Breaking News

ಬೆಂಗಳೂರು

ಗ್ರೇಡ್ 2 ಶಿಕ್ಷಕರ ಬಡ್ತಿ, ವಿವಿಧ ಬೇಡಿಕೆಗೆ ಸಚಿವ ಸುರೇಶ್ ಕುಮಾರ್ ಭರವಸೆ; ಧರಣಿ ಕೈಬಿಟ್ಟ ಪರಿಷತ್ ಸದಸ್ಯರು

ಬೆಂಗಳೂರು : ಮೈಸೂರು ವಿಭಾಗದಲ್ಲಿ ಪ್ರೌಢ ಶಾಲಾ ಗ್ರೇಡ್-2 ಸಹ ಶಿಕ್ಷಕರಿಂದ ಮುಖ್ಯೋಪಾಧ್ಯಾಯ ಹುದ್ದೆಗೆ ಬಡ್ತಿ ನೀಡುವುದು ಸೇರಿದಂತೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿಕ್ಷಣ ಸಚಿವರ ಕಚೇರಿ ಎದುರು ನಡೆಸಲು ಉದ್ದೇಶಿಸಿದ್ದ ಧರಣಿಯನ್ನು ವಿಧಾನಪರಿಷತ್ ಸದಸ್ಯರು ವಾಪಸು ಪಡೆದಿದ್ದಾರೆ. ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಹಲವಾರು ಬೇಡಿಕೆಗಳ ಕುರಿತಂತೆ ಬುಧವಾರ ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಎಸ್. ಎಲ್. ಭೋಜೆಗೌಡ ಮತ್ತು ರಮೇಶ್ ಗೌಡ ಜೊತೆ ಸಭೆ …

Read More »

ಕೃಷಿ ಮಾರಾಟ ಮಂಡಳಿ 50 ಕೋಟಿ ವಂಚನೆ ಕೇಸ್‌: ಕಿಂಗ್‌ಪಿನ್‌ ಬಂಧನ

ಬೆಂಗಳೂರು : 2019ರಲ್ಲಿ ನಡೆದಿದ್ದ ರಾಜ್ಯ ಕೃಷಿ ಮಾರಾಟ ಮಂಡಳಿಯ (ಕೆಎಸ್‌ಎಎಂಬಿ) 50 ಕೋಟಿ ಹಣ ದುರುಪಯೋಗ ಪ್ರಕರಣದ ಕಿಂಗ್‌ಪಿನ್‌ ವಿಜಯ್‌ ಆಕಾಶ್‌, ಆತನ ಪುತ್ರ ಹಾಗೂ ಅಳಿಯ ಕೊನೆಗೂ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಚೆನ್ನೈ ಮೂಲದ ವಿಜಯ್‌ ಆಕಾಶ್‌, ಆತನ ಪುತ್ರ ಪ್ರೇಮರಾಜ್‌ ಹಾಗೂ ದಿನೇಶ್‌ ಬಾಬು ಬಂಧಿತರಾಗಿದ್ದು, ಕೃತ್ಯ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಚೆನ್ನೈನಲ್ಲಿ ಬಂಧಿಸಿ ನಗರಕ್ಕೆ ಸಿಸಿಬಿ ತಂಡ ಕರೆ ತಂದಿದೆ. ಈಗಾಗಲೇ …

Read More »

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ಬಸ್ ಪಾಸ್ ದರ ಏರಿಕೆ ಇಲ್ಲ : ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು : ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್‍ಗಳ ದರವನ್ನು ಹೆಚ್ಚಿಸುವುದಿಲ್ಲ ಮತ್ತು ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶವಿಲ್ಲ, ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿದ್ಯಾರ್ಥಿಗಳ …

Read More »

‘ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ಕ್ಕೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಇದುವರೆಗೆ ರಾಜ್ಯ ಸೇರಿದಂತೆ ರಾಜಧಾನಿಯ ಅನೇಕ ಭಾಗಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಇದೀಗ ಮತ್ತೊಂದು ಹೆಜ್ಜೆ ಎನ್ನುವಂತೆ ಕೆ ಎಸ್ ಆರ್ ಟಿ ಸಿ ಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಮಾರ್ಗದಲ್ಲಿ ಪ್ಲೈ ಬಸ್ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಈ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕೆ ಎಸ್ ಆರ್ …

Read More »

ಆರ್.ಪಿ.ಶರ್ಮಾ ಔಟ್ ಆಫ್ ಡೇಂಜರ್ – ಪೊಲೀಸ್ ಆಯುಕ್ತ ಕಮಲ್ ಪಂತ್

ಬೆಂಗಳೂರು : ಐಪಿಎಸ್ ಅಧಿಕಾರಿ ಆರ್ ಪಿ ಶರ್ಮಾ ಅವರಿಗೆ ಮಿಸ್ ಫೈರಿಂಗ್ ನಿಂದ ಗುಂಡು ಹಾರಿದೆ. ಆರ್ ಪಿ ಶರ್ಮಾ ಅವರು ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು, ಮಿಸ್ ಫೈರಿಂಗ್ ನಿಂದ ಘಟನೆ ನಡೆದಿದೆ. ಮಿಸ್ ಫೈರಿಂಗ್ ನಿಂದ ಆರ್ ಪಿ ಶರ್ಮಾ …

Read More »

ಮಳೆಯಿಂದ ತತ್ತರಿಸಿದ ಜನತೆಗೆ ಮುಖ್ಯ ಮಾಹಿತಿ: ಸೆ. 5 ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, …

Read More »

ಸಾಲದ ಸುಳಿಯಲ್ಲಿ ಕರ್ನಾಟಕ

ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ‘ದೇವರ ಆಟ’ದ ಕಾರಣ ಮುಂದು ಮಾಡಿ ಕೊಡಲೇಬೇಕಾಗಿದ್ದ ಜಿಎಸ್‌ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಕೊಡದೇ ಕೈ ಎತ್ತಿದ್ದರಿಂದ ಕರ್ನಾಟಕದ ಒಟ್ಟಾರೆ ಸಾಲ ₹4 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಈ ಹಿಂದಿನ ನಾಲ್ಕು ತಿಂಗಳ ಲೆಕ್ಕದಲ್ಲಿ ಕರ್ನಾಟಕಕ್ಕೆ ₹13,764 ಕೋಟಿ ನಷ್ಟ ಪರಿಹಾರ ಹಾಗೂ ಸೆಸ್‌ ರೂಪದಲ್ಲಿ ಸುಮಾರು ₹6,965 ಕೋಟಿ ಬರಬೇಕಿದೆ. ಜಿಎಸ್‌ಟಿ ಕಾಯ್ದೆ ಅನುಸಾರ ಈ ಪರಿಹಾರವನ್ನು ಕೊಡುವುದು ಕೇಂದ್ರದ ಸಂವಿಧಾನಾತ್ಮಕ …

Read More »

40 ಲಕ್ಷ ಮೌಲ್ಯದ 80 ವಜ್ರದ ಹರಳು ವಶ

ಬೆಂಗಳೂರು, ಸೆ.2- ವಜ್ರದ ಹರಳುಗಳನ್ನು ಮಾರಾಟ ಮಾಡಲು ಬಂದಿದ್ದ ಪುತ್ತೂರು ಮೂಲದ ಮೂವರನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿ 40 ಲಕ್ಷ ಬೆಲೆಯ 80 ವಜ್ರದ ಹರಳುಗಳು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ರವಿಕುಮಾರ್ (54), ಪ್ರವೀಣ್‍ಕುಮಾರ್ (51) ಮತ್ತು ಸುಧೀರ್ (28) ಬಂಧಿತ ಆರೋಪಿಗಳು. ಇವರು ಪುತ್ತೂರು ತಾಲ್ಲೂಕಿನವರು. ಈ ಮೂವರು ನಿನ್ನೆ ಸಂಜೆ 7.15ರ ಸುಮಾರಿನಲ್ಲಿ ಚಿಕ್ಕಪೇಟೆಯಲ್ಲಿ ವಜ್ರದ ಹರಳುಗಳನ್ನು ಮಾರಾಟ ಮಾಡಲು ಬಂದಿದ್ದರು. ಈ ಬಗ್ಗೆ …

Read More »

ನಟಿ ರಾಗಿಣಿಗೆ ನೋಟಿಸ್ – ಆಪ್ತನನ್ನು ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್‍ನ ನಟಿ ರಾಗಿಣಿಯವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್‍ಟಿಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದ ವಿಚಾರಣೆ ಮಾಡಿ ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರನೆ ಹಾಜರಾಗುವಂತೆ ಸೂಚಿಸಿದ್ದಾರೆ ಗೆಳೆಯರ ಮಧ್ಯೆ ನಡೆದಿತ್ತು …

Read More »

ರಾಜ್ಯದಲ್ಲಿ ಇವತ್ತು ದಾಖಲೆ ಬರೆದ ಕೊರೊನಾ- 9,860 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಹೊಸ ದಾಖಲೆ ಬರೆದಿದೆ. ಕಳೆದ ಆರು ತಿಂಗಳಿನಲ್ಲೇ ಇಂದು ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾ ಹಬ್ಬುತ್ತಿರುವ ವೇಗ ಮತ್ತು ತೀವ್ರತೆ ಗಮನಿಸಿದಲ್ಲಿ ಇನ್ನು ಒಂದೆರಡು ದಿನಗಳಲ್ಲಿ 10 ಸಾವಿರ ಕೇಸ್ ದಾಟಿದರೂ ಅಚ್ಚರಿ ಇಲ್ಲ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಇಂದು ರಾಜ್ಯದಲ್ಲಿ 9,860 ಮಂದಿಗೆ ಸೋಂಕು ದೃಢವಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೇರಿದೆ. 6,287 …

Read More »