Breaking News

ಬೆಂಗಳೂರು

ನಟಿ ರಾಗಿಣಿ ಐ.ಪಿ.ಎಸ್. ಇವಾಗ ಕೈದಿ ನಂಬರ್ ……{ಡ್ರಗ್ ಮಾಫಿಯಾ ಕೇಸಲ್ಲಿ}

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಮೊದಲ ದಿನ ಸರಿಯಾಗಿ ನಿದ್ದಯಿಲ್ಲದೆ ಕಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಜೈಲಿನಲ್ಲಿ ರಾತ್ರಿ ಸಿಸಿಬಿಯವರು ಕೊಟ್ಟಿದ್ದ ರಾತ್ರಿ ಊಟ ತಿಂದಿದ್ದಾರೆ. ರೋಟಿ, ದಾಲ್ ತಿಂದು ಜೈಲು ರಾತ್ರಿಯ ವಾಸ್ತವ್ಯಕ್ಕೆ …

Read More »

I.M.A.ಬಹುಕೋಟಿ ವಂಚನೆ ಪ್ರಕರಣ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ

ಬೆಂಗಳೂರು – ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ ನಡೆಸಲು ಸರಕಾರ ಅನುಮತಿ ನೀಡಿದೆ. ಈ ಸಂಬಂಧ ಸುದೀರ್ಘ ಕಾನೂನುಗಳನ್ನು ಪರಿಶೀಲಿಸಿದ ಸರಕಾರ, ಅಡ್ವೋಕೇಟ್ ಜನರಲ್ ಸಲಹೆ ಪಡೆದು ಸಿಬಿಐ ಕೋರಿಕೆಯಂತೆ ಮತ್ತು ಸಿಬಿಐ ನಡೆಸಿರುವ ಪ್ರಾಥಮಿಕ ತನಿಖಾ ವರದಿಯನ್ನು ಉಲ್ಲೇಖಿಸಿ ತನಿಖೆಗೆ ಒಪ್ಪಿಗೆ ಸೂಚಿಸಿದೆ. ಐಎಂಎ ವಂಚನೆ ಪ್ರಕರಣ ಹೊರಬರುವ ಕೆಲವೇ ಸಮಯ …

Read More »

ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆ

ಬೆಂಗಳೂರು, ಸೆ. 14-ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆ ನಡೆಯಲಿದೆ. ಮುಂದಿನ ವಾರ ಮಳೆಗಾಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನಾಳಿನ ಸಂಪುಟ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಸಾಮಾನ್ಯವಾಗಿ ವಾರಕ್ಕೊಮ್ಮೆ ಸಚಿವ ಸಂಪುಟ ಸಭೆ ನಡೆಯುವುದು ರೂಢಿಯಾದರೂ ಕಳೆದ ವಾರ ಸಂಪುಟ ಸಭೆ ನಡೆಯಲಿಲ್ಲ. ಈ ವಾರ ಸೆ.17ರ ಗುರುವಾರ ಮಹಾಲಯ ಅಮವಾಸ್ಯೆಯ ಸರ್ಕಾರಿ ರಜೆ ಇರುವುದರಿಂದ ಗುರುವಾರದ ಬದಲಾಗಿ ನಾಳೆ ಸಂಪುಟ ಸಭೆ ನಡೆಸಲಾಗುತ್ತಿದೆ. ಕೋವಿಡ್ ಇರುವ …

Read More »

ನಟ-ನಟಿಯರು, ಉದ್ಯಮಿ, ರಾಜಕಾರಣಿ ಹಾಗೂ ಗಣ್ಯರ ಮಕ್ಕಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿಸಿಬಿ ಸಿದ್ಧತೆ ನಡೆಸುತ್ತಿದೆ.

ಬೆಂಗಳೂರು, ಸೆ.14- ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಟ-ನಟಿಯರು, ಉದ್ಯಮಿ, ರಾಜಕಾರಣಿ ಹಾಗೂ ಗಣ್ಯರ ಮಕ್ಕಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿಸಿಬಿ ಸಿದ್ಧತೆ ನಡೆಸುತ್ತಿದೆ. ಬಂಧನಕ್ಕೊಳಗಾಗಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳನ್ನು ನೀಡಿದ್ದಾರೆ. ಹಾಗೆಯೇ ಕೆಲ ನಟ-ನಟಿಯರು, ಉದ್ಯಮಿಗಳು ಹಾಗೂ ಗಣ್ಯರ ಮಕ್ಕಳ ಹೆಸರು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ನಟಿಯರ ಹೇಳಿಕೆ ಆಧಾರದ ಮೇಲೆ ಪಟ್ಟಿಯೊಂದನ್ನು ಸಿದ್ಧಪಡಿಸಿರುವ ಸಿಸಿಬಿ ಅದನ್ನು ಪರಿಶೀಲಿಸಿ ವಿಚಾರಣೆಗೆ …

Read More »

ರಾಗಿಣಿ ಸೇರಿ 6 ಮಂದಿಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

ಬೆಂಗಳೂರು,ಸೆ.14- ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾಗಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿ ಸಿಸಿಬಿ ವಶದಲ್ಲಿರುವ ರಾಗಿಣಿ ಅವರ 12 ದಿನದ ಹಾಗೂ ಸಂಜನಾ ಅವರ ಒಂದು ವಾರದ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಈ ಇಬ್ಬರನ್ನು ಕೆಸಿಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಲಾಯಿತು. ವಿಡಿಯೋ …

Read More »

ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳ ಆಕ್ರೋಶ

ಬೆಂಗಳೂರು,ಸೆ.14- ರಾಜ್ಯದಲ್ಲಿ ಒತ್ತಾಯಪೂರ್ವಕವಾಗಿ ಹಿಂದಿ ಸಪ್ತಾಹ ಕಾರ್ಯಕ್ರಮ ನಡೆಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಗರದಲ್ಲಿಂದು ತಮ್ಮ ಆಕ್ರೋಶ ವ್ಯಕ್ತಪಡಿಸಿವೆ. ಕರ್ನಾಟಕ ರಕ್ಷಣಾ ವೇದಿಕೆ, ಜಯಕರ್ನಾಟಕ, ಕನ್ನಡ ಚಳವಳಿ ಕೇಂದ್ರ ಸಮಿತಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ನಗರದ ವಿವಿಧೆಡೆ ಪ್ರತಿಭಟನೆ ನಡೆಸಿ ಹಿಂದಿ ದಿವಸ್ ಆಚರಣೆಯನ್ನು ತೀವ್ರವಾಗಿ ವಿರೋಧಿಸಿದರು. ಆನಂದ್ ರಾವ್ ವೃತ್ತದ ಬಳಿ ಹಿಂದಿ ಸಪ್ತಾಹ ಕಾರ್ಯಕ್ರಮದ …

Read More »

ತಾಯಿ ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ರಾಜ್ಯ ಸರ್ಕಾರ ಬೇರೆ ಮಾಡುತ್ತಿದೆ:ಎಸ್. ಆರ್.ಪಾಟೀಲ್

ಬೆಂಗಳೂರು, ಸೆ.14- ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ತಾಯಿ ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ರಾಜ್ಯ ಸರ್ಕಾರ ಬೇರೆ ಮಾಡುತ್ತಿದೆ ಎಂದು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್. ಆರ್.ಪಾಟೀಲ್ ಆರೋಪಿಸಿದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಬರೆದಿರುವ ರೈತರ ಭದ್ರತೆ, ದೇಶದ ಭದ್ರತೆ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಆಹಾರ ಭದ್ರತೆ ಸಾಧಿಸಿದೆ, ರೈತರ ಬದುಕು ಮಾತ್ರ ಸುಧಾರಣೆಯಾಗಿಲ್ಲ. ಕಾರ್ಮಿಕರ ಸಂಕಷ್ಟಗಳು …

Read More »

ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ರಾಮನಗರ:   ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದರು. ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ.   …

Read More »

ನಾಯಕತ್ವ ಬದಲಾವಣೆ ಕೇಳಿದ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಮತ್ತು ಸಿಎಂ ಬದಲಾವಣೆ ಕೇಳಿರುವ ಶಾಸಕರಿಗೆ ಬಿಜೆಪಿ ಹೈಕಮಾಂಡ್ ಸಂದೇಶ ರವಾನಿಸಿದೆ ಎನ್ನಲಾಗಿದೆ. ಕೆಲ ಲಿಂಗಾಯತ ಶಾಸಕರೇ ಸಿಎಂ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದು, ವಯಸ್ಸಿನ ಕಾರಣ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಪ್ರವಾಸಕ್ಕೂ ಮುನ್ನವೇ ದೆಹಲಿಗೆ ಭೇಟಿ ನೀಡಿರುವ ಮಾಜಿ ಸಿಎಂ, ಸಚಿವ ಜಗದೀಶ್ ಶೆಟ್ಟರ್ ಹಿರಿಯ ನಾಯಕರನ್ನ ಭೇಟಿ ಮಾಡಿ, ನಾಯಕತ್ವ ಬದಲಾವಣೆ ಕುರಿತು ತಮ್ಮ ಅಭಿಪ್ರಾಯವನ್ನ ತಿಳಿಸಿದ್ದಾರೆ. ಹೈ ಪ್ರಶ್ನೆಯ ಸಂದೇಶ: …

Read More »

ಬೈಕ್‍ನಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಬಿತ್ತು ಮರದ ಕೊಂಬೆ……..

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಳೆಯ ಮರಗಳಿಂದಾಗಿ ಹಲವು ಅನಾಹುತಗಳು ಸಂಭವಿಸುತ್ತಿರುವುದು ತಿಳಿದೇ ಇದೆ. ಬಿಬಿಎಂ ಮಾತ್ರ ಇಂಹ ಮರಗಳನ್ನು ಗುರುತಿಸಿ ಕೊಂಬೆಗಳನ್ನು ಕತ್ತರಿಸುತ್ತಿಲ್ಲ. ಇದೀಗ ಮತ್ತೊಂದು ಅನಾಹುತ ಸಂಭವಿಸಿದ್ದು, ಬೈಕ್ ಸವಾರರೊಬ್ಬರ ಮೇಲೆ ಮರದ ಕೊಂಬೆ ಬಿದ್ದು ತೆಲೆ ತೀವ್ರ ಪೆಟ್ಟಾಗಿದೆ. ನಗರದ ತಿಲಕ್ ನಗರದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದ್ದು, ಈ ಘಟನೆಯಿಂದಾಗಿ ಬೈಕ್ ಸವಾರರು ಭಯಭೀತರಾಗಿದ್ದಾರೆ. ಸಂಚರಿಸುವಾಗ ನಮ್ಮ ತಲೆ ಮೇಲೆ ಕೊಂಬೆಗಳು ಬಿದ್ದರೆ ಹೇಗೆ ಎಂದು …

Read More »