ಬೆಂಗಳೂರು: ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪ ನಡೆದಿದೆ. ಕೊಲೆಯಾದ ಯುವಕನನ್ನು ರಾಜೇಶ್ (35) ಎಂದು ಗುರುತಿಸಲಾಗಿದೆ. ರಾಜೇಶ್ ಒಂದು ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ನಂತರ ಆ ಯುವತಿಯನ್ನು ಪ್ರೀತಿಯನ್ನು ನಿರಾಕರಣೆ ಮಾಡಿದ್ದ. ಇದರಿಂದ ಮನನೊಂದ ಯುವತಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ, ನನ್ನ ತಂಗಿಯ ಬಾಳು ಈತನಿಂದಲೇ ಹಾಳಾಯ್ತು ಎಂದು ರಾಜೇಶ್ …
Read More »ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯ,ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ.
ಬೆಂಗಳೂರು: ಕತ್ತಲಾದ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡ ಪೋಕರಿಗಳ ವರ್ತನೆ ನೋಡಿದರೆ ಸಾಮಾನ್ಯ ಜನರಿಗೆ ಭಯವಾಗುತ್ತದೆ. ಆದರೆ ಇಲ್ಲೊಬ್ಬ ಯುವಕ ಯುವತಿಯ ವರ್ತನೆ ನೋಡಿ ನೆಟ್ಟಗರು ಶಾಕ್ ಆಗಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲಿಂಗ್ ಮಾಡುವುದು ಅಪರಾಧವಾದರೂ ಯುವಕರು ಶೋಕಿಗಾಗಿ ವೀಲಿಂಗ್ ಮಾಡುತ್ತಿರುತ್ತಾರೆ. ಆದರೆ ಯುವಕ ವೀಲಿಂಗ್ ಮಾಡುವಾಗ ಬೈಕ್ ಹಿಂಬದಿ ಕುಳಿತಿದ್ದ ಯುವತಿ ಕೈಯಲ್ಲಿ ಡ್ರ್ಯಾಗರ್ ಹಿಡಿದು ಭಯ ಹುಟ್ಟಿಸುವಂತೆ ಪೋಸ್ ನೀಡಿದ್ದಾಳೆ. ಯುವತಿಯ ಈ ವಿಡಿಯೋ ಸಾಮಾಜಿಕ …
Read More »ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧ………..
ಬೆಂಗಳೂರು: ಇವತ್ತಿನಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ. ಕೊರೊನಾ, ಲಾಕ್‍ಡೌನ್ ಬಳಿಕ ನಡೆಯುತ್ತಿರುವ ವಿಧಾನಮಂಡಲದ ಮೊದಲ ಅಧಿವೇಶನ ಇದಾಗಿದೆ. ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಿದ್ಧವಾಗಿದ್ದು, ಕೊರೊನಾ ಹಗರಣ, ಕೇಂದ್ರದಿಂದ ಬರಬೇಕಿರುವ ಜಿಎಸ್‍ಟಿ ಪರಿಹಾರ ಬಾಕಿ, ಲಾಕ್‍ಡೌನ್ ಹೊತ್ತಲ್ಲೇ ರೈತರಿಗೆ ಸಂಬಂಧಿಸಿದ ಮಸೂದೆಗಳಿಗೆ ಮಾಡಲಾಗಿರುವ ತಿದ್ದುಪಡಿ. ಏರುತ್ತಿರುವ ಕೊರೋನಾ ಕೇಸ್, ಪ್ರವಾಹ ಪರಿಹಾರ, ಡ್ರಗ್ಸ್ ಕೇಸ್, ಡಿಜೆ ಹಳ್ಳಿ ಕೇಸ್ ಹೀಗೆ ಸರ್ಕಾರದ ವಿರುದ್ಧ ಅಸ್ತ್ರಗಳನ್ನು ಬಳಸಲು ಸಿದ್ಧವಾಗಿವೆ. ಕೊರೊನಾ ಹಿನ್ನೆಲೆಯಲ್ಲಿ …
Read More »ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಊಸರವಳ್ಳಿ:H.D.K.
ಬೆಂಗಳೂರು, ಸೆ.20- ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಅವಕಾಶ ವಾದಿ ಪಕ್ಷ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚï.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ,ಸ್ಥಾನ- ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗ ರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ …
Read More »ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಅರಂಭ
ಬೆಂಗಳೂರು,ಸೆ.20-ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲೇ ನಾಳೆಯಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಅರಂಭವಾಗುತ್ತಿದ್ದು, ಬಹುತೇಕ ಎಲ್ಲ ಪಕ್ಷಗಳ ಶಾಸಕರು ಆತಂಕಗೊಂಡಿದ್ದಾರೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಕೇಂದ್ರ ಸರ್ಕಾರ ಬುಧವಾರವೇ ಕಲಾಪವನ್ನು ಮೊಟಕುಗೊಳಿಸಲು ಮುಂದಾಗಿರುವಾಗ, ರಾಜ್ಯದಲ್ಲಿ ಕಲಾಪವನ್ನು ನಡೆಸುವ ಔಚಿತ್ಯವಾದರೂ ಏನು? ಎಂದು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಪ್ರಶ್ನಿಸುತ್ತಿದ್ದಾರೆ. ಜನಪ್ರತಿನಿಧಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವೇ ಅಧಿವೇಶನವನ್ನು ಅರ್ಧಕ್ಕೆ ನಿಲ್ಲಿಸುತ್ತಿರುವಾಗ, ರಾಜ್ಯದಲ್ಲಿ ಕಲಾಪ ನಡೆಸುವ ಅಗತ್ಯವಾದರೂ ಏನಿತ್ತ್ತು ಎಂಬುದು …
Read More »ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು
ಬೆಂಗಳೂರು, ಸೆ.19- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಸೆ.21 ರಿಂದ 28ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಕೇಂದ್ರಗಳು, ಇಂಟರ್‍ನೆಟ್ ಕೇಂದ್ರಗಳು ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಮುಚ್ಚುವಂತೆ …
Read More »ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ
ಬೆಂಗಳೂರು: ಜೆಡಿಎಸ್ ನವರು ಆರ್‍ಎಸ್‍ಎಸ್ ಜೊತೆ ಸೇರಿದ್ರು ಸೇರಿಕೊಳ್ಳಬಹುದು. ಅವರಿಗೆ ಅವಕಾಶವಷ್ಟೆ ಮುಖ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಈ ವೇಳೆ ಮಾತನಾಡಿದ ಮಾಜಿ ಸಿಎಂ, ಜೆಡಿಎಸ್ ಪಕ್ಷದ ದೇವೇಗೌಡರು ಹಾಗೂ ಕುಟುಂಬ ಒಂದು ಅವಕಾಶವಾದಿ. ಪಕ್ಷಸ್ವಾರ್ಥ ಇರುವವರು. ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುತ್ತಾರೆ. ಬಿಜೆಪಿ ಜೊತೆಯೂ …
Read More »ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ: ಪ್ರಶಾಂತ್ ಸಂಬರಗಿ
ಬೆಂಗಳೂರು: ಕನ್ನಡ ಚಿತ್ರರಂಗ ದಿನ ದಿನಕ್ಕೆ ಒಂದೊಂದೇ ಹೆಸರುಗಳನ್ನು ಕೇಳಿ ಬೆಚ್ಚುತ್ತಿದೆ. ಈಗಾಗಲೇ ಖಾಕಿ ಪಡೆ ಸ್ಯಾಂಡಲ್‍ವುಡ್ ಕೆಲವು ನಟ-ನಟಿಯರನ್ನು ಡ್ರಗ್ಸ್ ಜಾಲದ ವಿಷಯದಲ್ಲಿ ಕರೆದು ವಿಚಾರಣೆ ನಡೆಸಿದ್ದು, ಈಗಲೂ ನಡೆಸುತ್ತಿದೆ. ರಾಗಿಣಿ ಮತ್ತು ಸಂಜನಾ ಜೈಲು ಪಾಲಾಗಿದ್ದಾರೆ. ಇದರ ಬೆನ್ನಿಗೇ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೊಸ ಬಾಂಬ್ ಸಿಡಿಸಿದ್ದಾರೆ. ಕನ್ನಡದ ಎ ವನ್ ಸ್ಟಾರ್‌ಗಳೂ ಇದರಲ್ಲಿದ್ದಾರೆ ಎಂದು ಗುಡುಗಿದ್ದಾರೆ. ಹೌದು. ಸ್ಯಾಂಡಲ್‍ವುಡ್‍ನಲ್ಲಿ ಎದ್ದಿರುವ ಡ್ರಗ್ಸ್ ಸುಂಟರಗಾಳಿ ಇನ್ನೂ …
Read More »ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ……..?
ಬೆಂಗಳೂರು: ಡ್ರಗ್ಸ್ ಕೇಸ್ಸಲ್ಲಿ ಬಂಧಿತರಾಗಿರೋ ಸಂಜನಾ ಹಾಗೂ ರಾಗಿಣಿಗೆ ಜೈಲಲ್ಲಿ ರಾಜಾತಿಥ್ಯ ನೀಡುತ್ತಿರೋದು ಬಹಿರಂಗವಾಗಿದೆ. ಇದೀಗ ಜೈಲಲ್ಲಿ ಈ ನಟಿಮಣಿಯರಿಗೆ ಜೈಲೂಟದ ಬದಲು ಮನೆ ಊಟ ಒದಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಕೋರ್ಟ್ ಆದೇಶ ಇಲ್ಲದೇ ಆರೋಪಿಗಳಿಗೆ ಜೈಲು ಸಿಬ್ಬಂದಿಯೊಬ್ಬರ ಮನೆಯಿಂದ ನಿತ್ಯ ರುಚಿ ರುಚಿಯಾದ ಊಟ ಪೂರೈಕೆ ಮಾಡಲಾಗುತ್ತಿದೆ. ಈ ಬೆನ್ನಲ್ಲೇ ಸಾಮಾನ್ಯರಿಗೆ ಒಂದು ಕಾನೂನು, ಸೆಲೆಬ್ರಿಟಿಗಳಿಗೆ ಒಂದು ಕಾನೂನಾ ಅನ್ನೋ ಪ್ರಶ್ನೆ ಎದ್ದಿದೆ. ಇತ್ತ ಕಳೆದ ನಾಲ್ಕು …
Read More »ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಇಲ್ಲ…
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ತೆರೆಯದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ತಿಂಗಳಾಂತ್ಯದವರೆಗೆ ಯಥಾ ಸ್ಥಿತಿ ಮುಂದುವರಿಸಲು ಇಲಾಖೆ ತಿಳಿಸಿದೆ ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ತಿಂಗಳಾಂತ್ಯದವರೆಗೂ ಶಾಲಾ-ಕಾಲೇಜು ಆರಂಭಿಸದಂತೆ ಸರ್ಕಾರ ಸೂಚಿಸಿದೆ. ಸೂಕ್ತ …
Read More »