Breaking News

ಬೆಂಗಳೂರು

ಡ್ಯೂಟಿಗೆ ಹೋಗುವ ಮುನ್ನ ಕಾರ್ಮಿಕರ ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವ ಪೊಲೀಸ್

ಬೆಂಗಳೂರು: ಡ್ಯೂಟಿಗೆ ಹೋಗುವ ಮುನ್ನ ಕಾರ್ಮಿಕರ ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕಾರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಶಾಂತಪ್ಪ ಜಡೆಮ್ಮನವರ್, ಆನ್‍ಲೈನ್ ತರಗತಿಗಳಿಗೆ ಹಾಜರಾಗಲು ಸ್ಮಾರ್ಟ್‍ಫೋನ್ ಮತ್ತು ಲ್ಯಾಪ್‍ಟಾಪ್‍ಗಳು ಇಲ್ಲದ ಕಾರ್ಮಿಕರ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ. ಇವರ ಈ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ.  ಪ್ರತಿದಿನ ಶಾಂತಪ್ಪ ಅವರು ಬೆಳಗ್ಗೆ 7 ಗಂಟೆಗೆ ಕರ್ತವ್ಯಕ್ಕೆ ತೆರಳುತ್ತಾರೆ. …

Read More »

“ತಾಯಿ-ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ಬೇರೆ ಮಾಡುತ್ತಿದೆ ರಾಜ್ಯ ಸರ್ಕಾರ”

ಬೆಂಗಳೂರು, – ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮೂಲಕ ತಾಯಿ ಮಕ್ಕಳಂತಿರುವ ರೈತರು ಮತ್ತು ಭೂಮಿಯನ್ನು ರಾಜ್ಯ ಸರ್ಕಾರ ಬೇರೆ ಮಾಡುತ್ತಿದೆ ಎಂದು ವಿಧಾನ ಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್. ಆರ್.ಪಾಟೀಲ್ ಆರೋಪಿಸಿದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಬರೆದಿರುವ ರೈತರ ಭದ್ರತೆ, ದೇಶದ ಭದ್ರತೆ ಎಂಬ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶ ಆಹಾರ ಭದ್ರತೆ ಸಾಧಿಸಿದೆ, ರೈತರ ಬದುಕು ಮಾತ್ರ ಸುಧಾರಣೆಯಾಗಿಲ್ಲ. ಕಾರ್ಮಿಕರ ಸಂಕಷ್ಟಗಳು …

Read More »

ನಟಿ ರಾಗಿಣಿ, ಸಂಜನಾಗೆ ಇಂದು ಸಿಗುತ್ತಾ ಬೇಲ್..​?

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ ಲಿಂಕ್ ಪ್ರಕರಣ ಸಂಬಂಧ ಅರೆಸ್ಟ್​ ಆಗಿರುವ ನಟಿ ರಾಗಿಣಿ, ಸಂಜನಾ ಸೇರಿದಂತೆ ಪ್ರಕರಣದ 5 ಆರೋಪಿಗಳ ಜಾಮೀನು ಅರ್ಜಿಗಳು ಇಂದು ವಿಚಾರಣೆ ಬರಲಿವೆ. ಸಿಟಿ ಸಿವಿಲ್ ಅವರಣದಲ್ಲಿನ ಎನ್​​​ಡಿಪಿಎಸ್ ನ್ಯಾಯಾಲಯದಲ್ಲಿ ರಾಗಿಣಿ, ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ, ರಾಹುಲ್ ತೋಷೆ, ವೈಭವ್ ಜೈನ್ ಹಾಗೂ ವಿನಯ್ ಕುಮಾರ್​​​ನ ಅರ್ಜಿಗಳ ವಿಚಾರಣೆ ನಡೆಯಲಿದೆ. ರಾಗಿಣಿ ಹಾಗೂ ರಾಹುಲ್ ಸಾಮಾನ್ಯ ಜಾಮೀನು ಅರ್ಜಿ ಸಲ್ಲಿಸಿದ್ರೆ, ಶಿವಪ್ರಕಾಶ್, ವೈಭವ್ ಜೈನ್ ಹಾಗೂ …

Read More »

ಸಾರ್ವಜನಿಕರೇ ಎಚ್ಚರ : ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಬಂದ್

ಬೆಂಗಳೂರು  : ಕೊರೋನಾ ಅವಧಿಯಲ್ಲಿ ಮೃತಪಟ್ಟವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗೆ ಪರಿಹಾರ ನೀಡದಿರುವುದು ಹಾಗೂ ವೇತನ ತಾರತಮ್ಯ ಸೇರಿ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮಂಗಳವಾರದಿಂದ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿನ ಹೊರ ರೋಗಿ ಸೇವೆಯನ್ನು ಬಹಿಷ್ಕರಿಸಿ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಘೋಷಿಸಿದೆ. ಅಲ್ಲದೆ, ಸರ್ಕಾರ ಕೂಡಲೇ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಂಗಳವಾರದಿಂದ ಕೊರೋನಾ ರೋಗಿಗಳು ಹಾಗೂ ತುರ್ತು ಚಿಕಿತ್ಸಾ ಸೇವೆ ಹೊರತುಪಡಿಸಿ ಉಳಿದ …

Read More »

C.M.ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿ, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ

ಬೆಂಗಳೂರು: ಕೊನೆಗೂ ಸಿಎಂ ಯಡಿಯೂರಪ್ಪನವರ ದೆಹಲಿ ಪ್ರವಾಸಕ್ಕೆ ಮುಹೂರ್ತ ನಿಗದಿಯಾಗಿದ್ದು, ಇತ್ತ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆಗೆಳು ಗರಿಗದರಿವೆ. ಅಲ್ಲದೆ ಸಚಿವಾಕಾಂಕ್ಷಿಗಳ ಎದೆ ಬಡಿತವನ್ನು ಹೆಚ್ಚಿಸಿದೆ. ಸೆಪ್ಟೆಂಬರ್ 17ರ ಗುರುವಾರದಂದು ಸಿಎಂ ಯಡಿಯೂರಪ್ಪ ದೆಹಲಿ ಭೇಟಿಗೆ ಸಮಯ ನಿಗದಿಯಾಗಿದೆ. ಎರಡರಿಂದ ಮೂರು ದಿನಗಳ ಕಾಲ ಸಿಎಂ ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವರಿಷ್ಠರನ್ನು ಹಾಗೂ ವಿವಿಧ ಸಚಿವಾಲಯಗಳ ಸಚಿವರನ್ನು ಸಿಎಂ ಭೇಟಿ ಮಾಡಲಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ವರಿಷ್ಠರ ಜೊತೆ …

Read More »

ಮಳೆ ಮುಂದುವರಿದರೆ ಬೆಳೆ ಕೊಳೆಯುವ ಸಾಧ್ಯತೆ ಇದೆ ಎಂದು ರೈತರು ಆತಂಕಗೊಂಡಿದ್ದಾರೆ.

ಬೆಂಗಳೂರು: ರಾಜ್ಯದೆಲ್ಲೆಡೆ ವರುಣನ ಆರ್ಭಟ ಮುಂದುವರಿದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಕೆರೆ, ಕಟ್ಟೆಗಳು ತುಂಬಿದ್ದು, ಹಲವೆಡೆ ಅವಾಂತರ ಸೃಷ್ಟಿಸಿದೆ. ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ. ಬಾಗಮಂಡಲ ಮತ್ತು ತಲಕಾವೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದರೆ, ಮಡಿಕೇರಿ, ನಾಪೋಕ್ಲು ಸೇರಿದಂತೆ ಹಲವೆಡೆ ಮಳೆ ಜೊತೆಗೆ ಭಾರೀ ಪ್ರಮಾಣದಲ್ಲಿ ಚಳಿಗಾಳಿ ಬೀಸುತ್ತಿದ್ದು ಜನರು ತತ್ತರಿಸಿದ್ದಾರೆ. …

Read More »

ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ

ಬೆಂಗಳೂರು: ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕರ್ನಾಟದಲ್ಲಿ 1,19,587 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ 298 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. …

Read More »

ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ

ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಡ್ರಗ್ಸ್ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ ಶುರುವಾಗಿದೆ. ಶನಿವಾರ ನಡೆದ ಸಿಸಿಬಿ ತನಿಖೆಯಲ್ಲಿ ವೈಭವ್ ಜೈನ್ ರವಿಶಂಕರ್ ಮತ್ತು ರಾಗಿಣಿಗೆ ನಾನೇ ಎಲ್‍ಎಸ್‍ಡಿ ಪಿಲ್ಸ್ ತಂದುಕೊಟ್ಟಿದ್ದೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ನಟಿ ರಾಗಿಣಿ, ರವಿಶಂಕರ್, ವೀರೇನ್ ಖನ್ನಾ ಹಾಗೂ ಇತರ ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದೆ. ಬೆಂಗಳೂರು ಸೇರಿದಂತೆ …

Read More »

ಕ್ಯಾಸಿನೋಗೆ ನಾನೊಬ್ಬನೇ ಹೋಗಿಲ್ಲ.28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ.

ಬೆಂಗಳೂರು,ಸೆ.12- ನಾನು ಕೊಲೊಂಬೊಗೆ ಹೋಗಿದ್ದೇನೆ. ಕ್ಯಾಸಿನೋದಲ್ಲೂ ಭಾಗವಹಿಸಿದ್ದೇನೆ. ಅದೇನೂ ಅಕ್ರಮ ಚಟುವಟಿಕೆಯಲ್ಲ. ಡ್ರಗ್ಸ್ ಜಾಲದಲ್ಲಿ ನಾನು ಭಾಗವಹಿಸಿದ್ದರೆ ನನ್ನನ್ನು ಗಲ್ಲಿಗೇರಿಸಲಿ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಸಿನೋ ಅಕ್ರಮವಲ್ಲ. ಕೇಂದ್ರ ಸರ್ಕಾರ ಅದನ್ನು ನಿಷೇಧಿಸಿಲ್ಲ. ನಾನು ಸೇರಿದಂತೆ ಬಹಳಷ್ಟು ರಾಜಕಾರಣಿಗಳು   ಜೆಡಿಎಸ್‍ನಲ್ಲಿದ್ದಾಗ 28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ. ಹೋಗಬಾರದೆಂದು ಯಾವ ನಿಯಮವೂ ಇಲ್ಲ. ನಾನೇನೂ ಪಾಕಿಸ್ತಾನಕ್ಕೆ …

Read More »

15 ದಿನಕ್ಕೆ 4 ಲಕ್ಷ ಸಂಬಳ ಉಡೀಸ್ ಮಾಡುತ್ತಿದ್ದ ವೀರೇನ್ ಖನ್ನಾನ ಬಲಗೈ ಭಂಟ..!

ಬೆಂಗಳೂರು, ಸೆ.12- ತಿಂಗಳಿಗೆ 4 ಲಕ್ಷ ಸಂಬಳ ಪಡೆಯುತ್ತಿದ್ದ ಟೆಕ್ಕಿ ಆದಿತ್ಯ ಅಗರ್ವಾಲ್ ಅದನ್ನು 15 ದಿನಗಳಿಗೆ ಖಾಲಿ ಮಾಡಿಬಿಡುತ್ತಿದ್ದ ಎಂಬ ಕುತೂಹಲಕಾರಿ ಅಂಶಗಳು ಪತ್ತೆಯಾಗಿವೆ. ಡ್ರಗ್ಸ್ ಜಾಲದಲ್ಲಿ ಬಂಧಿತನಾಗಿರುವ ಸಾಫ್ಟ್‍ವೇರ್ ಎಂಜಿನಿಯರ್ ಆದಿತ್ಯ ಅಗರ್ವಾಲ್ ಮತ್ತೊಬ್ಬ ಕಿಂಗ್‍ಪಿನ್ ವೀರೇನ್ ಖನ್ನಾನ ಬಲಗೈ ಭಂಟ ಎನ್ನಲಾಗಿದೆ. ಈ ಇಬ್ಬರು ಜೀವನ ಚಿಕ್ಕದು. ಇರುವಷ್ಟು ದಿನ ಮಜಾ ಮಾಡಿ ಸಾಯಬೇಕು ಎಂಬ ಸಿದ್ಧಾಂತಕ್ಕೆ ಅಂಟಿಕೊಂಡಿದ್ದರು. ಹಾಗಾಗಿ ಇಬ್ಬರೂ ಮೋಜಿನ ಜೀವನದ ದಾಸರಾಗಿದ್ದರು. …

Read More »