ಬೆಂಗಳೂರು: ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. …
Read More »ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ………………
ಬೆಂಗಳೂರು: ಮಹಿಳಾ ಸಾಂತ್ವನ ಕೇಂದ್ರದ ಒಂದೇ ಕೊಠಡಿಯಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಮಂಗಳವಾರ ರಾತ್ರಿಯನ್ನು ಕಳೆದಿದ್ದಾರೆ. 5 ಹಾಸಿಗೆಗಳ ಪೈಕಿ ಮೊದಲ ಮತ್ತು ಕೊನೆಯ ಹಾಸಿಗೆಯನ್ನು ಇಬ್ಬರಿಗೆ ನೀಡಿದ್ದರೆ ಮಧ್ಯದಲ್ಲಿರುವ ಮೂರು ಬೆಡ್‌ಗಳನ್ನು ಭದ್ರತೆಗೆ ನಿಯೋಜನೆಗೊಂಡಿದ್ದ ಮಹಿಳಾ ಪೊಲೀಸರಿಗೆ ನೀಡಲಾಗಿತ್ತು. ರಾಗಿಣಿ ನೋಡಿ ನಟಿ ಸಂಜನಾ ಈಗ ಸಮಾಧಾನ ಆಯ್ತಾ ಕೇಳಿದ್ದಾರೆ. ರಾತ್ರಿ ಊಟ ಬೇಡ ಎಂದು ಹೇಳಿದ್ದ ಸಂಜನಾ ಕಣ್ಣೀರು ಹಾಕುತ್ತಾ ಕುಳಿತಿದ್ದರು. ಕೆಪಿಎಲ್ ವಿಚಾರದಲ್ಲಿ ಇಬ್ಬರು …
Read More »ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆ……………
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಭಾರೀ ಮಳೆಯಾಗಿದ್ದು, ರಾತ್ರಿ ಪೂರ್ತಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ನಗರ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ಸಿಲಿಕಾನ್ ಸಿಟಿಯ ಹೆಚ್‍ಎಸ್‍ಆರ್ ಲೇಔಟ್ ಮತ್ತು ಹೊರಮಾವು ಬಹುತೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ. ಶಾಂತಿನಗರ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾಜಿನಗರ, ಹೆಬ್ಬಾಳ, ರಾಜಾಜಿನಗರ, ಕೋರಮಂಗಲ, ಕೆಆರ್ ಪುರಂ ಮತ್ತು ಹೆಗ್ಡೆ ನಗರ ಸೇರಿದಂತೆ ಹಲವೆಡೆ ವರಣ …
Read More »ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ
ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಅನೇಕ ಧಾರಾವಾಹಿ, ಸಿನಿಮಾಗಳಿಗೆ ಬ್ರೇಕ್ ಇದ್ದಿದೆ. ಇತ್ತೀಚೆಗೆ ಒಂದೊಂದೆ ಸಿನಿಮಾದ ಚಿತ್ರೀಕರಣ ಆರಂಭವಾಗುತ್ತಿದೆ. ಈ ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ತೆಲುಗಿನಲ್ಲಿ ಬಿಗ್‍ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದ್ದು, ಅಕ್ಟೋಬರ್‍ನಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ …
Read More »ರಾಜ್ಯದಲ್ಲಿ ಕೊರೋನಾಕ್ಕೆ 2ನೇ ಗರಿಷ್ಠ ಸಾವು
ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಕೊರೋನಾ ಹೆಮ್ಮಾರಿಗೆ 146 ಮಂದಿ ಬಲಿಯಾಗಿದ್ದು, ಹೊಸದಾಗಿ 8,225 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ. ತನ್ಮೂಲಕ ರಾಜ್ಯದಲ್ಲಿನ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.12 ಲಕ್ಷ ತಲುಪಿದೆ. ಕರೋನಾ ಸೋಂಕಿಗೆ ಮಂಗಳವಾರ 146 ಮಂದಿ ಬಲಿಯಾಗಿರುವುದು ಇದುವರೆಗಿನ ಎರಡನೇ ಗರಿಷ್ಠ ಸಾವಿನ ಪ್ರಮಾಣವಾಗಿದೆ. ಆಗಸ್ಟ್ 25 ರಂದು 148 ಮಂದಿ ಸೋಂಕಿಗೆ ಮೃತಪಟ್ಟಿದ್ದು ಇದುವರೆಗಿನ ದಾಖಲೆ. ರಾಜ್ಯದಲ್ಲಿ ಸದ್ಯ 96,918 ಸಕ್ರೀಯ ಕೊರೋನಾ ಪ್ರಕರಣಗಳಿದ್ದು ಇದರಲ್ಲಿ …
Read More »ಇಂದಿನಿಂದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಇರುವುದರಿಂದ ಸೆ.9ರಿಂದ 13ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ. ವ್ಯತ್ಯಯವಾಗುವ ಸ್ಥಳಗಳು: ಸೆ.9ರಂದು ಗೃಹಲಕ್ಷ್ಮೀ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, 10ರಂದು ದುಗಲಮ್ಮ ಬಡಾವಣೆ, ಕಂಠೀರವ ಸ್ಟುಡಿಯೊ ರಸ್ತೆ, ನರಸಿಂಹುಲು ಬಡಾವಣೆ, ಇಟ್ಟಮಡು ಮುಖ್ಯರಸ್ತೆ, ಮಾರುತಿ ನಗರ, ಶ್ರೀನಿವಾಸ ಕಾಲೊನಿ, ಮಂಜುನಾಥ ನಗರ, ಸೀತಾ ವೃತ್ತ, 11ರಂದು ದ್ವಾರಕಾ ನಗರ, ಹೊಸಕೆರೆಹಳ್ಳಿ, ಜನಶಕ್ತಿ …
Read More »ಅಧಿವೇಶನಕ್ಕೆ ಹಾಜರಾಗುವ ಸಚಿವರು-ಶಾಸಕರು-ಅಧಿಕಾರಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ
ಬೆಂಗಳೂರು,ಸೆ.8- ಇದೇ 21ರಂದು ಆರಂಭವಾಗಲಿರುವ ಮಳೆಗಾಲದ ಅಧಿವೇಶನದ ಕಲಾಪದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಮಾಧ್ಯಮದವರು ಸೇರಿದಂತೆ ಪ್ರತಿಯೊಬ್ಬರು ಕಡ್ಡಾಯವಾಗಿ ಮೂರು ದಿನ ಮುಂಚಿತವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು. ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಜನಪ್ರತಿನಿಧಿಗಳು, ಅಧಿಕಾರಿ ವರ್ಗ ಸೇರಿದಂತೆ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯ ಅಧಿಕಾರಿಗಳು ದೃಢೀಕರಿಸಿದ ಪ್ರಮಾಣ ಪತ್ರವನ್ನು ಪ್ರದರ್ಶಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ …
Read More »ಈ ಬಾರಿಯ 2020ರ ದಸರಾವನ್ನು ಸರಳವಾಗಿ ಆಚರಿಸಲಾಗುವುದು
ಬೆಂಗಳೂರು: ಕೊರೊನಾ ವೈರಸ್ ಸೋಂಕಿನ ಕಾರಣದಿಂದ ಈ ಬಾರಿಯ 2020ರ ದಸರಾವನ್ನು ಸರಳವಾಗಿ ಆಚರಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ. ದಸರಾ ಆಚರಣೆ ಕುರಿತು ಚರ್ಚಿಸಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಸಚಿವ ಸಿಟಿ ರವಿ, ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಈ ಬಾರಿ ದಸರಾ ಸೀಮಿತವಾಗಿರಬೇಕು ಎಂದು ಉನ್ನತ …
Read More »ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ.
ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಯಲಹಂಕ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನು ನಾಮಕರಣ ಮಾಡಿದೆ. ಇಂದು ನಾಮಕರಣದ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪನವರು ಉದ್ಘಾಟನೆ ಮಾಡಿದ್ದಾರೆ. ಯಲಹಂಕದ ಡೈರಿ ಸರ್ಕಲ್ ಬಳಿ ಇರುವ ಮೇಲ್ಸೇತುವೆಗೆ ವೀರ ಸಾವರ್ಕರ್ ಅವರ ಹೆಸರನ್ನು ಇಡಲಾಗಿದೆ. 388.35 ಮೀಟರ್ ಉದ್ದದ ಈ ಮೇಲ್ಸೇತುವೆಯನ್ನು ಬಿಬಿಎಂಪಿಯಿಂದ 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡಲು ಕಾಂಗ್ರೆಸ್, ಜೆಡಿಎಸ್ ವಿರೋಧಿಸಿತ್ತು. ಹೀಗಾಗಿ …
Read More »ಬರೋಬ್ಬರಿ 24 ಮಂದಿಯ ಹೆಸರನ್ನು ರಿಲೀವ್ ಮಾಡಿದ್ದಾರೆ:ಸಂಜನಾ
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ಮಾಡುತ್ತಿದ್ದು, ಈ ವೇಳೆ ಸಂಜನಾ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ಸಂಜನಾರನ್ನು ಅಧಿಕಾರಿಗಳು ಪ್ರಶ್ನೆ ಮಾಡುತ್ತಿದ್ದಾರೆ. ವಿಚಾರಣೆ ವೇಳೆ ಸಂಜನಾ ಬರೋಬ್ಬರಿ 24 ಮಂದಿಯ ಹೆಸರನ್ನು ರಿಲೀವ್ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಮೊದಲಿಗೆ ಸಂಜನಾ ಯಾವ ಪ್ರಶ್ನೆಗಳಿಗೂ ಸರಿಯಾಗಿ ಉತ್ತರ ಕೊಡುತ್ತಿರಲಿಲ್ಲ. ನಂತರ ಸಿಸಿಬಿ ಅಧಿಕಾರಿಗಳು …
Read More »