಾಗ್ : ‘ಬಿಜೆಪಿ’ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರು
ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಕಾರಣಾಂತರದಿಂದ ಬಿಜೆಪಿ ಸೇರ್ಪಡೆಯನ್ನು ಸದ್ಯಕ್ಕೆ ಮುಂದೂಡಿದ್ದಾರೆ. ಹೌದು. ಸ್ಯಾಂಡಲ್ ವುಡ್ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ …
Read More »ಕಾವೇರಿದ ಕಣ; ಮೂರು ಪಕ್ಷಗಳಲ್ಲೂ ಬಿರುಸಿನ ರಾಜಕಾರಣ ಆರಂಭ
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಅಧಿವೇಶನದ ಮಧ್ಯೆಯೂ ರಾಜಕೀಯ ವಿದ್ಯಮಾನಗಳು ಬಿರುಸಾಗುತ್ತಿವೆ. ಕಳೆದ ವಾರ ಕರಾವಳಿ ಜಿಲ್ಲೆಯ ನಾಯಕರಿಗೆ ಟಾಸ್ಕ್ ನಿಗದಿ ಮಾಡಿ ತೆರಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 23ರಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜಧಾನಿಯ ನಾಯಕರಿಗೆ ರಾಜಕೀಯ ಪಾಠ ಮಾಡಲಿದ್ದಾರೆ. ಎರಡು ದಿನಗಳಿಂದ ರಾಜ್ಯದಲ್ಲಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ಪ್ರವಾಸ ಮುಗಿಸಿ ದಿಲ್ಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಅಮಿತ್ ಶಾ …
Read More »ಸರ್ಕಾರಿ ನೌಕರರು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವುದಕ್ಕೆ ಕರೆ ಕೊಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ
ಬೆಂಗಳೂರು: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತರುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲು ಕರೆ ನೀಡಿದೆ. ಇಂದು ನಡೆದ ಸರ್ಕಾರಿ ನೌಕರರ ಸಂಘದ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಿ …
Read More »ಏ.1ರಿಂದಲೇ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ
ಬೆಂಗಳೂರು: ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ …
Read More »ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಟಿಕೆಟ್ ಬೇಕಾ?; ಇ-ಮೇಲ್ ಮಾಡಿ
ಬೆಂಗಳೂರು, ಫೆಬ್ರವರಿ 19; ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವಜನಾರ್ದನ ರೆಡ್ಡಿಈ ಬಾರಿಯ ಚುನಾವಣೆಗೆ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ. ಹಲವು ಮುಖಂಡರು ಸಹ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಜನಾರ್ದನ ರೆಡ್ಡಿ ಪಕ್ಷದ ಟಿಕೆಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಸಹ ಅವರು ಬಿಡುಗಡೆ …
Read More »ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ!
ಕೆಲವು ದಿನಗಳ ಹಿಂದೆ ರಕ್ತದಾನ ಶಿಬಿರದಲ್ಲಿ ಬಿಜೆಪಿಯ ಶಾಸಕರು, ಸಂಸದರೊಂದಿಗೆ ವೇದಿಕೆ ಹಂಚಿಕೊಂಡು ಸುದ್ದಿಯಾಗಿದ್ದ ನಗರದ ಕುಖ್ಯಾತ ರೌಡಿ ಶೀಟರ್ ಸೈಲೆಂಟ್ ಸುನೀಲ ಮತ್ತೊಮ್ಮೆ ಸುದ್ದಿಯಲ್ಲಿದ್ದಾನೆ. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ದೇವಾಲಯಗಳಲ್ಲಿ ಭಕ್ತರಿಗೆ ಸೈಲೆಂಟ್ ಸುನಿಲನ ಕಡೆಯಿಂದ ಲಡ್ಡು ವಿತರಣೆ ಜೋರಾಗಿ ನಡೆದಿದೆ. ಸದ್ಯ ರೌಡಿಸಂ ಬಿಟ್ಟಿರುವುದಾಗಿ ಹೇಳುತ್ತಲೇ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವ ಸೈಲೆಂಟ್ ಸುನೀಲ ಭಕ್ತರಿಗೆ ಲಡ್ಡು ಪ್ರಸಾದ ಹಂಚಿದ್ದಾನೆ. ಲಡ್ಡು ಪ್ರಸಾದದ ಕವರ್ ಮೇಲೆ ಸೈಲೆಂಟ್ ಸುನೀಲನ …
Read More »