Breaking News

ಬೆಂಗಳೂರು

ಮರು ಮೌಲ್ಯಮಾಪನ ಮಾಡ್ಸಿ ರಾಜ್ಯಕ್ಕೆ ಸೆಕೆಂಡ್ ಬಂದ SSLC ವಿದ್ಯಾರ್ಥಿನಿ: ಇದು ಕಾನ್ಫಿಡೆಂಟ್ ಅಂದ್ರೆ

ಶಿವಮೊಗ್ಗ(ಸೆ: ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ ಬಂದ ಅಂಕಗಳಿಂದ ಶಿವಮೊಗ್ಗದ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಶಿವಮೊಗ್ಗ ನಗರದ ಕಲ್ಲಹಳ್ಳಿ ಬಡಾವಣೆಯ ಪ್ರಿಯದರ್ಶಿನಿ ಶಾಲೆಯ ಕಾವ್ಯ ಆರ್. ಮರು ಮೌಲ್ಯಮಾಪನದಿಂದ ರಾಜ್ಯಕ್ಕೆ ಸೆಕೆಂಡ್ ಬಂದ ವಿದ್ಯಾರ್ಥಿನಿ. ಇತ್ತೀಚೆಗೆ ಪ್ರಕಟಗೊಂಡಿದ್ದ ಎಸ್​​ಎಸ್‌ಎಲ್​​ಸಿ ಫಲಿತಾಂಶದಲ್ಲಿ ಈಕೆಗೆ 625ಕ್ಕೆ 620 ಅಂಕಗಳು ಬಂದಿದ್ದವು. ಇಷ್ಟು ಬಂದಿದ್ದರೂ ಕಾವ್ಯಗೆ ಸಮಾಧಾನ ಆಗಿರಲಿಲ್ಲ. ಇನ್ನೂ ಅಂಕಗಳು ಬರಬೇಕೆಂಬ ಲೆಕ್ಕಾಚಾರ ಹಾಕಿ ಕೊನೆಗೆ ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದ್ದಳು. …

Read More »

ವಾಯು ಮಾಲಿನ್ಯದಿಂದ ಕೊರೋನ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳ; ಸಮೀಕ್ಷೆ ವರದಿ

ಬೆಂಗಳೂರು,  : ರಾಜಧಾನಿಯಲ್ಲಿ ಕೊರೋನ ಸೋಂಕಿನಿಂದ ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚಳಕ್ಕೆ ವಾಯುಮಾಲಿನ್ಯವು ರೋಗ ನಿರೋಧಕ ಶಕ್ತಿಯನ್ನು ಕುಗ್ಗಿಸುವುದೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಫಿಟ್ ಇಂಡಿಯಾದ 2020ರ ಸಮೀಕ್ಷೆ ಪ್ರಕಾರ ಶೇ.20.8 ಜನರು ತಮ್ಮಲ್ಲಿನ ಕಡಿಮೆ ರೋಗ ನಿರೋಧಕ ಶಕ್ತಿಯ ಕಾರಣಕ್ಕಾಗಿ ರಾಜಧಾನಿಯಲ್ಲಿ ಶೇ.22ರಷ್ಟ್ಟು ಜನರು ವರ್ಷವೊಂದಕ್ಕೆ 3 ಬಾರಿಯಂತೆ ವಿವಿಧ ರೋಗಗಳಿಗೆ ಒಳಗಾಗುತ್ತಿದ್ದಾರೆ. ನಗರವಾರು ಹೋಲಿಸಿದಾಗ ಹೆಚ್ಚು ವಾಯುಮಾಲಿನ್ಯಕ್ಕೆ ಒಳಗಾದ ನಗರಗಳ ಜನರು ಅತ್ಯಂತ ಕಡಿಮೆ ರೋಗನಿರೋಧಕ ಶಕ್ತಿಯನ್ನು ಹೊಂದಿರುವುದು …

Read More »

ಕರಾವಳಿ ಭಾಗದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 10ರವರೆಗೆ ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಹಳದಿ ಆಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲೂ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಾಗಿ ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಬೆಳಗಾವಿ, ಧಾರಾವಾಡ, ಗದಗ ಪ್ರದೇಶಗಳಲ್ಲಿ ಇಂದು ಮತ್ತು …

Read More »

ರಾಜ್ಯದಲ್ಲಿ ಇಂದು ಕೊರೋನಾಗೆ 95 ಬಲಿ, ಬೆಂಗಳೂರಿನಲ್ಲಿ 2,824 ಸೇರಿ 9,319 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬರೋಬ್ಬರಿ 9,319 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,98,551ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಇಂದು 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 6,393ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 38 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 95 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ …

Read More »

ವಿವಿಗಳ ಘಟಕ ಕಾಲೇಜುಗಳಾಗಿ 3 ಕಾಲೇಜು ಅಭಿವೃದ್ಧಿ:ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು : ವಿದ್ಯಾರ್ಥಿಗಳ ಹಾಜರಾತಿಯ ಕೊರತೆ ಎದುರಿಸುತ್ತಿರುವ ಮೂರು ಪ್ರಥಮ ದರ್ಜೆ ಕಾಲೇಜುಗಳ ಕಟ್ಟಡಗಳನ್ನು ಹತ್ತಿರದ ವಿಶ್ವವಿದ್ಯಾಲಯಗಳಿಗೆ ಹಸ್ತಾಂತರಿಸಿದ್ದು, ಅಲ್ಲಿ ವಿಶ್ವವಿದ್ಯಾಲಯಗಳೇ ಕಾಲೇಜುಗಳನ್ನು ತೆರೆಯಲಿವೆ ಎಂದು ಡಿಸಿಎಂ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ತಿಳಿಸಿದರು. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ತೆರಕಣಾಂಬಿ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಮೈಸೂರು ವಿಶ್ವವಿದ್ಯಾಲಯಕ್ಕೆ ಹಾಗೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ದಾವಣಗೆರೆ …

Read More »

ನಂದಿನಿ ಸಿಹಿ ಮಾರಾಟ : ಭಾರೀ ಬಂಪರ್

ಬೆಂಗಳೂರು  : ಗೌರಿ ಗಣೇಶ ಹಬ್ಬ ಮತ್ತು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ನಂದಿನಿ ಸಿಹಿ ಉತ್ಸವಕ್ಕೆ ರಾಜ್ಯಾದ್ಯಂತ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದು ತಿಂಗಳಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟ ಶೇ.68ರಷ್ಟುಹೆಚ್ಚಳವಾಗಿದೆ ಎಂದು ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌) ಮಾಹಿತಿ ನೀಡಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ ನಂದಿನಿ ಹಾಲು ಸೇರಿದಂತೆ ಚೀಸ್‌, ಪನ್ನೀರ್‌ ಮತ್ತು ಸಿಹಿ ಉತ್ಪನ್ನಗಳ ಮಾರಾಟದಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿತ್ತು. ಆದರೆ, ಗೌರಿ ಗಣೇಶ ಮತ್ತು …

Read More »

ಬೆನ್ನು ನೋವಿನ ನೆಪ ಹೇಳಿ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿ

ಬೆಂಗಳೂರು: ಡ್ರಗ್ಸ್ ಮಾಫಿಯಾ ಜಾಲದಲ್ಲಿ ಬಂಧಿಯಾಗಿರುವ ನಟಿ ರಾಗಿಣಿ ನಾನು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಮೂರು ದಿನಗಳ ಕಾಲ ಸಿಸಿಬಿ ಕಸ್ಟಡಿಯಲ್ಲಿರುವ ರಾಗಿಣಿ ವಿಚಾರಣೆ ವೇಳೆ ಹಲವು ಸತ್ಯಸಂಗತಿಗಳು ಬೆಳಕಿಗೆ ಬರುತ್ತಿದೆ. ಬೆಂಗಳೂರಿನ ಡೈರಿ ಸರ್ಕಲ್‍ನ ಕಿದ್ವಾಯಿ ಆಸ್ಪತ್ರೆ ಬಳಿಯ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯನ್ನು ಶನಿವಾರ ಸಿಸಿಬಿ ವಿಚಾರಣೆ ಮಾಡಿಲ್ಲ. ನನಗೆ ಜ್ವರ, ಬೆನ್ನು ನೋವಿ ಎಂದು ನೆಪ ಹೇಳಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ …

Read More »

ರಾಜ್ಯದಲ್ಲಿ ಗರಿಷ್ಠ ಸೋಂಕಿತರು : ದಾಖಲೆ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಶನಿವಾರ 9,746 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಎರಡನೇ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3.61 ಲಕ್ಷಕ್ಕೆ ಏರಿಕೆಯಾಗಿದೆ. ಸೆಪ್ಟೆಂಬರ್‌ 2ರಂದು ದಾಖಲಾಗಿದ್ದ 9,860 ಪ್ರಕರಣದ ಬಳಿಕ ಶನಿವಾರ ಎರಡನೇ ಅತಿ ಹೆಚ್ಚು ಸೋಂಕು ವರದಿಯಾಗಿದೆ. ಅಲ್ಲದೆ, ದಾಖಲೆಯ 9,102 ಮಂದಿ ಗುಣಮುಖರಾಗಿದ್ದಾರೆ. ಇನ್ನು ಶನಿವಾರ 128 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 6,298ಕ್ಕೆ …

Read More »

ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ಇಲ್ಲಿದೆ ನೋಡಿ ಸಂಪೂರ್ಣ ವೇಳಾಪಟ್ಟಿ

ಬೆಂಗಳೂರು : ಪದವಿ ಪೂರ್ವಶಿಕ್ಷಣ ಇಲಾಖೆಯು 2019-20 ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಸೆ. 7 ರಿಂದ 19 ರವರೆಗೆ ನಡೆಯಲಿದೆ. ಪರೀಕ್ಷೆಗಳು ಬೆಳಗ್ಗೆ 10.15 ರಿಂದ 1.30 ಹಾಗೂ 2.15 ರಿಂದ 5.30 ರ ಅವಧಿಯಲ್ಲಿ ನಡೆಯಲಿವೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ವೇಳಾ ಪಟ್ಟಿ ಸಮಯ ಬೆಳಗ್ಗೆ 10.15 ರಿಂದ 1.30ರವರೆಗೆ, ಮಧ್ಯಾಹ್ನ 2.15 ರಿಂದ ಸಾಯಂಕಾಲ 5.30ರವರೆಗೆ ಸೆ.7ರ ಬೆಳಗ್ಗೆ ಉರ್ದು, ಸಂಸ್ಕೃತ, …

Read More »

ಮೇಘನಾ ರಾಜ್ ಬಳಿ ಕ್ಷಮೆ ಕೋರಿದ ಇಂದ್ರಜಿತ್ ………..

ಬೆಂಗಳೂರು: ಪತಿ ಚಿರಂಜೀವಿ ಸರ್ಜಾ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ನಟಿ ಮೇಘನಾ ರಾಜ್ ಅವರು ವಾಣಿಜ್ಯ ಮಂಡಳಿಗೆ ಬರೆದ ಪತ್ರದ ಬೆನ್ನಲ್ಲೇ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕ್ಷಮೆ ಕೋರಿದ್ದಾರೆ.ಮಾತನಾಡಿದ ಇಂದ್ರಜಿತ್, ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುವುದಾಗಿ ತಿಳಿಸಿದರು. ಈಗಾಗಲೇ ನಾನು ನೀಡಿದ್ದ ಹೇಳಿಕೆಯನ್ನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು. ಈ ಸಂಬಂಧ ನಾನು ಬಹಿರಂಗ …

Read More »