Breaking News

ಬೆಂಗಳೂರು

ದಸರಾ ವೈಭವ ಆರಂಭ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ರಾಷ್ಟ್ರಪತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ 9.45 ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.   ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ರಾಷ್ಟ್ರಪತಿಗಳು ತಾಯಿಯ ದರ್ಶನ ಪಡೆದರು. …

Read More »

ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿ : ಹಾಲಿನ ಬೆಲೆ ಹೆಚ್ಚಳ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಬ್ರೇಕ್!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ನೆಮ್ಮದಿಯ ಸುದ್ದಿ ನೀಡಿದ್ದು, ಹಾಲಿನ ಬೆಲೆ ಹೆಚ್ಚಳದ ಕೆಎಂಎಫ್ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ.   ಹಾಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 3 ರೂ. ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿರುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.   ಹಾಲಿನ ಬೆಲೆ ಹೆಚ್ಚಳ ಮಾಡುವುದರಿಂದ ಗ್ರಾಹಕರಿಗೆ …

Read More »

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು, ವೈದ್ಯರ ತಂಡ ಆರೈಕೆ ಮಾಡ್ತಿದೆ: ಎಸ್‍ಎಂಕೆ ಹೆಲ್ತ್ ಬುಲೆಟಿನ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (S.M Krishna) ಅವರು ಸದ್ಯ ಐಸಿಯು (ICU) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ತಂಡ ಆರೈಕೆ ಮಾಡುತ್ತಿದೆ ಎಂದು ಮಣಿಪಾಲ್‌ ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಲಾಗಿದೆ. ಶ್ವಾಸಕೋಶದ (Lungs) ಸೊಂಕಿನಿಂದ ಬಳಲುತ್ತಿರುವ ಎಸ್‍ಎಂಕೆಗೆ ಡಾ ಸತ್ಯನಾರಾಯಣ್ ಮತ್ತು ಡಾ ಸುನೀಲ್ ಕಾರಂತ್ ರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು ವೈದ್ಯರ ತಂಡ ಆರೈಕೆ ಮಾಡ್ತಾ ಇದೆ. ಶ್ವಾಸಕೋಶದ ಒಳಗಡೆ ಆಕ್ಸಿಜನ್ …

Read More »

ಆರೋಗ್ಯ ಇಲಾಖೆ 108ಗೆ ಅನಾರೋಗ್ಯ; ರಾಜ್ಯಾದ್ಯಂತ ಆಂಬುಲೆನ್ಸ್ ಸೇವೆ ಬಂದ್; ಸಾರ್ವಜನಿಕರ ಆಕ್ರೋಶ

ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಆರೋಗ್ಯ ಇಲಾಖೆ 108 ಆಂಬುಲೆನ್ಸ್ ಸೇವೆ ಬಂದ್ ಆಗಿದೆ ಎಂಬ ಮಾತು ಕೇಳಿಬರುತ್ತಿವೆ. ತಾಂತ್ರಿಕ ದೋಷದಿಂದಾಗಿ 108 ಗೆ ಕರೆ ಮಾಡಿದರೂ ಯಾರೂ ಸಹ ಕರೆ ಸ್ವೀಕರಿಸುತ್ತಿಲ್ಲ. ಹಾಗಾಗಿ ಆಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವುಂಟಾಗಿದೆ ಎಂದು ತಿಳಿದುಬಂದಿದೆ.   ಜಿವಿಕೆ ಏಜನ್ಸಿ ಮೂಲಕ 108 ಆಂಬುಲೆನ್ಸ್ ಸೇವೆ ನಡೆಯುತ್ತಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ತುರ್ತು ಸೇವೆ ಬಂದ್ ಆಗಿದೆ. ಎರಡು ದಿನಗಳಿಂದ ಈ ಸಮಸ್ಯೆಯಾಗಿದ್ದರೂ ಆರೋಗ್ಯ …

Read More »

ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರು ಮಂದಿ ಬಂಧನ

ಬೆಂಗಳೂರು: ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ 6 ಜನರ ಗ್ಯಾಂಗ್​ವೊಂದನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವೀಣ್, ರಮೇಶ್, ನಾಗರಾಜ್, ಸುನೀಲ್, ಡಿ ರೂಪಂ, ಭಟ್ಟಾಚಾರ್ಯ ಹಾಗೂ ರವಿ ಬಂಧಿತರು. ಪ್ರವೀಣ್ ಮೊಬೈಲ್ ಸೆಂಟರ್ ನಡೆಸುತ್ತಿದ್ದ ಆರೋಪಿ. ಈತ ಆಧಾರ್ ಅಪ್ಲಿಕೇಶನ್ ಡೌನ್‌ಲೋಡ್‌ ಮಾಡಿಟ್ಟುಕೊಳ್ಳುತ್ತಿದ್ದ. ಆಧಾರ್ ಬೇಕಿರುವವರ ಮಾಹಿತಿ‌ ಪಡೆದು ಆನ್‌ಲೈನ್‌ ಅಪ್ಲಿಕೇಶನ್ ಸಲ್ಲಿಸುತ್ತಿದ್ದ. ಎರಡನೇ ಆರೋಪಿ ರಮೇಶ್ ಆಟೋ ಚಾಲಕ. ಈತ ಪ್ರವೀಣ್ ಕಳಿಸುತ್ತಿದ್ದ ಅರ್ಜಿದಾರನನ್ನ ಗೆಜೆಟೆಡ್ …

Read More »

ಧರ್ಮಸ್ಥಳ, ಕುಕ್ಕೆ ದೇಗುಲದಲ್ಲಿ ಶರ್ಟ್, ಬನಿಯನ್ ಬಿಚ್ಚಿಸುವ ಪದ್ಧತಿ ರದ್ದಿಗೆ ಮನವಿ

ಧರ್ಮಸ್ಥಳ, ಸೆಪ್ಟೆಂಬರ್ 24: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಶ್ರೀ ಮಂಜುನಾಥ್ ದೇವಸ್ಥಾನ ಹಾಗೂ ಕುಕ್ಕೆಯ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳು ತಮ್ಮ ಶರ್ಟ್ ಹಾಗೂ ಬನಿಯನ್ ಅನ್ನು ಬಿಚ್ಚಿಕೊಂಡು ಹೋಗುವ ಪದ್ಧತಿಯು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಈ ಪದ್ಧತಿಯನ್ನು ರದ್ದು ಮಾಡುವಂತೆ ಇದೀಗ ಮನವಿ ಸಲ್ಲಿಸಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಗೆ ಪತ್ರ ಬರೆದಿರುವ ಮಂಗಳೂರು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ ಹಾಗೂ …

Read More »

30 ಕೇಸ್‌ ಎದುರಿಸಿದ್ದೇವೆ, ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ: ವಿಜಯೇಂದ್ರ

ಬೆಂಗಳೂರು: ಯಡಿಯೂರಪ್ಪ(Yediyurappa) ಮೇಲಿನ ಭ್ರಷ್ಟಾಚಾರ(Corruption) ಆರೋಪದಲ್ಲಿ 0.1% ಸತ್ಯವೂ ಇಲ್ಲ. ನಾವು ಹೆದರಿ ಓಡಿ ಹೋಗುವುದಿಲ್ಲ. 30 ಕೇಸ್ ಈಗಾಗಲೇ ಎದುರಿಸಿದ್ದು, ಇದು 31 ನೇ ಕೇಸ್. ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆ ಉದ್ಭವ ಆಗುವುದಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ(Vijayendra yediyurappa) ಹೇಳಿದ್ದಾರೆ. ಬಿಜೆಪಿ(BJP) ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಯಡಿಯೂರಪ್ಪ ಮತ್ತು ನನ್ನನ್ನು ರಾಜಕೀಯವಾಗಿ ಮುಗಿಸಲು ಕುತಂತ್ರ …

Read More »

ಪಿಎಸ್‌ಐ ಹಗರಣ: ಎಡಿಜಿಪಿ ಅಮೃತ್ ಪೌಲ್ ನೇಮಕ ಮಾಡಿದ್ದೇ ಬೊಮ್ಮಾಯಿ‌ -ಸಿದ್ದರಾಮಯ್ಯ

ಬೆಂಗಳೂರು : ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್‌ ಪೌಲ್‌ ಅವರು ನೇಮಕವಾಗಿದ್ದೇ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ. ಪೌಲ್‌ ಬಗ್ಗೆ ದೂರುಗಳಿದ್ದರೂ, ಪ್ರಮುಖ ಹುದ್ದೆ ನೀಡಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೂರಿದರು. ಕಲಾಪ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ‍ಪಿಎಸ್‌ಐ ಹಗರಣ ಬಯಲಿಗೆ ಎಳೆದದ್ದೇ ಕಾಂಗ್ರೆಸ್. ಸಿಐಡಿ ದಾಳಿ ನಂತರ ಪೌಲ್‌ ಅವರನ್ನು ವರ್ಗಾವಣೆ ಮಾಡಿದ್ದರು. ಒತ್ತಡ ಹೆಚ್ಚಾದ …

Read More »

15,000 ಶಿಕ್ಷಕರ ನೇಮಕಾತಿಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನ ಪಟ್ಟಿ ಪ್ರಕಟ

ಬೆಂಗಳೂರು: 15,000 ಶಿಕ್ಷಕರ ನೇಮಕಾತಿ ಪರೀಕ್ಷೆ ಫಲಿತಾಂಶ ಆಧರಿಸಿ ಮುಂದಿನ ವಾರಾಂತ್ಯದೊಳಗೆ 1:2 ಆಧಾರದಲ್ಲಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿ ಪ್ರಕಟಿಸಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿ ಹುದ್ದೆಗೆ ಇಬ್ಬರು ಅಭ್ಯರ್ಥಿಗಳ ಆಯ್ಕೆಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ನಂತರ ಒಂದು ಹುದ್ದೆಗೆ ಒಬ್ಬರಂತೆ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಶೀಘ್ರವೇ ಹೊಸ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸಲಾಗುವುದು …

Read More »

ರಾಜ್ಯ ಸರ್ಕಾರಿ ನೌಕರ’ರಿಗೆ ದಸರಾ ಗಿಫ್ಟ್: ಮೂಲವೇತನಕ್ಕಿಂತ ಶೇ.15ರಷ್ಟು ಅಧಿಕ ‘ಪ್ರಭಾರ ಭತ್ಯೆ ಹೆಚ್ಚಳ’

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವಂತ ಪ್ರಭಾರ ಭತ್ಯೆಗಳನ್ನು ( In-charge Allowance Rate ), ಇದೀಗ ರಾಜ್ಯ ಸರ್ಕಾರ ಪರಿಷ್ಕರಿಸಿ ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ದಸರಾ ಗಿಫ್ಟ್ ಆಗಿ ಸರ್ಕಾರ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಸರ್ಕಾರಿ ನೌಕರರನ್ನು ಸ್ವತಂತ್ರ ಪ್ರಭಾರದಲ್ಲಾಗಲೀ ಅಥವಾ ತಮ್ಮ ಹುದ್ದೆಯ ಕರ್ತವ್ಯದ …

Read More »