ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹದೇವಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ, ಅಂಜಲಿ, ದೀಪಕ್, ಪ್ರೇಮನಾಥ್, ಟೈಸನ್, ವಿನೋದ್, ಪ್ರಕಾಶ್, ಈಶ್ವರಿ ಎಂಬುವವರನ್ನು ಬಂಧಿಸಿದ್ದಾರೆ. ಪೈ ಲೇಔಟ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಂಧಿತರು ಶ್ರೀಮಂತರನ್ನು ಟಾರ್ಗೇಟ್ ಮಾಡಿ, ಪೈ ಲೇಔಟ್ ಗೆ ಕರೆತರುತ್ತಿದರು. ಅಲ್ಲಿಗೆ ಬಂದ ಬಳಿಕ ವ್ಯಕ್ತಿ ಯುವತಿ ಜೊತೆ ಇದ್ದಾಗ ಯುವತಿಯ ಪತಿ ಹಾಗೂ ಸ್ನೇಹಿತರೆಂದು ದಾಳಿ ಮಾಡಿ …
Read More »ಮಳೆ ಪರಿಹಾರ ವಿತರಣೆಯಲ್ಲಿ ಯಡವಟ್ಟು ಮಾಡಿದ ಬಿಬಿಎಂಪಿ ಅಧಿಕಾರಿಗಳು
ಬೆಂಗಳೂರು, ಅ.27- ಮಳೆ ಅನಾಹುತಕ್ಕೆ ಕಾರಣವಾಗುವ ಒತ್ತುವರಿಯನ್ನು ನಿರ್ದಾಕ್ಷಿಣ್ಯ ವಾಗಿ ತೆರವು ಮಾಡಲಾಗುವುದು ಎಂದು ಸಿಎಂ ಬೊಬ್ಬೆ ಹೊಡೆದಿದ್ದಾರೆ. ಆದರೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ಒತ್ತುವರಿ ಮಾಡಿಕೊಂಡಿರುವ ಮನೆಗಳಿಗೆ ಪರಿಹಾರ ನೀಡಿ ಯಡವಟ್ಟು ಮಾಡಿದ್ದಾರೆ. ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಹೊಸಕೆರೆ ಹಳ್ಳಿಯ ದತ್ತಾತ್ರೇಯ ಬಡಾವಣೆ ಮತ್ತಿತರ ಪ್ರದೇಶಗಳಲ್ಲಿ ಭಾರೀ ಅನಾಹುತ ಸಂಭವಿಸಿತ್ತು. ಮಳೆ ಸಂತ್ರಸ್ತರಿಗೆ ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ಯೋಜನೆಯಡಿ ಪರಿಹಾರ ಧನ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರು. ಇದೇ …
Read More »ಬೆಂಗಳೂರು ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ
ಬೆಂಗಳೂರು,ಅ.27- ಚುನಾವಣಾ ಬಂದೋಬಸ್ತ್‍ಗಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ ಆಗಮಿಸಿದೆ. ನಿನ್ನೆ ನಗರಕ್ಕೆ ಆಗಮಿಸಿರುವ ಕೇರಳ ರಾಜ್ಯದ ಸಶಸ್ತ್ರ ಮೀಸಲು ಪಡೆ(ಕೆಎಸ್‍ಎಪಿ) ಇಂದು ಉತ್ತರ ವಿಭಾಗದ ಜಾಲಹಳ್ಳಿ, ಆರ್‍ಎಂಸಿಯಾರ್ಡ್ ಮುಂತಾದ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಪಥಸಂಚಲನ ನಡೆಸಲಿದೆ. ಈಗಾಗಲೇ ಈ ವಿಭಾಗಕ್ಕೆ ಸಿಐಎಸ್‍ಎಫ್ ಒಂದು ಕಂಪನಿ ಬಂದಿದ್ದು, ಅದನ್ನು ಚುನಾವಣಾ ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ. ಉತ್ತರ ವಿಭಾಗದ 8 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮತದಾನ …
Read More »ಅಣ್ಣಾವ್ರ ಕೈ ಸ್ಪರ್ಶಿಸಿದ್ದೇ ನನ್ನ ಭಾಗ್ಯ: ನಟ ಗಣೇಶ್ ರಾವ್ ಕೇಸರ್ಕರ್
ನಟನೆಯ ವ್ಯಾಮೋಹಕ್ಕೆ ಸಿಲುಕಿ ಕೈಯಲ್ಲಿ ಸ್ವಂತ ಕೆಲಸವಿದ್ರೂ ಕಲಾ ಸರಸ್ವತಿಯ ಆರಾಧನೆಗೆ ಬಣ್ಣದ ಲೋಕಕ್ಕೆ ಕಾಲಿಟ್ಟು ಚಿಕ್ಕ ಚಿಕ್ಕ ಪಾತ್ರಗಳಲ್ಲೇ ಖುಷಿಪಡುತ್ತಾ ಇಂದು ಸಾಕಷ್ಟು ಹೆಸರು ಗಳಿಸಿರುವ ನಟ ಗಣೇಶ್ ರಾವ್ ಕೇಸರ್ಕರ್. ತಮ್ಮ 20 ವರ್ಷಗಳ ಕಿರುತೆರೆ, ಹಿರಿತೆರೆ ಜರ್ನಿಯ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದಾರೆ. * ನಿಮ್ಮ ಹಿನ್ನೆಲೆ ಬಗ್ಗೆ ಹೇಳಿ.. ಮೂಲತಃ ಕೊಳ್ಳೆಗಾಲದವನು. ನಮ್ಮ ತಂದೆ ಮಿಲಿಟರಿ ಅಧಿಕಾರಿ. ನಾನು ಡಿಪ್ಲೋಮ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದೇನೆ. …
Read More »ಕಾರ್, ಬೈಕ್‍ನಲ್ಲಿ ಒಬ್ಬರೇ ಇದ್ದರೂ ಮಾಸ್ಕ್ ಕಡ್ಡಾಯ
ಬೆಂಗಳೂರು: ಕಾರಿನಲ್ಲಿ ಅಥವಾ ಬೈಕ್‍ನಲ್ಲಿ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ. ಒಬ್ಬರೇ ಇದ್ದರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಲೇಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಕಾರಿನಲ್ಲಿ ಒಬ್ಬರೇ ಇದ್ದೇವೆಂದು ಮೈಮರೆತು ಕುಳಿತರೆ ದಂಡ ಬೀಳುವುದು ಪಕ್ಕಾ. ಬೈಕಿನಲ್ಲಿ ಸಹ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಮಾಸ್ಕ್ ಧರಿಸುವ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸ್ಪಷ್ಟ ಆದೇಶ ಹೊರಡಿಸಿದ್ದು, ತಿನ್ನುವಾಗ, ಕುಡಿಯುವಾಗ, ಈಜುವಾಗ ಮಾತ್ರ ಮಾಸ್ಕ್ …
Read More »ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .
ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು . ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು …
Read More »ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,
ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …
Read More »ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗುತ್ತಿದಂತೆ ಅಕ್ರಮ ಹಣ ಸಾಗಾಟದ
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗುತ್ತಿದಂತೆ ಅಕ್ರಮ ಹಣ ಸಾಗಾಟದ ಮೇಲೆ ಪೊಲೀಸರು ಕಣ್ಗಾವಲು ವಹಿಸಿದ್ದಾರೆ. ಮುತ್ತುರಾಯನಗರದ ಪೊಲೀಸ್ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ವಾಹನ ತಪಾಸಣೆ ವೇಳೆ ದ್ವಿಚಕ್ರ ವಾಹನದಲ್ಲಿ 7 ಲಕ್ಷ ರೂ. ಪತ್ತೆಯಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ತಂಡ ಭೇಟಿ ಕೊಟ್ಟು ಮಹಜರ್ ಮಾಡಿ ಜಪ್ತಿ ಮಾಡಿರುವುದಾಗಿ ಪಶ್ಚಿಮ ವಿಭಾಗ ಡಿಸಿಪಿ ಡಾ. ಸಂಜೀವ್ ಎಂ. ಪಾಟೀಲ್ ತಿಳಿಸಿದ್ದಾರೆ. ಸ್ಕೂಟರ್ ಸವಾರರಾದ ರಮೇಶ್ ಮತ್ತು ಮಾಣಿಕ್‌ಚಂದ್ …
Read More »ರಾಜ್ಯದಲ್ಲೇ ಮೊದಲು ಕೊರೋನಾ ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್
ಬೆಂಗಳೂರು: ವಿಶ್ವಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೊನಾ ಸೋಂಕಿಗೆ ಲಸಿಕೆ ಕಂಡುಹಿಡಿಯಲು ಹಲವಾರು ಸಂಶೋಧನೆಗಳು ನಡೆಯುತ್ತಿದ್ದು, 2021ರ ಆರಂಭದಲಿ ರಾಜ್ಯದಲ್ಲೇ ಮೊದಲು ಲಸಿಕೆ ಸಿದ್ಧವಾಗುವ ಸಾಧ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಸ್ ಫರ್ಡ್ ವಿವಿಯ ಆಸ್ಟ್ರಾಜನಿಕಾ ಸಂಸ್ಥೆಯ ಎಂಡಿ ಗಗನ್ ದೀಪ್ ಜೊತೆ ಇಂದು ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೊರೊನಾ ಲಸಿಕೆ ಬಗ್ಗೆ ಅವರು ಹಲವು ಮಹತ್ವದ ಮಾಹಿತಿ ನೀಡಿದರು ಎಂದರು. …
Read More »25 ವರ್ಷ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಆಡಳಿತ
ಬೆಂಗಳೂರು: ಹಾಸನ-ಮಂಡ್ಯ ಎರಡು ಕಣ್ಣುಗಳಿದ್ದಂತೆ ಎಂದು ಹೇಳುತ್ತಿದ್ದವರಿಂದ ಆ ಭಾಗ ಅಭಿವೃದ್ಧಿಯಾಗಲಿಲ್ಲ. ಮಂಡ್ಯ ಹಾಗೂ ಹಾಸನಗಳ ಅಭಿವೃದ್ಧಿಗೆ ಯಡಿಯೂರಪ್ಪ ಅವರೇ ಬರಬೇಕಾಯ್ತು. ಅವರು ಸಿಎಂ ಆದ್ಮೇಲೆ ಎರಡೂ ಜಿಲ್ಲೆಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದರು ಎಂದು ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಪರೋಕ್ಷವಾಗಿ ಜೆಡಿಎಸ್ ನಾಯಕರ ಮೇಲೆ ವಾಗ್ದಾಳಿ ಮಾಡಿದರು. ಆರ್.ಆರ್. ನಗರದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಬಿಜೆಪಿ ಅಭ್ಯರ್ಥಿ ಮುನಿರತ್ನ …
Read More »