ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನದ ಗಾಥೆಯ ಕುರಿತಾದ ಮಹಾನಾಯಕ ಧಾರವಾಹಿ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದು, ಇದೀಗ ಈ ಧಾರವಾಹಿಯ ಪ್ರಸಾರವನ್ನು ನಿಲ್ಲಿಸುವಂತೆ ಖಾಸಗಿ ವಾಹಿನಿ ಮೇಲೆ ಕೆಲವರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಮಹಾನಾಯಕ ಧಾರವಾಹಿ ನಿಲ್ಲಿಸುವಂತೆ ಹಲವಾರು ದೂರವಾಣಿ ಕರೆಗಳು ಬರುತ್ತಿವೆ. ಮಧ್ಯರಾತ್ರಿ ಕರೆ ಮಾಡಿ ಧಾರವಾಹಿ ನಿಲ್ಲಿಸುವಂತೆ ಕೆಲವರು ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಘವೇಂದ್ರ …
Read More »ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ನಟಿ ಸಂಯುಕ್ತ ಹೆಗ್ಡೆ
ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆಯವರು ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದು, ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಕ್ಕೆ ಸ್ಥಳೀಯರು ಮತ್ತು ಹಿರಿಯ ನಾಗರಿಕರು ವಿರೋಧ ವ್ಯಕ್ತಪಡಿಸಿದ್ದಾರೆ. ಆಗ ಸಾರ್ವಜನಿಕರ ವಿರುದ್ಧ ನಟಿ ಸಂಯುಕ್ತ ಕಿರುಚಾಡಿ ರಂಪ ಮಾಡಿದ್ದಾರೆ. ಈ ವೇಳೆ ಸಾರ್ವಜನಿಕರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟನ್ನು ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಗೇಟ್ …
Read More »ಊಟ, ಬಟ್ಟೆ ಎಲ್ಲವನ್ನು ವಾಪಸ್ ಊಟ ಕೊಡಲು ಪೊಲೀಸರು ಅವಕಾಶ ನೀಡಲಿಲ್ಲ
ಬೆಂಗಳೂರು: ಡ್ರಗ್ಸ್ ಮಾಫಿಯಾಗೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಮಹಿಳಾ ಸಾಂತ್ವನ ಕೇಂದ್ರದಲ್ಲಿರಿಸಿದ್ದಾರೆ. ಹೀಗಾಗಿ ಮಧ್ಯರಾತ್ರಿ ಮಗಳನ್ನು ನೋಡಲು ನಟಿ ರಾಗಿಣಿ ಪೋಷಕರು ಹೋಗಿದ್ದರು.ಮಧ್ಯರಾತ್ರಿಯಲ್ಲಿ ರಾಗಿಣಿ ಭೇಟಿ ಮಾಡಲು ಪೋಷಕರು ದೌಡಾಯಿಸಿದ್ದು, ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಂದು ಗೇಟ್‍ನಲ್ಲಿ ಕಾದು ನಿಂತಿದ್ದರು. ನಟಿ ರಾಗಿಣಿ ತಾಯಿ ರೋಹಿಣಿ ದ್ವಿವೇದಿ ಮತ್ತು ತಂದೆ ರಾಕೇಶ್ ದ್ವಿವೇದಿ ಸಾಂತ್ವನ ಕೇಂದ್ರಕ್ಕೆ ಭೇಟಿ ಕೊಟ್ಟಿದ್ದರು. ಅಲ್ಲದೇ ಮಗಳು ರಾಗಿಣಿಗಾಗಿ ಊಟಕ್ಕಾಗಿ ಪಾಸ್ತಾ, …
Read More »ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಕೊನೆಗೂ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಕೊನೆಗೂ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ ಮನೆ ಮೇಲೆ ದಾಳಿ ಮಾಡಿದ ಬಳಿಕ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲೇ ಇದ್ದರು. ಮಧ್ಯಾಹ್ನದಿಂದ ಪೊಲೀಸರು ನಿರಂತರ ವಿಚಾರಣೆ ನಡೆಸುತ್ತಿದ್ದರು. ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಸುದ್ದಿಗೋಷ್ಠಿ ನಡೆಸಿ ರವಿಶಂಕರ್ ಮತ್ತು ರಾಹುಲ್ ಇಬ್ಬರನ್ನು ಅರೆಸ್ಟ್ ಮಾಡಿದ್ದೇವೆ. ರಾಗಿಣಿಯ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿಸಿದ್ದರು ಎಫ್‌ಐಆರ್ ದಾಖಲಾದ ಬಳಿಕ ರಾಗಿಣಿ …
Read More »ವೃತ್ತಿಯಲ್ಲಿ ಟೆಕ್ಕಿ, ಪ್ರವೃತ್ತಿಯಲ್ಲಿ ಡ್ರಗ್ಸ್ ದಂಧೆಯ ಕಿಂಗ್ ಪಿನ್- ವಿರೇನ್ ಖನ್ನಾ ಬಂಧನ
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ದಂಧೆಯ ಕಿಂಗ್‍ಪಿನ್ ವೀರೇನ್ ಖನ್ನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರೇನ್ ಖನ್ನಾ ಡ್ರಗ್ ಪಾರ್ಟಿಗಳನ್ನು ಮಾಡಲು ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದೆಹಲಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಕುರಿತು ಖಚಿತ ಮಾಹಿತಿಗಳನ್ನು ಕಲೆಹಾಕಿದ್ದ ಪೊಲೀಸರು ಆತನನ್ನು ಬಂಧಿಸಲು ಕಾರ್ಯಾಚರಣೆಯನ್ನು ನಡೆಸಿದ್ದರು. ಈ ವೇಳೆ ಆತ ದೆಹಲಿಯಲ್ಲಿರುವ ಮಾಹಿತಿ ಲಭಿಸಿತ್ತು. …
Read More »ಪ್ರಶಾಂತ್ ಸಂಬರಗಿ ಬೀದಿ ನಾಯಿ: ಗರಂ ಆದ ಸಂಜನಾ,
ಬೆಂಗಳೂರು: ಹೀರೋಗಳ ಬಳಿ 50 ಕಾರು ಇದ್ದರೂ ಯಾರೂ ಪ್ರಶ್ನೆ ಮಾಡಲ್ಲ. ಆದರೆ ನಾಯಕಿಯರ ಬಳಿ ಎರಡು ಕಾರು ಇದ್ರೆ ಪ್ರಶ್ನೆ ಮಾಡುತ್ತಾರೆ ಎಂದು ನಟಿ ಸಂಜನಾ ಗಲ್ರಾನಿ ಅವರು ಹೇಳಿದ್ದಾರೆ.ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಂಜನಾ ಅವರ ಹೆಸರು ಕೇಳಿ ಬರುತ್ತಿದೆ. ಈ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು 16 ವರ್ಷದಿಂದ ದುಡಿದ ದುಡಿಮೆಯಲ್ಲಿ ಇಷ್ಟೆಲ್ಲಾ ಸಂಪಾದನೆ ಮಾಡಿದ್ದೇನೆ. ನನಗೆ ಕಣ್ಣು ದೃಷ್ಟಿ ಆಗಿರಬೇಕು. …
Read More »ಡ್ರಗ್‍ಗೆ ಚಿಕ್ಕನ್ ಪೀಸ್ ಎನ್ನುತ್ತಿದ್ದ ರಾಗಿಣಿ – ತುಪ್ಪದ ಬೆಡಗಿ
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಿಕ್ಕಿಬಿದ್ದಿರುವ ನಟಿ ರಾಗಿಣಿಯವರು ಡ್ರಗ್ಸ್ ವಿಚಾರದಲ್ಲಿ ಕೋಡ್‍ವರ್ಡ್‍ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಡ್ರಗ್ ಮಾಫಿಯಾ ವಿಚಾರವಾಗಿ ಇಂದು ನಟಿ ರಾಗಿಣಿಯವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು ಬೆಳಗ್ಗೆ ರಾಗಿಣಿ ಮನೆ ಮೇಲೆ ದಿಢೀರ್ ದಾಳಿ ಮಾಡಿದ ಅಧಿಕಾರಿಗಳು ಅವರ ಮೊಬೈಲ್ ಫೋನ್, ಲ್ಯಾಪ್‍ಟಾಪ್ ಮತ್ತು ಕಂಪ್ಯೂಟರ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಕೆಲ ಮಹತ್ವದ ಸಾಕ್ಷಿಗಳು ಸಿಕ್ಕಿವೆ ಎನ್ನಲಾಗಿದೆ. ಇದರಲ್ಲಿ ರಾಗಿಣಿ …
Read More »ರಾಜ್ಯದಲ್ಲಿ 6 ಸಾವಿರ ದಾಟಿದ ಸಾವಿನ ಸಂಖ್ಯೆ : ಉಚಿತ ಔಷಧ ನೀಡಲು ನಿರ್ಧಾರ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ರ ಕಾರಣದಿಂದ ಗುರುವಾರ 104 ಮಂದಿ ಸತ್ತಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ನಿಂದ ಮೃತರಾದವರ ಒಟ್ಟು ಸಂಖ್ಯೆ 6 ಸಾವಿರದ ಗಡಿ ದಾಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬಿರುವ ಕೊರೋನಾ ವೈರಸ್ ಗೆ 6054 ಮಂದಿ ಪ್ರಾಣ ಕಳೆದುಕೊಂಡಂತೆ ಆಗಿದೆ. ರಾಜ್ಯದಲ್ಲಿ ಗುರುವಾರ 8,865 ಮಂದಿ ಹೊಸದಾಗಿ ಕೊರೋನಾ ಸೋಂಕು ಉಂಟಾಗಿದೆ. ಇದರೊಂದಿಗೆ ರಾಜ್ಯದಲ್ಲಿನ ಸಕ್ರೀಯ ಕೊರೋನಾ ಪ್ರಕರಣಗಳ ಸಂಖ್ಯೆ 96,099ಕ್ಕೆ ಏರಿಕೆಯಾಗಿದೆ. …
Read More »ನೇಮಕಾತಿಯಲ್ಲಿ ಅಕ್ರಮ ಆರೋಪ: ಸಿಎಂ ಕಚೇರಿ ಎದುರು ಸ್ಟಾಫ್ ನರ್ಸ್‌ಗಳ ಕಣ್ಣೀರು
ಬೆಂಗಳೂರು: ಸ್ಟಾಫ್ ನರ್ಸ್ ನೇಮಕಾತಿಯಲ್ಲಿ ಅಕ್ರಮವಾಗಿ ನಡೆದಿದೆ ಎಂದು ಆರೋಪಿಸಿ ಗುತ್ತಿಗೆ ಆಧಾರಿತ ಸ್ಟಾಫ್ ನರ್ಸ್‌ಗಳು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಎದುರು ಕಣ್ಣೀರಿಟ್ಟ ಘಟನೆ ಗುರುವಾರ ಜರುಗಿದೆ. ಸುಮಾರು 20 ಮಂದಿ ಸ್ಟಾಫ್ಟ್ ನರ್ಸ್‌ಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೇಟಿಗಾಗಿ ಗೃಹ ಕಚೇರಿ ಬಳಿ ಬಂದಿದ್ದರು. ಈ ವೇಳೆ ಅವರನ್ನು ಗೇಟ್ ಬಳಿಯ ತಡೆದ ಪೊಲೀಸರು ಮುಖ್ಯಮಂತ್ರಿ ಭೇಟಿಗೆ ಅವಕಾಶ ನಿರಾಕರಿಸಿದರು. ಇದರಿಂದ ಭಾವುಕಾರದ ಸ್ಟಾಫ್ ನರ್ಸ್‌ಗಳು, ಕೋವಿಡ್ …
Read More »ವೃದ್ಧೆಯ ಉಸಿರುಗಟ್ಟಿಸಿ ಕೊಲೆಗೈದು ಚಿನ್ನಾಭರಣ ಲೂಟಿ
ಬೆಂಗಳೂರು : ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಚಿನ್ನಾಭರಣ ದೋಚಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ಬುಧವಾರ ನಡೆದಿದೆ. ರಾಮಸ್ವಾಮಿಪಾಳ್ಯ ನಿವಾಸಿ ಕಾಂತಮ್ಮ (70) ಕೊಲೆಯಾದವರು. ಕಾಂತಮ್ಮ ಅವರ ಮೈ ಮೇಲಿದ್ದ ಚಿನ್ನಾಭರಣವನ್ನು ದುಷ್ಕರ್ಮಿಗಳು ಕಳವು ಮಾಡಿದ್ದು, ಪರಿಚಯಸ್ಥರೇ ಕೃತ್ಯ ಎಸಗಿರುವ ಸಾಧ್ಯತೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಾಂತಮ್ಮ ಅವರಿಗೆ ಐವರು ಮಕ್ಕಳಿದ್ದು, ಮಾನಸಿಕ ಅಸ್ವಸ್ಥ ಪುತ್ರಿ ಜತೆ ರಾಮಸ್ವಾಮಿ ಪಾಳ್ಯದಲ್ಲಿ ವಾಸವಿದ್ದರು. ಉಳಿದ ಮಕ್ಕಳು …
Read More »