ಬೆಂಗಳೂರು: ಕಾಂಗ್ರೆಸ್ ಪಾಲಿಗೆ ಬಾಗಲಕೋಟೆ, ದಾವಣಗೆರೆ ಎರಡು ಕ್ಷೇತ್ರದ ಉಪ ಚುನಾವಣೆ ಸವಾಲಾಗಿದೆ. ಎಲ್ಲಾ 140 ಶಾಸಕರು ಹಾಗೂ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆಗೆ ಸಿದ್ಧತೆ ನಡೆಸಿದೆ. ನಾಳೆ (ಮಾ.25) ಈ ಸಂಬಂಧ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಶತಾಯ ಗತಾಯ ಉಪ ಚುನಾವಣೆ ಗೆಲ್ಲುವ ಲೆಕ್ಕಾಚಾರದಲ್ಲಿ ಶಾಸಕರು, ಸಚಿವರನ್ನ ಅಖಾಡಕ್ಕೆ ಇಳಿಸಲು ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಇನ್ನು ಬಾಗಲಕೋಟೆ ವಿಧಾನಸಭಾ ಉಪ …
Read More »ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ: ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ …
Read More »ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು (ಮಾ.21) ಚಾಲನೆ ಸಿಗಲಿದೆ. ಇಂದು ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮೂಲಕ ಉತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಒಟ್ಟು 11 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮಾ.30ರಂದು ಹಸಿ ಕರಗವಿದ್ದು, ಏ.1ರಂದು ಮಧ್ಯರಾತ್ರಿ ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ದಿನವೇ ದ್ರೌಪದಿ ದೇವಿಯ ಹೂವಿನ ಕರಗವು ಸಂಚರಿಸಿ ಲಕ್ಷಾಂತರ ಭಕ್ತರಿಗೆ …
Read More »ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು
ಬೆಂಗಳೂರು: ಚಿನ್ನಸ್ವಾಮಿಯಲ್ಲಿ ಸಂಭವಿಸಿದ್ದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮೃತ 11 ಜನರ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಸೀಟುಗಳನ್ನು ಮೀಸಲಿಡಲಾಗುವುದು ಎಂದು ಕೆಎಸ್‌ಸಿಎ (KSCA) ತಿಳಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ) ಹೊರಗೆ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಈ ಅವಘಡದಲ್ಲಿ 11 ಜನರು ಸಾವನ್ನಪ್ಪಿದ್ದರು. ಹೀಗಾಗಿ ಈ 11 ಜನರ ನೆನಪಿಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಸೀಟು ಮೀಸಲಿಡಲು ಕೆಎಸ್‌ಸಿಎ ನಿರ್ಧರಿಸಿದೆ. ಚಿನ್ನಸ್ವಾಮಿಯಲ್ಲಿ ನಡೆಯುವ ಪ್ರತಿಯೊಂದು ಪಂದ್ಯಕ್ಕೂ 11 …
Read More »ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು
ಬೆಂಗಳೂರು: ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣ ಸಂಬಂಧ ನೋಟಿಸ್ ಬೆನ್ನಲ್ಲೇ ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ (Rikki Rai) ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ರಿಕ್ಕಿಯನ್ನು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಕಬ್ಬನ್ ಪಾರ್ಕ್ ಸಂಚಾರ ಪೊಲೀಸರ ಮುಂದೆ ವಕೀಲರ ಜೊತೆ ರಿಕ್ಕಿ ರೈ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಪೊಲೀಸರು ಹಿಂಬಾಗಿಲಿನಿಂದ ಕಳುಹಿಸಿಕೊಟ್ಟಿದ್ದಾರೆ. ಮಾಧ್ಯಮಗಳ ಕಣ್ಣುತಪ್ಪಿಸಿ ಕಬ್ಬನ್ ಪಾರ್ಕ್ ಸಂಚಾರ …
Read More »ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದ ಬೆಳಗಾವಿ ಮುಖಂಡರು
ಬೆಂಗಳೂರು: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಬಾಳು ದೇಸೂರಕರ್ ಅವರನ್ನು, ಕಾಡಾ ಅಧ್ಯಕ್ಷರನ್ನಾಗಿ ಯುವರಾಜ ಕದಂ ಅವರನ್ನು ಹಾಗೂ ಧಾರವಾಡ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾಗಿ ಅಡಿವೇಶ್ ಇಟಗಿ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಕೃತಜ್ಞತೆ ಸಲ್ಲಿಸಿ ಗೌರವ-ಪೂರ್ವಕವಾಗಿ ಸನ್ಮಾನಿಸಲಾಯಿತು. ನೂತನವಾಗಿ ನೇಮಕಗೊಂಡಿರುವ ಎಲ್ಲ ಮುಖಂಡರು ಹಾಗೂ …
Read More »ಸವದತ್ತಿ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಹಾಗೂ ಮುಜರಾಯಿ ಇಲಾಖೆ ಸಿಬ್ಬಂದಿಗಳ ಹಿತರಕ್ಷಣೆಗಾಗಿ ವಿಧಾನಸಭೆಯಲ್ಲಿ ಧ್ವನಿ!
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ, ಸವದತ್ತಿ ಯಲ್ಲಮ್ಮ ಕ್ಷೇತ್ರದ ಪರವಾಗಿ ಧಾರ್ಮಿಕ ದತ್ತಿ ಇಲಾಖೆಯ (ಮುಜರಾಯಿ) ಸಿಬ್ಬಂದಿಗಳ ಕುಟುಂಬದ ಹಿತದೃಷ್ಟಿಯಿಂದ ಹಾಗೂ ವಿಶೇಷವಾಗಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನೇಮಕಾತಿ ಕುರಿತು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಶ್ರೀ Ramalinga Reddy ಅವರಿಗೆ ಪ್ರಮುಖ ಪ್ರಶ್ನೆಗಳನ್ನು ಮಂಡಿಸಿ, ಚರ್ಚೆ ನಡೆಸಲಾಯಿತು. ಚರ್ಚೆಯ ಪ್ರಮುಖಾಂಶಗಳು: 🔹 ಯಲ್ಲಮ್ಮ ದೇವಸ್ಥಾನದ ನೇಮಕಾತಿ: ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಖಾಲಿ …
Read More »ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಆರೋಪ ಪ್ರಕರಣ; ಸಿಐಡಿ ತನಿಖೆಗೆ ಆದೇಶ: ಪರಮೇಶ್ವರ್
ಬೆಂಗಳೂರು: ಮೂಡುಬಿದಿರೆ ಇನ್ಸ್‌ಪೆಕ್ಟರ್‌ನಿಂದ ದೌರ್ಜನ್ಯ, ಲೈಂಗಿಕ ಕಿರುಕುಳ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲು ಸರ್ಕಾರಕ್ಕೆ ಆದೇಶಿಸಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ಸರ್ಕಾರಿ ನಿವಾಸದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಜೊತೆ ನಾಲ್ವರು ಸಂತ್ರಸ್ತೆಯರು ಪರಮೇಶ್ವರ್ ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಪರಮೇಶ್ವರ್, ಸಂತ್ರಸ್ತೆಯರು ಭೇಟಿ ವೇಳೆ ಹಲವು ಮಾಹಿತಿ ನೀಡಿದ್ದಾರೆ. ಈಗಾಗಲೇ ಇನ್ಸ್‌ಪೆಕ್ಟರ್ ಸಸ್ಪೆಂಡ್ ಆಗಿದ್ದಾರೆ. ಸಿಐಡಿ ತನಿಖೆ ನಡೆಸಲು ನಾನು ತೀರ್ಮಾನಿಸಿದ್ದೇನೆ …
Read More »ರಾಜ್ಯದ ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್ – ಹೆಚ್ಚುವರಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ: ಮುನಿಯಪ್ಪ
ಬೆಂಗಳೂರು: ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಇಂದು ಸಭೆ ನಡೆಸಿದರು. ರಾಜ್ಯದಲ್ಲಿ ಹೆಚ್ಚುವರಿಯಾಗಿ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 ಸಿಲಿಂಡರ್ ಸೇರಿಸಿ ಒಟ್ಟು 10,000 ಸಿಲಿಂಡರ್ ಪೂರೈಕೆ ಆಗಲಿದೆ. ಕಮರ್ಷಿಯಲ್ ಗ್ಯಾಸ್ ಬಳಕೆದಾರರು ಕಡ್ಡಾಯವಾಗಿ ರಿಜಿಸ್ಟರ್ ಮಾಡಿಸಬೇಕು. …
Read More »ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು
ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ (Aನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್(45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. …
Read More »
Laxmi News 24×7