ಬೆಳಗಾವಿ: ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮತ್ತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿದ್ದಾರೆ. ಈ ಉಭಯ ನಾಯಕರ ಭೇಟಿ ಅಚ್ಚರಿಗೆ ಕಾರಣವಾಗಿದ್ದು, ಮಹಾರಾಷ್ಟ್ರದಲ್ಲಿಯೂ ಆಪರೇಷನ್ ಕಮಲಕ್ಕೆ ಕಸರತ್ತು ನಡೆದಿದೆಯಾ? ಎಂಬ ಕುತೂಹಲ ಕೆರಳಿಸಿದೆ. ಕಳೆದ ತಿಂಗಳಷ್ಟೇ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಬಂದಿದ್ದ ರಮೇಶ ಜಾರಕಿಹೊಳಿ, ಕೋವಿಡ್ ಹಾವಳಿ, ಲಾಕ್ ಡೌನ್ ನಿಂದಾಗಿ ಸಚಿವ ಸ್ಥಾನ ದೊರೆತ ಬಳಿಕ ಫಡ್ನವಿಸ್ …
Read More »ಚಿರು ಮತ್ತೆ ಉದಯಿಸುತ್ತಿದ್ದಾರೆ,: ಚಿರಂಜೀವಿ ಸರ್ಜಾ ಪತ್ನಿ ಮೇಘನಾ
ಬೆಂಗಳೂರು: ಇತ್ತೀಚೆಗಷ್ಟೆ ದಿವಗಂತ ನಟ ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರ ಸೀಮಂತ ಶಾಸ್ತ್ರ ನಡೆದಿದೆ. ಇದರ ಬೆನ್ನಲ್ಲೆ ನಟಿ ಮೇಘನಾ ಚಿರು ಅಭಿಮಾನಿಗಳಿಗೆ ಗುಡ್‍ನ್ಯೂಸ್ ನೀಡಿದ್ದಾರೆ. ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ಶಿವಾರ್ಜುನ. ಈ ಸಿನಿಮಾ ಇದೇ ಅಕ್ಟೋಬರ್ 16ರಂದು ಶುಕ್ರವಾರ ಮತ್ತೆ ಬಿಡುಗಡೆಯಾಗುತ್ತಿದೆ. ಈ ಸಿಹಿಸುದ್ದಿಯನ್ನು ಚಿರು ಪತ್ನಿ ಮೇಘನಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅಕ್ಟೋಬರ್ 16ರಂದು ಶಿವಾರ್ಜುನ …
Read More »ನೆಲಮಂಗಲ ಬಳಿ ಕಂಟೈನರ್ ಲಾರಿ ಪಲ್ಟಿ- ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು: ಬೃಹತ್ ಕಂಟೈನರ್ ಲಾರಿ ಪಲ್ಟಿಯಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಸಂಭವಿಸಿರುವ ಘಟನೆ ನಗರದ ಹೊರವಲಯದ ನೆಲಮಂಗಲ ಬಳಿ ನಡೆದಿದೆ. ನೆಲಮಂಗಲ ತಾಲೂಕಿನ ಎಡೆಹಳ್ಳಿ ಸಮೀಪ ಬೃಹತ್ ಕಂಟೈನರ್ ಲಾರಿಯೊಂದು ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಸುಮಾರು 5 ಗಂಟೆ ಹೊತ್ತಿಗೆ ಕಂಟೈನರ್ ಪಲ್ಟಿಯಾಗಿದ್ದು, ಬರೋಬ್ಬರಿ 20 ನಿಮಿಷಗಳ ಕಾಲ ವಾಹನಗಳು ನಿಂತಲ್ಲೇ ನಿಂತಿದ್ದವು. ಇದರಿಂದಾಗಿ ನೂರಾರು …
Read More »ಕಾರು ಸ್ಟಾರ್ಟ್ ಮಾಡುವ ವೇಳೆ ಅಜಾಗರೂಕತೆಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ
ಬೆಂಗಳೂರು: ಕಾರು ಸ್ಟಾರ್ಟ್ ಮಾಡುವ ವೇಳೆ ಅಜಾಗರೂಕತೆಯಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ಬಿಇಎಲ್ ರಸ್ತೆಯಲ್ಲಿ ನಡೆದಿದೆ.ನಂದಿನಿ ರಾವ್ ಮೃತಪಟ್ಟ ಮಹಿಳೆ. ಇಂದು ಸಂಜೆ ನಂದಿನಿ ರಾವ್ ಡೋರ್ ಓಪನ್ ಮಾಡಿ ಹೊರಗಡೆಯಿಂದ ಟೊಯೊಟಾ ಕೊರೊಲಾ ಕಾರನ್ನು ಸ್ಟಾರ್ಟ್ ಮಾಡಿದ್ದಾರೆ. ಕಾರು ಸ್ಟಾರ್ಟ್ ಮಾಡುತ್ತಿದ್ದಂತೆ ರಿವರ್ಸ್ ಗೇರ್‌ನಲ್ಲಿದ್ದ ಕಾರು ಹಿಂದಕ್ಕೆ ಚಲಿಸಿದೆ. ಈ ವೇಳೆ ಕಾರಿನ ಡೋರ್ ಜೊತೆ ಅವರು ಮರಕ್ಕೆ ಸಿಕ್ಕಿ ಹಾಕಿಕೊಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರೂ ಅಷ್ಟರಲ್ಲಿ …
Read More »ಬೆಂಗಳೂರಿಗೆ ಬರುವಾಗ ದಾರಿ ಮಧ್ಯೆ ವಿಮಾನದಲ್ಲಿ ಯಶಸ್ವಿ ಹೆರಿಗೆ
ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಗರ್ಭಿಣಿಯೊಬ್ಬರು ವಿಮಾನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ವೇಳೆ ವಿಮಾನದಲ್ಲಿ ಪ್ರಸೂತಿ ತಜ್ಞೆ ಬೆಂಗಳೂರಿನ ಕ್ಲೌಡ್ ನೈನ್ ಆಸ್ಪತ್ರೆಯ ಡಾ. ಶೈಲಜಾ ವಲ್ಲಭನಿ ಪ್ರಯಾಣಿಸುತ್ತಿದ್ದರು. ಹೆರಿಗೆ ನೋವಾಗುತ್ತಿದ್ದಂತೆ ಇಂಡಿಗೋ ಸಿಬ್ಬಂದಿ ಸಹಕಾರದಿಂದ ಡಾ. ಶೈಲಜಾ ಅವರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಅಂಬುಲೆನ್ಸ್ ಸಿದ್ಧವಾಗಿ ನಿಂತಿತ್ತು. ಅಂಬುಲೆನ್ಸ್ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ ಈಗ ಪ್ರಯಾಣಿಕರು …
Read More »ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇತ್ತೀಚೆಗೆ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೆ ಕಾಡುತ್ತಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಕೇಂದ್ರ ಸಚಿವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ತಮಗೆ ಕೊರೊನಾ ಸೋಂಕು ತಗಲಿರುವ ಸುದ್ದಿಯನ್ನು ಸ್ವತಃ ಸಚಿವರೇ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ. ಸೋಂಕು ತಗುಲಿರುವ ವಿಚಾರವಾಗಿ …
Read More »ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ 1 ಲಕ್ಷ ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಒಟ್ಟು 48,658 ಮಂದಿಗೆ ಆಂಟಿಜನ್ ಟೆಸ್ಟ್ 55,690 ಮಂದಿಗೆ ಆರ್‌ಟಿಪಿಸಿಆರ್ ಮತ್ತು ಇತ್ಯಾದಿ ಪರೀಕ್ಷೆ ಸೇರಿದಂತೆ ಒಟ್ಟು 1,04,348 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಇಲ್ಲಿಯವರೆಗೆ ಒಟ್ಟು 55,24,302 ಕೊರೊನಾ ಪರೀಕ್ಷೆ ಮಾಡಲಾಗಿದೆ. ಇಂದು ರಾಜ್ಯದಲ್ಲಿ 10,947 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 9,832 ಮಂದಿ ಬಿಡುಗಡೆಯಾಗಿದ್ದಾರೆ. 113 ಮಂದಿ ಇಂದು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ …
Read More »ಉಪಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿ ಆರಂಭ
ಬೆಂಗಳೂರು: ಉಪಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ನಾಯಕರ ವಾಗ್ದಾಳಿ ಆರಂಭವಾಗಿದೆ. ಈಗ ಮಾಜಿ ಸಿಎಂ ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಟ್ವಿಟ್ಟರ್ ಮೂಲಕ ಕಿಡಿ ಕಾರಿದ್ದಾರೆ. ಇಂದು ಸಿದ್ದರಾಮಯ್ಯನ ವಿರುದ್ಧ ಗುಡುಗಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ …
Read More »ಮಾಸ್ಕ್ ದಂಡ 250 ರೂ.ಗೆ ಇಳಿಕೆ
ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಬಿಗಿ ನಿಯಮ ರೂಪಿಸಿ ಮಾಸ್ಕ್ ವಿಚಾರದಲ್ಲಿ ಸಾವಿರ ರೂ. ದಂಡ ವಿಧಿಸಿದ್ದ ಸರ್ಕಾರ, ಹೊರಡಿಸಿ ದಂಡದ ಮೊತ್ತವನ್ನು ನಗರದ ಪ್ರದೇಶದಲ್ಲಿ 1 ಸಾವಿರ ರೂಗಳಿಂದ 250 ರೂ.ಗೆ ಇಳಿಸಿದೆ. ಗ್ರಾಮೀಣ ಭಾಗದಲ್ಲಿ ನಿಗದಿಯಾಗಿದ್ದ 500 ರೂ. ದಂಡ ಈಗ 100 ರೂ.ಗೆ ಇಳಿಕೆಯಾಗಿದೆ.ಮಾಸ್ಕ್ ಧರಿಸದ್ದಕ್ಕೆ 1 ಸಾವಿರ ರೂ. ದಂಡ ವಿಧಿಸುತ್ತಿದ್ದ ಕ್ರಮಕ್ಕೆ ಸಾರ್ವಜನಿಕಾ ವಲಯದಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಕೆಲಸ ಇಲ್ಲ ನಾವು ಸಂಕಷ್ಟದಲ್ಲಿರುವಾಗ …
Read More »ಈಗ ಸಿ.ಟಿ.ರವಿ ಏಕಕಾಲಕ್ಕೆ ಐದು ರಾಜ್ಯ, ಎರಡು ಕೇಂದ್ರಾಡಳಿತ ಪ್ರದೇಶಗಳ ಉಸ್ತುವಾರಿ
ಬೆಂಗಳೂರು,ಅ.7- ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿದ್ದ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳ ಉಸ್ತುವಾರಿಯನ್ನು ನೀಡಲಾಗಿದೆ. ನವದೆಹಲಿಯಲ್ಲಿ ನಿನ್ನೆ ನಡೆದ ಪಕ್ಷದ ಪ್ರಮುಖ ಪದಾಕಾರಿಗಳ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕೆಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಂಡಿದ್ದಾರೆ. ಇದರಲ್ಲಿ ಸಚಿವ ಸಿ.ಟಿ.ರವಿ ಅವರಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಲಕ್ಷದ್ವೀಪಗಳ ಉಸ್ತುವಾರಿಯನ್ನು ವಹಿಸಲಾಗಿದೆ. …
Read More »