Breaking News

ಬೆಂಗಳೂರು

ರಾಜ್ಯ ಸರ್ಕಾರದಿಂದ ‘ರೈತರಿಗೆ ಸಿಹಿ ಸುದ್ದಿ’: ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ‘ಈ ಸೇವೆ’

ಡಿಜಿಟಲ್‌ಡೆಸ್ಕ್‌: ಯಾವುದೇ ತರಹದ ರೋಗ ಮತ್ತು ಕೀಟಬಾಧೆ ಕಂಡುಬಂದಲ್ಲಿ ರೈತರ ಹೊಲಗಳಿಗೆ ಹೋಗಿ ಪ್ರಾತ್ಯಕ್ಷಿಕೆ ಮೂಲಕ ಅಗತ್ಯ ಸಲಹೆ, ನೆರವು ನೀಡಲು 108 ವಾಹನ ಮಾದರಿಯಲ್ಲಿ ಕೃಷಿ ಸಂಚಾರಿ ಲ್ಯಾಬ್ ಸಿದ್ಧಪಡಿಸಲಾಗುತ್ತಿದೆ. ಕೃಷಿಕರು ಕರೆ ಮಾಡಿದ ಕೂಡಲೆ ಕೃಷಿ ಪದವೀಧರರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನೊಳಗೊಂಡ ಈ ವಾಹನ ಹೊಲಗಳಿಗೆ ಹೋಗಿ ಸೂಕ್ತ ಸಲಹೆ ನೀಡಲಿದ್ದಾರೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ತಮ್ಮ ಉಸ್ತುವಾರಿಯ ಕೊಪ್ಪಳ ಜಿಲ್ಲೆಯಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ. …

Read More »

ಬೆಂಗಳೂರಿನ 36 ಆಸ್ಪತ್ರೆಗಳಿಗೆ ನೋಟಿಸ್

ಬೆಂಗಳೂರು:  ಸರ್ಕಾರದ ನಿಯಮ ಉಲ್ಲಂಘಿಸಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಬೆಂಗಳೂರಿನ 36 ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಖಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾವಳಿ ಪ್ರಕಾರ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವುದು ಕಡ್ಡಾಯವಾಗಿದೆ.   v ಆದರೆ ಕೆಲವು ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ …

Read More »

CCB List ನಲ್ಲಿ ಮುಂದಿನ ಹೆಸರುಗಳು ಆ ಹಿರಿಯ ಸ್ಟಾರ್ ನಟ ಮತ್ತು ಸೋದರರದ್ದು!

ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಟ ನಟಿಯರ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಇನ್ನೂ ಕೆಲವರ ಮೇಲೆ ಕಣ್ಣು ನೆಟ್ಟಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸ್ಟಾರ್ ನಟ ಮತ್ತು ಸಹೋದರರು ಭಾಗಿಯಾಗಿರುವ ಬಗ್ಗೆ ಸಿಸಿಬಿ ಅಧಿಕಾರಿಗಳಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಆ ಇಬ್ಬರನ್ನು ವಿಚಾರಣೆಗೆ ಕರೆಯುವ ಸಾಧ್ಯತೆಗಳಿವೆ. ಸ್ಯಾಂಡಲ್​ವುಡ್​ನ ಫ್ಯಾಮಿಲಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಈ ಸಹೋದರ ನಟರ ಪೈಕಿ 2017ರ ಗಾಂಜಾ ಪ್ರಕರಣ ಹಾಗೂ ಅಪಘಾತ ಸಂದರ್ಭದಲ್ಲಿ ಇದೇ ಕುಟುಂಬದ ಒಬ್ಬರನ್ನ ಜಯನಗರ …

Read More »

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಹಣ ಕಡಿತ ಘೋರ ಅನ್ಯಾಯ: ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯ ಬಿಜೆಪಿ ಸರಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದ್ದು, ಈ ಭಾಗದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಭಾಲ್ಕಿ ಶಾಸಕ ಈಶ್ವರ್ ಖಂಡ್ರೆ ಆರೋಪಿಸಿದ್ದು, ಬಜೆಟ್ ನಲ್ಲಿ ಹಂಚಿಕೆ ಮಾಡಿದ್ದ ಹಣವನ್ನೂ ಕಡಿತ ಮಾಡಿರುವುದು ಇದಕ್ಕೆ ಜ್ವಲಂತ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.   ಹೈದ್ರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯ ಹೆಸರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ …

Read More »

ಡಿಜೆ ಹಳ್ಳಿ ಗಲಭೆ ಪೂರ್ವ ನಿಯೋಜಿತವಲ್ಲ: ವರದಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಕೋಮು ಪ್ರೇರಿತವಾಗಲಿ, ಪೂರ್ವ ನಿಯೋಜಿತವಾಗಲಿ ಅಲ್ಲ. ಹಿಂದೂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಗಲಭೆ ನಡೆದಿಲ್ಲ. ಇದೊಂದು ಸಹಜವಾಗಿ ನಡೆದ ಘಟನೆ ಎಂದು ಬೆಂಗಳೂರು ನಾಗರೀಕ ಸಾಮಾಜಿಕ ಸಂಸ್ಥೆಗಳ ಸಹಯೋಗದಲ್ಲಿ ನಡೆಸಿದ ಸತ್ಯಶೋಧನಾ ವರದಿ ಅಭಿಪ್ರಾಯಪಟ್ಟಿದೆ.   ನಿನ್ನೆಯಷ್ಟೇ ವಿಡಿಯೋ ಸಂವಾದದ ಮೂಲಕ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ಬಿಡುಗಡೆ ಮಾಡಿದ ವರದಿಯಲ್ಲಿ ಘಟನೆಗೆ ಕಾರಣವಾಕ ಅಂಶ, …

Read More »

‘ಜಮೀರ್ ಒಬ್ರೆ ಕ್ಯಾಸಿನೋಗೆ ಹೋಗ್ತಿರಲಿಲ್ಲ, ಜೊತೆಗೆ ಇವ್ರೆಲ್ಲಾ ಇರ್ತಿದ್ರು’

ನಾಗಮಂಗಲ : ಕರ್ನಾಟಕದ ದುಡ್ಡೆಲ್ಲಾ ಶ್ರೀಲಂಕಾದ ಕ್ಯಾಸಿನೋಗೆ ಹೋಗುತ್ತಿದೆ. ರಾಜ್ಯದಲ್ಲಿ ಹೆಚ್ಚು ದುಡ್ಡು ಮಾಡಿ ಕ್ಯಾಸಿನೋದಲ್ಲಿ ಕಳೆದುಕೊಳ್ಳುತ್ತಿದ್ದಾರೆ, ಅದಕ್ಕಾಗಿ ಇಲ್ಲಿನ ದುಡ್ಡು ಇಲ್ಲೆ ಉಳಿಯಬೇಕಾದರೆ ಕ್ಯಾಸಿನೋ ಕರ್ನಾಟಕದಲ್ಲೇ ಆರಂಭಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡುವುದಾಗಿ ಶಾಸಕ ಸುರೇಶ್‌ಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣವೊಂದಿದ್ದರೆ ಪ್ರಪಂಚದಲ್ಲಿ ಸಿಗುವ ಎಲ್ಲ ವಸ್ತುಗಳು ಶ್ರೀಲಂಕಾದ ಕ್ಯಾಸಿನೋದಲ್ಲಿಯೇ ಸಿಗುತ್ತದೆ. ಇಲ್ಲಿ ಯಾರ್ಯಾರು ಹೆಚ್ಚಿಗೆ ದುಡ್ಡು ಮಾಡಿದ್ದಾರೋ ಅವರೆಲ್ಲರೂ ಅಲ್ಲಿ ಹೋಗಿ ದುಡ್ಡು ಕಳೆಯುತ್ತಿದ್ದಾರೆ. …

Read More »

ಚೌಕಾಬಾರ ಜಾಗ ಇದೀಗ ವಾಚನಾಲಯ; ವಾಹನ ಚಾಲಕರ ಟೈಂಪಾಸ್​ಗೆ ಸಚಿವರಿಂದ ಒಂದೊಳ್ಳೆ ಐಡಿಯಾ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳ ವಾಹನ ಚಾಲಕರಿಗೆ ಕಾಲ ಕಳೆಯುವುದೇ ಕಷ್ಟ! ಬೆಳಗ್ಗೆ ಕಚೇರಿಗೆ ಹೋಗುವ ಅಧಿಕಾರಿಗಳ ಬರುವುದು ಸಂಜೆಯವರೆಗೆ. ಅಲ್ಲಿಯ ವರೆಗೆ ಆ ವಾಹನಗಳ ಚಾಲಕರು ಟೈಮ್ ಪಾಸ್ ಮಾಡುವುದಕ್ಕೆ ವಿವಿಧ ರೀತಿ ಆಟ ಆಡುತ್ತಾರೆ. ಇದನ್ನು ಗಮನಿಸಿದ ಸಚಿವರು ಇವರಿಗೆ ಒಂದೊಳ್ಳೆ ಐಡಿಯಾ ಕೊಟ್ಟಿದ್ದಾರೆ. ಕೇವಲ ಐಡಿಯಾ ಮಾತ್ರವಲ್ಲ ಇದನ್ನು ಜಾರಿಗೊಳಿಸಿಯೂ ಸೈ ಎನಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು, …

Read More »

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆಗೆ ಸಹಕಾರ: ಸಿಎಂ

ಬೆಂಗಳೂರು: ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ವರ್ಚುಯಲ್ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಅಮೆರಿಕದ ರಾಯಭಾರ ಕಚೇರಿ ತೆರೆಯಬೇಕೆನ್ನುವುದು ನಮ್ಮ ಬಹು ದಿನಗಳ ಬೇಡಿಕೆಯಾಗಿದ್ದು, ಕಚೇರಿಯ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು. ಭಾರತದಲ್ಲಿರುವ 100 ಅಮೆರಿಕಾ ಸಂಸ್ಥೆಗಳ ಪೈಕಿ ಸಿಸ್ಕೋ, ಐಬಿಎಂ, ಇಂಟೆಲ್, ಜಿಇ, ಎಚ್ಪಿ, ಒರಾಕಲ್, ಯುಟಿಸಿ ಸೇರಿದಂತೆ 90 ಕಂಪನಿಗಳು ಬೆಂಗಳೂರಿನಲ್ಲಿಯೇ ನೆಲೆಸಿವೆ ಎಂದು …

Read More »

ಬಿಎಸ್‌ವೈ ಇಂದು ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಬೆಳಿಗ್ಗೆ ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಇದೇ 18 ರಂದು ಕರ್ನಾಟಕ ಭವನ ನಂ-1 ರ (ಕಾವೇರಿ) ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 19 ರಂದು ನಗರಕ್ಕೆ ವಾಪಸಾಗಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ …

Read More »

ಭಾಷೆಗಳ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ : ಹೆಚ್ಡಿಕೆ ಬೇಸರ

ಬೆಂಗಳೂರು, ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ.     ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ …

Read More »