Breaking News

ಬೆಂಗಳೂರು

ಕೋವಿಡ್‌ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಯಾವುದಕ್ಕೆ ಎಷ್ಟು?

ಬೆಂಗಳೂರು: ಕೋವಿಡ್‌ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಹೊಸ ದರವನ್ನು ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಯಾವುದಕ್ಕೆ ಎಷ್ಟು? ಸರ್ಕಾರದಿಂದ ಗಂಟಲ ದ್ರವ ಸಂಗ್ರಹಿಸಿ ಖಾಸಗಿ ಲ್ಯಾಬಿಗೆ ಪರೀಕ್ಷೆಗೆ ಕಳುಹಿಸಿದರೆ – 400 ರೂ. ಆರ್ ಟಿ ಪಿಸಿಆರ್ ಸರ್ಕಾರದಿಂದ ಖಾಸಗಿ ಲ್ಯಾಬ್ ಗೆ ರವಾನೆ ಮಾಡಿದರೆ – 800 ರೂ. ಖಾಸಗಿಯಾಗಿ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಕೊಂಡರೆ – 1,200 ರೂ. ಖಾಸಗಿ ಲ್ಯಾಬ್ ನವರು ಮನೆಯಿಂದ …

Read More »

ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು.

ಬೆಂಗಳೂರು: ಇಂದು ಯುವಸಾಮ್ರಾಟ್ ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು. ಆದ್ರೆ ಇವತ್ತು ಚಿರು ಸರ್ಜಾ ನಮ್ಮೊಂದಿಗಿಲ್ಲ ಅನ್ನೋ ನೋವಿನಲ್ಲೇ ಇಂದು ಸರ್ಜಾ ಕುಟುಂಬದವರು ಹಾಗೂ ಅವರ ಅಭಿಮಾನಿ ಬಳಗವಿದೆ.ಚಿರು ಕುಡಿಯನ್ನು ಬರಮಾಡಿಕೊಳ್ಳಲು ಕಾತುರದಿಂದ ಎದುರು ನೋಡ್ತಿದ್ದಾರೆ. ಧ್ರುವ ಸರ್ಜಾ ಬೃಂದಾವನದಲ್ಲಿರುವ ಚಿರು ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಇಷ್ಟೆಲ್ಲಾ ಕಾರ್ಯಕ್ರಮಗಳ ಮಧ್ಯೆ ಸಂತೋಷ್ ಚಿತ್ರಮಂದಿರದಲ್ಲಿ ರೀ-ರಿಲೀಸ್ ಆಗಿರುವ ಶಿವಾರ್ಜುನ್ ಚಿತ್ರವನ್ನು ಧ್ರುವ ನೋಡಲಿದ್ದು, ಅಭಿಮಾನಿಗಳ ಜೊತೆಗೆ …

Read More »

ನಿಮಗೆ ಕನ್ನಡಿಗರು ಎಂದ್ರೆ ಇಷ್ಟವಿಲ್ವಾ? ಅಥವಾ ನಮ್ಮ ಯಡಿಯೂರಪ್ಪ ಎಂದ್ರೆ ಇಷ್ಟವಿಲ್ವಾ? ಎಂದು ಟ್ವೀಟ್ ಮಾಡುವ ಮೂಲಕ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ

ಬೆಂಗಳೂರು: ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಆದ್ರೆ, ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇದರಿಂದ ಆಕ್ರೋಶಗಳ ವ್ಯಕ್ತವಾಗತ್ತಿವೆ. ಅದರಲ್ಲೂ ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರವಾಹದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಬಗ್ಗೆ …

Read More »

ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- 12 ಜಿಲ್ಲಾಧಿಕಾರಿಗಳಿಗೆ CM ಸೂಚನೆ

ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ. 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ …

Read More »

ಕಾರ್ಕಳದ ಕೊಲೆಗೆ ರಿವೆಂಜಾ? ಡ್ರಗ್ಸ್​ ವಿಚಾರವಾಗಿ ಹತ್ಯೆಯಾ? -ಮನೀಷ್​ ಕೊಲೆಗೆ ಕಾರಣವೇನು?

ಬೆಂಗಳೂರು: ಬಾರ್​ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪರಾರಿಯಾದ ಸಿಸಿಟಿವಿ ದೃಶ್ಯಾವಳಿ ದೊರೆತಿದೆ. ಇದಲ್ಲದೆ, ಕೃತ್ಯಕ್ಕೆ ಬಳಸಲಾಗಿದ್ದ ಬೈಕ್‌ಗೆ ನಕಲಿ ನಂಬರ್ ಪ್ಲೇಟ್ ಸಹ ಅಳವಡಿಸಿರುವ ಅಂಶ ಬೆಳಕಿಗೆ ಬಂದಿದೆ. ಹಂತಕರು ಬೈಕ್‌ಗೆ KA 04 EA 1543 ನಂಬರ್ ಪ್ಲೇಟ್​ನ ಬಳಸಿದ್ದರು ಎಂದು ತಿಳಿದುಬಂದಿದೆ. ಪೊಲೀಸರಿಗೆ ಸಿಕ್ಕಿಬೀಳದಂತೆ ಫೇಕ್ ನಂಬರ್ ಪ್ಲೇಟ್​ ಬಳಸಲಾಗಿದೆಯಂತೆ.  ಇದು ಡ್ರಗ್ ವಿಚಾರವಾಗಿ ನಡೆದ ಕೊಲೆಯಾ? ಮನೀಷ್ ಶೆಟ್ಟಿ ಕೊಲೆಗೆ ಕಾರಣವೇನು …

Read More »

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲ್ವೆ ಟಿಕೆಟ್ ಕೌಂಟರ್ ನಾಳೆಯಿಂದ ಕಾರ್ಯಾರಂಭ, ಎಲ್ಲೆಲ್ಲಿ?

ಬೆಂಗಳೂರು: ರಾಜ್ಯದ ರೈಲು ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೇ ವಿಭಾಗವು ಹೆಚ್ಚುವರಿ ಟಿಕೆಟ್​ ಕಾಯ್ದಿರಿಸುವ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಿದೆ. ಇವೆಲ್ಲಾ ಕೇಂದ್ರಗಳು ನಾಳೆಯಿಂದ ಕಾರ್ಯಾರಂಭವಾಗಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರ, ಚಿಕ್ಕಬಾಣಾವರ, ಬಾಣಸವಾಡಿ, ಬೆಂಗಳೂರು ಪೂರ್ವ, ಕಾರ್ಮೆಲರಾಂ ಮತ್ತು ವೈಟ್​ಫೀಲ್ಡ್​ ರೈಲು ನಿಲ್ದಾಣಗಳಲ್ಲಿ ಈ ಹೆಚ್ಚುವರಿ ಕೌಂಟರ್​ಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಜೊತೆಗೆ, ಕುಪ್ಪಂ, ಪೆನುಕೊಂಡ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು ಮತ್ತು ಮದ್ದೂರು ರೈಲ್ವೇ ನಿಲ್ದಾಣಗಳಲ್ಲಿ ಸಹ ಈ ಕೇಂದ್ರಗಳನ್ನು ಕಾರ್ಯಾರಂಭಗೊಳಿಸಲಾಗುವುದು. ಅಕ್ಟೋಬರ್​ 20 ರಿಂದ ನವೆಂಬರ್ 30ರವರೆಗೆ …

Read More »

ಮನೀಷ್ ಶೆಟ್ಟಿ ಕೊಲೆ ಪ್ರಕರಣ: ಬಾರ್ ಮಾಲೀಕನ ಹತ್ಯೆಗೆ ನಡೆದಿತ್ತು ಭರ್ಜರಿ ಸ್ಕೆಚ್​!

ಬೆಂಗಳೂರು: ಬಾರ್ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳ ಪತ್ತೆಗೆ 9 ವಿಶೇಷ ತಂಡಗಳ ರಚನೆ ಮಾಡಲಾಗಿದೆ. ಘಟನಾ ಸ್ಥಳದ ಮಾಹಿತಿ ಆಧರಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ. ಜೊತೆಗೆ, ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ, ಸಿಸಿಬಿ ಮತ್ತು ಕೇಂದ್ರ ವಿಭಾಗ ಪೊಲೀಸರಿಂದ ಹಂತಕರಿಗೆ ಶೋಧ ನಡೆಸಲಾಗುತ್ತಿದೆ. ಇತ್ತ, ಮನೀಷ್ ಶೆಟ್ಟಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಹಾಗೂ ಬಂದೂಕು ಪತ್ತೆಯಾಗಿದೆ. …

Read More »

ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.

ಬೆಂಗಳೂರು,ಅ.15- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು …

Read More »

ರಾಜ್ಯಾದ್ಯಂತ   ಭಾರೀ ಮಳೆಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್:B.S.Y.

ಬೆಂಗಳೂರು:  ರಾಜ್ಯಾದ್ಯಂತ   ಭಾರೀ ಮಳೆಯಾಗುತ್ತಿರುವ ಹಿನ್ನೆಲೆ  ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೇನ್ಸ್ ಮೂಲಕ ಮಾಹಿತಿ ಪಡೆದುಕೊಳ್ಳುವುದಾಗಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು,  ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲು  ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಣ ಕೂಡ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಸ್ಥಿತಿ  ಸ್ಥಳಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೂ ಸೂಚನೆ ನೀಡಿದ್ದೇನೆ. ಅದರಂತೆ ಸಚಿವರು ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲಿದ್ದಾರೆ ಎಂದರು.

Read More »

ರಾಗಿಣಿಗೆ ಬೆನ್ನು ನೋವು- ಜೈಲಿನ ಆಸ್ಪತ್ರೆಯಲ್ಲಿ ರಾತ್ರಿ ಪೂರ್ತಿ ಚಿಕಿತ್ಸೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟಿ ರಾಗಿಣಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಹೀಗಾಗಿ ರಾತ್ರಿ ಪೂರ್ತಿ ಗೋಳಾಡಿದ್ದು, ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪರಪ್ಪನ ಅಗ್ರಹಾರದಲ್ಲಿರುವ ರಾಗಿಣಿ, ರಾತ್ರಿಯಿಂದ ಹೆಚ್ಚು ಬೆನ್ನು ನೋವು ಎಂದು ಜೈಲಧಿಕಾರಿಗಳ ಬಳಿ ಮನವಿ ಮಾಡಿದ್ದಾರೆ. ಅಲ್ಲದೆ ತುರ್ತಾಗಿ ನನ್ನನ್ನು ಆಸ್ಪತ್ರೆಗೆ ಸೇರಿಸಿ, ಆಗುತ್ತಿಲ್ಲ ಎಂದು ಗೋಳಾಡಿದ್ದಾರೆ. ನಂತರ ಜೈಲಿನ ಆಸ್ಪತ್ರೆಗೆ ಸೇರಿಸಲಾಗಿದ್ದು, ರಾತ್ರಿ ಪೂರ್ತಿ ಚಿಕಿತ್ಸೆ ಪಡೆದಿದ್ದಾರೆ. ಈ …

Read More »