ಬೆಂಗಳೂರು : ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆಯಲ್ಲಿ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಎಲ್ಲಾ ಸ್ಥಾನಗಳಲ್ಲಿಯೂ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಕ್ರಮವಾಗಿ ಚುನಾವಣೆ ನಡೆಯುತ್ತಿದೆ ಎಂದು ಬಹಿಷ್ಕಾರ ಮಾಡಿದ್ದರು. ಇದರಿಂದಾಗಿ ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್‌ಗೆ ಹಿನ್ನಡೆಯಾಗಿದೆ. ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರಲು ಈ ಚುನಾವಣೆ ಸಹಕಾರಿಯಾಗಿದೆ.ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಕ್ಷೇತರ ಶಾಸಕ ಶರತ್ …
Read More »ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದ ನಟಿ ಅಮೂಲ್ಯ
ಬೆಂಗಳೂರು: ನಟಿ ಅಮೂಲ್ಯ ಸೇರಿದಂತೆ ಅವರ ಮಾವ ಮಾಜಿ ಕಾರ್ಪೋರೇಟರ್ ಜಿ.ಎಚ್.ರಾಮಚಂದ್ರ ಹಾಗೂ ಪತಿ ಜಗದೀಶ್ ಅವರು ಬಿಜೆಪಿ ರಾಜ್ಯ ಉಸ್ತುವಾರಿ ಸಿ.ಟಿ.ರವಿ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ಅಮೂಲ್ಯ ಬಿಜೆಪಿ ಸೇರ್ಪಡೆ ವೇಳೆ ಆರ್ ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿರತ್ನ ಕೂಡಾ ಹಾಜರಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಆರ್ ಆರ್ ನಗರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದ ಜಿ.ಎಚ್.ರಾಮಚಂದ್ರ ಅವರ ಪರ ಸೊಸೆ ಅಮೂಲ್ಯ …
Read More »ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?:H.D.K.
ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ …
Read More »ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನ:ಸಿ.ಟಿ.ರವಿ
ಬೆಂಗಳೂರು, ಅ.18-ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನದ ಪರಮಾವಧಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪದ ಮೇಲೆ ತಿಹಾರ್ ಜೈಲಿಗೆ ಹೋಗಿ ಬಂದವರು, ಜನರಿಂದ ಹಾರ, ತುರಾಯಿ ಹಾಕಿಸಿಕೊಂಡು ಮೆರವಣಿಗೆ ಮಾಡುತ್ತಿದ್ದಾರೆ. ಅಂತಹವರು ಕೂಡ ನಾನು ಬಂಡೆ ಎಂದು ಕೊಚ್ಚಿಕೊಳ್ಳುವುದು ಕೂಡ ಒಂದು ರೀತಿ ಭಂಡತನವೇ ಎಂದು …
Read More »ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ:ಕಟೀಲ್
ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್‍ಗಳಿವೆ ಒಂದೊಂದು ಡೈನಾಮೈಟ್ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನಲೆ ಬಿಜೆಪಿ ಸೇರ್ಪಡೆ ಕಾರ್ಯಕ್ರಮವನ್ನು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಕನಕಪುರದಿಂದ ಬಂದು ಇಲ್ಲಿ ಗೂಂಡಾಗಿರಿ ರಾಜಕಾರಣ …
Read More »ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ಬೆಂಗಳೂರು: ಭಾರೀ ಮಳೆ, ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ತತ್ತರಿಸಿದ್ದು, ಅಕ್ಟೋಬರ್ 21ರಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ವಾಯುಭಾರ ಕುಸಿತದಿಂದಾಗಿ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದ್ದು, ಜೊತೆಗೆ ಮಹಾರಾಷ್ಟ್ರದ ಜಲಾಶಯಗಳಿಂದ ಭೀಮಾ ಹಾಗೂ ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಯ ಹಲವಾರು ಗ್ರಾಮಗಳು ಜಲಾವೃತಗೊಂಡಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ …
Read More »ನಾಳೆಸಿದ್ದರಾಮಯ್ಯ ಬೆಳಗಾವಿ ಗೆ
ಬೆಂಗಳೂರು, ಅ.18- ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಾಳೆಯಿಂದ ಪ್ರವಾಹ ಪೀಡಿತ ಬಾದಾಮಿ ಕ್ಷೇತ್ರದಲ್ಲಿ ಎರಡು ದಿನ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಮಾನದಲ್ಲಿ ತೆರಳುವ ಸಿದ್ದರಾಮಯ್ಯ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ತಲುಪಿ ನಂತರ ತಮ್ಮ ಸ್ವಕ್ಷೇತ್ರವಾದ ಬಾಗಲಕೋಟೆ ಜಿಲ್ಲೆಯ ಬಾದಾಮಿಗೆ 12.30ಕ್ಕೆ ತಲುಪಲಿದ್ದಾರೆ. ಬಾದಾಮಿಯಲ್ಲಿ ಕೆಡಿಪಿ ಸಭೆ ನಡೆಸಿ ಅಂದು ಅಲ್ಲೆ ವಾಸ್ತವ್ಯ ಹೂಡಲಿದ್ದಾರೆ. ಮಾರನೇ ದಿನ ಕ್ಷೇತ್ರದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ …
Read More »ಹೋಮ್‍ಕ್ವಾರಂಟೈನ್ ನಲ್ಲಿ ಸಚಿವ ಸುರೇಶ್‍ಕುಮಾರ್
ಬೆಂಗಳೂರು, ಅ.18- ಕಳೆದ 13 ದಿನಗಳಿಂದ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್‍ಕುಮಾರ್ ಅವರ ಆರೋಗ್ಯ ಸುಧಾರಿಸಿದ್ದು, ಹೋಮ್‍ಕ್ವಾರಂಟೈನ್ ನಿಗಾ ವ್ಯವಸ್ಥೆಯಲ್ಲಿದ್ದಾರೆ. ಈ ಬಗ್ಗೆ ಖುದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಅ.5ರಂದು ನನಗೆ ಕೊರೋನಾ ಸೋಂಕು ತಗುಲಿದೆ ಎಂದು ತಿಳಿದ ನಂತರ ಬಿಬಿಎಂಪಿ ವೈದ್ಯರ ತಂಡದ ಸಲಹೆಯಂತೆ ನಾನು ಮನೆಯಲ್ಲಿಯೇ ಹೋಂ ಐಸೋಲೇಷನ್ ನಲ್ಲಿದ್ದು. ವೈದ್ಯರು ಸೂಚಿಸಿದ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದು. ಆದರೆ, ಅ.10 …
Read More »ಬೆಂಗ್ಳೂರು ವಿಮಾನ ನಿಲ್ದಾಣದ ಗೋದಾಮಿನಿಂದಲೇ 2.5 ಕೆಜಿ ಚಿನ್ನ ನಾಪತ್ತೆ
ಬೆಂಗಳೂರು: ಕೇರಳ ಚಿನ್ನ ಸ್ಮಗ್ಲಿಂಗ್‌ಗೆ ದಾವೂದ್ ಲಿಂಕ್ ಇದೆ ಎಂಬ ಸ್ಫೋಟಕ ವಿಚಾರ ತನಿಖೆಯ ವೇಳೆ ಬಯಲಾಗುತ್ತಿದ್ದಂತೆ ಇತ್ತ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಚಿನ್ನವೇ ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಲಾಗಿದ್ದ 2.5 ಕೆಜಿ ಚಿನ್ನ ನಾಪತ್ತೆಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸ್ಟಮ್ಸ್ ಇಲಾಖೆಯ ಜಂಟಿ ಆಯ್ತುಕ ಎಂ. ಜೆ. ಚೇತನ್ …
Read More »ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ
ಬೆಂಗಳೂರು: ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ನಾಯಂಡಹಳ್ಳಿಯ ವಿಶ್ವಪ್ರಿಯಾ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಹಾಗೂ ಇತರರು ವಾಹನದ ಗಾಜು ಒಡೆದು ಹೊರಬಂದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು. ಸದ್ಯ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅನ್ನೋ ಮಾಹಿತಿ ಲಾಭ್ಯವಾಗಿದೆ. ಕಾರಿನಲ್ಲಿ …
Read More »