ಬೆಂಗಳೂರು : ರಾಜ್ಯದ ಜನತೆ ಸಾಲು-ಸಾಲು ಸಂಕಷ್ಟಗಳಿಂದ ಹೆಣಗುತ್ತಿದ್ದರೂ ರಾಜ್ಯ ಸರ್ಕಾರವು ಎಂಟು ದಿನಗಳ ಕಾಲ ನಾಮ್‌ಕೆವಾಸ್ತೆ ವಿಧಾನಮಂಡಲ ಅಧಿವೇಶನ ನಡೆಸುತ್ತಿರುವುದು ಜನದ್ರೋಹಿ ಹಾಗೂ ದುಷ್ಟತನದ ಪರಮಾವಧಿ. ಸರ್ಕಾರ ಕೂಡಲೇ ಅಸಾಂವಿಧಾನಿಕವಾಗಿ ನಡೆದುಕೊಳ್ಳುವುದನ್ನು ಬಿಟ್ಟು ಅಧಿವೇಶನವನ್ನು ಹದಿನೈದು ದಿನಗಳ ಕಾಲ ವಿಸ್ತರಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ …
Read More »ಬಿಡುವು ಕೊಟ್ಟು ಬಿದ್ದ ಮಳೆಗೆ ರಾಜ್ಯ ತತ್ತರ: ಹಾಳಾಯ್ತು ಬೆಳೆ, ಮನೆಗಳಿಗೆ ನುಗ್ಗಿದ ಚರಂಡಿ ನೀರು
ಕೆರೆಗಳು ಕೋಡಿ ಬಿದ್ದು ಹರಿಯುತ್ತಿವೆ.. ಚಿಕ್ಕ ನದಿಯೇ ಭೋರ್ಗರೆಯುತ್ತಿದೆ.. ರಸ್ತೆಗಳಿಗೂ ನೀರು ನುಗ್ಗಿದೆ, ಮನೆ ಮುಂದೆಯೇ ನೀರು ಬಂದು ನಿಂತಿದೆ.. ವರುಣನ ಅಬ್ಬರಕ್ಕೆ ಎಲ್ಲವೂ ಅಲ್ಲೋಲ ಕಲ್ಲೋಲ ಆಗಿದೆ. ಬೆಳಗಾವಿಗೆ ಮತ್ತೆ ಎದುರಾಯ್ತು ಜಲಕಂಟಕ! ಭಯ.. ಮತ್ತದೇ ಭಯ.. ನೆರೆ ನರಕದಿಂದ ಪಾರಾಗಿ ತಿಂಗಳ ತುಂಬೋ ಮೊದಲೇ, ಬೆಳಗಾವಿ ಜನರಲ್ಲಿ ಮತ್ತೆ ಪ್ರವಾಹ ಆತಂಕ ಕಾಡ್ತಿದೆ. ಯಾಕಂದ್ರೆ, ಕಳೆದೆರಡು ದಿನದಿಂದ ಸುರೀತಿರೋ ಮಳೆಯಿಂದಾಗಿ, ಮಲಪ್ರಭಾ ನದಿ ಅಪಾಯದ ಮಟ್ಟಕ್ಕೇರಿದೆ. ಕಿತ್ತೂರಿನ …
Read More »ನಟಿ ಸಂಜನಾ ಆಪ್ತ ಶೇಖ್ ಫೈಜಲ್ ಮನೆ ಮೇಲೆ ಸಿಸಿಬಿ ದಾಳಿ
ಬೆಂಗಳೂರು: ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾದ ಆರೋಪದಡಿ ಬಂಧಿಸಲಾಗಿರುವ ನಟಿ ಸಂಜನಾ ಗಲ್ರಾನಿ ಆಪ್ತ ಎನ್ನಲಾದ ಶೇಖ್ ಫೈಜಲ್ ಎಂಬಾತನ ಮನೆ ಮೇಲೆ ಸಿಸಿಬಿ ಪೊಲೀಸರು ಬುಧವಾರ ದಾಳಿ ಮಾಡಿದರು. ಜಯನಗರದಲ್ಲಿರುವ ಮನೆಗೆ ಹೋಗಿದ್ದ ಪೊಲೀಸರು, ಗಂಟೆಗಟ್ಟಲೇ ಪರಿಶೀಲನೆ ನಡೆಸಿದರು. ಫೈಜಲ್ ಮನೆಯಲ್ಲಿ ಇರಲಿಲ್ಲ. ಸಹೋದರ ಹಾಗೂ ಪತ್ನಿ-ಮಕ್ಕಳು ಮಾತ್ರ ಇದ್ದರು. ಶೋಧ ಮುಗಿಸಿದ ಪೊಲೀಸರು, ಫೈಜಲ್ ಸಹೋದರನನ್ನು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆತಂದಿದ್ದರು. ಫೈಜಲ್ ಬಗ್ಗೆ ಮಾಹಿತಿ ಸಂಗ್ರಹಿಸಿ …
Read More »ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ
ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ 8,071 ಕೋಟಿ ರು. ಅಂದಾಜು ಹಾನಿಯಾಗಿದ್ದು, ಎಸ್‌ಡಿಆರ್‌ಎಫ್ ನಿಯಮಗಳ ಅನ್ವಯ 628.7 ಕೋಟಿ ರು. ಅನುದಾನ ಮಾತ್ರ ಬರುತ್ತದೆ. ಇದು ಸಾಕಾಗುವುದಿಲ್ಲ. ಈ ಬಾರಿ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಅಲ್ಲದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ನೆರೆ ಹಾನಿ ನಿಯಂತ್ರಿಸಲು ಪ್ರವಾಹ ಮುನ್ಸೂಚನೆ ಹಾಗೂ ಪ್ರತಿಕ್ರಿಯೆಗಾಗಿ …
Read More »ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ದೂರು………….
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ದಾಖಲಿಸಿದ್ದಾರೆ. ಚಾಮರಾಜ ಪೇಟೆ ಪೊಲೀಸ್ ಠಾಣೆಯಲ್ಲಿ ಜಮೀರ್ ದೂರು ದಾಖಲಿಸಿದ್ದು, ಪೊಲೀಸರು ದೂರಿನ ಆಧಾರದ ಅನ್ವಯ ಎನ್‍ಸಿಆರ್ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಮಾಧ್ಯಮಗಳಲ್ಲಿ ಬಂದ ಸಂಬರಗಿ ಅವರ ಮಾತಿನ ವಿಡಿಯೋಗಳನ್ನು ತಮ್ಮ ದೂರಿನೊಂದಿಗೆ ಜಮೀರ್ ಸಾಕ್ಷಿಯಾಗಿ ನೀಡಿದ್ದಾರೆ. ಸಂಬರಗಿ ವಿರುದ್ಧ 100 ಕೋಟಿ ರೂ …
Read More »ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಭೇಟಿ
ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಹೇಳಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ …
Read More »ಆಟಿಕೆಗಳಂತೆ ಕೊಚ್ಚಿ ಹೋಯ್ತು ಬೈಕುಗಳು –
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡನೇ ದಿನವೂ ರಾತ್ರಿ ಮಳೆ ಮುಂದುವರೆದಿದೆ. ಬುಧವಾರ ರಾತ್ರಿ ಸತತವಾಗಿ ಸುರಿದ ಮಳೆಗೆ ಮನೆ, ಅಪಾರ್ಟ್‍ಮೆಂಟ್‍ಗಳು ಜಲಾವೃತವಾಗಿವೆ. ಜನರು ಹೊರ ಬರುವುದಕ್ಕೂ ಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ. ಬುಧವಾರ ಮಳೆಗೆ ಪೂರ್ತಿ ಜಲಾವೃತವಾಗಿದ್ದ ಹೊರಮಾವು ನಗರಕ್ಕೆ ರಾತ್ರಿ ಸುರಿದ ಮಳೆ ಜಲದಿಗ್ಬಂಧನ ಹಾಕಿದೆ. ಆರ್‍ಆರ್ ನಗರದಲ್ಲಿ ರಾಜಕಾಲುವೆ ಒಡೆದುಕೊಂಡು ಮನೆಗಳಿಗೆ ನೀರು ನುಗ್ಗಿದೆ. ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಚೊಕ್ಕಸಂದ್ರ, ಶಿವಾನಂದ ಸರ್ಕಲ್, ಪೀಣ್ಯ, ದಾಸರಹಳ್ಳಿ ಮತ್ತು …
Read More »ಕೊರೊನಾ ಸಂಕಷ್ಟದಲ್ಲೂ ರಿಲಾಯನ್ಸ್‌ಗೆ ಹಣದ ಹೊಳೆ, ಸಿಲ್ವರ್ ಲೇಕ್‍ನಿಂದ 7,500 ಕೋಟಿ ರೂ. ಹೂಡಿಕೆ..!
ನವದೆಹಲಿ, -ಕೊರೊನಾ ವೈರಸ್ ಹಾವಳಿಯಿಂದ ದೇಶದ ಅನೇಕ ಸಂಸ್ಥೆಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿ ಅಸ್ವಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದರೆ, ಭಾರತದ ಪ್ರತಿಷ್ಠಿತ ರಿಲಾಯನ್ಸ್ ಸಂಸ್ಥೆಗೆ ನಿರಂತರವಾಗಿ ಹಣದ ಹೊಳೆ ಹರಿದುಬರುತ್ತಿದೆ. ಅಮೆರಿಕದ ಖಾಸಗಿ ಈಕ್ವಿಟಿ ಸಂಸ್ಥೆ ಸಿಲ್ವರ್ ಲೇಕ್ ಪಾರ್ಟ್‍ನರ್ಸ್, ಹೆಸರಾಂತ ಉದ್ಯಮಿ ಮುಕೇಶ್ ಅಂಬಾನಿ ಒಡೆತನದ ರಿಲಾಯನ್ಸ್ ಇಂಡಸ್ಟ್ರೀಸ್‍ನ ರಿಲಾಯನ್ಸ್ ರಿಟೈಲ್‍ನಲ್ಲಿ 7,500 ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡಿ ಶೇ.1.75ರಷ್ಟು ಪಾಲು ಪಡೆದಿದೆ. ಸಿಲ್ವರ್ ಲೇಕ್ ಕಂಪನಿಯು ರಿಲಾ …
Read More »ಅ.1ರಿಂದ ಚಿತ್ರಮಂದಿರ ತೆರೆಯುವ ಸಾಧ್ಯತೆ
ಬೆಂಗಳೂರು,- ಅಕ್ಟೋಬರ್ 1ರಿಂದ ಚಲನಚಿತ್ರ ಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಸಮ್ಮತಿ ಸೂಚಿಸುವ ಸಾಧ್ಯತೆ ಇದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ತಿಳಿಸಿದ್ದಾರೆ. ದಕ್ಷಿಣ ಮತ್ತು ಉತ್ತರ ಭಾರತದ ವಾಣಿಜ್ಯ ಮಂಡಳಿಗಳು ಕೇಂದ್ರ ಸರ್ಕಾರಕ್ಕೆ ಚಿತ್ರಮಂದಿರಗಳನ್ನು ತೆರೆಯುವ ಸಂಬಂಧ ಮನವಿ ಸಲ್ಲಿಸಿದ್ದು, ಇದಕ್ಕೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದರು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿನಿಂದ ಚಿತ್ರೋದ್ಯಮದ ಯಾವುದೇ ಚಟುವಟಿಕೆಗಳು ನಡೆಯದೇ ಸಂಪೂರ್ಣ ಸ್ಥಗಿತವಾಗಿದೆ. …
Read More »500 ಕನ್ನಡ ಪುಸ್ತಕ ಸಗಟು ಖರೀದಿಗೆ ಕ್ರಮ – ಸಚಿವ ಎಸ್ ಸುರೇಶ್ ಕುಮಾರ್
ಬೆಂಗಳೂರು : ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ …
Read More »