ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಬೆಳಿಗ್ಗೆ ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಇದೇ 18 ರಂದು ಕರ್ನಾಟಕ ಭವನ ನಂ-1 ರ (ಕಾವೇರಿ) ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 19 ರಂದು ನಗರಕ್ಕೆ ವಾಪಸಾಗಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ …
Read More »ಭಾಷೆಗಳ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗಿಲ್ಲ ಅವಕಾಶ : ಹೆಚ್ಡಿಕೆ ಬೇಸರ
ಬೆಂಗಳೂರು, ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ …
Read More »ಮೇಕೆದಾಟು ಯೋಜನೆ; ಕೇಂದ್ರ ಸಚಿವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಬೆಂಗಳೂರು: ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಮಾಡಿದರು. ನವದೆಹಲಿಯ ಜಲಶಕ್ತಿ ಮಂತ್ರಾಲಯದಲ್ಲಿ ನಡೆದ ಈ ಭೇಟಿಯ ವೇಳೆ, ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಸಚಿವರನ್ನು ಒತ್ತಾಯಿಸಿದರು. ಹಾಗೆಯೇ ಕೃಷ್ಣ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿ ಅಣೆಕಟ್ಟೆ ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ …
Read More »ಸಂಜನಾಗೆ ಇಂದೂ ಮುಂದುವರೆದ ಸಿಸಿಬಿ ಡ್ರಿಲ್
ಬೆಂಗಳೂರು, ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟಿ ಸಂಜನಾ ಅವರ ವಿಚಾರಣೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ್ದಾರೆ. ಸಂಜನಾ ಅವರ ಪೊಲೀಸ್ ಕಸ್ಟಡಿ ಇಂದು ಮುಗಿಯುವ ಹಿನ್ನೆಲೆಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ತಲೆ ಮರೆಸಿಕೊಂಡಿರುವ ಶೇಖ್ ಫಾಝಿಲ್ ಎಲ್ಲಿದ್ದಾನೆ, ಆತನ ಚಟುವಟಿಕೆಗಳೇನು, ಕ್ಯಾಸಿನೋ ಪಾರ್ಟಿಗೆ ಯಾರ್ಯಾರನ್ನು ಕರೆದೊಯ್ಯುತ್ತಿದ್ದ ಎಂಬಿತ್ಯಾದಿಗಳ ಬಗ್ಗೆ ಸಂಜನಾ ಅವರಿಂದ ಉತ್ತರ ಪಡೆಯುತ್ತಿದ್ದಾರೆ. ಆದಿತ್ಯ ಆಳ್ವಾ ಅವರ ವಿಶಾಲವಾದ ಭವ್ಯ ಬಂಗಲೆಯಲ್ಲಿ ಪಾರ್ಟಿಗಳು ನಡೆಯುತ್ತಿತ್ತೇ , ನೀವೇನಾದರೂ …
Read More »ಮನಮೋಹನ್ ಸಿಂಗ್, ಚಿದಂಬರಂ ಸೇರಿ 16 ಸಂಸದರು ಅಧಿವೇಶನಕ್ಕೆ ಗೈರು
ನವದೆಹಲಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಸೇರಿದಂತೆ 16 ರಾಜ್ಯಸಭಾ ಸಂಸದರು ಸಂಸತ್ ಮುಂಗಾರು ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಮೇಲ್ಮನೆಗೆ ಮಾಹಿತಿ ನೀಡಿದ್ದಾರೆ. ಇಂದು ಸದನವು 14 ಸಂಸದರಿಗೆ ರಜೆ ಅನುಮೋದನೆ ನೀಡಿದ್ದರೆ, ಸೋಮವಾರ ತೃಣಮೂಲ ಕಾಂಗ್ರೆಸ್ ಸುಖೇಂಡು ಶೇಖರ್ ರಾಯ್ ಮತ್ತು ಸುಭಾಶಿಶ್ ಚಕ್ರವರ್ತಿ ಎಂಬ ಇಬ್ಬರು ಸಂಸದರಿಗೆ ರಜೆ ನೀಡಿತ್ತು. ಮನ್‍ಮೋಹನ್ ಸಿಂಗ್, ಚಿದಂಬರಂ ಮತ್ತು ಆಸ್ಕರ್ ಫರ್ನಾಂಡಿಸ್ (ಕಾಂಗ್ರೆಸ್), …
Read More »ಶಿರಾ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಕಣಕ್ಕೆ
ಬೆಂಗಳೂರು, ಶಿರಾ ಕ್ಷೇತ್ರದ ವಿಧಾನಸಭೆ ಉಪಚುನಾವಣೆಗೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಅಭ್ಯರ್ಥಿಯಾಗಬೇಕೆಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಸೂಚಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಕೆ.ಎನ್.ರಾಜಣ್ಣ ಅವರ ಉಪಾಧ್ಯಕ್ಷತೆಯಲ್ಲಿ ಚುನಾವಣೆ ನಡೆಸಲಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ಕೆ.ಎನ್.ರಾಜಣ್ಣ ಅವರು ಜಯಚಂದ್ರ ಅವರ ಅಭ್ಯರ್ಥಿಗಳಾಗಬೇಕೆಂದು …
Read More »ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಒಕ್ಕರಿಸಿದ ಕೊರೋನಾ!
ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಬಳಿಕ ಇಡೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಕುರಿತು ಸ್ವತಃ ಬಸವರಾಜ ಬೊಮ್ಮಾಯಿಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕೊರೋನಾ ಪರೀಕ್ಷೆಗೊಳಪಟ್ಟಿದ್ದು, ನನಗೆ ಸೋಂಕು ದೃಢಪಟ್ಟಿದೆ. ಆದರೆ, ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದಿಲ್ಲ, ಪ್ರಸ್ತುತ ಆರೋಗ್ಯವಾಗಿಯೇ ಇದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆಂದು ಹೇಳಿದ್ದಾರೆ. …
Read More »ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ.
ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಈ ಹಿನ್ನೆಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ …
Read More »ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇತ್ತ ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿ ರಾಗಿಣಿ ಅವರ ಫ್ಲ್ಯಾಟ್ ಇತ್ತು. ಇದೀಗ ಆ ಫ್ಲ್ಯಾಟನ್ನು ನಟಿ …
Read More »ಬೆಂಗಳೂರು ಗಲಭೆ ಪ್ರಕರಣ: ಆರೋಪಿಗಳಿಗಿಲ್ಲ ಜಾಮೀನು
ಬೆಂಗಳೂರು: ನಗರದ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಅರುಣ್ ಮನೋಜ್ ಸೇರಿ ಇತರೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ನಗರದ 66ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಆರೋಪಿಗಳಾದ ಅರುಣ್ ಮನೋಜ್, ಸಂತೋಷ್‌ಕುಮಾರ್, ಲಿಯಾಖತ್ ಮತ್ತು ರೆಹಮಾನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಘಟನೆಗೆ …
Read More »