ಬೆಂಗಳೂರು: ಶಾಸಕರ ಅನುದಾನವನ್ನು ಕಡಿತ ಮಾಡಬೇಡಿ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿಯವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.ಕೊರೊನಾ ಕಾಲದಿಂದ ಕ್ಷೇತ್ರಗಳ ಅಭಿವೃದ್ಧಿ ಕುಂಠಿತವಾಗಿದೆ. ಹೀಗಾಗಿ ಶಾಸಕರಿಗೆ ನೀಡುವ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಕುಮಾರಸ್ವಾಮಿಯವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ .ಹಿಂದಿನ ಸರ್ಕಾರದಲ್ಲಿ ಪಕ್ಷಾತೀತವಾಗಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಘೋಷಿಸಲಾಗಿದ್ದ ಅನುದಾನವನ್ನು ಕಡಿತಗೊಳಿಸದೆ ಬಿಡುಗಡೆ ಮಾಡುವಂತೆ ಕುಮಾರಸ್ವಾಮಿ …
Read More »ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜಕೀಯ ಕಣಕ್ಕೆ ಇಳಿಯುವ ಮೂಲಕ ಅವರು, ತಮ್ಮ ಜೀವನದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳೀಧರ್ ರಾವ್ ಹಾಗೂ ಗಣ್ಯರ ಸಮ್ಮುಖದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದರು. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ ಮತ್ತು ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು. ಸ್ವಯಂನಿವೃತ್ತಿ …
Read More »ಕ್ಲಬ್‍ಗಳಲ್ಲಿ ಎಣ್ಣೆ ಇಲ್ಲದೆ ಮೋಜು ಮಾಡಬಹುದು
ಬೆಂಗಳೂರು: ಸಾಮಾಜಿಕ ಕಬ್‍ಗಳಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದೆ.ಅಂತರಾಜ್ಯ ಪ್ರಯಾಣಿಕರು ರಾಜ್ಯಕ್ಕೆ ಪ್ರವೇಶಿಸಬೇಕಾದರೆ ಪಾಲಿಸಬೇಕಾದ ಕೊರೊನಾ ನಿಯಮಗಳಲ್ಲಿ ಸಹ ರಾಜ್ಯಸರ್ಕಾರ ಸಡಿಲಿಕೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸಾಮಾಜಿಕ ಕ್ಲಬ್‍ಗಳನ್ನು ತೆರೆಯಲು ಸಹ ಅನುಮತಿ ನೀಡಿದೆ. ಕ್ಲಬ್ ಗಳಲ್ಲಿ ಮೇಜಿನ ಮೇಲೆ ಆಹಾರ ವ್ಯವಸ್ಥೆಯನ್ನು ಕಲ್ಪಿಸಲು ಅವಕಾಶ ನೀಡಲಾಗಿದ್ದು, ಸಾಮಾಜಿಕ ಕ್ಲಬ್ ಗಳಲ್ಲಿ ಮದ್ಯ ಸರಬರಾಜನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಲ್ಲದೆ …
Read More »ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಕರ್ನಾಟಕಕ್ಕೆ ಬೇರೆ ರಾಜ್ಯಗಳಿಂದ ಬರೋ ಪ್ರಯಾಣಿಕರಿಗೆ ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸರಕುಗಳ ಅಂತರ-ರಾಜ್ಯ ಚಲನೆಗೆ ಯಾವುದೇ ನಿರ್ಬಂಧಗಳಿರುವದಿಲ್ಲ. ಅಂತರ-ರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ. ಸೇವಾಸಿಂಧು ಪೋರ್ಟಲ್ ನಲ್ಲಿ ನೋಂದಣಿ, ಗಡಿ ಭಾಗಗಳಲ್ಲಿ ವೈದ್ಯಕೀಯ ತಪಾಸಣೆ, ಜಿಲ್ಲೆಗಳಲ್ಲಿ ತಪಾಸಣೆ, ಪ್ರಯಾಣಿಕರ ವರ್ಗೀಕರಣ, ಕೈಗಳ ಮೇಲೆ ಮುದ್ರೆ, ಮನೆ ಬಾಗಿಲುಗಳಿಗೆ ಪೋಸ್ಟರ್ ಹಚ್ಚುವಿಕೆ ಈ ಎಲ್ಲ ಷರತ್ತುಗಳನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಸರ್ಕಾರ …
Read More »ವಿಧಾನ ಪರಿಷತ್ತಿನ ಸಭಾಂಗಣದಲ್ಲೇ ಈ ಬಾರಿಯ ಮಳೆಗಾಲದ ಅಧಿವೇಶನ ನಡೆಸಲಾಗುವುದು
ಬೆಂಗಳೂರು, ಆ.24-ವಿಧಾನಸಭಾ ಸಭಾಂಗಣ ಹಾಗೂ ವಿಧಾನ ಪರಿಷತ್ತಿನ ಸಭಾಂಗಣದಲ್ಲೇ ಈ ಬಾರಿಯ ಮಳೆಗಾಲದ ಅಧಿವೇಶನ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದರು. ಪ್ರಸಕ್ತ 15ನೇ ವಿಧಾನಸಭೆಯ 7ನೇ ಅಧಿವೇಶನ ನಡೆಸುವ ಸಾಧ್ಯಾಸಾಧ್ಯತೆ ಕುರಿತಂತೆ ಇಂದು ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು , ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಿಜಯಭಾಸ್ಕರ್, ವಿಧಾನಸಭೆಯ ಹಿರಿಯ ಅಧಿಕಾರಿಗಳೊಂದಿಗೆ ವಿಧಾನಸಭೆಯ ಸಭಾಂಗಣವನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಧಿವೇಶನಕ್ಕೆ ಸಾಮಾಜಿಕ …
Read More »ಹಿರಿಯ ನಾಯಕರ ಮೇಲೆ ಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಕಿಡಿ
ಬೆಂಗಳೂರು, ಆ.24- ರಾಹುಲ್ ಗಾಂಧಿ ಅವರ ವಿರುದ್ಧದ ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ ಹಿರಿಯ ನಾಯಕರ ಮೇಲೆ ಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಕಿಡಿಕಾರಿದ್ದಾರೆ. ಪತ್ರವೊಂದನ್ನು ಸೋರಿಕೆ ಮಾಡುವ ಮೂಲಕ ಮಾಧ್ಯಮಗಳಿಗೆ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆಯ ಪ್ರತಿನಿಮಿಷದ ಬೆಳವಣಿಗೆಗಳನ್ನು ಚರ್ಚಿಸಲು ಆಹಾರ ಒದಗಿಸಿದ್ದಾರೆ ಅದ್ಭುತ ಎಂದು ರಮ್ಯ ವ್ಯಂಗ್ಯವಾಡಿದ್ದಾರೆ. ನಿನ್ನೆಯಿಂದ ಕಾಂಗ್ರೆಸ್ ಬೆಳವಣಿಗೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ.2019ರ ಜುಲೈನಿಂದ 2020ರ ಆಗಸ್ಟ್ 18ರವರೆಗೆ ಟ್ವಿಟರ್‍ನಿಂದ ದೂರವಿದ್ದ ರಮ್ಯಾ …
Read More »B.S..Y.ನಾಯಕತ್ವಬದಲಾವಣೆಯಾಗಲಿದೆಯ……………………?
ಬೆಂಗಳೂರು,ಆ.24- ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಮಾಡುವ ಪ್ರಸ್ತಾವನೆ ಸದ್ಯಕ್ಕಿಲ್ಲ ಎನ್ನುವ ಮೂಲಕ ಕೇಂದ್ರ ಬಿಜೆಪಿ ವರಿಷ್ಠರು ಎಲ್ಲಾ ಉಹಾಪೋಹಗಳಿಗೂ ತೆರೆ ಎಳೆದಿದ್ದಾರೆ. ಕಳೆದ ಹಲವು ದಿನಗಳಿಂದ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿಗಳು ಬಿಜೆಪಿ ವಲಯದಲ್ಲಿ ಕೇಳಿ ಬಂದಿದ್ದವು. ಮುಂದಿನ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಸಮರ್ಥ ನಾಯಕನಿಗೆ ಪಟ್ಟ ಕಟ್ಟಲು ತೆರೆಮರೆಯಲ್ಲಿ ಸಿದ್ದತೆಗಳು ನಡೆಯುತ್ತಿವೆ ಎಂಬ ಉಹಾಪೋಹಗಳು ಎದ್ದಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಎರಡು …
Read More »ಬಾಲೆಯರು ಬಾಲ್ಯದಿಂದ ಬೆಂಕಿಗೆ ನಾಲ್ಕು ತಿಂಗಳಲ್ಲಿ 107 ಬಾಲ್ಯವಿವಾಹ
ಬೆಂಗಳೂರು: ಲಾಕ್‌ಡೌನ್ ಅವಧಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗಿದೆ. ಲಾಕ್‌ಡೌನ್‌ನ ನಿರ್ಬಂಧಗಳಿಂದ ಉಂಟಾದ ಸ್ತಬ್ಧತೆಯ ಲಾಭ ಪಡೆದು ಹಲವು ಹೆಣ್ಣು ಮಕ್ಕಳಿಗೆ ಮದುವೆ ಮಾಡಲಾಗಿದೆ. ಲಾಕ್‌ಡೌನ್‌ಗಿಂತ ಹಿಂದಿನ ಅವಧಿಗೆ ಹೋಲಿಸಿದರೆ ಲಾಕ್‌ಡೌನ್ ದಿನಗಳಲ್ಲಿ ನಡೆದ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚು ಎಂದು ಅಂಕಿ ಅಂಶಗಳು ಹೇಳುತ್ತವೆ. ಬಾಲ್ಯ ವಿವಾಹ ಮಾಡಿಯೇ ತೀರಬೇಕು ಎಂದು ಹಟಕ್ಕೆ ಬಿದ್ದವರು ವಿವಿಧ ರೀತಿಯ ತಂತ್ರ, ಕುತಂತ್ರಗಳನ್ನು ಹೆಣೆದ ವರದಿಗಳು ರಾಜ್ಯದ ವಿವಿಧೆಡೆಯಿಂದ ಬಂದಿವೆ. ಮದುವೆ …
Read More »ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ
ಬೆಂಗಳೂರು/ಮೈಸೂರು: ಕೊರೊನಾ ವಾರಿಯರ್ ಆಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ಸದ್ಯ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದೆ. ಕೋವಿಡ್ ವಾರಿಯರ್ಸ್ ಮೇಲಿನ ಒತ್ತಡ ನಿವಾರಣೆಗೆ ಸರ್ಕಾರ ದೂರು ಪೆಟ್ಟಿಗೆ ವ್ಯವಸ್ಥೆ ಏರ್ಪಡಿಸುವ ಚಿಂತನೆಯಲ್ಲಿದೆ. ಕೊರೊನಾ ವಾರಿಯರ್ಸ್ ಮೇಲಿನ ಒತ್ತಡ ನಿವಾರಣೆಗೆ ಸರ್ಕಾರದ ಕಂಪ್ಲೆಂಟ್ ಬಾಕ್ಸ್ ವ್ಯವಸ್ಥೆ ಮಾಡುವ ಕುರಿತು ಚರ್ಚೆ ನಡೆಸುತ್ತಿದೆ. ಕೊರೊನಾ ಸೇವೆ ನಿರ್ವಹಿಸುತ್ತಿರುವ ಇಲಾಖೆ, ಕಚೇರಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ದೂರು ಪೆಟ್ಟಿಗೆ ಏರ್ಪಡಿಸಿ …
Read More »‘ಅಣ್ಣ ಮತ್ತೊಬ್ಬ ತಾಯಿ ಇದ್ದ ಹಾಗೆ. ಧನ್ಯವಾದ
ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡಾಲಿ ಎಂದೇ ಖ್ಯಾತಿಯಾಗಿರುವ ನಟ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟಾರ್ ನಟರು, ನಿರ್ದೇಶಕರು ಸೋಶಿಯಲ್ ಮೀಡಿಯಾದ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಕೊರೊನಾ ಕಾರಣದಿಂದ ಧನಂಜಯ್ ಈ ಬಾರಿ ಸರಳವಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೂ ಮೊದಲೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡುವುದು ಬೇಡ ಎಂದು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಅದರಂತೆಯೇ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ನೆಚ್ಚಿನ ನಟನಿಗೆ ಶುಭಾಶಯ …
Read More »